Mysore
ನಂಜನಗೂಡಿನ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ಕುಮಾರಸ್ವಾಮಿ
ನಂಜನಗೂಡು: ದಕ್ಷಿಣ ಕಾಶಿ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ಗುರುವಾರ ಬೆಳಿಗ್ಗೆ 7 ಗಂಟೆಯ ಸಮಯದಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ದೇವರ ದರ್ಶನ ಪಡೆದುಕೊಂಡರು.
ಪ್ರತಿ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ ದೇವೇಗೌಡ ಸೇರಿದಂತೆ ಇಡೀ ಕುಟುಂಬ ನಾಮಪತ್ರ ಸಲ್ಲಿಸುವ ಮುನ್ನ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಬಂದು ದೇವರ ದರ್ಶನ ಮಾಡಿ ಪ್ರಸಾದ ಪಡೆದ ಬಳಿಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುವುದು ಸಾಕಷ್ಟು ವರ್ಷಗಳ ನಂಬಿಕೆಯಾಗಿದೆ.
ಇಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹೆಚ್.ಡಿ ಕುಮಾರಸ್ವಾಮಿ ನಂಜುಂಡೇಶ್ವರನ ವರ ಪಡೆದು ಲೋಕಸಭಾ ಚುನಾವಣೆಯ ಗೆಲುವಿಗಾಗಿ ಹರಕೆ ಹೊತ್ತು ಹೊರ ನಡೆದಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಕ್ಷೀಣಿಸಿದ ಕಾರಣ ದೇವಾಲಯಕ್ಕೆ ಬಂದು ಜನರ ಸೇವೆಗೆ ಅವಕಾಶ ಕಲ್ಪಿಸಿದರೆ ತುಲ ಭಾರ ನೆರವೇರಿಸುತ್ತೇನೆ ಎಂದು ನಂಜುಂಡನಿಗೆ ಹರಕೆ ಒತ್ತಿದ್ದರು. ಅದರಂತೆ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ದೇವರ ದರ್ಶನ ಪಡೆದು, ತುಲ ಭಾರವನ್ನು ನೆರವೇರಿಸಿ ತಮ್ಮ ಹರಕೆಯನ್ನು ತೀರಿಸಿದ್ದಾರೆ.
ಈ ವೇಳೆ ಶಾಸಕ ಜಿ.
ಟಿ .ದೇವೇಗೌಡ, ಸಾ.ರಾ. ಮಹೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ಸಂಜುಗೌಡ, ಸೇರಿದಂತೆ ಹಲವಾರು ಭಾಗವಹಿಸಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Mysore
ಅವರೆಕಾಳು ಮುದ್ದೆ ಊಟದ ಅನ್ನ ದಾಸೋಹ
ಮೈಸೂರು: ವಿಜಯನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಶನಿವಾರ ಶ್ರಾವಣ ಮಾಸದ ಪ್ರಯುಕ್ತ ಸುಮಾರು 12 ಸಾವಿರ ಭಕ್ತರಿಗೆ ‘ಅವರೆಕಾಳು ಮುದ್ದೆ ಊಟ’ದ ಅನ್ನದಾಸೋಹ ಕಾರ್ಯವನ್ನು ಆಯೋಜಿಸಲಾಗಿತ್ತು.
ಮಂಡ್ಯ ಜಿಲ್ಲೆಯ ನಿವಾಸಿಗಳು, ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಮತ್ತು ಪುಣ್ಯಕೋಟಿ ಸೇವಾ ಟ್ರಸ್ಟ್ ವತಿಯಿಂದ ಈ ದಾಸೋಹವನ್ನು ಹಮ್ಮಿಕೊಳ್ಳಲಾಗಿತ್ತು.
ಯೋಗಾನರಸಿಂಹ ಸ್ವಾಮಿ ದೇವಾಲಯದ ಸಂಸ್ಥಾಪಕರು ಹಾಗೂ ನಾಡೋಜ ಶ್ರೀ ಭಾಷ್ಯಂ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಈ ದಾಸೋಹ ನಡೆಸಲಾಗಿದ್ದು,ದೇವಾಲಯದ ಅಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅವರು ಭಕ್ತಾದಿಗಳಿಗೆ ಊಟ ಬಡಿಸುವ ಮೂಲಕ ದಾಸೋಹಕ್ಕೆ ಚಾಲನೆ ನೀಡಿದರು.
ಮುದ್ದೆ, ಅವರೆಕಾಳು ಸಾಂಬಾರು ಮತ್ತಿ ಸಿಹಿ ಪಾಯಸ ದಾಸೋಹದ ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಅಧ್ಯಕ್ಷರಾದ ರಾಜೇಶ್, ಮಾಜಿ ಅಧ್ಯಕ್ಷ ವೆಂಕಟೇಶ್, ಪುಣ್ಯಕೋಟಿ ಟ್ರಸ್ಟ್ ಅಧ್ಯಕ್ಷ ಹನುಮಂತೇಶ, ಕಾರ್ಯದರ್ಶಿ ಸುಂದರ್ ರಾಜ್, ಪ್ರಭಾಕರ್ ಉಪಸ್ಥಿತರಿದ್ದರು.
