Connect with us

Hassan

ಎಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ : ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರ

Published

on

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಕರೆದೊಯ್ಯದರು.

ರೇವಣ್ಣ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ಎಸ್‌ಐಟಿ ಅಧಿಕಾರಿಗಳು, ಅವಧಿ ಮುಗಿದಿದ್ದರಿಂದ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ

Continue Reading
Click to comment

Leave a Reply

Your email address will not be published. Required fields are marked *

Hassan

ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಶಾಸಕ ಹೆಚ್.ಪಿ. ಸ್ವರೂಪ್ ಚಾಲನೆ

Published

on

ಹಾಸನ: ನಗರದ ಹಿಮ್ಸ್ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಲಸಿಕ ದಿನದ ಅಂಗವಾಗಿ ಐದು ವರ್ಷದ ಒಳಗಿನ ಮಕ್ಕಳಿಗೆ ಫಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಭಾನುವಾರ ಬೆಳಿಗ್ಗೆ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಚಾಲನೆ ನೀಡಿದರು.

ನಂತರ ಉದ್ದೇಶಿಸಿ ಮಾತನಾಡಿದ ಶಾಸಕರು, ಫಲ್ಸ್ ಪೋಲಿಯೋ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಮುಂದೆ ಆರೋಗ್ಯದಲ್ಲಿ ಯಾವ ಸಮಸ್ಯೆಗಳಾಗದಂತೆ ಎಚ್ಚರ ವಹಿಸುವಂತೆ ಪೋಷಕರಿಗೆ ಸಲಹೆ ನೀಡಿದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೋಲಿಯೋ ಲಸಿಕೆ ಬಹಳ ಮುಖ್ಯ, ಆದುದರಿಂದ ಎಲ್ಲಾ ತಾಯಂದಿರು ತಮ್ಮ ಮಕ್ಕಳಿಗೆ ತಪ್ಪದೆ ಪೊಲಿಯೋ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದೆ. ಪ್ರತಿ ಐದು ಬೂತ್‌ಗಳಿಗೆ ಒಬ್ಬರಂತೆ ಒಟ್ಟು ೧೭೪ ಮೇಲ್ವಿಚಾರಕರನ್ನು ನಿಯೋಜಿಸಿ ತಾಲ್ಲೂಕುವಾರು ಸೂಕ್ಷ್ಮ ಕ್ರಿಯಾ ಯೋಜನೆ ರೂಪಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಅಭಿಯಾನ ಮೂರು ದಿನಗಳು ಹಾಗೂ ನಗರ ಪ್ರದೇಶಗಳಲ್ಲಿ ನಾಲ್ಕು ದಿನಗಳು ನಡೆಯಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯ ೦೫ ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಪೋಲಿಯೋ ರೋಗದಿಂದ ರಕ್ಷಿಸುವ ಉದ್ದೇಶದಿಂದ ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು “ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು” ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಒಟ್ಟು ೧,೦೬,೭೪೭ ಮಕ್ಕಳನ್ನು ಗುರಿಯಾಗಿಸಿಕೊಂಡಿದ್ದು, ೪,೬೮,೪೯೩ ಮನೆಗಳನ್ನು ವ್ಯಾಪ್ತಿಗೆ ತೆಗೆದುಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು ೮೭೨ ಬೂತ್‌ಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ನಗರ ಪ್ರದೇಶದಲ್ಲಿ ೧೪೦ ಹಾಗೂ ಗ್ರಾಮೀಣ ಪ್ರದೇಶದಲ್ಲಿ ೭೩೨ ಬೂತ್‌ಗಳು ಕಾರ್ಯನಿರ್ವಹಿಸಲಿವೆ. ಪ್ರತಿಯೊಂದು ಬೂತ್‌ಗೆ ನಾಲ್ವರು ಸದಸ್ಯರಂತೆ ಒಟ್ಟು ೩,೪೮೮ ಬೂತ್ ತಂಡದ ಸದಸ್ಯರನ್ನು ನಿಯೋಜಿಸಲಾಗಿದೆ. ಜೊತೆಗೆ ಮನೆ?ಮನೆಗೆ ತೆರಳಿ ಲಸಿಕೆ ನೀಡಲು ೧,೭೪೪ ಮನೆ ಭೇಟಿ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಮಕ್ಕಳ ಆರೋಗ್ಯ ರಕ್ಷಣೆಗೆ ಕೈಜೋಡಿಸಬೇಕೆಂದು ಕರೆ ಕೊಟ್ಟರು.

