Connect with us

Mandya

ಎಚ್‌ಡಿಕೆ ಭೇಟಿಯ ಮುನಿಸು, ಯಾರಿಗೂ ನೋವುಂಟು ಮಾಡಲ್ಲಬೆಂಬಲಿಗರ, ಅಭಿಮಾನಿಗಳ ಸಭೆಯಲ್ಲಿ ಕೆ.ಎಸ್‌.ವಿಜಯ್‌ ಆನಂದ್‌ ಭರವಸೆ

Published

on

ಮಂಡ್ಯ: ಸ್ವಾಭಿಮಾನದ ಹೆಸರಿನಲ್ಲಿ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ನಾಲ್ಕನೇ ಸ್ಥಾನ ಗಳಿಸಿದೆ, ಈಗ ಎಚ್‌.ಡಿ.ಕುಮಾರಸ್ವಾಮಿ ಅವರನ್ನ ಭೇಟಿಯಾಗಿರುವುದಕ್ಕೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಯಾರಿಗೂ ಚ್ಯುತಿ ಬರದ ಹಾಗೆ ನಡೆದುಕೊಳ್ಳುತ್ತೇನೆ ಎಂದು ಜನತಾ ಶಿಕ್ಷಣ ಟ್ರಸ್ಟ್‌ ಅಧ್ಯಕ್ಷ ಕೆ.ಎಸ್.ವಿಜಯ್‌ ಆನಂದ್‌ ಹೇಳಿದರು.

