Connect with us

Mysore

ಸಿದ್ದರಾಮಯ್ಯನವರ ಸರ್ಕಾರ ಪಿಕ್ ಪಾಕೆಟ್ ಸರ್ಕಾರ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

Published

on

ಸಾಲಿಗ್ರಾಮ :  ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ, ಪಿಕ್ ಪಾಕೇಟ್ ಸರ್ಕಾರ ಆಗಿದೆ, ನಿಮ್ಮ ದುಡ್ಡು ಹೊಡೆದು ನಿಮಗೆ ಗ್ಯಾರಂಟಿ ಮೂಲಕ ಕೊಡುತ್ತಿರುವ ಸರ್ಕಾರ ಎಂದು ರಾಜ್ಯ  ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಅವರು ಪಟ್ಟಣದ   ರೇಡಿಯೋ ಮೈದಾನದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಸ್, ಬಿಜೆಪಿ ಮೈತ್ರಿ ಪಕ್ಷ ಅಭ್ಯರ್ಥಿ ಮಾಜಿ ಸಿ.ಎಂ. ಹೆಚ್.ಡಿ.ಕುಮಾರಸ್ವಾಮಿ ರವರು  ಬಾರಿ ಬಹಿರಂಗ ಸಭೆ ಹಾಗೂ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.


ರಾಜ್ಯದ ಜನರ ಹಿತಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ೨೦೦೬ ರಲ್ಲಿ ನಾನು ಮತ್ತು ಬಿ.ಎಸ್.ಯಡಿಯೂರಪ್ಪ ಸೇರಿ ಸರ್ಕಾರ ರಚಿಸಿ ಹಲವಾರು ಅಭಿವೃದ್ಧಿ ಕಾರ್ಯಕ್ರಮ ರಾಜ್ಯದ ಜನರಿಗೆ ಕೊಟ್ಟಿದ್ದೆವು, ಸಾರಾಯಿ, ಲಾಟರಿ ನಿಷೇದ, ವಿದ್ಯಾರ್ಥಿಗಳಿಗೆ ಉಚಿತ ಸೈಕಲ್, ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ,ನೀರಾವರಿ ಯೋಜನೆ ಕೊಟ್ಟೆವು, ಇವಾಗ ಮೈತ್ರಿ ಮಾಡಿ ಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ  ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆಶಯದಿಂದ ರಾಜ್ಯದ ಜನರಿಗೆ ಉತ್ತಮ ಆಡಳಿತವನ್ನು ಕೇಂದ್ರ ಸರ್ಕಾರದ ಮೂಲಕ ಮಾಡುವ ಉದ್ದೇಶದಿಂದ ಎಂದು ಹೇಳಿದರು.
ರಾಜ್ಯದ ಸಿದ್ದರಾಮಯ್ಯನವರ ಸರ್ಕಾರ ರೈತರ  ಸಂಕಷ್ಟಕ್ಕೆ  ಸ್ಪಂದಿಸಿಲ್ಲ, ಬರಗಾಲ ಬಂದಿದೆ, ರೈತರ ಬೆಳೆ ನಷ್ಟವಾಗಿದೆ, ೩೮ ಸಾವಿರ ಕೋಟಿ ಬೆಳೆ ನಷ್ಟವಾಗಿದ್ದರೆ, ರಾಜ್ಯ ಸರ್ಕಾರ ೬೫೪ ಕೋಟಿ ಬಿಡುಗಡೆ ಮಾಡಿದೆ, ಹೆಕ್ಟೇರ್ ಗೆ ಎರಡು ಸಾವಿರ ರೂ  ಮಾತ್ರ ಕೊಟ್ಟಿದ್ಸಾರೆ, ಇದರಲ್ಲಿ ಕೇಂದ್ರದ ಪಾಲು ಶೇಕಡ ೭೫%  ೪೫೦ ಕೋಟಿ ಸೇರಿದೆ ಎಂದು ತಿಳಿಸಿದರು.
ರಾಜ್ಯದ ಸಿದ್ದರಾಮಯ್ಯನವರ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಈಗಾಗಲೇ ೧.೫ ಲಕ್ಷ ಕೋಟಿ ಸಾಲ ಮಾಡಿದ್ದಾರೆ, ನಿಮ್ಮ ಕುಟುಂಬದವರ ಮೇಲೆ ೩೬ ಸಾವಿರ ಸಾಲ ಹೊರೆಸಿದ್ದಾರೆ ಎಂದ ಅವರು ಲೋಕಸಭಾ ಚುನಾವಣಾ ಕಳೆದ ಮೇಲೆ ಸರ್ಕಾರ ಇರುತ್ತೊ ಇಲ್ಲವೊ ಗೊತ್ತಿಲ್ಲ, ನಾವು ಹೇಳುತ್ತಿಲ್ಲ, ಅವರ ಶಾಸಕರೇ ಹೇಳುತ್ತಿರುವುದು, ಎಂದರು.


ನಾನು ಮತ್ತು ಯಡಿಯೂರಪ್ಪ ಅವರ ಮೈತ್ರಿ ಸರ್ಕಾರದಲ್ಲಿ ರೈತರ ಪಂಪ್ ಸೆಟ್ ಗಳಿಗೆ ಕೇವಲ ೫ ಸಾವಿರದಲ್ಲಿ ಟಿ.ಸಿ ಕೊಡುತ್ತಿದ್ದೆವು, ಇವಾಗ ೨ ಲಕ್ಷ ಕೊಟ್ಟು ರೈತರು ಟಿ.ಸಿ‌.ಪಡೆಯ ಬೇಕಿದೆ, ಇದು ನೋವಿನ ಸಂಗತಿ ಎಂದು ನುಡಿದರು.
ಬಿಜೆಪಿ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ ರಾಜ್ಯದ ಸಿದ್ದರಾಮಯ್ಯನವರ ಸರ್ಕಾರ ಸಂಪೂರ್ಣವಾಗಿ ದಿವಾಳಿ ಆಗಿದೆ, ಸರ್ಕಾರ ಬದುಕಿದ್ದು ಸತ್ತಂತೆ ಆಗಿದೆ ಎಂದು ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನರ ಹಿತ ಮರೆತಿದ್ದಾರೆ, ಗ್ಯಾರಂಟಿ ಯೋಜನೆಗಾಗಿ ನೀರಾವರಿ ಯೋಜನೆಗಳನ್ನು ಕಡೆಗಣಿಸಿದ್ದಾರೆ ಎಂದರು
ನನ್ನ ವೀರೇಶ್ವರ ಸಮಾಜದ ಬಂದುಗಳು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅಲ್ಲ, ನಾನು ನಿಮ್ಮ ಯಡಿಯೂರಪ್ಪ ಚುನಾವಣೆಯಲ್ಲಿ ಅಭ್ಯರ್ಥಿ ಎಂದು ಮತಹಾಕಿ ಎಂದು ಕೈ ಮುಗಿದು ಪ್ರಾರ್ಥನೆ ಮಾಡಿದಲ್ಲದೆ ಅತ್ಯಂತ ಹೆಚ್ಚಿನ ಮತಗಳನ್ನು ಕೊಟ್ಟು ಮಾಜಿ ಸಿ.ಎಂ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದರೆ, ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದಲ್ಲಿ ಮಂತ್ರಿಯಾಗಿ ನಿಮ್ಮಗಳ ಸಂಕಷ್ಟಕ್ಕೆ ನೆರವಾಗಲಿದ್ದಾರೆ ಎಂದು ಹೇಳಿದರು.
ನಮ್ಮ ಸರ್ಕಾರದಲ್ಲಿ‌ ೨೦ ಲಕ್ಷ ಹೆಣ್ಣುಮಕ್ಕಳಿಗೆ  ಭಾಗ್ಯಲಕ್ಷ್ಮಿ ಯೋಜನೆಗಳನ್ನು ಕೊಡಲಾಗುತ್ತಿತ್ತು ಆದರೆ ಸಿದ್ದರಾಮಯ್ಯನವರು ನಿಲ್ಲಿಸಿದರು. ಕಿಸಾನ್ ಸಮ್ಮಾನ್ ಯೋಜನೆಗ ಕೇಂದ್ರದಿಂದ ೬ ಸಾವಿರ ಮತ್ತು ನಾನು ಸಿ.ಎಂ.ಆಗಿದ್ದಾಗ ೪ ಸಾವಿರ  ಸೇರಿ ೧೦ ಸಾವಿರ ರೈತರಿಗೆ ಕೊಡುತ್ತಿದ್ದೆವು ಎಲ್ಲವನ್ನು ನಿಲ್ಲಿಸಿದರು. ಚಿಂತಿಸ ಬೇಡಿ ಎಲ್ಲವನ್ನು ಕುಮಾರಸ್ವಾಮಿ ಅವರು ಗೆದ್ದು ಕೇಂದ್ರದಲ್ಲಿ ಮಂತ್ರಿಯಾಗಿ ಕೊಡುತ್ತಾರೆ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ನಾನು ಭರವಸೆ ಕೊಡುತ್ತೇನೆ ಎಂದರು.


ರಾಜ್ಯ ಜಾ. ದಳ ಕೋರ್ ಕಮಿಟಿ ಅಧ್ಯಕ್ಷ  ಜಿ. ಟಿ ದೇವೇಗೌಡ,   ಮಾಜಿ ಸಚಿವರಾದ ಪುಟ್ಟರಾಜು, ಸಾರಾ ಮಹೇಶ್, ವಿಧಾನ ಪರಿಷತ್ ಸದಸ್ಯ   ಎಚ್. ವಿಶ್ವನಾಥ್, ಮಂಜೇಗೌಡ,  ಮಾಜಿ ಸದಸ್ಯ ಶ್ರೀ ಕಂಠೀಗೌಡ, ಮಾಜಿ ಶಾಸಕ ಕೆ. ಮಹದೇವ್, ಮುಡಾ ಮಾಜಿ ಅಧ್ಯಕ್ಷ ಹರದನಹಳ್ಳಿ ವಿಜಿ, ಮುಖಂಡರುಗಳಾದ ವೈ ಆರ್ ಪ್ರಕಾಶ್, ಹೊಸಳ್ಳಿ ವೆಂಕಟೇಶ್, ಮಿರ್ಲೆ ಶ್ರೀನಿವಾಸಗೌಡ, ಎಂ ಟಿ ಕುಮಾರ್, ಡಾ. ಮೆಹಬೂಬ್ ಖಾನ್, ಹಂಪಾಪುರ ಕುಮಾರ್, ಮೆಡಿಕಲ್  ರಾಜಣ್ಣ, ಚಂದ್ರಶೇಖರ, ಮಿರ್ಲೆ ಅಣ್ಣೇಗೌಡ, ಪ್ರಭಾಕರ್ ಜೈನ್ ಮುಂತಾದವರು ಇದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ತಾಲ್ಲೂಕಿನ ತಗಡೂರಿನಲ್ಲಿ ವಾಂತಿ-ಭೇದಿ ಪ್ರಕರಣ — ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಭೇಟಿ

Published

on

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ಸುಮಾರು 120ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದಾಗಿ ಕಾಲರಾ ರೋಗವು ಆವರಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಗಡೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.


ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಗ್ರಾಮಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀತಿ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಬಂದಿದ್ದೇನೆ. ಮಳೆಗಾಲ ಇನ್ನು ಕಡಿಮೆಯಾಗಿಲ್ಲ ಕೂಡಲೇ ಅಧಿಕಾರಿಗಳು ಗ್ರಾಮದ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೇಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮಸ್ಥರಿಗೆ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಬೇಕು. ಸ್ಥಗಿತಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕು. ಈಗಾಗಲೇ ಮೂರು ಟ್ಯಾಂಕರ್ ಗಳಿಂದ ಶುದ್ಧ ಕುಡಿಯುವ ನೀರನ್ನು ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿದೆ. ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆ ಆಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಪಂ ಸಿಇಒ ಗಾಯಿತ್ರಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ಗ್ರಾಪಂ ಅಧ್ಯಕ್ಷೆ ಚಂದ್ರವತಿ ಬಸವರಾಜು, ಉಪಾಧ್ಯಕ್ಷ ಗುರುಮಲ್ಲೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಕುಮಾರಸ್ವಾಮಿ, ಯುವ ಮುಖಂಡರಾದ ಗಾರ್ಡನ್ ಮಹೇಶ್, ಶಿವರಾಂ, ಆಸ್ಪತ್ರೆಯ ವೈದ್ಯಾಧಿಕಾರಿ ಪ್ರಭು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Mysore

ವೃತ್ತಿನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ತಾ.ಅಧ್ಯಕ್ಷ ವಿಶ್ವನಾಥ್ ಸರ್ಕಾರಕ್ಕೆ ಒತ್ತಾಯ

Published

on

ವೃತ್ತಿನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ತಾ.ಅಧ್ಯಕ್ಷ ವಿಶ್ವನಾಥ್ ಸರ್ಕಾರಕ್ಕೆ ಒತ್ತಾಯ

 

ಸಾಲಿಗ್ರಾಮ  : ಬೆಂಗಳೂರಿನಲ್ಲಿ ವೃತ್ತಿ ನಿರತ ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆಸಿದ ಪುಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೃಷ್ಣರಾಜನಗರ ತಾಲೂಕು ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದ ತಾ.ಅಧ್ಯಕ್ಷ ವಿಶ್ವನಾಥ್ ಸರ್ಕಾರಕ್ಕೆ ಒತ್ತಾಯಿಸಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮುಂಭಾಗ ಧರಣಿ ಕೈಗೊಂಡು ಗ್ರೇಡ್-೨ ತಹಸೀಲ್ದಾರ್ ಬಾಲಸುಬ್ರಮಣ್ಯ ಹಾಗೂ ಶಿರಸ್ತೆದಾರ್ ಅಕ್ರಂ ಭಾಷ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅಧ್ಯಕ್ಷರು ಮೇ.೧೮ ರಂದು ಬೆಂಗಳೂರಿನ ಶಿವಾಜಿನಗರದ ಶಮ್ಸ್ ಕಲ್ಯಾಣ ಮಂಟಪದಲ್ಲಿ

ನಡೆಯುತ್ತಿದ್ದ ಮದುವೆ ಕಾರ್ಯಕ್ರಮದ ವಿಡಿಯೋ ಚಿತ್ರೀಕರಣಕ್ಕೆ ಹೋಗಿದ್ದ ಛಾಯಾಗ್ರಾಹಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಮದುವೆ ಸಮಾರಂಭದಲ್ಲಿದ್ದ ಕೆಲವು ಪುಂಡರು ಮನಬಂದoತೆ ಹಲ್ಲೆ ನಡೆಸಿದವರ ವಿರುದ್ಧ ಸಂಘದ ಪದಾಧಿಕಾರಿಗಳು ನಿರ್ದೇಶಕರು ಹಾಗೂ ಸದಸ್ಯರು ತಾಲೂಕು ಆಡಳಿತ ಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಎದುರಿಗೆ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಹೊಟ್ಟೆಪಾಡಿಗಾಗಿ ವಿಡಿಯೋ ಚಿತ್ರೀಕರಣ ಮಾಡುವ ಛಾಯಾಗ್ರಾ ಹಕನ ಮೇಲೆ ಹಲ್ಲೆ ಮಾಡಿರುವುದು ಅಮಾನವೀಯ ಘಟನೆ ಯಾಗಿದ್ದು, ಇದರಿಂದ ಛಾಯಾಗ್ರಹಕರಿಗೆ ಯಾವುದೇ ರಕ್ಷಣೆ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.


ಈ ಕೃತ್ಯವನ್ನು ಖಂಡಿಸಿ ರಾಜ್ಯ ಛಾಯಾಗ್ರಹಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಲ್ಲೆ ನಡೆಸಿದ ಪುಂಡರ ಮೇಲೆ ಪೊಲೀಸರಿಗೆ ದೂರು ನೀಡಿದ್ದು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಹಲ್ಲೆ ಮಾಡಿದ ಪುಂಡರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಛಾಯಾಗ್ರಹಕರಿಗೆ ಸೂಕ್ತ ರಕ್ಷಣೆ ದೊರಕಿಸಿಕೊಡಬೇಕು ಹಾಗೂ ಹಲ್ಲೆಗೊಳಾಗಿರುವ ಛಾಯಾಗ್ರಹಕನಿಗೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಇಂತಹ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಸಿದರು.
ಈ ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷರುಗಳಾದ ಎಂ.ಪಿ.ಮಹದೇವ, ಸಂತೋಷ್, ಕಾರ್ಯದರ್ಶಿ ಶ್ರೀನಿವಾಸ್‌ಗೌಡ, ಪದಾಧಿಕಾರಿಗಳಾದ ಯೋಗೇಶ್, ಜಯರಾಜ್, ಚೀರನಹಳ್ಳಿ ರವಿ, ನಿರ್ದೇಶಕರುಗಳಾದ ಉಮಾಶಂಕರ್, ಶುಭಂರವಿ, ಮಂಜುನಾಥ್, ರಘುಚಂದಗಾಲು, ವಿಜಯ್, ಸದಸ್ಯರಾದ ಶಿಲ್ಪಶ್ರೀನಿವಾಸ್, ತಿಪ್ಪೂರುರವಿ, ಶ್ರೀನಿವಾಸ್, ಸಾರಾ.ನಾಗೇಶ್, ಮಧುವನಹಳ್ಳಿ ರಘು, ದಯನಂದ್, ರಕ್ಷಿತ್, ಸುನೀಲ್, ಶರತ್, ಸುನೀಲ್ ಮೊದಲಿಯರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Continue Reading

Mysore

ಅಡುಗೆ ಅನಿಲ ಸೋರಿಕೆಯಿಂದ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಿದ ಡಾ.ಹೆಚ್.ಸಿ.ಮಹದೇವಪ್ಪ

Published

on

ಮೈಸೂರು,ಮೇ.22: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಯರಗನಹಳ್ಳಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ವಿಷಯ ತಿಳಿದು ಇಂದು ಜೆಎಸ್ಎಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು‌.

ಈ ವೇಳೆ ಆಸ್ಪತ್ರೆಯ ಶವಗಾರದಲ್ಲಿ ಇರಿಸಿದ್ದ ಮೃತದೇಹಗಳನ್ನು ವೀಕ್ಷಿಸಿ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವರು, ಘಟನೆ ಕುರಿತು ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸರ್ಕಾರದ ವತಿಯಿಂದ ತಲಾ ಮೂರು ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಸ್ಥಳದಲ್ಲಿಯೇ ಘೋಷಿಸಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಮರಿಗೌಡ ಅವರು ಸೇರಿದಂತೆ ಮುಂತಾದವರು ಇದ್ದರು.

Continue Reading

Trending

error: Content is protected !!