Hassan
ಹಾಸನ ನೆಲದ ಮಣ್ಣು ನಮ್ಮ ತಂದೆಯವರನ್ನು ದೆಹಲಿವರೆಗೂ ಬೆಳೆಸಿದೆ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಹಾಸನ: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ, ನಾಡಿಗೆ ಎದುರಾಗಿರುವ ಬರಗಾಲ ಪರಿಸ್ಥಿತಿ, ನಮ್ಮ ಶಾಸಕರ ಮೇಲೆ ನಡೆಯುತ್ತಿರುವ ಗದಾ ಪ್ರಹಾರ, ಹಾಗೂ ಭಯದ ವಾತಾವರಣ ತಿಳಿಗೊಳಿಸಲು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಹಾಸನಾಂಬೆ ದರ್ಶನ ನಂತರ ಮಾತನಾಡಿದ ಅವರು, ನಮ್ಮ ಶಾಸಕರಿಗೆ ಇಲ್ಲ ಸಲ್ಲದ ಆಸೆ ಆಮಿಷ ಒಡ್ಡಿ, ಸಾರ್ವಜನಿಕವಾಗಿ ಅನುಮಾನ ಬರುವ ರೀತಿ ಮಾಡಲಾಗುತ್ತಿದೆ. ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯಲು, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶ ರವಾನೆ ಮಾಡುವುದು ಸಭೆಯ ಪ್ರಮುಖ ಉದ್ದೇಶ ಎಂದು ಹೇಳಿದರು.
ಇದರ ಜೊತೆಗೆ ಶಾಸಕರ ಮನಸ್ಸು ಗಟ್ಟಿ ಮಾಡುವುದೂ ಇದರಲ್ಲಿ ಸೇರಿದೆ. ಹಾಸನ ನೆಲದ ಮಣ್ಣು ನಮ್ಮ ತಂದೆಯವರನ್ನು ದೆಹಲಿವರೆಗೂ ಬೆಳೆಸಿದೆ. ಈ ಮಣ್ಣಿನಿಂದಲೇ ನಾವೆಲ್ಲರೂ ಒಂದಾಗಿದ್ದೇವೆ, ನಮ್ಮ ಯಾರೂ ಅಲುಗಾಡಿಸಲು ಆಗಲ್ಲ ಎಂಬುದನ್ನು ವಿರೋಧಿಗಳಿಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದರು.

Hassan
ರಾಷ್ಟ್ರೀಯ ಹೆದ್ದಾರಿ -75ರಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಲತಾಕುಮಾರಿ ಆದೇಶ
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕು ಬೆಂಗಳೂರು-ಮಂಗಳೂರು NH 75ರ 222+900ರಲ್ಲಿ ಮಂಜ್ರಾಬಾದ್ ಕೋಟೆಯ ಸಮೀಪ ದೋಣಿಗಲ್ ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಿರ್ಮಾಣ ಕಾರ್ಯ ಪ್ರಾರಂಭಿಸಿದ್ದು ಪಕ್ಕದ ಭೂಮಾಲಿಕರುಗಳು ಕಾಮಗಾರಿಯನ್ನು ತಡೆದು ನಿಲ್ಲಿಸಿರುತ್ತಾರೆ.
ಈ ಹಿನ್ನೆಲೆಯಲ್ಲಿ ಹಾಸನ ಬೈ ಪಾಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ-75ರ ದೋಣಿಗಲ್ ವಿಭಾಗದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕಾಗಿರುವುದರಿಂದ ಫೆಬ್ರವರಿ .9 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು-ಮಂಗಳೂರು NH-75ರ 222+900 ರಿಂದ 223+700 ದೋಣಿಗಾಲ್ ರಸ್ತೆಯಿಂದ ಕೆಸಗನಹಳ್ಳಿ ರಸ್ತೆವರೆಗೆ ಕಾಮಗಾರಿ ನಡೆಯಲಿದ್ದು ಸದರಿ ಕಾಮಗಾರಿ ನೆಡೆದಿದ್ದು, ಕಾಮಗಾರಿ ನಡೆಯುವ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಪ್ರದೇಶ ಅವಧಿಯಲ್ಲಿ 5 ಜನರಿಗಿಂತ ಹೆಚ್ಚು ಗುಂಪಾಗಿ ಸೇರುವಂತ್ತಿಲ್ಲ, ಈ ಅವಧಿಯಲ್ಲಿ ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತ್ತಿಲ್ಲ, ಯಾವುದೇ ರೀತಿಯ ಪ್ರಚಾರ ಸಾಮಾಗ್ರಿಗಳನ್ನು ಹಿಡಿದುಕೊಂಡು ಘೋಷಣೆ ಕೂಗಿ ಪ್ರಚಾರ ಮಾಡಲು ಅವಕಾಶವಿರುವುದಿಲ್ಲ. ಈ ಆದೇಶವು ಕಾಮಗಾರಿ ನಡೆಸುವ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತ್ತಿಲ್ಲ ಹಾಗೂ ಮೇಲ್ಕಂಡ ನಿಬಂಧನೆಗಳನ್ನು ಉಲಂಘಿಸಿದಲ್ಲಿ ಸಂಭಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
Hassan
ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ದರ್ಜೆ–ವೇತನ, ಬಾಡಿಗೆ ಹೆಚ್ಚಳ: ಸರ್ಕಾರದ ವಿರುದ್ಧ ಎಂಎಲ್‌ಸಿ ಡಾ. ಸೂರಜ್ ರೇವಣ್ಣ ಅಸಮಾಧಾನ
ಹಾಸನ: ನಿಗಮ–ಮಂಡಳಿ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿ, ವೇತನ ಹಾಗೂ ಬಾಡಿಗೆ ಹೆಚ್ಚಳ ಮಾಡುವ ವಿಚಾರದ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಎಂಎಲ್‌ಸಿ ಡಾ. ಸೂರಜ್ ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಲಗಳಲೆ ಗ್ರಾಮದಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ದುರ್ಬಲವಾಗಿರುವುದು ಇಡೀ ರಾಜ್ಯದ ಜನರಿಗೆ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಹೇಳಿದರು. “ನಾವೇನು ವಿಶೇಷವಾಗಿ ಹೇಳಬೇಕಿಲ್ಲ. ಒಂದೆಡೆ ಗ್ಯಾರೆಂಟಿಗಳ ಹಾವಳಿ, ಮತ್ತೊಂದೆಡೆ ಅನುದಾನದ ಅಭಾವ ಎದುರಾಗಿದೆ” ಎಂದು ಟೀಕಿಸಿದರು.

ವಿರೋಧ ಪಕ್ಷದವರು ಮಾತ್ರವಲ್ಲ, ಆಡಳಿತ ಪಕ್ಷದ ಶಾಸಕರೇ ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ, ಅಭಿವೃದ್ಧಿ ಆಗುತ್ತಿಲ್ಲ ಎಂದು ಪಕ್ಷದ ಸಭೆಗಳಲ್ಲಿ ಹಾಗೂ ಸಾರ್ವಜನಿಕವಾಗಿ ಅಳಲು ತೋಡಿಕೊಳ್ಳುತ್ತಿರುವುದು ರಾಜ್ಯದ ಆರ್ಥಿಕ ಸ್ಥಿತಿಯ ಪ್ರತಿಬಿಂಬವಾಗಿದೆ. ಈ ವಿಚಾರಗಳು ಈಗ ಬಹಿರಂಗವಾಗಿ ಚರ್ಚೆಯಾಗುತ್ತಿವೆ ಎಂದು ಹೇಳಿದರು.
“ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸರ್ಕಾರ ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೋ ನೋಡಬೇಕಿದೆ. ಎಲ್ಲೂ ಶಾಶ್ವತವಾದ, ಸಾರ್ವಜನಿಕರಿಗೆ ನಿಜಕ್ಕೂ ಅನುಕೂಲವಾಗುವ ಹಾಗೂ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜನಪ್ರಿಯ ಕಾರ್ಯಕ್ರಮಗಳನ್ನು ನೀಡಿದ್ದರು. ಆದರೆ ಇಂದಿನ ಪರಿಸ್ಥಿತಿ ಮತ್ತು ಆಗಿನ ಪರಿಸ್ಥಿತಿಯನ್ನು ಹೋಲಿಸಿ ಚಿಂತನೆ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಸಲಹೆ ನೀಡಿದರು.
“ಈ ಗ್ಯಾರೆಂಟಿಗಳೆಲ್ಲಾ ಚುನಾವಣೆಗೆ ಮಾತ್ರ ಸೀಮಿತ. ಇದರಿಂದ ರಾಜ್ಯದ ಯಾರಿಗೂ ದೀರ್ಘಾವಧಿಯಲ್ಲಿ ಒಳ್ಳೆಯದಾಗುವುದಿಲ್ಲ” ಎಂದು ಡಾ. ಸೂರಜ್ ರೇವಣ್ಣ ಹೇಳಿದರು.
