Chamarajanagar
ಗುಂಬಳ್ಳಿ ಗ್ರಾಮದ ರಾಯರ ಕಟ್ಟೆ ಅಭಿವೃದ್ಧಿ ಕಾಮಗಾರಿ ಹತ್ತಿರ ನರೇಗಾ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಆರೋಗ್ಯ ತಪಾಸಣೆ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ನಡೆಸಲಾಯಿತು.
ಗುಂಬಳ್ಳಿ ಗ್ರಾಮದ ರಾಯರ ಕಟ್ಟೆ ಅಭಿವೃದ್ಧಿ ಕಾಮಗಾರಿ ಹತ್ತಿರ ನರೇಗಾ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಆರೋಗ್ಯ ತಪಾಸಣೆ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ನಡೆಸಲಾಯಿತು.
ಪಿಡಿಒ ಮಂಜುನಾಥ್ ಮಾತನಾಡಿ ನರೇಗಾ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆಗೂ ನರೇಗಾ ಜಾಬ್ ಕಾರ್ಡನ್ನು ನೀಡಲಾಗಿದೆ. ಇದರಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಆರೋಗ್ಯ ಶಿಕ್ಷಣ ಯೋಜನೆ ಅಡಿಯಲ್ಲಿಆರೋಗ್ಯ ತಪಾಸಣೆ ಮಾಡಿ ಅವರ ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಗಳಾದ ಪ್ರಿಯದರ್ಶಿನಿ ,ಸುಗುಣ ,ಬಿಲ್ ಕಲೆಕ್ಟರ್ ಕೃಷ್ಣ ನಾಯಕ್ ಆರ್
ಆಶಾ ಕಾರ್ಯಕರ್ತರಾದ ಭಾಗ್ಯ ಉಮಾ ಗೌರಿ ಮತ್ತು ನರೇಗಾ ಕಾರ್ಮಿಕರು ಹಾಜರಿದ್ದರು.
Chamarajanagar
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಚುನಾವಣೆ
ಯಳಂದೂರು ಜನವರಿ 20
ಯಳಂದೂರು ತಾಲ್ಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಗೆ ಆಡಳಿತ ಮಂಡಳಿಯ ಸದಸ್ಯರ ಆಯ್ಕೆಗೆ ಇಂದು ಚುನಾವಣೆ ನಡೆಯಿತು…
ಒಟ್ಟು ಹದಿನೈದು ಸ್ಥಾನಗಳು ಇದ್ದು ಒಂದು ನಾಮ ನಿರ್ದೇಶನ ಸ್ಥಾನ ಹೊರತು ಪಡಿಸಿ ಹದಿನಾಲ್ಕು ಸ್ಥಾನಗಳಲ್ಲಿ ಏಳು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ ಇನ್ನೂಳಿದ ಏಳು ಸ್ಥಾನಗಳಿಗೆ ಜೂನಿಯರ್ ಕಾಲೇಜು ನಲ್ಲಿ ಸಾಲಗಾರರ ಕ್ಷೇತ್ರಕ್ಕೆ ಹದಿಮೂರು ಅಭ್ಯರ್ಥಿಗಳು ಸ್ಪರ್ಧಿಸಿದ್ದು
ಮತ್ತು ಸಾಲಗಾರರಲ್ಲದ ಕ್ಷೇತ್ರಕ್ಕೆ ಆರು ಅಭ್ಯರ್ಥಿಗಳು ಸ್ಪರ್ಧಿಸಿದ್ದು,
ಚುಣಾವಣೆಯಲ್ಲಿ ಸಾಲಗಾರರ ಕ್ಷೇತ್ರಕ್ಕೆ ದಾಸನಹುಂಡಿ ಸತೀಶ್, ಹೊನ್ನೂರು ಹೆಚ್ ಪಿ ಮಲ್ಲಣ್ಣ, ಚಾಮಲಪುರ ರಾಜಶೇಖರ್, ಕೋಮಾರನಪುರ ರಾಜಮ್ಮ,
ವೈ ಕೆ ಮೋಳೆ ಗೌರಮ್ಮ,ಗೌಡಹಳ್ಳಿ ರಶ್ಮಿ ಎಸ್, ಅಭ್ಯರ್ಥಿಗಳು ವಿಜೇತರಾಗಿದ್ದಾರೆ, ಸಾಲಗಾರರಲ್ಲದ ಕ್ಷೇತ್ರಕ್ಕೆ ಹೊನ್ನೂರು ಸಿದ್ದಪ್ಪಸ್ವಾಮಿ ವಿಜೇತರಾಗಿದ್ದರೆ.
ಅವಿರೋಧವಾಗಿ ಅಗರ ಕೆ ಲಿಂಗರಾಜು, ಬನ್ನಿಸಾರಿಗೆ ವಿ ಸೋಮಣ್ಣ, ಯರಗಂಬಳ್ಳಿ ವೃಷವೇಂದ್ರ ಪಿ
ಬೂದಿತಿಟ್ಟು ಸತೀಶ ಜಿ, ಕೆಸ್ತೂರು ಕೆ ಎಂ ಶಿವಣ್ಣ, ಯಳಂದೂರು ವೈ ಎಸ್ ಭೀಮಪ್ಪ, ಮೆಲ್ಲಹಳ್ಳಿ ನಿರಂಜನ್ ಮೂರ್ತಿ ಎಂ ಪಿ ಆಯ್ಕೆಯಾದರು….
ಈ ಸಂದರ್ಭದಲ್ಲಿ ಎನ್ ದಿವಾಕರ್ ದಸನಹುಂಡಿ ಜಿಲ್ಲಾ ಕಾರ್ಯದರ್ಶಿ
ವಿಜೇತರಾದ ಅಭ್ಯರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು
Chamarajanagar
ಅರಣ್ಯದೊಳಗೆ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ಈಶ್ವರ ಖಂಡ್ರೆ
ಬಂಡೀಪುರ: ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಚಮಚ ಇತ್ಯಾದಿ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ತಡೆಯಲು ಅರಣ್ಯದೊಳಗೆ ಸಾಗುವ ಮಾರ್ಗದಲ್ಲಿ 2 ಹಂತದ ತಪಾಸಣೆ ವ್ಯವಸ್ಥೆಯನ್ನು ಶೀಘ್ರ ಜಾರಿಗೊಳಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಂಡೀಪುರದಲ್ಲಿಂದು ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಉದ್ಘಾಟಿಸಿದ ತರುವಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೆಕ್ಕನಹಳ್ಳ, ಮೂಲೆಹೊಳೆ, ಮದ್ದೂರು ಗೇಟ್, ಮೇಲುಕಾಮನಹಳ್ಳಿ ಗೇಟ್ ಬಳಿ ಪ್ರತಿ ನಿತ್ಯ 30-35 ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಆಗುತ್ತಿದೆ. ಪ್ರತಿ ವರ್ಷ ಈ ನಾಲ್ಕು ತಪಾಸಣಾ ಕೇಂದ್ರಗಳಲ್ಲಿ ಸುಮಾರು 11ರಿಂದ 12 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬ ಮಾಹಿತಿ ಇದೆ. ಅರಣ್ಯ ಸಿಬ್ಬಂದಿ ಕಾಡಿನಲ್ಲಿ ಇಳಿದು ಪ್ಲಾಸ್ಟಿಕ್ ಸಂಗ್ರಹಿಸುವಾಗ ವನ್ಯಜೀವಿ ದಾಳಿ ಮಾಡುವ, ಹಾವು ಕಚ್ಚುವ ಅಪಾಯ ಇರುತ್ತದೆ. ಹೀಗಾಗಿ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ದ್ವಾರದಲ್ಲೇ ತಡೆಯುವ ವ್ಯವಸ್ಥೆ ಮಾಡಿ ಎಂದರು.
ಅರಣ್ಯದೊಳಗೆ ಹಾದು ಹೋಗುವ ಹೆದ್ದಾರಿಗಳಲ್ಲಿ, ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ 2 ಹಂತದ ತಪಾಸಣೆ ವ್ಯವಸ್ಥೆ ಜಾರಿ ಮಾಡಿ, ಮೊದಲ ಹಂತದಲ್ಲಿ ಒಂದು ದೊಡ್ಡ ಬುಟ್ಟಿ ಇಟ್ಟು ಏಕ ಬಳಕೆ ಪ್ಲಾಸ್ಟಿಕ್ ಬಾಟಲಿ, ಲೋಟ, ತಟ್ಟೆ, ಕ್ಯಾರಿ ಬ್ಯಾಗ್ ಅನ್ನು ಅದರಲ್ಲಿ ಸ್ವಯಂ ಪ್ರೇರಿತವಾಗಿ ಹಾಕಲು ವಾಹನದಲ್ಲಿರುವವರಿಗೆ ತಿಳಿಸಿ. ನಂತರ ಎರಡನೇ ಹಂತದಲ್ಲಿ ವಾಹನ ತಪಾಸಣೆ ಮಾಡಿ, ವಾಹನಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಇದ್ದರೆ ದಂಡ ವಿಧಿಸಿ ಎಂದು ಸೂಚಿಸಿದರು.
