Uncategorized
ಕುಮಾರಸ್ವಾಮಿ ರನ್ನು ಬೆಂಬಲಿಸಿ – ಡಾ.ಪುಣ್ಯವತಿ
ಮಂಡ್ಯ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ನಂತರದ ದಿನಗಳಲ್ಲಿ ವೈದ್ಯಕೀಯ ಸೇರಿದಂತೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದೆ, ವೈದ್ಯಕೀಯ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು. ಅದಕ್ಕಾಗಿ ಮಂಡ್ಯದಲ್ಲಿ ಕುಮಾರಸ್ವಾಮಿಯವರನ್ನು ಬೆಂಬಲಿಸುವಂತೆ ಖ್ಯಾತ ವೈದ್ಯೆ ಡಾ. ಪುಣ್ಯವತಿ ತಿಳಿಸಿದರು.
ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಠ ವತಿಯಿಂದ ನಗರದ ಅಮರಾವತಿ ಹೋಟೆಲ್ ಸಭಾಂಗಣದಲ್ಲಿ ನಡೆದ ವೈದ್ಯಕೀಯ ವೃತ್ತಿ ನಿರತರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಆಸ್ಪತ್ರೆಗಳಿಗೆ ಹೆಚ್ಚಿನ ಸೌಲಭ್ಯ ಕೊಡಬೇಕಾಗಿದೆ.
ಸೌಲಭ್ಯ ಸಿಗದಿದ್ದರೆ ಎಲ್ಲರೂ ಬೆಂಗಳೂರಿಗೆ ಬರುವಂತಾಗುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಆಸ್ಪತ್ರೆಗಳನ್ನು ಮೇಲ್ದರ್ಜೆಗೊಳಿಸಬೇಕಾಗಿದೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ರಾಜ್ಯದ ರೈತರ ಸಾಲ ಮನ್ನಾ ಮಾಡಿದ್ದರು. ಲಕ್ಷಾಂತರ ಫಲಾನುಭವಿಗಳು ಈ ಸೌಲಭ್ಯ ಪಡೆದಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಬಸ್ಸಿನ ವ್ಯವಸ್ಥೆ, ಮೂಲಭೂತ ಸೌಲಭ್ಯ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ನೀಡಿದ್ದೇವೆ ಎಂದು ಹೇಳಿದರು. ಮನ್ಮುಲ್ ನಿರ್ದೇಶಕ ರಾಮಚಂದ್ರ, ಮನ್ಮುನ್ ಉಪಾಧ್ಯಕ್ಷ ರಘುನಂದನ್, ಬಿಜೆಪಿ ಮುಖಂಡರಾದ ಡಾ.ಸಿದ್ದರಾಮಯ್ಯ, ಡಾ.ಸದಾನಂದ, ಕೆ.ಟಿ. ಶ್ರೀಕಂಠೇಗೌಡ ಇದ್ದರು.
Uncategorized
ಜಿಲ್ಲಾಧ್ಯಕ್ಷರಾಗಿ ತಿತಿಮತಿ ಶರತ್ ಕುಮಾರ್ ಆಯ್ಕೆ
ತಿತಿಮತಿ : ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ(ರಿ)ದ ಜಿಲ್ಲಾಧ್ಯಕ್ಷರಾಗಿ ತಿತಿಮತಿ ಶರತ್ ಕುಮಾರ್ ಆಯ್ಕೆ ಆಗಿದ್ದಾರೆ.
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ( ರಿ) ಬೆಂಗಳೂರು ಘಟಕದ ಕೊಡಗು ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ ಮಾಡಲಾಗಿದ್ದು, ಸರ್ಕಾರಿ ಪ್ರೌಢಶಾಲೆ ತಿತಿಮತಿಯ ಶಿಕ್ಷಕರಾದ ಶರತ್ ಕುಮಾರ್ ಇವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಳ್ಳುಸೋಗೆ ಶಿಕ್ಷಕ ಶಿವಲಿಂಗ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಸರ್ಕಾರಿ ಪ್ರೌಢಶಾಲೆ ಮಾಯಮುಡಿಯ ಶಿಕ್ಷಕ ಆರ್ ದಿವಾಕರ್ ಜಿಲ್ಲಾ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಮಂದಾಕಿನಿಯನ್ನು ರಾಜ್ಯ ಪರಿಷತ್ ಸದಸ್ಯ ರಾಗಿ ಆಯ್ಕೆಯಾಗಿದ್ದಾರೆ.
ಇವರೆಲ್ಲರಿಗೂ ರಾಜ್ಯಾಧ್ಯಕ್ಷ ಚೌಡಪ್ಪ, ರಾಜ್ಯ ಕಾರ್ಯಧ್ಯಕ್ಷ ಕಿರಣ್ ರಘುಪತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಪ್ರಕಾಶ್ ಹಾಗೂ ರಾಜ್ಯ ಖಜಾಂಚಿಗಳಾದ ಸಂತೋಷ್ ಪಟ್ಟಣಶೆಟ್ಟಿ ಶುಭ ಹಾರೈಸಿದ್ದಾರೆ.
Uncategorized
ಪ್ರಥಮ ಆರ್ಬಿಟಲ್ ಅಥೆರೆಕ್ಟಮಿ ಶಸ್ತ್ರಚಿಕಿತ್ಸೆ ಯಶಸ್ವಿ
ದಾವಣಗೆರೆ: ಆರ್ಬಿಟಲ್ ಅಥೆರೆಕ್ಟಮಿ ಎಂಬ ಎರಡು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನೆರವೇರಿಸಿ ಇಲ್ಲಿನ ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವೈದ್ಯರು ವಿಶೇಷ ಸಾಧನೆಗೈದಿದ್ದು ವಿಶೇಷವೆಂದರೆ ಇದು ಮಧ್ಯ ಕರ್ನಾಟಕದಲ್ಲಿ ನೇರವೇರಿಸಿದ ಪ್ರಪ್ರಥಮ ಶಸ್ತ್ರಚಿಕಿತ್ಸೆಯಾಗಿದೆ.
ಹಿರಿಯ ಹೃದ್ರೋಗ ತಜ್ಞ ಡಾ. ಧನಂಜಯ ಆರ್.ಎಸ್ ಹಾಗೂ ಅವರ ತಂಡ ಈ ಚಿಕಿತ್ಸೆಯನ್ನು ನೀಡಿದ್ದು ಇಬ್ಬರು ರೋಗಿಗಳು ಸಂಪೂರ್ಣ ಗುಣಮುಖರಾಗಿ ಇತ್ತೀಚೆಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಈ ಚಿಕಿತ್ಸೆಯಲ್ಲಿ ಡಾ. ಧನಂಜಯ ಅವರ ತಂಡ ಇಬ್ಬರೂ ರೋಗಿಗಳಲ್ಲಿ ಪರಿಧಮನಿಯ ಅಪಧಮನಿಗಳಲ್ಲಿ ( coronary arteries) ಕ್ಯಾಲ್ಸಿಯಂ ಶೇಖರಣೆಗೊಂಡು ರಕ್ತ ಪರಿಚಲನೆ ಸುಗಮವಾಗದೇ ಹೃದಯ ಬೇನೆಯಿಂದ ಬಳಲುತ್ತಿದ್ದರು ಇದನ್ನು ಅತ್ಯಂತ ನವೀನವಾದ ತಂತ್ರಜ್ಞಾನ ಆರ್ಬಿಟಲ್ ಅಥೆರೆಕ್ಟಮಿ ಶಸ್ತ್ರಚಿಕಿತ್ಸೆ ಮೂಲಕ ಪರಿಹರಿಸಿದ್ದಾರೆ.
ಏನಿದು ಚಿಕಿತ್ಸೆ
ಆರ್ಬಿಟಲ್ ಅಥೆರೆಕ್ಟಮಿಯು ಆಂಜಿಯೋಪ್ಲಾಸ್ಟಿಗಳಿಗಾಗಿ ಕ್ಯಾಲ್ಸಿಯಂ ಶೇಖರಣೆಗೊಂಡ ಅಪಧಮನಿಗಳನ್ನುಸ್ವಚ್ಛಗೊಳಿಸಲು ಉಪಯೋಗಿಸುವ ತಂತ್ರಜ್ಞಾನವಾಗಿದೆ. ಇದರಲ್ಲಿ ಉಪಯೋಗಿಸುವ ಸಾಧನ ವಜ್ರದ ತುದಿ ಹೊಂದಿದ್ದು, ಪ್ರತಿ ಸೆಕೆಂಡಗೆ ೮೦,೦೦೦ ದಿಂದ ೧,೨೦,೦೦೦ ಸಾರಿ ತಿರುಗುವ ಮೂಲಕ, ಅಪಧಮನಿಗಳಲ್ಲಿ ಜಮಾವಣೆಗೊಂಡ ಕ್ಯಾಲ್ಸಿಯಂನ್ನು ತೆಗೆದು ಹಾಕುತ್ತದೆ. ಇದರಿಂದ ಸ್ಟೆಂಟ್ ಹಾಕಲು ಇರುವ ಅಡೆತಡಗಳು ದೂರವಾಗಿ, ಸ್ಟೆಂಟ್ ಹಾಕಿದ ನಂತರ ಹೃದಯಕ್ಕೆ ರಕ್ತಸಂಚಾರ ಸರಾಗವಾಗಿ ತೊಂದರೆ ದೂರವಾಗುತ್ತದೆ.
