Connect with us

Mandya

ಒಕ್ಕಲಿಗ ಸಮಾಜವನ್ನ ತುಳಿದದ್ದೇ ಸಿದ್ದರಾಮಯ್ಯ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

Published

on

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಒಕ್ಕಲಿಗ ಸಮಾಜ ತುಳಿದರು, ಒಕ್ಕಲಿಗರ ಪರವಾಗಿ ಹೋರಾಟ ಮಾಡಿರುವ ವ್ಯಕ್ತಿಗಳಿಗೆ ನೀವು ಟಿಕೆಟ್‌ ಕೊಟ್ಟಿದ್ದೀರಾ? ರಾಜ್ಯದಲ್ಲಿ ಯಾವ ಕ್ಷೇತ್ರದಲ್ಲಿಯಾದರೂ ಚುನಾವಣೆಗೆ ಸ್ಪರ್ಧಿಸುವ ಹಕ್ಕಿದೆ, ನೀವು ರಾಹುಲ್‌ ಗಾಂಧಿ ಕರೆತಂದು ವಯನಾಡಿನಲ್ಲಿ ನಿಲ್ಲಿಸಿದ್ದು, ಸಿದ್ದರಾಮಯ್ಯ ಬಾದಾಮಿಗೆ ಹೋಗಿ ಸ್ಪರ್ಧೆ ಮಾಡಿದ್ದು ಸುಳ್ಳೇ ಎಂದು ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಜಾತಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್‌ನವರು, ಜಾತ್ಯಾತೀತವೆಂಬುದನ್ನು ಜೆಡಿಎಸ್‌ನವರು ತೆಗೆದುಕೊಳ್ಳಬೇಕು ಎನ್ನುತ್ತೀರಾ ಹಾಗಾದರೆ ನೀಡುವ ಮಾಡುತ್ತಿರುವುದು ಏನು ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನಲ್ಲಿ ಎಂಟು ಜನರಿಗೆ ಚುನಾವಣೆ ಸ್ಪರ್ಧಿಸಲು ಟಿಕೆಟ್‌ ಕೊಟ್ಟಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ, ಎಂತಹ ಒಕ್ಕಲಿಗರಿಗೆ ನೀವು ಕೊಟ್ಟಿರುವ ಟಿಕೆಟ್‌ಅನ್ನು ಒಕ್ಕಲಿಗರ ಪರವಾಗಿ ಧ್ವನಿ ಎತ್ತಿದವರಿಗೆ ಹೋರಾಟ ಮಾಡಿದವರಿಗೆ ನೀಡಿದ್ದೀರಾ, ನೀವು ಯಾರಿಗೆ ಟಿಕೆಟ್‌ ಕೊಟ್ಟಿದ್ದೀರಾ ಎನ್ನುವುದು ಜನತೆಗೂ ತಿಳಿದಿದೆ ಎಂದರು.

ಜಿಲ್ಲೆಯಲ್ಲಿ ಗದ್ದೆಯಲ್ಲಿ ಕಬ್ಬು ಒಣಗುತ್ತಿದೆ, ಕಬ್ಬಿಗೆ ಬೆಂಕಿ ಇಡುವ ಸ್ಥಿತಿಗೆ ಬಂದಿದ್ದಾರೆ, ತಮಿಳುನಾಡಿಗೆ ಯೆಥೇಚ್ಚವಾಗಿ ನೀಡು ಬಿಡುತ್ತೀರಾ, ಒಕ್ಕಲಿಗರ ಟ್ರಂಪ್‌ ಕ್ರಾಡ್‌ ಬಳಸಿ ಪೆನ್ನು ಪೇಪರ್‌ ಕೇಳಿ ರಾಜಕೀಯ ಮಾಡುತ್ತೀರಾ, ನೀರಾವರಿ ಪ್ರದೇಶಕ್ಕೆ ನೀರು ಬಿಡಲು ಆಗಲಿಲ್ಲ, ಸಿದ್ದರಾಮಯ್ಯ ಅವರು ಒಕ್ಕಲಿಗರ ಸಮಾಜವನ್ನು ತುಳಿದಿರುವುದು ಮೈಸೂರಿನ ಜನತೆಗೆ ಹಾಗೂ ರಾಜ್ಯದ ಒಕ್ಕಲಿಗರಿಗೆ ಗೊತ್ತಿದೆ ಎಂದು ಟೀಕಿಸಿದರು.