ನಗರದ ಹೊಂಬಾಳೆ ಪಂಕ್ಷನ್ ಹಾಲ್‌ನಲ್ಲಿ ಕೆ.ಎಸ್.ವಿಜಯ್ ಆನಂದ್ ಬೆಂಬಲಿಗರು ಹಾಗೂ ಹಿತೈಷಿಗಳು ಶನಿವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಲವರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಗದ್ದುಗೆಯ ಆಸೆ ತೋರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ ಹಾಗೂ ಜೆಡಿಎಸ್ ಪಕ್ಷದ ಹಲವು ಮಾಜಿ ಶಾಸಕರು ನನ್ನನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಅವರೆಲ್ಲರಿಗೂ ಋಣಿಯಾಗಿರುವೆ, ರಾಜಕೀಯ ಏಳು-ಬೀಳುಗಳಿಂದ ನಾನು ಧೃತಿಗೆಟ್ಟಿಲ್ಲ ಅಥವಾ ಇದರಿಂದ ಹತಾಶನಾಗುವುದಿಲ್ಲ. ಯಾವುದೇ ಪಕ್ಷ ಸೇರ್ಪಡೆಯಾಗಲು ಬೇಡಿಕೆ ಇಡುವುದಿಲ್ಲ. ನನ್ನ ಸ್ಥಾನಮಾನದ ಅರಿವು ನನಗಿದೆ. ನನ್ನ ಹಿತೈಷಿಗಳು ಮತ್ತು ಬೆಂಬಲಿಗರ ಆಕಾಂಕ್ಷೆಗೆ ವಿರುದ್ಧವಾಗಿ ರಾಜಕೀಯ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಯಾರಿಗೂ ಸುಳ್ಳು ಹೇಳುವುದಿಲ್ಲ, ಮೋಸವನ್ನೂ ಮಾಡಿಲ್ಲ, ನಿಮ್ಮ ಪ್ರೀತಿ ಮತ್ತು ದುಡಿಮೆಗೆ ಚಿರಋಣಿಯಾಗಿದ್ದೇನೆ. ನನ್ನ ಚುನಾವಣೆಯಲ್ಲಿ ಹಾಗೂ ಇಂದು ಮಾಧ್ಯಮದವರು ನೀಡಿದ ಸಹಕಾರಕ್ಕೂ ಆಭಾರಿಯಾಗಿರುವೆ, ಹಿಂದಿನಂತೆ ಎಲ್ಲರೂ ನನ್ನೊಟ್ಟಿಗಿರುವುದು ಸಂತೋಷದ ವಿಚಾರ. ಎರಡು ದಿನದ ಹಿಂದೆ ಸಭೆ ನಡೆಸುವ ನಿರ್ಧಾರ ಕೈಗೊಂಡೆ. ಕೆಲವರಿಗಷ್ಟೇ ದೂರವಾಣಿಯಲ್ಲಿ ಆಹ್ವಾನಿಸಿದ್ದೇನೆ. ಆದರೂ ಇಷ್ಟು ಜನ ಆಹ್ವಾನಕ್ಕೆ ಮನ್ನಣೆ ನೀಡಿ ಸಭೆಗೆ ಆಗಮಿಸಿರುವುದು ಸಂತೋಷ ತಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಸಂದರ್ಭದಲ್ಲಿ ಎದುರಾದ ಸನ್ನಿವೇಶದಲ್ಲಿ ಸ್ವಾಭಿಮಾನದ ಹೆಸರಿನಲ್ಲಿ ಸ್ಪರ್ಧೆಗಿಳಿದೆ. 15 ಸಾವಿರಕ್ಕೂ ಹೆಚ್ಚು ಮತ ನೀಡಿ 4ನೇ ಸ್ಥಾನ ದೊರಕಿಸಲು ಪ್ರಯತ್ನಿಸಿದ್ದೀರಿ. ಇತ್ತೀಚೆಗೆ ನಾನು ಕುಮಾರಸ್ವಾಮಿ ಹಾಗೂ ನಿಖಿಲ್ ಅವರನ್ನು ಭೇಟಿ ಮಾಡಿರುವುದು ಹೆಚ್ಚಿನವರಿಗೆ ಸಂತೋಷ ತಂದರೆ, ಕೆಲವರಿಗೆ ನಿರಾಸೆ ಮೂಡಿಸಿದೆ. ನಿಮ್ಮೆಲ್ಲರ ಪ್ರೀತಿ, ಸಹಕಾರಕ್ಕೆ ಚ್ಯುತಿ ಬಾರದಂತೆ ಮುಂದೆಯೂ ರಾಜಕಾರಣ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಆಹ್ವಾನದ ಮೇರೆಗೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ನನ್ನ ಸಂಕಷ್ಟವನ್ನು ಹಂಚಿಕೊಂಡಿದ್ದೇನೆ. ನನ್ನ ಕಷ್ಟದ ಸಮಯದಲ್ಲಿ ಜೊತೆಯಲ್ಲಿದ್ದವರ ಅನಿಸಿಕೆ ಆಲಿಸಿ ರಾಜಕೀಯ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿ ಬಂದಿದ್ದೇನೆ? ಲೋಕಸಭಾ ಚುನಾವಣೆ ನಂತರ ರಾಜಕೀಯ ತೀರ್ಮಾ ಕೈಗೊಳ್ಳೋಣ ಎಂದುಕೊಂಡಿದ್ದೆ. ಆದರೆ, ನಿಮ್ಮೆಲ್ಲರ ಹಿತದೃಷ್ಠಿಯಿಂದ ಚುನಾವಣೆಗೂ ಮುನ್ನ ಸೂಕ್ತ ತೀರ್ಮಾ ಕೈಗೊಳ್ಳುತ್ತೇನೆ ಎಂದರು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನನ್ನ ಹಣೆಬರಹ ಕೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಯಾರನ್ನೂ ದೂಷಿಸುವುದಿಲ್ಲ. ನಮ್ಮ ಕುಟುಂಬದ ರಕ್ಷಣೆ ನಿಮ್ಮೆಲ್ಲರಿಂದ ಮಾತ್ರ ಸಾಧ್ಯ ಎಂಬ ಅರಿವು ನನಗಿದೆ. ನನ್ನನ್ನು ಮಾತೃ ಪಕ್ಷಕ್ಕೆ ಆಹ್ವಾನಿಸಿದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಕೆ.ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ ಹಾಗೂ ಬಿ.ಆರ್.ರಾಮಚಂದ್ರು ಅವರಿಗೆ ಧನ್ಯವಾದ ಅರ್ಪಿಸುವೆ ಎಂದು ತಿಳಿಸಿದರು.

ಸಭೆಯಲ್ಲಿ ನಗರಸಭೆ ಸದಸ್ಯ ಪೂರ್ಣಚಂದ್ರ, ಮುಖಂಡರಾದ ಪಣಕನಹಳ್ಳಿ ಯತೀಶ್ ಬಾಬು, ಉಮೇಶ್, ವೆಂಕಟೇಶ್, ಗೀತಾ ಜಯಕುಮಾರ್ ಭಾಗವಹಿಸಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!