ಐಎಂಎ ಅಧ್ಯಕ್ಷರಾದ ಡಾ. ದಿನೇಶ್ ಭೈರೇಗೌಡ ಮಾತನಾಡಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಮನವಿ ಮಾಡಿದ್ದು, ತಮ್ಮ ಮನೆಯಲ್ಲಿರುವ ೦೫ ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟು ಬಾರಿ ಪಲ್ಸ್ ಪೋಲಿಯೋ ಹನಿಗಳನ್ನು ನೀಡಿದ್ದರೂ ಸಹ, ಡಿಸೆಂಬರ್ ೨೧ರಂದು ನಡೆಯುವ ಪಲ್ಸ್ ಪೋಲಿಯೋ ದಿನದಂದು ಕಡ್ಡಾಯವಾಗಿ ಸಮೀಪದ ಬೂತ್‌ಗಳಿಗೆ ಕರೆತಂದು ಪೋಲಿಯೋ ಹನಿಗಳನ್ನು ಹಾಕಿಸಬೇಕು ಎಂದರು.

ಇದೆ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅನೀಲ್, ನಾಗಪ್ಪ, ಚನ್ನವೀರಪ್ಪ, ಮನುಪ್ರಕಾಶ್, ಶಿವಶಂಕರ್, ವಿಜಯ್, ಮೀನಾಕ್ಷಿ ಇತರರು ಉಪಸ್ಥಿತರಿದ್ದರು.

 

Continue Reading

Hassan

ಅರ್ಜಿಗಳ ವಿಲೇವಾರಿಗೆ ಸೂಕ್ತ ಕ್ರಮವಹಿಸಲು ಸೂಚನೆ ನೀಡಿದ ಡಿಸಿ ಲತಾಕುಮಾರಿ

Published

on

ಹಾಸನ:  ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾಗಿರುವ 1069 ಅರ್ಜಿಗಳನ್ನು ವಿಲೇವಾರಿ ಮಾಡಿರುವ ಕುರಿತು ವರದಿ ನೀಡುವುದರ ಜೊತೆಗೆ ಇಂದು ಸ್ವೀಕಾರ ಮಾಡಿರುವ 135 ಅರ್ಜಿಗಳ ವಿಲೇವಾರಿಗೆ ಸೂಕ್ತ ಕ್ರಮವಹಿಸುವಂತೆ ಜಿಲ್ಲಾಧಿಕಾರಿ  ಕೆ.ಎಸ್‌. ಲತಾಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜನ ಸ್ಪಂದನ ಸಭೆಯಲ್ಲಿ ಅಹವಾಲು ಸ್ವೀಕಾರ ಮಾಡಿ ಮಾತನಾಡಿದ ಅವರು ಸಾರ್ವಜನಿಕರ ಸ್ವಂತ ಜಮೀನು ಒತ್ತುವರಿ ಆಗಿದ್ದಲ್ಲಿ ನ್ಯಾಯಾಲಯದ ನಿರ್ದೇಶನವಿದ್ದರೆ ಮಾತ್ರ ಬಿಡಿಸಲು ಅವಕಾಶ ಇರುತ್ತದೆ ಎಂದು ತಿಳಿಸಿದರು.

 


ಕಳೆದ 20 ವರ್ಷದಿಂದ ಪಡಿತರ ಕಾರ್ಡ್ ಹೊಂದಿದ್ದು, ಆದಾಯ ಹೆಚ್ಚಳವಾಗಿದೆ ಎಂದು ಕಂಪ್ಯೂಟರ್‌ನಲ್ಲಿ ತೋರಿಸುತ್ತಿರುವುದರಿಂದ ೫ ವರ್ಷದಿಂದ ಪಡಿತರ ಕಾರ್ಡ್ ರದ್ದಾಗಿರುವುದನ್ನು ಸರಿಪಡಿಸಲು ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಅರಕಲಗೂಡು ತಾಲೂಕಿನ ಮಾದಿಹಳ್ಳಿಯಲ್ಲಿ ಏತನೀರಾವರಿಗೆ ಭೂಸ್ವಾಧೀನವಾಗಿದ್ದು, ಪರಿಹಾರ ಕೋರಿ ಬಂದ ಮನವಿಗೆ ಖುದ್ದು ತಹಸೀಲ್ದಾರ್ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.