ಬೇಸಿಗೆಯಲ್ಲಿ ನೀರಿನ ಕೊರತೆ ಬಾರದಂತೆ ಕ್ರಮ ವಹಿಸಿ: ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಉತ್ತಮವಾಗಿದ್ದರೂ, ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿರುವುದು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬರುವ ಬೇಸಿಗೆಯಲ್ಲಿ ಅರಣ್ಯದೊಳಗೆ ನೀರು ಮತ್ತು ಮೇವಿನ ಕೊರತೆ ಆಗದಂತೆ ಈಗಿನಿಂದಲೇ ಕ್ರಮ ವಹಿಸಿ, ನೀರು ಗುಂಡಿಗಳಲ್ಲಿ ನೀರು ಸಂಗ್ರಹಣೆಗೆ ಆದ್ಯತೆ ನೀಡಿ. ಅಗತ್ಯಬಿದ್ದರೆ ಕೊಳವೆ ಬಾವಿಗಳಿಗೆ ಸೌರ ವಿದ್ಯುತ್ ಪಂಪ್ ಅಳವಡಿಸಿ ನೀರು ಹರಿಸಿ ಎಂದು ಹೇಳಿದರು.
ಲಂಟನಾ, ಸೆನ್ನಾ ಕಳೆಗಳು ವ್ಯಾಪಕವಾಗಿ ಬೆಳೆಯುತ್ತಿದ್ದು, ಇದರಿಂದ ಸಸ್ಯಹಾರಿ ಪ್ರಾಣಿಗಳಿಗೆ ಮೇವಿನ ಕೊರತೆ ಆಗುತ್ತಿದೆ. ಈ ಕಳೆ ತೆಗೆಯಲು ಸಮಗ್ರ ಯೋಜನೆ ರೂಪಿಸಿ, ಪರಿಹಾರ ಕಂಡು ಹಿಡಿಯಿರಿ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ರೈತರ ಅಹವಾಲು ಆಲಿಸಿದ ಸಚಿವರು, ಕಾನೂನಿನ ಚೌಕಟ್ಟಿನೊಳಗೆ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.
Chamarajanagar
ಅರಣ್ಯವಾಸಿ ಕಾಡಂಚಿನ ಜನರಿಗೆ ಮೂಲ ಸೌಲಭ್ಯ ಒದಗಿಸಿ : ಈಶ್ವರ ಬಿ.ಖಂಡ್ರೆ
ಚಾಮರಾಜನಗರ,ಜ.19: ಅರಣ್ಯವಾಸಿ ಕಾಡಂಚಿನ ಜನರಿಗೆ ನಿಯಮಾನುಸಾರವಾಗಿ ಎಲ್ಲಾ ಅಗತ್ಯ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು.
ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕರ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬುಡಕಟ್ಟು ಜನಾಂಗದ ಮುಖಂಡರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಸಚಿವರು ಮಾತನಾಡಿದರು.
ಸಭೆಯ ಆರಂಭದಲ್ಲಿ ಬುಡಕಟ್ಟು, ಅರಣ್ಯವಾಸಿಗಳ ಮುಖಂಡರು, ಪ್ರತಿನಿಧಿಗಳು ಮಾತನಾಡಿ ಅರಣ್ಯ ಪ್ರದೇಶದಲ್ಲಿ ಕಿರು ಅರಣ್ಯ ಉತ್ಪನ್ನಗಳ ಸಂಗ್ರಹಣೆಗೆ ಅವಕಾಶ ಮಾಡಿಕೊಡಬೇಕು. ಅರಣ್ಯ ಹಕ್ಕು ಕಾಯ್ದೆಯಡಿ ಸಮುದಾಯದ ಹಕ್ಕು ನೀಡಬೇಕು. ಬಿಳಿಗಿರಿರಂಗನ ಬೆಟ್ಟದ ಕಂದಾಯ ಭೂಮಿ ಸಂಬಂಧ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಅರಣ್ಯವಾಸಿಗಳಿಗೆ ಮನೆ, ರಸ್ತೆ, ನೀರಾವರಿ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕು. ದಿನಗೂಲಿ ನೌಕರರಿಗೆ ನಿವೃತ್ತಿ ನಂತರವು ಸೌಲಭ್ಯಗಳನ್ನು ನೀಡಬೇಕು ಎಂಬುದು ಸೇರಿದಂತೆ ಹಲವು ಸಮಸ್ಯೆಗಳನ್ನು ನಿವೇದಿಸಿ ಬೇಡಿಕೆಗಳನ್ನು ಮುಂದಿಟ್ಟರು.