Mysore
ನಾಲೆಗೆ ಬಿದ್ದು ಮಹಿಳೆ ಆತ್ಮಹತ್ಯೆ
ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ : ನಾಲೆಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ
ಸಾಲಿಗ್ರಾಮ ಪಟ್ಟಣದ ಕಾಲುವೆಯಮ್ಮ ದೇವಾಲಯದ ಹತ್ತಿರ ಚಾಮರಾಜ ಎಡದಂಡೆ ನಾಲೆಯ ಕಾಲುವೆ ಬಳಿ ಲಕ್ಷ್ಮಿ (36 ವರ್ಷ ) ಈ ಮಹಿಳೆಯ ಶವ ಸಿಕ್ಕಿದೆ.
ಎಂದಿನಂತೆ ತವರೂರು ಹಾಡ್ಯ ಗ್ರಾಮದಿಂದ ಸಾಲಿಗ್ರಾಮದ ಆನಂದ್ ಟೆಕ್ಸ್ ಟೆಲ್ಸ್ ಬಟ್ಟೆ ಅಂಗಡಿಯಲ್ಲಿ ಕಳೆದ ಆರು ತಿಂಗಳಿಂದ ಕೆಲಸ ಮಾಡುತ್ತಿದ್ದು, ಅದರಂತೆ ಶನಿವಾರ ದಿವಸ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿ ರುತ್ತಾರೆ. ಇವರಿಗೆ ಸಾಲಿಗ್ರಾಮದ ಸೋದರ ಮಾವನ ಮಗನ ಜೊತೆ ಮದುವೆ ಯಾಗಿದ್ದು, ಇಬ್ಬರು ಮಕ್ಕಳಿದ್ದು, ಇವರು ಅನಾರೋಗ್ಯ ದಿಂದ ಇದ್ದು,ಸಾಂಸಾರಿಕ ವಿಚಾರದಲ್ಲಿ ಆಗಾಗ್ಗೆ ಮಾನಸಿಕ ವಾಗಿ ಗಲಾಟೆ ಮಾಡಿಕೊಳ್ಳುತ್ತಿದ್ದು ಗಂಡ ತಿಳಿವಳಿಕೆ ಹೇಳಿ ಸಮಾಧಾನ ಮಾಡಿದ್ದರು. ಅನಾರೋಗ್ಯ ಕಾರಣದಿಂದ ಜೀವನದಲ್ಲಿ ಬೇಸತ್ತು ಮಾನಸಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಸಹೋದರ ಲೋಕೇಶ್ ಸಾಲಿಗ್ರಾಮ ಠಾಣೆಯಲ್ಲಿ ದೂರು ನೀಡಿದ್ದು ಇದರ ಅನ್ವಯ ಕೇಸು ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿರುತ್ತಾರೆ.
Mysore
ಎಚ್ ಡಿ ಕೋಟೆಯಲ್ಲಿಂದು ಬ್ರಹ್ಮಾಕುಮಾರಿಸ್ ಪ್ರಕಾಶ ಭವನ ಲೋಕಾರ್ಪಣೆ
ಎಚ್ ಡಿ ಕೋಟೆ ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರಕಾಶಭವನವನ್ನು ಸಾರ್ವಜನಿಕರ ಸೇವೆಗಾಗಿ ಮೌಂಟ್ ಅಬು ಶಿಕ್ಷಣ ಸೇವಾ ವಿಭಾಗದ ಅಂತರಾಷ್ಟ್ರೀಯ ಅಧ್ಯಕ್ಷರಾದ ರಾಜ ಯೋಗಿ ಬ್ರಹ್ಮಕುಮಾರ ಮೃತ್ಯುಂಜಯ ಜೀರವರು ಇಂದು ಬೆಳಗ್ಗೆ 10 ಗಂಟೆಗೆ ದಿನಾಂಕ 11.08.2024 ಭಾನುವಾರ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಸಂಸ್ಥೆಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ಕಲ್ಪನಾಜೀ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇವಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ಹಾಗೂ 39ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯವನ್ನು ಮೈಸೂರು ಉಪವಲಯ ಈಶ್ವರೀಯ ವಿಶ್ವವಿದ್ಯಾಲಯಗಳ ಮುಖ್ಯ ಸಂಚಾಲಕರಾದ ರಾಜಾ ಯೋಗಿನಿಬ್ರಹ್ಮಾಕುಮಾರಿ ಲಕ್ಷ್ಮೀಜಿಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾನ್ಯ ಶಾಸಕರಾದ ಅನಿಲ್ ಚಿಕ್ಕಮಾದುರವರು ಭಾಗವಹಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ತಹಸಿಲ್ದಾರವರಾದ ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಿ ಸುರೇಶ, ಆರಕ್ಷಕ ವೃತ್ತ ನಿರೀಕ್ಷಕರಾದ ಸಬೀರ್ ಹುಸೇನ್, ಗೀತಾ ಗಿರಿ ಗೌಡ ಗೋವಿಂದ ಗೌಡರು ಶ್ರೀನಿವಾಸ್ ಹಾಗೂ ಬಿಕೆ ನಾಗರಾಜ್ ಬಾಯಿರವರು ಭಾಗವಹಿಸಲಿದ್ದಾರೆ. ಬೆಳಗ್ಗೆ 9:30ಕ್ಕೆ ನಗರದ ಪ್ರಮುಖ ಬೀದಿಗಳಲ್ಲಿ ಶಾಂತಿ ಶೋಭಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ
-
Mysore4 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan4 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.