National - International
ನ್ಯೂಯಾರ್ಕ್‌ನಲ್ಲಿ ಭಾರೀ ಹಿಮಪಾತ: 1 ಸಾವಿರಕ್ಕೂ ಹೆಚ್ಚು ವಿಮಾನ ಸೇವೆ ರದ್ದು, 4 ಫ್ಲೈಟ್ಸ್ ವಿಳಂಬ
ವಾಷಿಂಗ್ಟನ್: ಅಮೆರಿಕದಲ್ಲಿ ಹಿಮಪಾತ ಜೋರಾಗುತ್ತಿದ್ದು, ಭಾರೀ ಹಿಮಗಾಳಿಯಿಂದಾಗಿ ತಾಪಮಾನ ಕಡಿಮೆಯಾಗಿದೆ. ನ್ಯೂಯಾರ್ಕ್‌ನಲ್ಲಿ ಎಲ್ಲವೂ ಮಂಜಿನಗಡ್ಡೆಗಳಾಗುತ್ತಿವೆ. ಜನಜೀವನ ಅಸ್ತವ್ಯಸ್ತವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇದರ ಮೊದಲ ಲಕ್ಷಣವಾಗಿ 1 ಸಾವಿರಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತವಾಗಿದೆ.
ಕುಡಿಯುವ ನೀರು ಸಹ ಗಟ್ಟಿಯಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. 1,000 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದ್ದು, 4,000ಕ್ಕೂ ವಿಮಾನಗಳ ಹಾರಾಟ ವಿಳಂಬವಾಗಿದೆ. ಇದರಿಂದ ಕ್ರಿಸ್ಮಸ್ ರಜೆ ಕಳೆಯಲು ತೆರಳಿದ್ದ ಪ್ರವಾಸಿಗರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನೂ ನ್ಯೂಯಾರ್ಕ್‌ನಲ್ಲಿ ಹಿಮಗಾಳಿ ಮುಂದುವರಿದಿದ್ದು, ರಾತ್ರಿಯಿಡೀ 10 ಇಂಚುಗಳಷ್ಟು ಹಿಮ ಬೀಳುವ ನಿರೀಕ್ಷೆಯಿದೆ. ತಾಪಮಾನ ಶೂನ್ಯಕಿಂತ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ.
National - International
ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್ ಸಿದ್ಧತೆ!
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತದ ಮೇಲೆ 50% (25% ಹೆಚ್ಚುವರಿ) ಸುಂಕ ವಿಧಿಸಿದಾಗಿನಿಂದ ರಷ್ಯಾದಿಂದ ತೈಲ ಖರೀದಿಸುವುದು ಗಮನಾರ್ಹವಾಗಿ ಕಡಿಮೆಯಾಗಿದೆ. ಪ್ರಸ್ತುತ 50% ಸುಂಕ ಇದ್ದು, ಇದು ಶಾಶ್ವತವಾಗಿ ಇರೋದಿಲ್ಲ ಎಂದು ಸುಂಕ ಕಡಿತಗೊಳಿಸುವ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಭಾರತವು ರಷ್ಯಾದ ತೈಲ ಖರೀದಿ ಮಾಡುವ ಮೂಲಕ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಫಂಡಿಂಗ್ ಮಾಡುತ್ತಿದೆ ಅನ್ನೋದು ಟ್ರಂಪ್ ಬಲವಾದ ಆರೋಪ ಇದೇ ಕಾರಣಕ್ಕೆ ಭಾರತದ ಮೇಲೆ ಸುಂಕ ಏರಿಸಿದ್ದಾರೆ. ಟ್ರಂಪ್ ಅಧಿಕಾರಕ್ಕೆ ಏರಿದ ಆರಂಭದಲ್ಲಿ ಭಾರತದಿಂದ ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ 25% ಸುಂಕ ವಿಧಿಸಿದ್ದರು. ಬಳಿಕ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ಪ್ರತಿಯಾಗಿ 25% ದಂಡದ ರೂಪದಲ್ಲಿ ಸುಂಕ ಹೇರಿದ್ದಾರೆ. ಈ ನಿರ್ಧಾರದಿಂದ ಭಾರತದ ಕೆಲವು ವಸ್ತುಗಳಿಗೆ ಈಗ 50% ಸುಂಕ ಹೇರಲಾಗಿದೆ.

