National
ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಕೇಂದ್ರಕ್ಕೆ ಎಚ್‌ಡಿಡಿ ಮನವಿ
ನವದೆಹಲಿ: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ರಾಜ್ಯಸಭೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಭಾಗವಹಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು.

ಈ ವೇಳೆ ರಾಜ್ಯದ ಹಲವು ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರಕ್ಕೆ ಕೈಮುಗಿದು ವಿನಂತಿ ಮಾಡಿಕೊಂಡಿದ್ದಾರೆ.
ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜೊತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದ್ದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಗಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜೊತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜೊತೆಗೇ ಇರುತ್ತೇವೆ. ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ಹೇಳಿದ್ದಾರೆ.
ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜೊತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಉಲ್ಲೇಖ ಮಾಡಿದ್ದಾರೆ.
ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಹೇಳಿದ್ದಾರೆ.
National
ಮೇಕೆದಾಟು ಜಲಾಶಯ ಯೋಜನೆಗೆ ಭೂಮಿಪೂಜೆ ಘೋಷಣೆ: ಪಿಎಂ ಮೋದಿಗೆ ಪತ್ರ ಬರೆದ ವಿಜಯ್
ಚೆನ್ನೈ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಯ ಭೂಮಿ ಪೂಜೆ ಘೋಷಣೆಗೆ ತಮಿಳುನಾಡು ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಿಕ ಹೇಳಿಕೆಗಳು ಹಾಗೂ ಭೂಮಿ ಪೂಜೆಯ ಘೋಷಣೆಯು, ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಭಾರಿ ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಒಪ್ಪಿಗೆಯನ್ನು ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಬೇಕು ಎಂದು ವಿಜಯ್ ಅವರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.
ಅಲ್ಲದೇ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (DPR) ತಕ್ಷಣವೇ ತಿರಸ್ಕರಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೇಂದ್ರ ಜಲ ಆಯೋಗದ (CWC) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.
National
ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಮೀಸಲಾತಿ ಏಕೆ?: ಸುಪ್ರೀಂ ಪ್ರಶ್ನೆ
ನವದೆಹಲಿ: ಮೀಸಲಾತಿಯ ಮೂಲಕ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಿದ ಕುಟುಂಬಗಳ ಮಕ್ಕಳು, ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸುವುದು ಸೂಕ್ತವೇ? ಎಂದು ಸುಪ್ರೀಂಕೋರ್ಟ್ ಶುಕ್ರವಾರ ಪ್ರಶ್ನಿಸಿದೆ. ಅಲ್ಲದೇ ಮೀಸಲಾತಿ ನಿಯಮ ಬದಲಾವಣೆಗಳು ಸಾಮಾಜಿಕ ಚಲನಶೀಲತೆಗೆ ಕಾರಣವಾಗುತ್ತವೆ ಎಂದು ಹೇಳಿದೆ.
ಪೋಷಕರು ಇಬ್ಬರೂ ಐಎಎಸ್ ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ ಏಕೆ ಇರಬೇಕು? ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದೊಂದಿಗೆ, ಸಾಮಾಜಿಕ ಚಲನಶೀಲತೆ ಸಂಬಂಧ ಹೊಂದಿದೆ. ಆದ್ದರಿಂದ ಮಕ್ಕಳಿಗೆ ಮೀಸಲಾತಿ ಪಡೆಯಲು, ನಾವು ಎಂದಿಗೂ ಅದರಿಂದ ಹೊರಬರುವ ಪ್ರಯತ್ನ ಮಾಡುವುದಿಲ್ಲ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅಭಿಪ್ರಾಯಪಟ್ಟಿದ್ದಾರೆ. ೨೦೨೦ರಲ್ಲಿ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಮೀಸಲಾತಿ ಯಾರಿಗೆ? ಎಂಬುದು ನಾವು ಕಾಳಜಿವಹಿಸಬೇಕಾದ ವಿಷಯ. ಉತ್ತಮ ಉದ್ಯೋಗದಲ್ಲಿರುವ ಪೋಷಕರ ಮಕ್ಕಳಿಗೂ ಮೀಸಲಾತಿ ವಿಸ್ತರಿಸಿದರೆ ಏನು ಪ್ರಯೋಜನ? ಉತ್ತಮ ಆದಾಯವನ್ನು ಪಡೆಯುತ್ತಿರುವ ಪೋಷಕರ ಮಕ್ಕಳು ಮೀಸಲಾತಿಯಿಂದ ಹೊರಬರಬೇಕು ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.
ಕರ್ನಾಟಕದ ಅರ್ಜಿ ವಿಚಾರಣೆ:
ರಾಜ್ಯ ಸರ್ಕಾರಿ ಉದ್ಯೋಗಿಗಳಾಗಿರುವ ಪೋಷಕರನ್ನು ಹೊಂದಿರುವ ಅರ್ಜಿದಾರರನ್ನು ಕೆನೆಪದರ ಆಧಾರದ ಮೇಲೆ ಮೀಸಲಾತಿಯಿಂದ ಹೊರಗಿಟ್ಟ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ, ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಮೀಸಲಾತಿ ಕುರಿತು ಈ ಅವಲೋಕನಗಳನ್ನು ಮಾಡಿದೆ.
ಈ ಪ್ರಕರಣವು ಕರ್ನಾಟಕದ ಹಿಂದುಳಿದ ವರ್ಗಗಳಲ್ಲಿ ವರ್ಗ II(ಂ) ಅಡಿಯಲ್ಲಿ ವರ್ಗೀಕರಿಸಲಾದ ಕುರುಬ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗೆ ಸಂಬಂಧಿಸಿದೆ. ಅವರನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ, ಮೀಸಲು ವರ್ಗದ ಅಡಿಯಲ್ಲಿ ಸಹಾಯಕ ಎಂಜಿನಿಯರ್ (ವಿದ್ಯುತ್) ಹುದ್ದೆಗೆ ಆಯ್ಕೆ ಮಾಡಲಾಗಿದೆ.
ಆದಾಗ್ಯೂ, ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಯು, ಅಭ್ಯರ್ಥಿ ಕೆನೆಪದರದೊಳಗೆ ಬರುತ್ತಾರೆ ಎಂದು ತೀರ್ಮಾನಿಸಿದ ನಂತರ ಅವರಿಗೆ ಜಾತಿ ಸಿಂಧುತ್ವ ಪ್ರಮಾಣಪತ್ರವನ್ನು ನಿರಾಕರಿಸಿತು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಸುಮಾರು ೧೯.೪೮ ಲಕ್ಷ ರೂ. ಎಂದು ನಿರ್ಣಯಿಸಲಾಗಿದೆ. ಈ ಕುರಿತು ನಡೆದ ವಿಚಾರಣೆ ಸಂದರ್ಭದಲ್ಲಿ, ಪೋಷಕರ ವಾರ್ಷಿಕ ಆದಾಯ ಮಿತಿ ಮೀರಿದ್ದರೆ ಮೀಸಲಾತಿ ಪಡೆಯಲು ಅನರ್ಹ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.
National
ಆಫ್ರಿಕಾದಲ್ಲಿ ಎಬೋಲಾ ಆತಂಕ: ಭಾರತದಲ್ಲಿ ಹೈಅಲರ್ಟ್, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ
-
Special22 hours agoಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಹೇಗೆ?
-
Special8 hours agoKVAFSU ನೇಮಕಾತಿ 2026: 96 ಬೋಧನಾ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Mandya9 hours agoಶಿಕ್ಷಕರು ಶಿಕ್ಷಿಸಿದ ಪರಿಣಾಮ ಇಂದು ಉನ್ನತ ಹುದ್ದೆ ಸಾಧ್ಯವಾಯಿತು : ಬಿ.ಜಿ.ಕುಮಾರ್
-
Kodagu2 hours agoರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ
-
Mysore35 minutes agoಹೊಲದಲ್ಲಿ ಕಳೆ ಕೀಳುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆ ಸಾ*ವು
-
Chamarajanagar2 hours agoಕೋಡಿಮೋಳೆ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
-
Kodagu1 hour agoಬ್ಯಾಡಗೊಟ್ಟ, ದೊಡ್ಡಕುಂದ ಸೇರಿದಂತೆ ವಿವಿಧೆಡೆ ಮೇ.30 ರಂದು ವಿದ್ಯುತ್ ವ್ಯತ್ಯಯ
-
Kodagu2 hours agoಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ
