Mandya
ಏ.15 ರಿಂದ 21 ವರೆಗೆ ಆರೋಗ್ಯ ತಪಾಸಣಾ ಶಿಬಿರ
ಶ್ರೀರಂಗಪಟ್ಟಣ: ಜೆಎಸ್ಎಸ್ ಪಿಯೋಥೆರಪಿ ಕಾಲೇಜು, ಎನ್ಎಸ್ಎಸ್ ಘಟಕ ಹಾಗೂ ಶೇಷಾದ್ರಿಪುರಂ ಪದವಿ ಕಾಲೇಜು ಎನ್ ಎಸ್ ಎಸ್ ಘಟಕ ಮೈಸೂರು ಇವರ ವತಿಯಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬರಾಯನ ಕೊಪ್ಪಲು ಗ್ರಾಮದಲ್ಲಿ ಏ.15 ರಿಂದ 21 ವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರವನ್ನು ರಾಷ್ಟ್ರಪತಿ ಪದಕ ಎಸ್ ಎಸ್ ಅಧಿಕಾರಿ ಡಾ. ರಾಘವೇಂದ್ರ ಹಾಗೂ ಕಿರಂಗೂರು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಲಕ್ಷ್ಮೀದೇವಿ ಚಾಲನೆ ನೀಡಿದರು.
ಶಿಬಿರದ ಪ್ರತಿಜ್ಞೆಯನ್ನು ಜೆಎಸ್ಎಸ್ ಫಿಜಿಯೋಥೆರಪಿ ಕಾಲೇಜಿನ ಪ್ರಾಧ್ಯಾಪಕರಾದ ತೇಜಸ್ವಿನಿ ರವರು ಶಿಬಿರಾರ್ಥಿಗಳಿಗೆ ಬೋಧಿಸಿದರು..
ಆರೋಗ್ಯ ತಪಾಸಣೆ ಶಿಬಿರದಲ್ಲಿ ಫಿಜಿಯೋಥೆರಪಿ, ಸ್ತ್ರೀರೋಗ ತಪಾಸಣೆ, ಕಿವಿ ಮೂಗು ಗಂಟಲು ತಪಾಸಣೆ, ದಂತ ತಪಾಸಣೆ, ವಾಕ್ ಮತ್ತು ಶ್ರವಣ ದೋಷ ತಪಾಸಣೆ, ಹಾಗೂ ಆಯುರ್ವೇದ ಚಿಕಿತ್ಸೆಯನ್ನು ನುರಿತ ತಜ್ಞರಿಂದ ತಪಾಸಣೆ ನಡೆಸಲಾಗುವುದು.
ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜೆ ಎಸ್ ಎಸ್ ಫಿಜಿಯೋಥೆರಪಿ ಕಾಲೇಜಿನ ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಮಹೇಂದ್ರ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದರು.
ಆಶಾ ಕಾರ್ಯಕರ್ತರಾದ ಲತಾ, ಆಶಾ, ಗ್ರಾಮದ ಮುಖಂಡರು, ಶಿಬಿರಾರ್ಥಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
Mandya
ಜು.25 ರಂದು ಕೆ.ವಿ ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರಧಾನ ಸಮಾರಂಭ
ಮಂಡ್ಯ: ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಜಿಲ್ಲೆ 268 ಎಸ್ ಹಾಗೂ ನಂಜಮ್ಮ ಮೋಟೆಗೌಡ ಚಾರಿಟೇಬಲ್ ಟ್ರಸ್ಟ್ ಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಕೆ.ವಿ.ಶಂಕರಗೌಡರ 109ನೇ ಜನ್ಮದಿನದ ಪ್ರಯುಕ್ತ ನಿತ್ಯ ಸಚಿವ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜುಲೈ 25ರಂದು ಮಧ್ಯಾಹ್ನ 3 ಗಂಟೆಗೆ ಮಂಡ್ಯದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ರಾಜ್ಯಪಾಲರಾದ ಕೆ ಟಿ ಹನುಮಂತು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ಈ ಪ್ರಶಸ್ತಿಯನ್ನು ಜಿಲ್ಲಾಮಟ್ಟದಲ್ಲಿ ನೀಡಲಾಗುತ್ತಿದ್ದು, ಈ ಬಾರಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಗೆ ಕನಕಪುರದ ರೂರಲ್ ಕಾಲೇಜನ್ನು ಆಯ್ಕೆ ಮಾಡಲಾಗಿದೆ ಎಂದರು.
ಪ್ರಶಸ್ತಿಯು 25,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು, ಅಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು ಎಂದರು.
ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷರಾದ ಕೆ.ಟಿ..ಶ್ರೀಕಂಠೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಶರಣಪ್ಪ ವಿ.ಅಲ್ಸೆ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದು, ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಅಂತರರಾಷ್ಟ್ರೀಯ ನಿರ್ದೇಶಕ ನಾಗರಾಜು ವಿ. ಭೈರಿ ,ಕರ್ನಾಟಕ ಸಂಘದ ಅಧ್ಯಕ್ಷ ಪ್ರೊಫೆಸರ್ ಜಯಪ್ರಕಾಶ್ ಗೌಡ ,ಪಿಇ ಟಿ ಅಧ್ಯಕ್ಷ ಕೆ .ಎಸ್. ವಿಜಯ್ ಆನಂದ್, ಆರ್ ಎ ಪಿ ಸಿ ಎಂ ಎಸ್ ಅಧ್ಯಕ್ಷ ಯು. ಸಿ.ಶೇಖರ್, ಜಿಲ್ಲೆ 268 ಎಸ್ 1ನೇ ಉಪ ರಾಜ್ಯಪಾಲ ಹೆಚ್ ಮಾದೇಗೌಡ, ಎರಡನೇ ಉಪರಾಜ್ಯಪಾಲ ಕೆ.ಆರ್.ಶಶಿಧರ, ಸಂಪುಟ ಕಾರ್ಯದರ್ಶಿ ಕೆ ಎಸ್ ಚಂದ್ರಶೇಖರ್, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷ ಪ್ರೊಫೆಸರ್ ಡೇವಿಡ್ ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಕಾರಸವಾಡಿ ಮಹದೇವು, ಪ್ರತಿಭಾಂಜಲಿ ಅಕಾಡೆಮಿಯ ಡೇವಿಡ್, ರತ್ನಮ್ಮ, ಮಂಜುನಾಥ್ ಸೇರಿದಂತೆ ಇತರರು ಇದ್ದರು.
Mandya
ಸರ್ಕಾರ ಕಾರ್ಪೊರೇಟ್ ಕಂಪನಿಗಳ ಒತ್ತಾಯಕ್ಕೆ ಮಣಿಯಬಾರದು
ಮಂಡ್ಯ: ರಾಜ್ಯ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಒತ್ತಡಕ್ಕೆ ಮಣಿಯದೆ ಸಚಿವ ಸಂಪುಟದಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಕೈಗೊಂಡಿರುವ ತೀರ್ಮಾನವನ್ನು ಜಾರಿಗೆ ತರಬೇಕು ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕರಿ ರಮೇಶ್ ಆಗ್ರಹ ಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಿಗರ ಉದ್ಯೋಗ ಕನ್ನಡಿಗರ ಜನ್ಮಸಿದ್ಧ ಹಕ್ಕಾಗಿದೆ. ಸರೋಜಿನಿ ಮಹಿಷ ವರದಿ ಜಾರಿಗೆ ತಂದರೆ ಯಾವುದೇ ಸಮಸ್ಯೆಗಳು ಉದ್ಭವವಾಗುವುದಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ನಡೆಸಿ ಕಾರ್ಪೊರೇಟ್ ಕಂಪನಿಗಳಲ್ಲಿ ಮೀಸಲಾತಿ ಕುರಿತಂತೆ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ ಕಾರ್ಪೊರೇಟ್ ಕಂಪನಿಗಳು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ .ಇದರಿಂದಾಗಿ ಸಂಪುಟದಲ್ಲಿ ಕೈಗೊಂಡಿರುವ ತೀರ್ಮಾನಕ್ಕೆ ಬ್ರೇಕ್ ಬಿದ್ದಿದೆ. ಆದಕಾರಣ ಮುಖ್ಯಮಂತ್ರಿಗಳು ಈ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ತಾಕೀತು ಮಾಡಿದರು.
ದಲಿತ ಸಂಘರ್ಷ ಸಮಿತಿಯ ಟಿ.ಡಿ.ಬಸವರಾಜು ಮಾತನಾಡಿ, ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಹಲವಾರು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಆದರೆ ಇಲ್ಲಿಯವರೆಗೂ ಸರಕಾರಗಳು ಬಂದಿದೆ ಹೋಗಿದೆ. ಈ ವರದಿಯ ಬಗ್ಗೆ ಮಾತ್ರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಸಂಪುಟದಲ್ಲಿ ತೆಗೆದುಕೊಂಡಿರುವ ತೀರ್ಮಾನವನ್ನು ವಾಪಸ್ ಪಡೆದರೆ ಅದನ್ನು ಖಂಡಿಸುವುದಾಗಿ ತಿಳಿಸಿದರಲ್ಲದೆ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಉಮ್ಮಡಹಳ್ಳಿ ನಾಗೇಶ್, ಜೋಸೆಫ್ ರಾಮು, ಪುಟ್ಟರಾಜು, ಕೆಂಪಯ್ಯ, ಉಮ್ಮಡಹಳ್ಳಿ ಉಮೇಶ್, ಅಂಕಯ್ಯ ಸೇರಿದಂತೆ ಇತರರಿದ್ದರು.
Mandya
ಭೀಕರ ರಸ್ತೆ ಅಪಘಾತ : ತುಂಡಾದ ವ್ಯಕ್ತಿಯ ದೇಹ
ಮಂಡ್ಯ: ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೋರ್ವನ ಶವ ತುಂಡಾಗಿ ಬಿದ್ದಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮೂರ್ಕಾಲು ಗೇಟ್ ಬಳಿ ಸಂಭವಿಸಿದೆ.
ಕೂದೇನಕೊಪ್ಪಲು ಗ್ರಾಮದ ಕರಿಯಪ್ಪ(56) ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಾಯಾಳು ಬಸವೇಗೌಡಗೆ ಗಂಭೀರ ಗಾಯವಾಗಿದೆ.
ಮಳವಳ್ಳಿ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಕಿರಗಾವಲು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕಿರಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲುಗೊಂಡಿದೆ.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.