Connect with us

Mandya

ವಸಡು ಆರೋಗ್ಯವಾಗಿಟ್ಟುಕೊಳ್ಳಲು ಸಲಹೆ ನೀಡಿದ ಡಿಎಚ್‌ಒ ಜಿಲ್ಲಾ ಕಾರಾಗೃಹದಲ್ಲಿ ವಿಶ್ವಬಾಯಿ ಆರೋಗ್ಯ ದಿನಾಚರಣೆ

Published

on

ಮಂಡ್ಯ: ‘ಹಲ್ಲುಗಳು ಆರೋಗ್ಯವಾಗಿದ್ದರೆ ಇಡೀ ದೇಹವೇ ಆರೋಗ್ಯವಾಗಿದ್ದಂತೆ ಹಾಗಾಗಿ ವಸಡು ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಬಾರದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಸಲಹೆ ನೀಡಿದರು.

ನಗರದ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ದಂತ ವೈದ್ಯಕೀಯ ಸಂಘದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೈಲಿನಲ್ಲಿರುವವರಿಗೆ ಬಾಯಿ ಮತ್ತು ಹಲ್ಲುಗಳ ಆರೋಗ್ಯದ ಬಗ್ಗೆ ಮಾಹಿತಿ ಇರುವುದಿಲ್ಲ. ಈ ಕಾರಣಕ್ಕೆ ಜೈಲಿನಲ್ಲಿರುವ ಎಲ್ಲ ಖೈದಿಗಳಿಗೂ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ, ಎಲ್ಲ ರೋಗಗಳಿಗೂ ಬಾಯಿ ಆರೋಗ್ಯವೇ ಕಾರಣವಾಗಿದ್ದು, ಬಾಯಿ ಮತ್ತು ಹಲ್ಲುಗಳನ್ನು ಚೆನ್ನಾಗಿ ನೋಡಿಕೊಂಡು ಶುಚಿಯಾಗಿಟ್ಟುಕೊಳ್ಳುವ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ದಂತ ಭಾಗ್ಯ ಎಲ್ಲ ಆರೋಗ್ಯಕ್ಕೂ ಇದೇ ಕಾರಣ. ಬಾಯಿ ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡರೆ ಆರೋಗ್ಯ ಚೆನ್ನಾಗಿರುತ್ತದೆ. ಕೆಲವರು ಬ್ರೆಷ್ ಮಾಡುತ್ತಾರೆ. ಸರಿಯಾದ ರೀತಿಯಲ್ಲಿ ಮಾಡದಿದ್ದರೆ ವಸಡುಗಳಲ್ಲಿ ಗಾಯವಾಗಿ, ಕೀವು ಕಟ್ಟಿಕೊಳ್ಳುತ್ತದೆ. ಇನ್ನು ಕೆಲವರಿಗೆ ಹಲ್ಲುಗಳಲ್ಲಿ ಹುಳುಕು ಇರುತ್ತದೆ. ಅದನ್ನು ತೆಗೆದು ರಂಧ್ರವನ್ನು ಮುಚ್ಚಬೇಕು. ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ದಂತ ವಿಭಾಗದ ನೋಡಲ್ ಅಧಿಕಾರಿ ಡಾ.ಎಚ್.ಆರ್.ಅರುಣಾನಂದ ಮಾತನಾಡಿ, ಪ್ರಸ್ತುತದಲ್ಲಿ ಇರುವಂತೆ ಈ ಹಿಂದೆ ಡಯಗ್ನೋಸ್ಟಿಕ್ ಉಪಕರಣಗಳು ಇರಲಿಲ್ಲ. ಆರೋಗ್ಯದಲ್ಲಿ ಏರುಪೇರಾಗಿದ್ದರೆ ಬಾಯಿ ಮತ್ತು ನಾಲಿಗೆಯನ್ನು ನೋಡಿ ರೋಗವನ್ನು ಗುರುತಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಂದು ಇವೆಲ್ಲವೂ ಬದಲಾಗಿದೆಯಾದರೂ ಕೂಡ ಯಂತ್ರೋಪಕರಣಗಳ ಸಹಾಯದಿಂದ ರೋಗವನ್ನು ಕಂಡು ಹಿಡಿಯಲಾಗುತ್ತಿದೆ ಎಂದು ತಿಳಿಸಿದರು.

ಬಾಯಿ ಆರೋಗ್ಯ ಚೆನ್ನಾಗಿದ್ದರೆ ದೇಹದ ಆರೋಗ್ಯ ಚೆನ್ನಾಗಿರುತ್ತದೆ, ಮಕ್ಕಳಿಗೆ 6 ತಿಂಗಳಲ್ಲಿ ಹಲ್ಲುಗಳು ಹುಟ್ಟುತ್ತವೆ. ಎರಡೂವರೆ ವರ್ಷದೊಳಗೆ ಸಂಪೂರ್ಣ ಹಲ್ಲುಗಳು ಬೆಳೆಯುತ್ತವೆ. ಆರು ವರ್ಷದಿಂದ 12 ವರ್ಷದೊಳಗೆ ಹಲ್ಲುಗಳು ಬಿದ್ದು ಮತ್ತೆ ಹುಟ್ಟುತ್ತವೆ. ಇದು ದೇವರು ನಮಗೆ ಕೊಟ್ಟ ವರ, ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳಬೇಕು. 45 ವರ್ಷ ದಾಟಿದವರಿಗೆ 3ನೇ ಸೆಟ್ ಕೊಡಲಾಗುತ್ತದೆ. ಜಿಲ್ಲೆಯಲ್ಲಿರುವ 10 ಸಮುದಾಯ ಆರೋಗ್ಯ ಕೇಂದ್ರಗಳು, ಆರು ತಾಲ್ಲೂಕು ಆಸ್ಪತ್ರೆಗಳು ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ದಂತ ಭಾಗ್ಯ ಕಾರ್ಯಕ್ರಮ ನಡೆಯುತ್ತದೆ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ.ಕೆ.ಲೋಕೇಶ್, ಶಿವಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಇಂದ್ರಾಣಿ, ಕಿಲಾರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಡಾ.ಸುಕನ್ಯಾ, ಡಾ.ಬಿ.ಎಸ್.ಶಿವಕುಮಾರ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಗಳಾ, ಡಾ.ನಿಸರ್ಗ ಅರುಣಾನಂದ, ಜೈಲರ್ ರವಿಕುಮಾರ್ ಭಜಂತ್ರಿ, ಸಹಾಯಕ ಜೈಲರ್‌ಗಳಾದ ಎಸ್.ಎಸ್.ನಾಗರಾಜು, ಎಚ್.ಡಿ.ತಳವಾರ್, ಶಿಕ್ಷಕ ಶಿವಲಿಂಗಯ್ಯ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಗೆಲುವಿಗೆ ಹರಕೆ ಹೊತ್ತು ಉರುಳು ಸೇವೆ ಮಾಡಿದ ಅಭಿಮಾನಿಗಳು

Published

on

ಶ್ರೀರಂಗಪಟ್ಟಣ: ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಉರುಳು ಸೇವೆ ನಡೆಸಿ ಪ್ರಾರ್ಥನೆ ಸಲ್ಲಿಸಿದರು.

ಎಚ್.ಡಿ.ಕುಮಾರ ಸ್ವಾಮಿ ರವರ ಗೆಲುವು ಜಿಲ್ಲೆಯ ಗೆಲುವಾಗಿದ್ದು,‌ ಮತದಾರರು ಯಾವುದೇ ಆಮಿಷಕ್ಕೆ ಬಲಿಯಾಗದೆ ಕುಮಾರಸ್ವಾಮಿ ರವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Trending

error: Content is protected !!