ಸುಮಾರು ೭೪ ವರ್ಷದ ಹಿರಿಯರೊಬ್ಬರು ತೀವ್ರವಾದ ಹೃದಯ ಬೇನೆಯಿಂದ ದಾವಣಗೆರೆಯ ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಗೆ ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ ವೈದ್ಯರು ಇವರ ಹೃದಯದ ಪರಿಧಮನಿಯ ಅಪಧಮನಿಗಳಲ್ಲಿ ( coronary arteries) ಕ್ಯಾಲ್ಸಿಯಂ ಶೇಖರಣೆಗೊಂಡು ರಕ್ತ ಸಂಚಾರ ತೊಡಕಾಗುತ್ತಿರುವುದು ಎಂದು ತಿಳಿದು ಬಂದಿದೆ.
ಇದೇ ವೇಳೆ ೬೬- ವರ್ಷದ ಹಿರಿಯ ವ್ಯಕ್ತಿಯು ಸಹ ಇದೇ ತರಹದ ಹೃದಯ ಬೇನೆಯೊಂದಿಗೆ ಆಸ್ಪತ್ರೆಗೆ ಬಂದಿದ್ದರು, ಇವರನ್ನು ಸಹ ತಪಾಸಣೆಗೆ ಒಳಪಡಿಸಿದಾಗ ಇವರಿಗೂ ಸಹ ೭೪ ವರ್ಷದ ರೋಗಿ ತರಹ ಕ್ಯಾಲ್ಸಿಯಂ ಆರ್ಟರಿಗಳಲ್ಲಿ ಗಟ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಈ ಇಬ್ಬರು ರೋಗಿಗಳಿಗೆ, ಸುಗಮ ರಕ್ತ ಸಂಚಾರಕ್ಕೆ ಕ್ಯಾಲ್ಸಿಯಂ ಶೇಖರಣೆಯಿಂದ ಸ್ಟೆಂಟ್ ಅಳವಡಿಸುವುದು ಕ್ಲಿಷ್ಟಕರವಾಗಿತ್ತು. ಇದನ್ನು ಮನಗಂಡ ವೈದ್ಯರು ಆರ್ಬಿಟಲ್ ಅಥೆರೆಕ್ಟಮಿ ಎಂಬ ವಿನೂತನ ಮತ್ತು ಅತ್ಯಂತ ಸುಧಾರಿತ ತಂತ್ರಜ್ಞಾನದ ಮೂಲಕ ಆರ್ಟರಿಗಳಲ್ಲಿ ಶೇಖರಣೆಗೊಂಡು ಗಟ್ಟಿಯಾಗಿದ್ದ ಕ್ಯಾಲ್ಸಿಯಂ ಅನ್ನು ತೆಗೆದು ಸ್ಟೆಂಟ್ ಅಳವಡಿಸಿ ರೋಗಿಗಳ ಜೀವವನ್ನು ಕಾಪಾಡಿದ್ದಾರೆ.
ಈ ನವೀನ ತಂತ್ರಜ್ಞಾನದ ಬಗ್ಗೆ ಮಾತನಾಡಿದ ಡಾ. ಧನಂಜಯ “ ಆರ್ಬಿಟಲ್ ಅಥೆರೆಕ್ಟಮಿ ಎಂಬ ವಿನೂತನ ಚಿಕಿತ್ಸೆ ನಮ್ಮ ಮಧ್ಯ ಕರ್ನಾಟಕದ ಜನರಿಗೆ ಈಗ ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಲಭ್ಯವಿದೆ. ಇತ್ತೀಚೆಗೆ ನಾವು ಈ ಚಿಕಿತ್ಸೆಯನ್ನು ಇಬ್ಬರು ರೋಗಿಗಳಿಗೆ ನೀಡಿದ್ದೇವೆ, ಚಿಕಿತ್ಸೆ ಬಹಳ ಪರಿಣಾಮಕಾರಿಯಾಗಿದೆ ಅಲ್ಲದೆ ಬಹಳ ಬೇಗ ರೋಗಿಗಳು ಸಂಪೂರ್ಣವಾಗಿ ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಹೃದಯರೋಗಕ್ಕೆ ಸಂಬಂಧಿಸಿದ ಎಲ್ಲ ತರಹದ ಸಮಸ್ಯೆಗಳಿಗೆ ಅತ್ಯಾಧುನಿಕ ಚಿಕಿತ್ಸೆ ಲಭ್ಯವಿದೆ. ಮಧ್ಯ ಕರ್ನಾಟಕದ ಜನರಿಗೆ ವಿಶ್ವದರ್ಜೆಯ ಅತ್ಯಾಧುನಿಕ ಚಿಕಿತ್ಸೆ ನೀಡುವ ನಾರಾಯಣ ಹೆಲ್ತ್ ನ ಪ್ರಯತ್ನ ನಿರಂತರವಾಗಿರಲಿದೆ,” ಎಂದರು.