ಯುಎಸ್, G7 ಮತ್ತು ಯುರೋಪಿಯನ್ ದೇಶಗಳು ರಷ್ಯಾದ ತೈಲಕ್ಕೆ ಬೆಲೆ ಮಿತಿ ವ್ಯವಸ್ಥೆ ಜಾರಿಗೆ ತಂದಿವೆ. ಈ ಮಿತಿ ಜನವರಿ 2026 ರ ವರೆಗೆ ಬ್ಯಾರೆಲ್‌ಗೆ ಸರಿಸುಮಾರು 47.60 ಡಾಲರ್ (4,360 ರೂ.) ಆಗಿದ್ದು, ಫೆಬ್ರವರಿ 1 ರಿಂದ 44.10 ಡಾಲರ್ (4,039 ರೂ.) ಗೆ ಇಳಿಕೆಯಾಗಲಿದೆ. ಒಂದು ವೇಳೆ ಮಿತಿಗೊಳಿಸಿದ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ರೆ, ವಿಮೆ, ಸಾಗಣೆ ಮತ್ತು ಹಣಕಾಸು ಮುಂತಾದ ಸೇವೆಗಳನ್ನು ಒದಗಿಸಲಾಗುವುದಿಲ್ಲ ಎಂದು ದೇಶಗಳು ಎಚ್ಚರಿಕೆ ನೀಡಿವೆ.
National - International
ಭಾರತದಲ್ಲಿ ಪಂದ್ಯವಾಡಲು ಬಾಂಗ್ಲಾ ನಿರಾಕರಣೆ: ICCಯಿಂದ ಬಿಗ್‌ಶಾಕ್
ದುಬೈ: ಭಾರತದ ನೆಲದಲ್ಲಿ ಟಿ-20 ವಿಶ್ವಕಪ್ ಪಂದ್ಯ ಆಡಲು ಒಪ್ಪದ ಬಾಂಗ್ಲಾದೇಶಕ್ಕೆ ಐಸಿಸಿ ಬಿಗ್‌ಶಾಕ್ ನೀಡಿದ್ದು, ಬಾಂಗ್ಲಾ ಬದಲು ಮತ್ತೊಂದು ತಂಡಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಮತದಾನವಾಗಿದೆ.

ಐಸಿಸಿ ಬೋರ್ಡ್‌ನ ಒಟ್ಟು 16 ಸದಸ್ಯ ದೇಶಗಳ ಪೈಕಿ ಬಾಂಗ್ಲಾ ವಿರುದ್ಧ 14 ಮತ್ತು ಪರ 2 ಮತಗಳು ಬಿದ್ದಿವೆ. ಅದರಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಮಾತ್ರ ಬಾಂಗ್ಲಾ ಪರವಾಗಿ ಮತವನ್ನು ಹಾಕಿದೆ. ಅಂತಿಮ ತೀರ್ಮಾನ ತಿಳಿಸಲು ಇಂದೇ ಬಾಂಗ್ಲಾಗೆ ಡೆಡ್‌ಲೈನ್ ವಿಧಿಸಲಾಗಿತ್ತು. ಆದರೆ ಈಗ 24 ಗಂಟೆಯ ಗಡುವು ನೀಡಲಾಗಿದೆ. ನಾಳೆಯೊಳಗೆ ತಮ್ಮ ನಿರ್ಧಾರ ತಿಳಿಸದೇ ಇದ್ದರೆ ಬಾಂಗ್ಲಾದ ಬದಲು ಸ್ಕಾಟ್ಲೆಂಡ್ ತಂಡ ಭಾರತಕ್ಕೆ ಬರಲಿದೆ.
ಬಾಂಗ್ಲಾದೇಶ ಸುರಕ್ಷತೆ ಹಾಗೂ ಭದ್ರತಾ ಕಾರಣದಿಂದಾಗಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿದ್ದನ್ನು ಬೆಂಬಲಿಸಿ ಪಿಸಿಬಿ ಮಂಗಳವಾರ ತಡರಾತ್ರಿ ಐಸಿಸಿಗೆ ಪತ್ರ ಬರೆದಿತ್ತು. ಈ ಪತ್ರದಲ್ಲಿ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಶ್ರೀಲಂಕಾದಲ್ಲಿ ಆಯೋಜಿಸಲು ಸಾಧ್ಯವಾಗದೇ ಇದ್ದರೆ ಬಾಂಗ್ಲಾದೇಶದ ಪಂದ್ಯಗಳನ್ನು ಪಾಕಿಸ್ಥಾನದಲ್ಲಿ ಆಡಿಸಲು ನಾವು ಸಿದ್ಧ ಇದ್ದೇವೆ ಎಂದು ಬರೆದಿದ್ದರು.