ವರಿಷ್ಠರ ತೀರ್ಮಾನವೇ ಅಂತಿಮ
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಾಜಿ ಶಾಸಕ ಪ್ರೀತಂಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಅದರ ಬಗ್ಗೆ ನಮ್ಮ ಪಕ್ಷದ ಹಾಗೂ ಬಿಜೆಪಿ ಪಕ್ಷದ ವರಿಷ್ಠರು ಕುಳಿತು ತೀರ್ಮಾನ ಮಾಡುತ್ತಾರೆ. ನಮ್ಮ ಅಭಿಪ್ರಾಯದಲ್ಲಿ ಪಕ್ಷ ಸದೃಢವಾಗಿ ಸಾಗುತ್ತಿದೆ” ಎಂದರು.

ಡಿಸಿಸಿ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಹುತೇಕ ಚುನಾವಣೆಗಳಲ್ಲಿ ನಮ್ಮ ಪಕ್ಷ ಮೇಲುಗೈ ಸಾಧಿಸಿದ್ದು, ಯಾವುದೇ ಒಳ–ಹೊರ ಬೆಂಬಲವಿಲ್ಲದೆ ಜಯ ಸಾಧಿಸಿ ಉತ್ತಮ ಸ್ಥಿತಿಯಲ್ಲಿ ಇದೆ ಎಂದು ಹೇಳಿದರು. ಈ ಯಶಸ್ಸನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.
“ಅವರು ಈ ರೀತಿಯ ಹೇಳಿಕೆಗಳನ್ನು ಹೊಸದಾಗಿ ಕೊಡುತ್ತಿಲ್ಲ. ಹಿಂದೆಯೂ ನೀಡಿದ್ದಾರೆ, ಈಗಲೂ ಕೊಡುತ್ತಿದ್ದಾರೆ, ಮುಂದೆಯೂ ಕೊಡುತ್ತಾರೆ. ಅದಕ್ಕೆ ಪ್ರತಿಕ್ರಿಯೆ ನೀಡದೇ ಇರುವುದು ಉತ್ತಮ” ಎಂದರು.

ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಅದರ ಬಗ್ಗೆ ನಮಗೆ ಅಪಾರ ಗೌರವವಿದೆ. ನಮ್ಮ ಪಕ್ಷ ಹಾಗೂ ಬಿಜೆಪಿ ಕಾರ್ಯಕರ್ತರು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. ಆದರೆ ಬಿಜೆಪಿ ಪಕ್ಷದಲ್ಲಿಯೇ ಕೆಲವರು ಈ ಪವಿತ್ರ ಮೈತ್ರಿಗೆ ತೊಂದರೆ ನೀಡುವ ದುರುದ್ದೇಶ ಹೊಂದಿದ್ದಾರೆ. ಆದರೆ ಅವರು ಅದರಲ್ಲಿ ಸಫಲರಾಗುವುದಿಲ್ಲ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಕುರಿತು ನಮ್ಮ ಪಕ್ಷದ ವರಿಷ್ಠರು, ಶಾಸಕರು ಹಾಗೂ ಜಿಲ್ಲೆಯ ಮುಖಂಡರ ಅಭಿಪ್ರಾಯ ಪಡೆದು ಮುಂದಿನ ಪ್ರತಿಕ್ರಿಯೆ ನೀಡಲಾಗುವುದು ಎಂದು ಡಾ. ಸೂರಜ್ ರೇವಣ್ಣ ಹೇಳಿದರು.
Hassan
MCE ಆಡಳಿತ ಮಂಡಳಿ ಜಟಾಪಟಿ: ಫೆ. 12ಕ್ಕೆ ಅವಿಶ್ವಾಸ ನಿರ್ಣಯ ಮಂಡನೆಗೆ ಹೈಕೋರ್ಟ್ ಆದೇಶ
ಹಾಸನ: ನಗರದ ಮಲೆನಾಡು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಜಟಾಪಟಿಗೆ ಸಂಬಂಧಿಸಿದಂತೆ ಹೈ ಕೋರ್ಟ್ ಮತ್ತೊಮ್ಮೆ ಅವಿಶ್ವಾಸ ನಿರ್ಣಯಕ್ಕೆ ಅವಕಾಶ ನೀಡಿದ್ದು ಕೋರ್ಟ್ ನಿಂದಲೇ ವೀಕ್ಷಕರನ್ನು ನೇಮಕ ಮಾಡಿದೆ.