Uncategorized
ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ: ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ ಎಂದ ಸಂಸದ ಯದುವೀರ್
ಬೆಂಗಳೂರು: ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡುಗೆ ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸ “ಕಾವೇರಿ”ಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿದ ಸಂಸದರು ಮನವಿ ಸಲ್ಲಿಸಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃವೃದ್ಧಿ ಯೋಜನೆಗಳು ಹಾಗೂ ಇತರೆ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು.
ಮೈಸೂರು ಸಾಂಸ್ಕೃತಿಕ ರಾಜಧಾನಿಯಾಗಿದೆ ಹಾಗೂ ಇತ್ತೀಚೆಗೆ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ದೇಶ-ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ, ಉದ್ಯಮಿಗಳಿಗೆ, ಅನುಕೂಲವಾಗಲು ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಮಾಡಬೇಕಾದ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ 46 ಎಕರೆ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಮಧ್ಯಪ್ರವೇಶಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ಯದುವೀರ್ ಮನವಿ ಮಾಡಿದರು.
ಈಗಾಗಲೇ ಭೂ ಸ್ವಾಧೀನಕ್ಕೆ ವಿಶೇಷ ಜಿಲ್ಲಾಧಿಕಾರಿಗಳ ಒಪ್ಪಿಗೆ ದೊರೆತಿದೆ. ಭೂ ಮಾಲೀಕರಿಗೆ ವೆಚ್ಚ ಪಾವತಿಸಿದ ನಂತರ ಹಸ್ತಾಂತರ ಪ್ರಕ್ರಿಯೆ ಸರಾಗವಾಗಲಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ನಂತರ ಭೂಮಿಯನ್ನು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರಿಸಬೇಕು ಎಂದು ಸಂಸದರು ಇದೇ ಸಂದರ್ಭದಲ್ಲಿ ಮನವರಿಕೆ ಮಾಡಿಕೊಟ್ಟರು.
ಕಾಲುವೆ, ವಿದ್ಯುತ್ ತಂತಿಗೆ ಪರ್ಯಾಯ ವ್ಯವಸ್ಥೆ ಮಾಡಲು ಮನವಿ: ಉದ್ದೇಶಿತ ವಿಮಾನ ನಿಲ್ದಾಣದಲ್ಲಿ, ನೀರಾವರಿ ಕಾಲುವೆ, ಓವರ್ ಹೆಡ್ ವಿದ್ಯುತ್ ತಂತಿಗಳಿವೆ, ಇವುಗಳನ್ನು ಕೂಡ ರಾಜ್ಯ ಸರ್ಕಾರ ತೆರವುಗೊಳಿಸಬೇಕು ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಂಸದರು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.
ಭೂಮಿ ಹಸ್ತಾಂತರ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗೆ ಅಡ್ಡಿಯಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ತ್ವರಿತ ಗತಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಯದುವೀರ್ ಮನವಿ ಸಲ್ಲಿಸಿದರು.
ದೇವರಾಜ ಮಾರುಕಟ್ಟೆ ಸಂರಕ್ಷಿಸಲು ಮನವಿ: ದೇವರಾಜ ಮಾರುಕಟ್ಟೆ ಕಟ್ಟಡ ಮತ್ತು ಲ್ಯಾಂಡ್ಸ್ ಡೌನ್ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿವೆ. ಮತ್ತು ಮೈಸೂರಿಗೆ ಇವು ಕಳಶಪ್ರಾಯವಾಗಿವೆ. ಇವುಗಳನ್ನು ಕೆಡವದೇ ಉಳಿಸಿಕೊಂಡು ಸಂರಕ್ಷಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿಗಳಿಗೆ ಯದುವೀರ್ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ, ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆದ ಎಚ್.ಸಿ.ಮಹದೇವಪ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೈಸೂರು ಕ್ರಿಕೆಟ್ ಸ್ಟೇಡಿಯಂಗೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲು ಮನವಿ: ಮೈಸೂರಿನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA)ಗೆ ಭೂಸ್ವಾಧೀನ ಪ್ರಕ್ರಿಯೆ ಭಾರಿ ವಿಳಂಬವಾಗಿದೆ. ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಸಂಸದ ಯದುವೀರ್ ಮನವಿ ಪತ್ರ ಸಲ್ಲಿಸಿದರು.
ಕ್ರೀಡೆಗೆ, ಪ್ರವಾಸೋದ್ಯಮ ಕ್ಷೇತ್ರಕ್ಕೆ ಮೈಸೂರಿನ ಕೊಡುಗೆ ಅನನ್ಯವಾಗಿದೆ. ಜಾಗತಿಕ ಮಟ್ಟದಲ್ಲಿ ಮೈಸೂರು ಖ್ಯಾತಿಯನ್ನು ಪಸರಿಸಲು ವಿಶ್ವದರ್ಜೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಆದ್ಯತೆ ನೀಡಬೇಕಾಗಿದೆ. ಇದರಿಂದ ಮೈಸೂರಿನಲ್ಲಿ ಆರ್ಥಿಕ ಚಟುವಟಿಕೆ ಹೆಚ್ಚಾಗಲಿದೆ. ರಾಜ್ಯದ ಆರ್ಥಿಕತೆಗೂ ನೆರವಾಗಲಿದೆ ಎಂದು ಯದುವೀರ್ ವಿವರಿಸಿದರು.
ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಮೈಸೂರಿನಲ್ಲಿ ನಿರ್ಮಾಣವಾದರೆ ಉದ್ಯೋಗಾವಕಾಶಗಳು ಹೆಚ್ಚಾಗುತ್ತದೆ. ಹೀಗಾಗಿ ಕ್ಷಿಪ್ರಗತಿಯಲ್ಲಿ ಭೂ ಸ್ವಾಧೀನ, ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯದುವೀರ್ ಮನವಿ ಮಾಡಿದರು.
ಮುಖ್ಯಮಂತ್ರಿ ಸ್ಪಂದನೆ: ಸಂಸದರು ನೀಡಿರುವ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಮೈಸೂರು ವಿಮಾನ ನಿಲ್ದಾಣ ಹಾಗೂ ಕ್ರಿಕೆಟ್ ಮೈದಾನಕ್ಕೆ ಸಂಬಂಧಿಸಿದ ಭೂಮಿ ಹಸ್ತಾಂತರ ವಿಷಯದಲ್ಲಿ ಸೂಕ್ತ ಕ್ರಮವನ್ನು ಶೀಘ್ರದಲ್ಲಿಯೇ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
-
Kodagu20 hours ago
ಅಖಿಲ ಕೊಡವ ಸಮಾಜದ ಹೇಳಿಕೆಗೆ ನಮ್ಮ ವಿರೋಧವಿದೆ, ಹೋರಾಟ ಮುಂದುವರಿಯಲಿದೆ – ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಸ್ಪಷ್ಟನೆ
-
Kodagu19 hours ago
ಕಿಡಿಗೇಡಿಗಳನ್ನು ಬಂಧಿಸದೇ ನಡೆಸುವ ಶಾಂತಿ ಮಾತುಕತೆಗೆ ನಮ್ಮ ಬೆಂಬಲವಿಲ್ಲ: ಯುಕೊ ಸ್ಪಷ್ಟನೆ
-
Tech17 hours ago
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
-
Sports21 hours ago
Champions Trophy 2025ಕ್ಕೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಉಪನಾಯಕ ಪಟ್ಟ
-
Cinema24 hours ago
ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: ಪತ್ನಿ ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್!
-
National - International23 hours ago
ಕೊಲ್ಕತ್ತಾ ವೈದ್ಯ ಮೇಲಿನ ಅತ್ಯಾಚಾರ ಪ್ರಕರಣ: 57 ದಿನಗಳಲ್ಲಿ ತೀರ್ಪು ಪ್ರಕಟ; ರಾಯ್ ದೋಷಿ
-
Mysore21 hours ago
ಮೈಸೂರು ವಿವಿ ಗೌರವ ಡಾಕ್ಟರೇಟ್ ತಂದ ಖುಷಿ
-
Mysore19 hours ago
ಮೈಸೂರಿನ ಮಾರುಕಟ್ಟೆಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು