Connect with us

Mandya

ಎಚ್‌.ಡಿ.ಕುಮಾರಸ್ವಾಮಿ ಅವರಿಂದ ನಾಮಪತ್ರ ಸಲ್ಲಿಕೆ

Published

on

ಹೈವೋಲ್ಟೇಜ್‌ಗೆ ಸಾಕ್ಷಿಯಾದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಸಭೆ

ಚುನಾವಣಾ ಕಣದಲ್ಲಿ ಎಚ್ಡಿ ಇನ್ಶಿಯಲ್‌ ಇರುವ ಹಾಸನದ ಅಭ್ಯರ್ಥಿ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಮೂಲಕ ತಮ್ಮ ಅಪಾರ ಬೆಂಬಲಿಗರು ಮತ್ತು ಅಭಿಮಾನಿಗಳೊಂದಿಗೆ ಮೈತ್ರಿ ಸಭೆ ನಡೆಸಿ ಹೈವೋಲ್ಟೇಜ್‌ ರಣಾಂಗಣವಾಗಿ ಗುರುವಾರ ಅಲೆ ಎಬ್ಬಿಸಿದರು.

ಮಂಡ್ಯ ಹೇಳಿ ಕೇಳಿ ದೇಶದಲ್ಲಿಯೇ ಗಮನ ಸೆಳೆದ ಕ್ಷೇತ್ರವೆಂದರೆ ತಪ್ಪಲ್ಲ, ಅಂತಹ ಮಂಡ್ಯದಲ್ಲಿ ಯಾವುದೇ ರೀತಿಯ ಮೆರವಣಿಗೆ ನಡೆಸದೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ನೀಡಿದರು.

ಇದಕ್ಕೂ ಮುನ್ನ ನಗರದ ಗುತ್ತಲು ಶ್ರೀ ಅರ್ಕೇಶ್ವರಸ್ವಾಮಿ, ಹಳೇನಗರದಲ್ಲಿರುವ ಶ್ರೀ ಲಕ್ಷ್ಮೀಜನಾರ್ದನಸ್ವಾಮಿ ಹಾಗೂ ನಗರದ ಶಕ್ತಿದೇವತೆ ಶ್ರೀ ಕಾಳಿಕಾಂಬ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸಲು ತೆರಳಿದ್ದು ವಿಶೇಷ ಎನಿಸಿತ್ತು.

ಒಂದೇ ಇನ್ಶಿಯಲ್‌ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಕೋಡಿಹಳ್ಳಿ ಗ್ರಾಮದ ದೊಡ್ಡೇಗೌಡ ಅವರ ಮಗ ಎಚ್.ಡಿ.ರೇವಣ್ಣ ಎಂಬವರು ಪೂರ್ವಾಂಚಲ್‌ ಮಹಾ ಪಂಚಾಯತ್‌ ಪಾರ್ಟಿಯಿಂದ ಸ್ಪರ್ಧೆ ಬಯಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು. ಇದರಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರ ಎಚ್‌.ಡಿ. ಎಂಬ ಇನ್ಶಿಯಲ್‌ ಇರುವುದನ್ನು ಕಾಣಬಹುದು.

Continue Reading
Click to comment

Leave a Reply

Your email address will not be published. Required fields are marked *

Mandya

 ಜೈವಿಕ ಇಂಧನ ಪ್ರಾತ್ಯಕ್ಷಿಕೆ ಮಳಿಗೆ ಉದ್ಘಾಟಿಸಿದ ಡಾ.ನಿರ್ಮಲಾನಂದ ಸ್ವಾಮೀಜಿ

Published

on

ಮಂಡ್ಯ : ಅದಿಚುಂಚನಗಿರಿ ಮಠದ ಜಗದ್ಗುರು ಡಾ.ನಿರ್ಮಲಾನಂದ ಸ್ವಾಮೀಜಿ ಅವರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಮಂಡ್ಯ ದಲ್ಲಿ ಆಯೋಜಿಸಲಾಗಿರುವ ಕೃಷಿ ಮೇಳ-2025, ಮಂಡಳಿ, ಜೈವಿಕ ಇಂಧನ ಉದ್ಯಾನ, ಹಾಸನ, ಜೈವಿಕ ಇಂಧನ ಮಾಹಿತಿ, ಸಂಶೋಧನೆ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರ, ಪಿಇಎಸ್ ಮಂಡ್ಯ ಸಹಯೋಗದಲ್ಲಿ ನಿರ್ಮಿಸಿರುವ ಜೈವಿಕ ಇಂಧನ ಪ್ರಾತ್ಯಕ್ಷಿಕೆ ಮಳಿಗೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಗಳು ತಮ್ಮ ಆಶೀರ್ವಚನದಲ್ಲಿ ಮಾತನಾಡಿ, ಆಹಾರ ಮತ್ತು ಇಂಧನ ಭದ್ರತೆಯು ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು ಕೃಷಿಯು ಜೈವಿಕ ಇಂಧನಗಳ ಉತ್ಪಾದನೆಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸುತ್ತಿದೆ ಎಂದು ತಿಳಿಸುತ್ತಾ ಕೃಷಿ ಹೇಗೆ ಲಾಭದಾಯಕವಾಗಿದೆ ಎಂಬುದಕ್ಕೆ ಬೆಂಗಳೂರಿನ ಒರ್ವ ಐಪಿಎಸ್‌ ಅಧಿಕಾರಿಯ ತಾಯಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು  ನಿರೂಪಿಸಿರುವುದನ್ನು ಉದಾಹರಿಸಿದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ   ಎಸ್ ಈ  ಸುಧೀಂದ್ರ ಅವರು ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಪ್ರಪ್ರಥಮ ಕೃಷಿ ಮೇಳ – 2025 ರ ಘೋಷವಾಕ್ಯ ‘ ಸಮಗ್ರ ಕೃಷಿಯಿಂದ ಸುಸ್ಥಿರತೆ’ ಈ ಘೋಷ ವಾಕ್ಯವು ಕೃಷಿಯು ಜೈವಿಕ ಇಂಧನ ಕ್ಷೇತ್ರದ  ಬೆಳವಣಿಗೆಯಲ್ಲಿ ಪೂರಕವಾಗಿರುವುದರ ಕುರಿತು ಅಭಿಪ್ರಾಯ ವ್ಯಕ್ತ ಪಡಿಸಿದರು. ರಾಷ್ಟ್ರದ ಜೈವಿಕ ಇಂಧನ ಉತ್ಪಾದನೆಯಲ್ಲಿ ಮಂಡ್ಯ ಜಿಲ್ಲೆಯು 1939 ರ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಮೊಟ್ಟಮೊದಲ ಬಾರಿಗೆ ಬ್ರಿಟಿಷ್ ವಸಾಹತುವಾಗಿದ್ದ ಬಾಂಬೆ ಪ್ರೆಸಿಡೆನ್ಸಿ ಎಂದು ಕರೆಯಲ್ಪಡುತ್ತಿದ್ದ ಮುಂಬೈ ಯಲ್ಲಿನ ಸಾರ್ವಜನಿಕ ಸಾರಿಗೆ ರೆಡ್ ಬಸ್ ಗಳಿಗೆ ಎಥನಾಲ್ ಪೂರೈಕೆ ಮಾಡಿದ್ದನ್ನು ಪ್ರಸ್ಥಾಪಿಸಿ ಇಂದು ರಾಷ್ಟ್ರಮಟ್ಟದಲ್ಲಿ ಪೆಟ್ರೋಲ್ ನಲ್ಲಿ ಶೇ 20ರ ಮಿಶ್ರಣ ಗುರಿಯನ್ನು 2025 ರಲ್ಲಿ ಸಾಧಿಸಿರುವುದಕ್ಕೆ  ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕೊಡುಗೆಯು ಅಮೂಲ್ಯವಾಗಿದೆ ಎಂದು ತಿಳಿಸಿದರು.

ಜೈವಿಕ ಇಂಧನಗಳ ಕುರಿತ ಪ್ರಾತ್ಯಕ್ಷಿಕೆ ಮಳಿಗೆಯು ಮಂಡಳಿಯ ಪ್ರಸ್ತುತ ಚಾಲ್ತಿಯಲ್ಲಿರುವ ಜೈವಿಕ ಇಂಧನ ಕಾರ್ಯ ಯೋಜನೆಗಳು ಹಾಗೂ ಉದ್ದೇಶಿತ ನೂತನ ಜೈವಿಕ ಇಂಧನ ನೀತಿ ಮತ್ತು ಕಾರ್ಯಯೋಜನೆಗಳ ಅನುಷ್ಠಾನದ ದಿಕ್ಸೂಚಿಯಾಗಿದೆ ಎಂದು ತಿಳಿಸಿದರು. ಮಂಡಳಿಯ ಅಧ್ಯಕ್ಷರು ಮಂಡಳಿ ಕೈಗೊಂಡಿರುವ ಜೈವಿಕ ಇಂಧನ ಕಾರ್ಯಕ್ಷೇತ್ರಗಳ ಕುರಿತು ಅರಿವು, ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗಳು ಮುಂದಿನ ದಿನಗಳಲ್ಲಿ ಜೈವಿಕ ಇಂಧನಗಳ ಉತ್ಪಾದನೆಯಲ್ಲಿ ಪ್ರಮುಖವಾಗಿ ಅಗತ್ಯ ಸಂಪನ್ಮೂಲಗಳ ಶೇಖರಣೆ, ಸಂಗ್ರಹಣೆ, ಸಾಗಣೆಯಲ್ಲಿ ರೈತರು, ಉತ್ಪಾದನಾ ಘಟಕಗಳ ನಿರ್ಮಾಣದಲ್ಲಿ ಬಂಡವಾಳ ಹೂಡಿಕೆದಾರರು ಮತ್ತು ಬಳಕೆದಾರರ ನಡುವೆ ಸಹಯೋಗ ಏರ್ಪಡಿಸುವ ಸೇತುವೆಗಳಾಗಲಿವೆ ಎಂದು ಅಭಿಪ್ರಾಯ ಪಟ್ಟರು.

ಈ ಪ್ರಪ್ರಥಮ ಕೃಷಿ ಮೇಳದಲ್ಲಿ ಆಯೋಜಿಸಲಾಗಿರುವ ಜೈವಿಕ ಇಂಧನ ಮಳಿಗೆಯು ಇಡೀ ರಾಜ್ಯದ ರೈತರು ಹಾಗೂ ದೇಶ ವಿದೇಶಗಳಲ್ಲಿನ ಬಂಡವಾಳ ಹೂಡಿಕೆದಾರರಿಗೆ ಈ ಹಸಿರು ಇಂಧನ ಕ್ಷೇತ್ರದಲ್ಲಿ ಭಾಗಿಯಾಗಿ, ಈ ಕ್ಷೇತ್ರದ ಉನ್ನತೀಕರಣ ಹಾಗೂ ವಾಣಿಜ್ಯೀಕರಣದಲ್ಲಿ ಪಾಲುದಾರರಾಗಲಿ ಎಂದು ಆಶಿಸುತ್ತಾ, ಈ ಕೃಷಿ ಮೇಳ ಹಾಗೂ ಜೈವಿಕ ಇಂಧನ ಮಳಿಗೆಯ ಉದ್ದೇಶಗಳು ಸಫಲವಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್‌, ಸೂಪರಿಟೆಂಡೆಂಟ್ ಆಫ್‌ ಪೋಲಿಸ್‌‌ ಮಲ್ಲಿಕಾರ್ಜುನ್‌ ಬಲದಂಡಿ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್.ಎಲ್‌, ಕ.ಸ.ಸೇ, ಜೈವಿಕ ಇಂಧನ ಉದ್ಯಾನದ ಸಂಯೋಜಕ ಡಾ.ಎ.ಸಿ.ಗಿರೀಶ್‌,  ಬಿಆರ್‌ ಐಡಿಸಿ ಸಂಯೋಜಕರಾದ ಡಾ.ರೂಪೇಶ್‌ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

Mandya

ಡಿ.17ಕ್ಕೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತ್ಯುತ್ಸವದಲ್ಲಿ ರಾಷ್ಟ್ರಪತಿ ಭಾಗಿ : ಡಾ. ಕುಮಾರ

Published

on

ಮಂಡ್ಯ : ಮಳವಳ್ಳಿಯಲ್ಲಿ ಹಮ್ಮಿಕೊಂಡಿರುವ ಆದಿ ಜಗದ್ಗರು ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಡಿ.17 ರಂದು ಸನ್ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ.ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನ್ಯ ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರಪತಿಗಳ ಕರ್ತವ್ಯದಲ್ಲಿ ಲೋಪ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಅವರು ಸಂಚರಿಸುವ ರಸ್ತೆ ಸಂಪೂರ್ಣವಾಗಿ ದುರಸ್ತಿಗೊಳಿಸಬೇಕು. ರಸ್ತೆಗಳ ಸ್ವಚ್ಛತೆ ಮಾಡಬೇಕು. ಆಂಬ್ಯುಲೆನ್ಸ್ ಹಾಗೂ ತಜ್ಞ ವೈದ್ಯರ ಸೇವೆ ಒದಗಿಸಬೇಕು ಎಂದು ಹೇಳಿದರು.

ಹೆಲಿಪ್ಯಾಡ್ ಸುತ್ತಾ ಬ್ಯಾರಿಕೇಡ್ ಹಾಕಬೇಕು, ಗ್ರೀನ್ ರೂಮ್ ನಿರ್ಮಾಣ ಸೇರಿದಂತೆ ಕಾರ್ಯಕ್ರಮದಲ್ಲಿ ಯಾವುದೇ ವಿದ್ಯುತ್ ಅಡಚಣೆ ಆಗದಂತೆ ಚೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದ ಸ್ಧಳದಲ್ಲಿ ಹಾಗೂ ಪ್ರವಾಸಿ ಮಂದಿರದಲ್ಲಿ ಇಂಟರ್ನೆಟ್ ಸಂಪರ್ಕ ಹಾಗೂ ಕಂಪ್ಯೂಟರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಎಂದರು.

ಕಾರ್ಯಕ್ರಮ ನಡೆಯುವ ಸ್ಥಳ, ಹೆಲಿಪ್ಯಾಡ್ ಸ್ಥಳಗಳಲ್ಲಿ ಅಗ್ನಿ ಶಾಮಕ ದಳದ ವಾಹನ ನಿಯೋಜಿಸಬೇಕು. ರಾಷ್ಟ್ರಪತಿಗಳ ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಲೋಪ ದೋಷಗಳನ್ನು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪ್ರಮುಖ ಇಲಾಖೆಗಳಿಂದ ಸ್ಟಾಲ್ ಗಳ ನಿರ್ಮಾಣ ಮಾಡುವಂತೆ ಹಾಗೂ ಅಲ್ಲಿ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಮಂಡ್ಯ ಇತಿಹಾಸದಲ್ಲಿ ಮೈಶುಗರ್‌ ಶಾಲೆಗೆ ವಿಶೇಷ ಸ್ಥಾನವಿದೆ : ಎಲ್ಲರೂ ಸೇರಿ ಶಾಲೆ ಉಳಿಸೋಣ – ಹೆಚ್‌ಡಿಕೆ

Published

on

ಮಂಡ್ಯ: ಸುಮಾರು ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಇಲ್ಲಿನ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ತಮ್ಮ ಸಂಸದರ ವೇತನವನ್ನೇ ನೀಡಿದರು.

ಈ ಮೊದಲು ನೀಡಿದ್ದ ಭರವಸೆಯಂತೆ ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, 19,94,200 ಮೊತ್ತದ ಚೆಕ್‌ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವರು, ವೇತನವಿಲ್ಲದೆ ಕೆಲಸ ಮಾಡುವುದು ಕಷ್ಟ. ನೀವು ನೋವು ನನಗೆ ಅರ್ಥವಾಗಿದೆ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದರು.

 

ಇದು ಐತಿಹಾಸಿಕ ಶಾಲೆ. ಮಂಡ್ಯದ ಇತಿಹಾಸದಲ್ಲಿ ಈ ಶಾಲೆಗೂ ಒಂದು ಸ್ಥಾನವಿದೆ. ಹೀಗಾಗಿ ಶಾಲೆ ಸಂಕಷ್ಟಕ್ಕೆ ಸಿಲುವುದು ನನಗೆ ಇಷ್ಟವಿಲ್ಲ. ಈ ಶಾಲೆಯನ್ನು ಉಳಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ. ಪಿಯುಸಿವರೆಗೆ ಈ ಶಾಲೆಯಲ್ಲಿ ಶಿಕ್ಷಣ ದೊರೆಯಲಿ. ನಾನು ಕೂಡ ಶಾಲೆಯ ಉಳಿವಿಗೆ ಕೈ ಜೋಡಿಸುತ್ತೇನೆ. ಆದಿಚುಂಚನಗಿರಿ ಶ್ರೀಗಳೊಂದಿಗೂ ಈ ಬಗ್ಗೆ ಮಾತಾಡಿದ್ದೇನೆ. ಒಂದೇ ರಾತ್ರಿಯಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ನಾನು ಹೇಳಲ್ಲ. ಹಂತ ಹಂತವಾಗಿ ಶಾಲೆಯ ಅಭಿವೃದ್ಧಿ ಮಾಡೋಣ. ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಿ ಎಂದು ಕೇಳುತ್ತೇನೆ. ಮಂಡ್ಯದಲ್ಲಿ ಮೈಶುಗರ್ ಶಾಲೆಯೇ ನಂಬರ್ ಓನ್ ಶಾಲೆ ಆಗಿರಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಶಿಕ್ಷಕರ ಕಷ್ಟ ತಿಳಿದು ನಾನು ಬಹಳ ನೊಂದಿದ್ದೆ. 15 ತಿಂಗಳಿಂದ ಸಂಬಳ ಇಲ್ಲದೇ ಕೆಲಸ ಮಾಡುವುದು ಎಂದರೆ ಸುಲಭವಲ್ಲ. ಆ ಸಂಕಷ್ಟದ ಕಾಲದಲ್ಲಿಯೂ ಅವರು ಮಕ್ಕಳಿಗೆ ವಿದ್ಯೆ ಕಲಿಸಿದ್ದಾರೆ. ಹೀಗಾಗಿ ಎಲ್ಲಾ ಶಿಕ್ಷಕರಿಗೆ ಅಭಿನಂದನೆ ಹೇಳುತ್ತೇನೆ ಎಂದು ಸಚಿವರು ಹೇಳಿದರು.

ಶಾಲೆ ಅಭಿವೃದ್ಧಿ ಎಲ್ಲರ ಕರ್ತವ್ಯ. ನನ್ನ ಕೈಲಾದದ್ದನ್ನು ನಾನು ಮಾಡುತ್ತೇನೆ. ಮಕ್ಕಳ ಅನುಕೂಲಕ್ಕೆ ಎರಡು ಶಾಲಾ ಬಸ್ ಬೇಕು ಎಂದು ಮನವಿ ಮಾಡಿದ್ದಾರೆ. ಮೈಶುಗರ್ ಶಾಲೆಯಲ್ಲಿ ಎಲ್‌ಕೆಜಿಯಿಂದ ಪಿಯುವರೆಗೆ ಉಚಿತ ಶಿಕ್ಷಣ ನೀಡಲು ಹೇಳಿದ್ದೇನೆ. ಈ ಬಗ್ಗೆ ಚುಂಚನಗಿರಿ ಶ್ರೀಗಳ ಬಳಿ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಂಸತ್‌ ಕಲಾಪ ಮುಗಿದ ಬಳಿಕ ಶ್ರೀಗಳ ಮಾರ್ಗದರ್ಶನದಲ್ಲಿ ಚರ್ಚೆ ಮಾಡುತ್ತೇವೆ. ಕಾಂಗ್ರೆಸ್ ನಾಯಕರಿಗೂ ಈ ಬಗ್ಗೆ ಹೇಳುತ್ತೇನೆ. ಶಾಲೆ ವಿಷಯದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಮೈಶುಗರ್ ಶಾಲೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.