ಇನ್ನೂ ಭಾರತ ಮತ್ತು ಶ್ರೀಲಂಕಾ ಫೆ. 7 ರಿಂದ ಮಾ. 8 ರವರೆಗೆ ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. ಕಳೆದ ವರ್ಷ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಳಿಕ ಜಾರಿಯಲ್ಲಿರುವ ಬಿಸಿಸಿಐ ಹಾಗೂ ಪಿಸಿಬಿ ನಡುವಿನ ಹೈಬ್ರಿಡ್ ಮಾದರಿ ಒಪ್ಪಂದದ ಅಡಿಯಲ್ಲಿ ಪಾಕಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ.
National
ವಿರಾಟ್ ಕೊಹ್ಲಿ ಈಗ ವಿಶ್ವದ ನಂ.1 ಬ್ಯಾಟ್ಸ್‌ಮನ್
ಮುಂಬೈ: ರನ್ ಮಿಷಿನ್ ವಿರಾಟ್ ಕೊಹ್ಲಿ ತಮ್ಮ 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.
ಇಂದು ಬಿಡುಗಡೆಯಾದ ನೂತನ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ 785 ಅಂಕ ಪಡೆಯುವ ಮೂಲಕ ಅಗ್ರಸ್ಥಾನಕ್ಕೇರಿದ್ದಾರೆ.

2013ರಲ್ಲಿ ಮೊಟ್ಟ ಮೊದಲ ಬಾರಿಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದಿದ್ದ ಕೊಹ್ಲಿ, 2018ರಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಪುನಃ ಅಗ್ರಸ್ಥಾನಕ್ಕೆ ಜಿಗಿದಿದ್ದರು. ಆ ನಂತರ ಟಾಪ್ 11 ರಲ್ಲಿ ಅನೇಕ ಸ್ಥಾನಗಳಲ್ಲಿದ್ದ ಕೊಹ್ಲಿ 5 ವರ್ಷಗಳ ಬಳಿಕ ಮತ್ತೆ ನಂ.1 ಪಟ್ಟಕ್ಕೇರಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಮೊದಲ ಎರಡೂ ಪಂದ್ಯಗಳಲ್ಲಿ ಕೊಹ್ಲಿ ಡಕೌಟ್ ಆಗಿದ್ದರು. ಮೂರನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ಇನ್ನೂ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 2 ಶತಕ, 1 ಅರ್ಧಶತಕ ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಕಿವೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 91 ಎಸೆತಗಳಲ್ಲಿ 93 ರನ್ ಗಳಿಸಿದ್ದರು. ಈ ಮೂಲಕ 785 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಮೊದಲು ಐದು ಸ್ಥಾನಗಳಲ್ಲಿರುವ ಆಟಗಾರರು ಯಾರು?
ಹೊಸದಾಗಿ ಬಿಡುಗಡೆಯಾದ ಐಸಿಸಿ ಏಕದಿನ ರ‍್ಯಾಂಕಿಗ್‌ನಲ್ಲಿ 785 ಅಂಕಗಳೊಂದಿಗೆ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ಡೇರಿಲ್ ಮಿಚೆಲ್ 784, ರೋಹಿತ್ ಶರ್ಮಾ 775, ಇಬ್ರಾಹಿಂ ಜದ್ರಾನ್ 764, ಶುಭಮನ್ ಗಿಲ್ 725 ಅಂಕ ಅಂಕಗಳೊಂದಿಗೆ ಮೊದಲ 5 ಸ್ಥಾನಗಳಲ್ಲಿದ್ದಾರೆ.
-
Manglore4 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Cinema24 hours ago17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ
-
Hassan5 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan4 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
National6 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State7 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Mandya9 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Hassan3 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