ಅಹವಾಲುಗಳನ್ನು ಆಲಿಸಿ ಮಾತನಾಡಿದ ಅರಣ್ಯ ಸಚಿವರು ಅರಣ್ಯ ಪ್ರದೇಶದಲ್ಲಿರುವ ಜನತೆಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಇನ್ನಿತರ ಮೂಲ ಸೌಕರ್ಯಗಳನ್ನು ನಿಯಮಾನುಸಾರವಾಗಿ ಒದಗಿಸಬೇಕು. ಮುಖ್ಯಮಂತ್ರಿಗಳು ಬುಡಕಟ್ಟು ಸಮುದಾಯಕ್ಕೆ ನೀಡಬೇಕಿರುವ ಸೌಲಭ್ಯಗಳ ಬಗ್ಗೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಹೀಗಾಗಿ ಅವಶ್ಯವಿರುವ ಸೌಲಭ್ಯಗಳನ್ನು ಅಧಿಕಾರಿಗಳು ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದರು.
ಆನೆ ದಾಳಿಯಂತಹ ಪ್ರಕರಣಗಳಲ್ಲಿ ಪರಿಹಾರ ನೀಡಲಾಗುತ್ತಿದೆ. ಗಾಯಗೊಂಡವರಿಗೆ ಆಸ್ಪತ್ರೆಗಳಲ್ಲಿ ತಗಲುವ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ವೆಚ್ಚವನ್ನು ನೀಡಲಾಗುತ್ತಿದೆ. ಅಂಗವಿಕಲತೆ ಉಂಟಾದಲ್ಲಿ ಪರಿಹಾರ ಕೊಡಲಾಗುತ್ತಿದೆ. ಕಾಡುಪ್ರಾಣಿಗಳ ದಾಳಿಗೊಳಗಾದವರಿಗೆ ಇಲಾಖೆ ನೆರವು ನೀಡುತ್ತಿದೆ ಎಂದು ಸಚಿವರು ತಿಳಿಸಿದರು.
ಬುಡಕಟ್ಟು ಸಮುದಾಯ, ಅರಣ್ಯ ವಾಸಿಗಳ ಬಗ್ಗೆ ಕಳಕಳಿ ಇದ್ದು, ಅಗತ್ಯವಿರುವ ಸೌಲಭ್ಯವನ್ನು ಸರ್ಕಾರ ನೀಡಲಿದೆ. ಈ ಭಾಗದ ಅರಣ್ಯ ಜನರ ಸಮಸ್ಯೆ, ಬೇಡಿಕೆಗಳ ಬಗ್ಗೆ ವಿಶೇಷವಾಗಿ ಗಮನ ಹರಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿದ್ದೇವೆ. ಅರಣ್ಯ ಹಕ್ಕು, ಪುನರ್ವಸತಿಯಂತಹ ಪ್ರಮುಖ ವಿಷಯಗಳಿಗೆ ಆಧ್ಯತೆ ನೀಡಲಿದ್ದೇವೆ ಎಂದು ತಿಳಿಸಿದರು.
ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಕಿರು ಅರಣ್ಯ ಉತ್ಪನ್ನಗಳ ಸಂಗ್ರಹಣೆಗಾಗಿ ಬುಡಕಟ್ಟು ಜನರಿಗೆ ಅವಕಾಶ ಮಾಡಿಕೊಡಬೇಕು. ಪರಿಹಾರ ವಿತರಣಾ ಕಾರ್ಯ ತ್ವರಿತವಾಗಿ ಆಗಬೇಕು. ಗಂಗಾ ಕಲ್ಯಾಣ ಸೇರಿದಂತೆ ಇನ್ನಿತರ ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ಅಡಚಣೆಯಾಗಬಾರದು ಎಂದರು.
ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ ಬಿಳಿಗಿರಿರಂಗನ ಬೆಟ್ಟದಲ್ಲಿ ಮೂಲ ನಿವಾಸಿಗಳಿಗೆ ಭೂಮಿಯ ಸಂಬಂಧ ಇರುವ ಸಮಸ್ಯೆಗಳು ಪರಿಹಾರವಾಗಬೇಕು. ಸಾಗುವಳಿ ಕುರಿತು ಇರುವ ಹಲವು ಗೊಂದಲಗಳು ಇತ್ಯರ್ಥವಾಗಬೇಕು. ಭೂಮಿ ಸಂಬಂಧ ಭೌತಿಕ ಸಮೀಕ್ಷೆ ಕಾರ್ಯ ನಡೆಯಬೇಕು ಎಂದರು.
ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಮಾತನಾಡಿ ಅರಣ್ಯದಂಚಿನ ಭಾಗಗಗಳಲ್ಲಿ ಆನೆ ದಾಳಿ ತಡೆಯಲು ರೈಲ್ವೆ ಬ್ಯಾರಿಕೇಡ್‍ಗಳನ್ನು ವೈಜ್ಞಾನಿಕವಾಗಿ ಹಾಕಬೇಕು. ಕಾಡಂಚಿನ ಜನರು ಮತ್ತು ಫಸಲುಗಳಿಗೆ ಕಾಡುಪ್ರಾಣಿಗಳಿಂದ ಆಗುವ ತೊಂದರೆಯನ್ನು ತಪ್ಪಿಸಲು ಶಾಶ್ವತ ಕ್ರಮಗಳು ಆಗಬೇಕು ಎಂದರು.
ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ ಅರಣ್ಯದೊಳಗಿನ ಜನರಿಗೆ ವಸತಿ ಸೌಲಭ್ಯ ಸಮರ್ಪಕವಾಗಿ ಆಗಬೇಕು. ಇನ್ನಿತರ ಮೂಲ ಸೌಕರ್ಯಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕಿದೆ. ಸಮಸ್ಯೆಗಳಿಗೆ ತುರ್ತಾಗಿ ಸ್ಪಂದನೆ ಸಿಗಬೇಕಿದೆ ಎಂದು ಮನವಿ ಮಾಡಿದರು.
ಬುಡಕಟ್ಟು ಸಮುದಾಯದ ಸಭೆಯ ಬಳಿಕ ಸಚಿವರು ಜಿಲ್ಲೆಯ ಹಿರಿಯ ಅಧಿಕಾರಿಗಳು, ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಗೆ ಮೊದಲು ನೂತನವಾಗಿ ನಿರ್ಮಿಸಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ನಿರ್ದೇಶಕರ ಆಡಳಿತ ಕಚೇರಿಯ ನೂತನ ಕಟ್ಟಡವನ್ನು ಸಚಿವರಾದ ಈಶ್ವರ ಖಂಡ್ರೆ ಅವರು ಉದ್ಘಾಟಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ್ ಕೆ. ಮಾಲ್ಕಡೆ, ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್‍ಕುಮಾರ್, ಸುರೇಶ್, ಸತೀಶ್, ಇನ್ನಿತರರು ಉಪಸ್ಥಿತರಿದ್ದರು.
-
Mysore23 hours ago
ಮೈಸೂರು ಮಹಾರಾಜರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ
-
Sports22 hours ago
ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟ ಸುರೇಶ್ ರೈನಾ
-
Sports21 hours ago
Kho Kho world cup 2025: ಭಾರತ ಮಹಿಳಾ ಹಾಗೂ ಪುರುಷ ತಂಡಗಳೇ ಚಾಂಪಿಯನ್
-
National - International21 hours ago
ಮಹಾ ಕುಂಭಮೇಳ ದರ್ಶನಕ್ಕಾಗಿ ಹುಬ್ಬಳ್ಳಿಯಿಂದ ವಿಶೇಷ ರೈಲು ವ್ಯವಸ್ಥೆ : ಈ ದಿನ ಮಾತ್ರ!
-
Hassan8 hours ago
ಅನುಮತಿ ಪಡೆಯೇ ಚಿತ್ರೀಕರಣ ಉಪಕರಣ ತಂದಿಟ್ಟಿದ್ದಕ್ಕೆ ದಂಡ ವಿಧಿಸಿಧ್ದ ಅರಣ್ಯ ಇಲಾಖೆ
-
Hassan8 hours ago
ಹಾಸನ : ಆನ್ಲೈನ್ ಗೇಮ್ಗೆ ಯುವಕ ಬಲಿ
-
Hassan2 hours ago
ಸುತ್ತೂರು ಮಠದಿಂದ 2 ಲಕ್ಷಕ್ಕೂ ಅಧಿಕ ಉಪಕರಣ ಸರಕಾರಿ ವಾಣಿವಿಲಾಸ ಶಾಲೆಗೆ ಕೊಡುಗೆ
-
Mysore23 hours ago
ಪ್ಲಾಸ್ಟಿಕ್ ತ್ಯಾಜ್ಯ ಕಾನನ ಪ್ರವೇಶಿಸದಂತೆ 2 ಹಂತದ ತಪಾಸಣೆ: ಈಶ್ವರ ಖಂಡ್ರೆ