ಮೈಷುಗರ್‌ ಕಾರ್ಖಾನೆಯನ್ನು ಪುನಶ್ಚೇತನ ಗೊಳಿಸುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ ಸರ್ಕಾರ ಒಂದೇ ಒಂದು ರೂಪಾಯಿಯನ್ನು ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ, ಕೇವಲ ಬಾಯಿ ಮಾತಿಗೆ ಹೇಳಿದರೆ ಸಾಕೆ? ಕೇವಲ ಘೋಷಣೆಗಷ್ಟೇ ನಿಮ್ಮ ಹೇಳಿಕೆ ಇದೆ. ಮೈಷುಗರ್‌ ಆಸ್ತಿ ಮಾರಾಟ ಮಾಡಿ ಹೊಸ ಕಾರ್ಖಾನೆ ಕಟ್ಟುತ್ತೀರಾ ಎಂದು ಹರಿಯಾಯ್ದರು.

ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಸೇರಿದಂತೆ ನಾಯಕರು ಆಗಮಿಸುತ್ತಿದ್ದು, ನಮ್ಮ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಎಲ್ಲ ಕಾರ್ಯಕರ್ತರು ಮತ್ತು ಮುಖಂಡರು ಹಾಗೂ ನಾಯಕರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

Continue Reading
Click to comment

Leave a Reply

Your email address will not be published. Required fields are marked *

Mandya

ಜು.25 ರಂದು ಕೆ.ವಿ ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರಧಾನ ಸಮಾರಂಭ

Published

on

ಮಂಡ್ಯ: ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಜಿಲ್ಲೆ 268 ಎಸ್ ಹಾಗೂ ನಂಜಮ್ಮ ಮೋಟೆಗೌಡ ಚಾರಿಟೇಬಲ್ ಟ್ರಸ್ಟ್ ಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಕೆ.ವಿ.ಶಂಕರಗೌಡರ 109ನೇ ಜನ್ಮದಿನದ ಪ್ರಯುಕ್ತ ನಿತ್ಯ ಸಚಿವ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜುಲೈ 25ರಂದು ಮಧ್ಯಾಹ್ನ 3 ಗಂಟೆಗೆ ಮಂಡ್ಯದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ರಾಜ್ಯಪಾಲರಾದ ಕೆ ಟಿ ಹನುಮಂತು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ಈ ಪ್ರಶಸ್ತಿಯನ್ನು ಜಿಲ್ಲಾಮಟ್ಟದಲ್ಲಿ ನೀಡಲಾಗುತ್ತಿದ್ದು, ಈ ಬಾರಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಗೆ ಕನಕಪುರದ ರೂರಲ್ ಕಾಲೇಜನ್ನು ಆಯ್ಕೆ ಮಾಡಲಾಗಿದೆ ಎಂದರು.

ಪ್ರಶಸ್ತಿಯು 25,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು, ಅಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು ಎಂದರು.

ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷರಾದ ಕೆ.ಟಿ..ಶ್ರೀಕಂಠೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಶರಣಪ್ಪ ವಿ.ಅಲ್ಸೆ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದು, ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಅಂತರರಾಷ್ಟ್ರೀಯ ನಿರ್ದೇಶಕ ನಾಗರಾಜು ವಿ. ಭೈರಿ ,ಕರ್ನಾಟಕ ಸಂಘದ ಅಧ್ಯಕ್ಷ ಪ್ರೊಫೆಸರ್ ಜಯಪ್ರಕಾಶ್ ಗೌಡ ,ಪಿಇ ಟಿ ಅಧ್ಯಕ್ಷ ಕೆ .ಎಸ್. ವಿಜಯ್ ಆನಂದ್, ಆರ್ ಎ ಪಿ ಸಿ ಎಂ ಎಸ್ ಅಧ್ಯಕ್ಷ ಯು. ಸಿ.ಶೇಖರ್, ಜಿಲ್ಲೆ 268 ಎಸ್ 1ನೇ ಉಪ ರಾಜ್ಯಪಾಲ ಹೆಚ್ ಮಾದೇಗೌಡ, ಎರಡನೇ ಉಪರಾಜ್ಯಪಾಲ ಕೆ.ಆರ್.ಶಶಿಧರ, ಸಂಪುಟ ಕಾರ್ಯದರ್ಶಿ ಕೆ ಎಸ್ ಚಂದ್ರಶೇಖರ್, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷ ಪ್ರೊಫೆಸರ್ ಡೇವಿಡ್ ಭಾಗವಹಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಕಾರಸವಾಡಿ ಮಹದೇವು, ಪ್ರತಿಭಾಂಜಲಿ ಅಕಾಡೆಮಿಯ ಡೇವಿಡ್, ರತ್ನಮ್ಮ, ಮಂಜುನಾಥ್ ಸೇರಿದಂತೆ ಇತರರು ಇದ್ದರು.

