Connect with us

Mysore

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಏಕವಚನ ಬಳಕೆ: ಸಿಎಂ ವಿರುದ್ಧ ಹೇಮಾ ನಂದೀಶ್ ಅಸಮಾಧಾನ

Published

on

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಏಕವಚನದಿಂದ ಹಾಗೂ ಅಗೌರವದಿಂದ ಸಂಭೋದನೆ ಮಾಡಿರುವುದು ರಾಜ್ಯ ಕಾಂಗ್ರೆಸ್‌ನ ಮಹಿಳಾ ವಿರೋಧಿ ಸಂಸ್ಕೃತಿಗೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ನಾಯಕಿ ಹೇಮಾ ನಂದೀಶ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿದ್ದರಾಮಯ್ಯ ಅವರ ಇತ್ತೀಚೆಗೆ ಹೇಳಿಕೆಯೊಂದರಲ್ಲಿ ಮಿಸ್ಟರ್, ಮಿಸೆಸ್ ಎಂತೋಳೋ ಅವಳು ನಿರ್ಮಲಾ ಸೀತಾರಾಮನ್ ಎಂದು ಸಂಭೋದಿಸುವ ಮೂಲಕ ಮಹಿಳೆಯರಿಗೆ ಅಗೌರವ ತೋರಿದ್ದಾರೆ. ಮಹಿಳೆ ಅಥವಾ ಯಾರೇ ಆಗಲಿ ಮಾತನಾಡುವಾಗ ಗೌರವಯುತವಾಗಿ ಮಾತನಾಡಬೇಕು ಎಂಬ ಪರಿಜ್ಞಾನ ಸಿಎಂ ಸ್ಥಾನದಲ್ಲಿ ಇರುವವರಿಗೆ ಇಲ್ಲದಿರುವುದು ಅತ್ಯಂತ ದುರಾದೃಷ್ಟಕರ ಮತ್ತು ದುರಂಹಕಾರವನ್ನು ಎತ್ತಿ ತೋರಿಸುತ್ತದೆ.

ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಬಗ್ಗೆ ಮಾತನಾಡುವಾಗಲೂ ಇದೇ ರೀತಿ ಏಕವಚನದಲ್ಲಿ ಎಂತವಳೊ ಅವಳು ಎಂದು ಸಂಭೋದಿಸುವ ಧೈರ್ಯ, ತಾಕತ್ತು ಸಿದ್ದರಾಮಯ್ಯನವರಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ತಮ್ಮ ಪಕ್ಷದ ಮಹಿಳಾ ಹೈಕಮಾಂಡ್ ಮುಂದೆ ಕೈಕಟ್ಟಿ ಮಾತನಾಡುವ ಸಿದ್ದರಾಮಯ್ಯ ಅವರು ಬೇರೆ ಮಹಿಳೆಯರ ಬಗ್ಗೆ ಮಾತನಾಡುವಾಗ ಏಕವಚನದಲ್ಲಿ ಮಾತನಾಡುವುದು ಮಹಿಳೆಯರಿಗೆ ಮಾಡುವ ಅಪಮಾನ ಮತ್ತು ಅತ್ಯಂತ ಖಂಡನೀಯ ವಿಚಾರ.

ಮಹಿಳೆಯರನ್ನು ತುಚ್ಛವಾಗಿ ಕಾಣುವ ಕಾಂಗ್ರೇಸ್ ಪಕ್ಷದ ಈ ಮನಸ್ಥಿತಿಯನ್ನು ಕರ್ನಾಟಕದ ಸ್ವಾಭಿಮಾನಿ. ಕ್ಷಮಿಸುವುದಿಲ್ಲ. ಮಹಿಳೆಯರು ಎಂದಿಗೂ ಹೆಣ್ಣುಮಕ್ಕಳ ವಿಷಯದಲ್ಲಿ ಪದೇ ಪದೇ ಭಾರತೀಯ ಜನತಾ ಪಕ್ಷಕ್ಕೆ ನಿಮ್ಮದು ಮನುವಾದದ ಸಂಸ್ಕೃತಿ ಎಂದು ಆಧಾರ ರಹಿತವಾಗಿ ಮಾತನಾಡುವ ಸಿದ್ದರಾಮಯ್ಯ ಅವರದ್ದು ಯಾವ ಸಂಸ್ಕೃತಿ ಎಂದು ಪ್ರಶ್ನಿಸಿದ್ದಾರೆ.

ಇದು ಮನುವಾದನಾ, ಸಿದ್ದರಾಮಯ್ಯವಾದನಾ ಅಥವಾ ರಾಹುಲ್ ಗಾಂಧಿ ವಾದನಾ, ಸಿಎಂ ಪದೇ ಪದೇ ಈ ತರದ ಮಹಿಳಾ ಅವಮಾನಕರ ಹೇಳಿಕೆಗಳನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತೇವೆ. ಸಿಎಂ ತತ್‌ಕ್ಷಣವೇ ಕ್ಷಮೆ ಕೇಳಬೇಕೆಂದು ಅವರು ಆಗ್ರಹಿಸಿದ್ದಾರೆ.

Continue Reading

Mysore

ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲೂ ಬಿಜೆಪಿ ಪ್ರತಿಭಟನೆ

Published

on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ವತಿಯಿಂದ ಆರೋಪಿಸಿ ಮೈಸೂರಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.


ಕಾಡಾ ಕಚೇರಿ ಆವರಣದಲ್ಲಿ ಜಮಾಯಿಸಿದ ಮುಖಂಡರು ಹಾಗೂ ಕಾರ್ಯಕರ್ತರು, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಮಾಜಿ ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಮಾಜಿ ಮೇಯರ್ ಶಿವಕುಮಾರ್, ಮುಖಂಡರಾದ ಮಹದೇವಯ್ಯ, ಸದಾನಂದ್, ಮಿರ್ಲೆ ಶ್ರೀನಿವಾಸ್‌ಗೌಡ, ಮಹೇಶ್ ಮುಂತಾದವರಿದ್ದರು.

 

Continue Reading

Mysore

ಡ್ರಗ್ಸ್ ಮುಕ್ತ ಕರ್ನಾಟಕ- ಜನ ಜಾಗೃತಿ ಆಂದೋಲನಕ್ಕೆ ಚಾಲನೆ

Published

on

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಪ್ರಾಂತ ಸಮಿತಿ, ಪರಿವರ್ತನಾ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಡ್ರಗ್ಸ್ ಮುಕ್ತ ಕರ್ನಾಟಕ- ಜನ ಜಾಗೃತಿ ಆಂದೋಲನ ರಥಯಾತ್ರೆಗೆ ಮಂಗಳವಾರ ಚಾಲನೆ ನೀಡಲಾಯಿತು.

ಜೆ.ಕೆ.ಮೈದಾನದ ಅಮೃತ ಮಹೋತ್ಸವ ಭವನದಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ಸ್ತಬ್ಧಚಿತ್ರಕ್ಕೆ ಹಸಿರು ನಿಶಾನೆ ತೋರಿಸಲಾಯಿತು.

ಸಭಾ ಕಾರ್ಯಕ್ರಮದ ಸಾನಿಧ್ಯವನ್ನು ಬೆಂಗಳೂರಿನ ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ, ಲೆಫ್ಟಿನೆಂಟ್ ಕರ್ನಲ್ ವೈ.ಕೆ.ಸಂಜೀವ್, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ವಿವೇಕವಂಶಿ, ಕನ್ನಿಕಾಪರಮೇಶ್ವರಿ ದೇವಾಲಯದ ಕಾರ್ಯದರ್ಶಿಯೂ ಆದ ಉದ್ಯಮಿ ಎಸ್.ಕೆ.ದಿನೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಅವಿನಾಶ್ ನಿರೂಪಿಸಿದರೆ, ಜಯಸಿಂಹ ಸ್ವಾಗತಿಸಿದರು.‌

ನಗರದ ಹರಿವಿದ್ಯಾಲಯ, ಜಿಎಸ್‌ಎಸ್ಎಸ್ ಶಾಲೆ, ಸದ್ವಿದ್ಯಾ ಶಾಲೆ, ಮೈಸೂರು ಮೆಡಿಕಲ್ ಕಾಲೇಜು, ಗೋಪಾಲಸ್ವಾಮಿ ಶಿಶು ವಿಹಾರ ಶಿಕ್ಷಣ ಸಂಸ್ಥೆ, ಕಾವೇರಿ ಕಾಲೇಜು ಮುಂತಾದ ಶಾಲಾ- ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Continue Reading

Mysore

ಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ

Published

on

ಮೈಸೂರು: ​2025 ರ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ದಸರಾ ವಸ್ತು ಪ್ರದರ್ಶನದ ಉಪಸಮಿತಿಗಳಲ್ಲಿ ಒಂದಾದ ಮಹಿಳಾ ಉದ್ಯಮಿ ಉಪಸಮಿತಿ-2025 ಕ್ಕೆ ಎಸ್. ರಂಗನಾಥ ಅವರು ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.

​ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್. ರಂಗನಾಥ ಅವರು ಪ್ರಸ್ತುತ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Continue Reading

Trending

error: Content is protected !!