ರಾಜ್ಯ ಸರ್ಕಾರದ ಬಗ್ಗೆ ನಾನು ಚರ್ಚೆ ಮಾಡಲ್ಲ:

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಗ್ಗೆ ನಾನು ಈಗ ಚರ್ಚೆ ಮಾಡಲ್ಲ. ನೆರೆ ರಾಜ್ಯದ ರಾಜ್ಯಪಾಲರು ಕಾರ್ಕಳಕ್ಕೆ ಬಂದಿದ್ದರು. ಆಗ ವಕೀಲ ಹೆಣ್ಣುಮಕ್ಕಳು ಶೌಚಾಲಯ ಕಟ್ಟಲು ಒಂದು ಕೋಟಿ ಕೇಳಿದ್ದೆ. ರಾಜ್ಯ ಸರ್ಕಾರ ಒಂದು ವರ್ಷದಿಂದ ಹಣವನ್ನು ಕೊಟ್ಟಿಲ್ಲ. ನಿಮ್ಮ ಕಾಲದಲ್ಲಿ ಕೇಳಿದಾಗ ಎಲ್ಲಾ ಕೊಟ್ಟಿದ್ದೀರಾ ಎಂದರು. ಇಂದು ಹಾಸನದಲ್ಲಿ ದೊಡ್ಡ ಜಾಹಿರಾತು ಕೊಟ್ಟಿದ್ದಾರೆ. ನಮ್ಮ ಕಾಲದಲ್ಲಿ ಬಿಡುಗಡೆಯಾದ ಹಣದ ಕಾಮಗಾರಿಗೆ ಟೇಪ್ ಕಟ್ ಮಾಡಲು ಹೋಗಿದ್ದಾರೆ. ಈ‌ ಸರ್ಕಾರದ ಮೇಲೆ ಟೀಕೆ ಮಾಡಲು ಸರ್ಕಾರ ಜನರ ನಂಬಿಕೆಯನ್ನು ಉಳಿಸಿಕೊಂಡಿಲ್ಲ. ಕೇಂದ್ರ ಸರ್ಕಾರ ಮೇಲೆ ಕೇವಲ ರಾಜಕೀಯಕ್ಕಾಗಿ ಟೀಕೆ ಮಾಡುತ್ತಿದ್ದಾರೆ. ಅದು ಬೇಕಿಲ್ಲ. ನಮ್ಮನ್ನು ಪ್ರಧಾನಮಂತ್ರಿಗಳ ಮುಂದೆ ನಿಲ್ಲಬೇಕು ಅಂತಾರೆ. ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ಎಂಎಸ್‌ಪಿ ಬೆಲೆ ನಿಗದಿ ವಿಚಾರದಲ್ಲಿ ಉಂಟಾಗಿರುವ ಸಮಸ್ಯೆಯನ್ನು ರಾಜ್ಯ ಸರಕಾರ ಬಗೆಹರಿಸಿಕೊಳ್ಳಲಿ. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ. ಆ ಬಳಿಕ ಕೇಂದ್ರವನ್ನು ಕೇಳಿ. ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯದ ಕರ್ತವ್ಯ. ಇವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್‌ಗೆ ಹೋಗಬೇಕು ಅಂತಾರೆ. ನಾನು ಸಿಎಂ ಆಗಿದ್ದಾಗ ಕೋರ್ಟ್‌ಗೆ ಹೋಗಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4.5 ಸಾವಿರ ಕೋಟಿ ಸಾಲವನ್ನು ನಾನು ತೀರಿಸಿದ್ದೇನೆ. ನನ್ನ ಕಾಲದ ಸಾಲವನ್ನು ಇವರೇನು ತೀರಿಸಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ವಾಚ್ ಹೇಗೆ ಖರೀದಿ ಮಾಡಿದ್ದಾರೆ ಎನ್ನೋದೇ ಮುಖ್ಯ:

ಸಿಎಂ, ಡಿಸಿಎಂ ಅವರಿಬ್ಬರೂ ಎಷ್ಟು ಲಕ್ಷ ಬೆಲೆ ವಾಚ್ ಕಟ್ಟಿದ್ದಾರೆ ಎನ್ನೋದು ಮುಖ್ಯವಲ್ಲ. ವಾಚ್‌ನ್ನು ಹೇಗೆ ಖರೀದಿ ಮಾಡಿದ್ದಾರೆ ಎನ್ನೋದೇ ಮುಖ್ಯ. ಅವರ ದುಡಿಮೆ ದುಡ್ಡಿನಲ್ಲಿ ಖರೀದಿ ಮಾಡಿದ್ದಾರಾ ಹೇಗೆ ಎನ್ನೋದು ಮುಖ್ಯ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವರು ಉತ್ತರಿಸಿದರು.

ಉಪ ಲೋಕಾಯುಕ್ತರು ಹೇಳಿಕೆಗೆ ಸೀಮಿತವಾಗಿದ್ದಾರೆ:

ಸರಕಾರಿ ಇಲಾಖೆಗಳಲ್ಲಿ 63% ಭ್ರಷ್ಟಾಚಾರ ಆರೋಪ ಮಾಡಿರುವ ಉಪ ಲೋಕಾಯುಕ್ತರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಉಪ ಲೋಕಾಯುಕ್ತರಿಗೆ ಒಂದ್ ನಮಸ್ಕಾರ. ಉಪ ಲೋಕಾಯುಕ್ತರಾಗಿ ಅವರು ಏನ್ ಕೆಲಸ ಮಾಡ್ತಿದ್ದಾರೆ? ಅವರ ಜವಬ್ದಾರಿ ಏನು? ಮಾಧ್ಯಮ ಮುಂದೆ ಹೇಳಿಕೆ ನೀಡಲಷ್ಟೇ ಅವರಿಗೆ ಅಧಿಕಾರ ನೀಡಲಾಗಿದೆಯಾ? ಇಲ್ಲಾ ದಾಖಲೆಗಳನ್ನ ಸಂಗ್ರಹಿಸಿ ಕ್ರಮ ತೆಗೆದುಕೊಳ್ಳಲಿಕ್ಕೆ ಅಧಿಕಾರ ನೀಡಲಾಗಿದೆಯಾ? ಯಾರ ಕಾಲದಲ್ಲಿ ಭ್ರಷ್ಟಾಚಾರ ನಡೆಯುತ್ತಿತ್ತು ಅನ್ನೋದು ಬೇರೆ ಚರ್ಚೆ. ಭ್ರಷ್ಟಾಚಾರ ಗೊತ್ತಿದ್ದೂ ಉಪ ಲೋಕಾಯುಕ್ತರು ಹೇಳಿಕೆಗೆ ಸೀಮಿತವಾಗಿದ್ದಾರೆ. ಹೀಗಾದರೆ ಪ್ರಯೋಜನವೇನು? ಎಂದು ಅಭಿಪ್ರಾಯಪಟ್ಟರು.

2019ರ ಭ್ರಷ್ಟಾಚಾರ ಬಗ್ಗೆ ಉಪ ಲೋಕಾಯುಕ್ತರು ಮಾತಾನಾಡಿದ್ದಾರೆಂದು ಸಿಎಂ ಟ್ವಿಟ್ ಮಾಡಿದ್ದಾರೆಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅಧಿಕಾರಕ್ಕೆ ಬಂದು 3 ವರ್ಷ ಆಗಿದೆ. ಈ ಮೂರು ವರ್ಷದ ಆಡಳಿತ ಎಷ್ಟು ಪರಿಶುದ್ಧ, ಪಾರದರ್ಶಕವಾಗಿದೆ ಎಂಬ ಬಗ್ಗೆ ವರದಿ ಮಾಡಿಸಲಿ ಎಂದು ಒತ್ತಾಯಿಸಿದರು.

Continue Reading

Trending

error: Content is protected !!