ಪೌತಿಖಾತೆ, ಹದ್ದುಬಸ್ತು, ವಿದ್ಯುತ್ ಸಂಪರ್ಕ ಕಲ್ಪಿಸುವುದು, ಸಾಗುವಳಿ ಚೀಟಿ, ಕಂದಾಯ ಗ್ರಾಮ, ಖಾತೆ ಮಾಡುವ ಬಗ್ಗೆ, ಪೋಡಿ ದುರಸ್ತಿ, ಪಹಣಿ ತಿದ್ದುಪಡಿ, ಹೊಲಕ್ಕೆ ದಾರಿ ಬಿಡಿಸಿಕೊಡುವ ಬಗ್ಗೆ, ಶ್ರವಣಬೆಳಗೊಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ, ಇನಾಮು ರದ್ದು ಪಡಿಸುವ ಕುರಿತು, ಕೊಣನೂರು ಗ್ರಾಮ ಪಂಚಾಯಿತಿಯಲ್ಲಿ ಪೌರಕಾರ್ಮಿಕರಿಗೆ ಹಕ್ಕು ಪತ್ರ ನೀಡಲು ಮನವಿ, ಆಕಾರ ಬಂದು ತಿದ್ದುಪಡಿ ಮಾಡಿರುವವರ ಮೇಲೆ ಎಫ್.ಐ.ಆರ್ ದಾಖಲಿಸುವಂತೆ ಸೂಚಿಸಿದರಲ್ಲದೆ, ವಿದ್ಯುತ್ ಲೈನ್ ಹಾದು ಹೋಗಿರುವ ಸ್ಥಳಕ್ಕೆ ಪರಿಹಾರ ನೀಡಲು ಒಂದು ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಟ್ಟಾಯ ಗ್ರಾಮದಲ್ಲಿ ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸಲು, ವಸತಿ ಯೋಜನೆಯಡಿ ಮಂಜೂರಾದ ಮನೆಗೆ ಅಂತಿಮ ಬಿಲ್ ಹಣ ಪಾವತಿ ಮಾಡುವಂತೆ ಸೂಚಿಸಿದರಲ್ಲದೆ, ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಶೇಡ್ ಹಾಕಿರುವುದನ್ನು ನಿರ್ದಾಕ್ಷಿಣ್ಯವಾಗಿ ತೆರೆವುಗೊಳಿಸಲು ನಿರ್ದೇಶನ ನೀಡಿದರು.

ಬೊಮ್ಮನಹಳ್ಳಿ ಏತನೀರಾವರಿ ಯೋಜನೆಗೆ ಭೂಸ್ವಾಧೀನವಾಗಿರುವ ಜಾಗಕ್ಕೆ ಹಾಗೂ ಬೆಳೆ ಪರಿಹಾರ, ಖಾತೆ ಬದಲಾವಣೆ, ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದಲ್ಲಿ ಗೋಮಾಳದಲ್ಲಿ ಎರಡು ಗುಂಟೆ ಜಾಗ ಕಲ್ಪಿಸುವಂತೆ ಅಹವಾಲು ಅರ್ಜಿಗಳು ಸ್ವೀಕಾರವಾಯಿತು.

ಸಾರ್ವಜನಿಕರಿಗೆ ಕಾನೂನು ಸೇವೆಗಳ ಸಹಾಯಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಂದು ಕೋಶ ತೆರೆಯಲಾಗಿದೆ ಯಾರ ಸಹಾಯವಿಲ್ಲದವರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

Continue Reading

Hassan

ಹಾಸನದ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ವಾರ್ಷಿಕೋತ್ಸವದ ಸಂಭ್ರಮ.