Continue Reading

Mandya

ಸರ್ಕಾರ ಕಾರ್ಪೊರೇಟ್ ಕಂಪನಿಗಳ ಒತ್ತಾಯಕ್ಕೆ ಮಣಿಯಬಾರದು

Published

on

ಮಂಡ್ಯ: ರಾಜ್ಯ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಒತ್ತಡಕ್ಕೆ ಮಣಿಯದೆ ಸಚಿವ ಸಂಪುಟದಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಕೈಗೊಂಡಿರುವ ತೀರ್ಮಾನವನ್ನು ಜಾರಿಗೆ ತರಬೇಕು ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕರಿ ರಮೇಶ್ ಆಗ್ರಹ ಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಿಗರ ಉದ್ಯೋಗ ಕನ್ನಡಿಗರ ಜನ್ಮಸಿದ್ಧ ಹಕ್ಕಾಗಿದೆ. ಸರೋಜಿನಿ ಮಹಿಷ ವರದಿ ಜಾರಿಗೆ ತಂದರೆ ಯಾವುದೇ ಸಮಸ್ಯೆಗಳು ಉದ್ಭವವಾಗುವುದಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ನಡೆಸಿ ಕಾರ್ಪೊರೇಟ್ ಕಂಪನಿಗಳಲ್ಲಿ ಮೀಸಲಾತಿ ಕುರಿತಂತೆ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ ಕಾರ್ಪೊರೇಟ್ ಕಂಪನಿಗಳು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ .ಇದರಿಂದಾಗಿ ಸಂಪುಟದಲ್ಲಿ ಕೈಗೊಂಡಿರುವ ತೀರ್ಮಾನಕ್ಕೆ ಬ್ರೇಕ್ ಬಿದ್ದಿದೆ. ಆದಕಾರಣ ಮುಖ್ಯಮಂತ್ರಿಗಳು ಈ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ತಾಕೀತು ಮಾಡಿದರು.


ದಲಿತ ಸಂಘರ್ಷ ಸಮಿತಿಯ ಟಿ.ಡಿ.ಬಸವರಾಜು ಮಾತನಾಡಿ, ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಹಲವಾರು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಆದರೆ ಇಲ್ಲಿಯವರೆಗೂ ಸರಕಾರಗಳು ಬಂದಿದೆ ಹೋಗಿದೆ. ಈ ವರದಿಯ ಬಗ್ಗೆ ಮಾತ್ರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಸಂಪುಟದಲ್ಲಿ ತೆಗೆದುಕೊಂಡಿರುವ ತೀರ್ಮಾನವನ್ನು ವಾಪಸ್ ಪಡೆದರೆ ಅದನ್ನು ಖಂಡಿಸುವುದಾಗಿ ತಿಳಿಸಿದರಲ್ಲದೆ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಉಮ್ಮಡಹಳ್ಳಿ ನಾಗೇಶ್, ಜೋಸೆಫ್ ರಾಮು, ಪುಟ್ಟರಾಜು, ಕೆಂಪಯ್ಯ, ಉಮ್ಮಡಹಳ್ಳಿ ಉಮೇಶ್, ಅಂಕಯ್ಯ ಸೇರಿದಂತೆ ಇತರರಿದ್ದರು.

Continue Reading

Mandya

ಭೀಕರ ರಸ್ತೆ ಅಪಘಾತ : ತುಂಡಾದ ವ್ಯಕ್ತಿಯ ದೇಹ

Published

on

ಮಂಡ್ಯ: ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೋರ್ವನ ಶವ ತುಂಡಾಗಿ ಬಿದ್ದಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮೂರ್ಕಾಲು ಗೇಟ್ ಬಳಿ ಸಂಭವಿಸಿದೆ.

ಕೂದೇನಕೊಪ್ಪಲು ಗ್ರಾಮದ ಕರಿಯಪ್ಪ(56) ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಾಯಾಳು ಬಸವೇಗೌಡಗೆ ಗಂಭೀರ ಗಾಯವಾಗಿದೆ.

ಮಳವಳ್ಳಿ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಕಿರಗಾವಲು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕಿರಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲುಗೊಂಡಿದೆ.

Continue Reading

Trending

error: Content is protected !!