ಮಲೆನಾಡು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಬಿ.ಆರ್. ಗರುದೇವ್ ಅವರ ತಂಡ ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಿತು.
ಹಾಸನ ಜಿಲ್ಲಾ ನ್ಯಾಯಾಲಯವು ಆರ್.ಟಿ. ದೇವೇಗೌಡ ಅವರನ್ನು ಅಧ್ಯಕ್ಷರಾಗಿ, ಜಗದೀಶ್ ಚೌಡುವಳ್ಳಿ ಅವರನ್ನು ಕಾರ್ಯದರ್ಶಿಯಾಗಿ ಹಾಗೂ ಪಾರ್ಶ್ವನಾಥ್ ಅವರನ್ನು ಖಜಾಂಚಿಗಳಾಗಿ ಮುಂದುವರಿಸಲು ಅನುಮತಿ ನೀಡಿದ್ದು, ಆಡಳಿತ ಮಂಡಳಿಯ ಕಾರ್ಯನಿರ್ವಹಣೆಗೆ ಯಾವುದೇ ಅಡ್ಡಿ ಉಂಟುಮಾಡಬಾರದೆಂದು ಮಧ್ಯಂತರ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.

ವಿಚಾರಣೆ ನಡೆಸಿದ ಹೈಕೋರ್ಟ್, ಫೆಬ್ರವರಿ 12ರಂದು 2/3 ಸಂಖ್ಯಾಬಲದ ಮಾನದಂಡದಂತೆ ಮತ್ತೊಮ್ಮೆ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ನೀಡಿದೆ. ಅಲ್ಲದೆ, ಅವಿಶ್ವಾಸ ನಿರ್ಣಯದ ಸಂಪೂರ್ಣ ಪ್ರಕ್ರಿಯೆಗೆ ಹೈಕೋರ್ಟ್‌ನಿಂದಲೇ ವೀಕ್ಷಕರನ್ನು ನೇಮಿಸಲಾಗಿದ್ದು, ಪ್ರಕ್ರಿಯೆಯ ಕುರಿತ ವರದಿಯನ್ನು ಫೆಬ್ರವರಿ 16ರಂದು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಮಲೆನಾಡು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಗದೀಶ್ ಚೌಡುವಳ್ಳಿ, ಒಟ್ಟು 24 ನಿರ್ದೇಶಕರ ಪೈಕಿ ಕನಿಷ್ಠ 16 ನಿರ್ದೇಶಕರ ಬೆಂಬಲ ಅವಿಶ್ವಾಸ ನಿರ್ಣಯಕ್ಕೆ ಅಗತ್ಯವಿದೆ. ಪ್ರಸ್ತುತ ತಮ್ಮ ಪರವಾಗಿ 10 ನಿರ್ದೇಶಕರ ಸ್ಪಷ್ಟ ಬೆಂಬಲವಿದ್ದು, ಇನ್ನೂ 2–3 ನಿರ್ದೇಶಕರು ಬೆಂಬಲ ನೀಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ನಾವು ಮೊದಲ ದಿನದಿಂದಲೇ ನ್ಯಾಯಾಲಯದ ಆದೇಶಗಳನ್ನು ಗೌರವಿಸಿ, ಸಂಪೂರ್ಣ ಕಾನೂನುಬದ್ಧವಾಗಿ ಆಡಳಿತ ನಡೆಸಿಕೊಂಡು ಬಂದಿದ್ದೇವೆ. ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಗೌರವದಿಂದ ಸ್ವಾಗತಿಸುತ್ತೇವೆ. ಮುಂದಿನ ಅವಿಶ್ವಾಸ ನಿರ್ಣಯದಲ್ಲಿಯೂ ಜಯ ಸಾಧಿಸಿ, ಜನಪರ ಆಡಳಿತವನ್ನು ಮುಂದುವರೆಸುವೆವು ಎಂಬ ದೃಢ ವಿಶ್ವಾಸವಿದೆ ಎಂದು ಅವರು ಹೇಳಿದರು.
-
Mandya11 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya12 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan12 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Chamarajanagar19 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore17 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya10 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Special6 hours agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
-
Mandya9 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