Published

on

ಹಾಸನ ನಗರದ ಪ್ರತಿಷ್ಠಿತ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ವಾರ್ಷಿಕೋತ್ಸವ ದಿನಾಂಕ 19 .12. 2025 ರಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಶಾಲಾ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕೆ ಎಸ್ ಲತಾ ಕುಮಾರಿ, ಐಎಎಸ್ ಭಾಗವಹಿಸಿದ್ದರು. ವಿಶಿಷ್ಟ ಅತಿಥಿಯಾಗಿ ರಾಜೀವ ಶಿಕ್ಷಕ ಪ್ರಶಿಕ್ಷಣ ಕಾಲೇಜಿನ ಪ್ರಾಂಶುಪಾಲರಾದ ಡಾ।। ಮಿನಿ ವರ್ಗೀಸ್ ರವರು ಭಾಗವಹಿಸಿದ್ದರು. ಜಿಲ್ಲಾಧಿಕಾರಿಯವರು ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಮಕ್ಕಳು ಬಾಲ್ಯದಿಂದಲೇ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು, ಪಂಚತಂತ್ರ, ಚಂದಮಾಮ, ನೈತಿಕ ಮೌಲ್ಯವನ್ನು ಬೆಳಗಿಸುವ ಹಾಗೂ ಜ್ಞಾನ ವಿಜ್ಞಾನದ ಪುಸ್ತಕಗಳ ಅರಿವಿನಿಂದ ಜ್ಞಾನ ಸಂಪಾದಿಸಬೇಕು,ಒಳ್ಳೆಯ ಸುಸಂಸ್ಕೃತ ಹಾಗೂ ದೇಶ ಕಟ್ಟುವ ನಾಗರಿಕರನ್ನಾಗಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪಾಲಕರು ಮಾಡಬೇಕೆಂದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರನ್ನು ಶುಭ ಹಾರೈಸಿದರು. ವರಿಷ್ಠ ವಿದ್ಯಾರ್ಥಿಗಳು ನೀಡಿದ 12 ಸೋಲಾರ್ ವಿದ್ಯುತ್ ಬೀದಿ ದೀಪಗಳನ್ನು ಉದ್ಘಾಟಿಸಿದರು.

ಈ ಸಂಭ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದ ಡಾ. ಮಿನಿ ವರ್ಗೀಸ್ ರವರು ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಇಂದಿನ ಜಗತ್ತು ಮೊಬೈಲ್ ಯುಗವಾಗಿದೆ. ಸಾಧ್ಯವಾದಷ್ಟು ಮೊಬೈಲನ್ನು ಅತಿಯಾಗಿ ಬಳಸದೆ ಒಳ್ಳೆಯದಕ್ಕೆ ಮಾತ್ರ ಉಪಯೋಗಿಸಿ ನಿಮ್ಮ ಬದುಕು ಸಾರ್ಥಕಗೊಳಿಸಬೇಕು. ಶಿಕ್ಷಕರು ಮತ್ತು ಪೋಷಕರನ್ನು ಗೌರವಿಸುತ್ತಾ ಅವರ ಮಾರ್ಗದರ್ಶನದಲ್ಲಿ ನಡೆದರೆ ನಿಮ್ಮ ಭವಿಷ್ಯ ಉಜ್ವಲವಾಗುವುದರಲ್ಲಿ ಯಾವುದೇ ಸಂದೇಹವಿಲ್ಲವೆಂದು ಹಿತ ನುಡಿದರು. ಇದೇ ಸಂದರ್ಭದಲ್ಲಿ ಮುಂದಿನ ವರ್ಷ ನಿವೃ ತ್ತಿಯಾಗಲಿರುವ ಶಾಲೆಯ ಪ್ರಾಂಶುಪಾಲರಾದ ಶ್ರೀ ಎಂ ಜಯಶೀಲನ್ ಮತ್ತು ಸಮಾಜ ವಿಜ್ಞಾನದ ಶಿಕ್ಷಕರಾದ
ಬಿ ಸತ್ಯನಾರಾಯಣ್ ರವರನ್ನು ಸನ್ಮಾನಿಸಲಾಯಿತು.

ಶಾಲೆಯ ಪ್ರಾಂಶುಪಾಲರಾದ
ಶ್ರೀ ಜಯಶೀಲನ್ ರವರು ವಿದ್ಯಾಲಯದ ವಾರ್ಷಿಕ ಪ್ರಗತಿಯ ಬಗ್ಗೆ ವರದಿ ಓದಿದರು. ವರಿಷ್ಠ ಶಿಕ್ಷಕರಾದ ಶ್ರೀ ಸತ್ಯನಾರಾಯಣರವರು ಸ್ವಾಗತಿಸಿದರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಶ್ರೀಮತಿ ರಶ್ಮಿಯವರು ಧನ್ಯವಾದ ಅರ್ಪಿಸಿದರು. ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಇದಕ್ಕೆ ಸಾಕ್ಷಿಯಾದರು.

Continue Reading

Trending

error: Content is protected !!