Connect with us

Kodagu

ಕೊಡವ ಹೆರಿಟೇಜ್‍ಗೆ ಸಚಿವರ ಭೇಟಿ

Published

on

ಜನಮಿತ್ರ ಮಡಿಕೇರಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಅವರು ಮಂಗಳವಾರ ‘ಕೊಡವ ಹೆರಿಟೇಜ್’ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಈಗಾಗಲೇ 3 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ಉಳಿದ ಕಾಮಗಾರಿ ಆಗದಿರುವ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈಗ ಆಗಿರುವ ಕಾಮಗಾರಿಗಳು ಮತ್ತು ಆಗಬೇಕಿರುವ ಕಾಮಗಾರಿ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಸೂಚಿಸಿದರು.
ಕೊಡಗು ಜಿಲ್ಲೆಯಲ್ಲಿ ಹಲವು ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಕೆಲವು ಯೋಜನೆಗಳಿಗೆ ಹಣ ಇದ್ದರೂ ಸಹ ಪೂರ್ಣಗೊಳಿಸುತ್ತಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ ಇತರರು ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Kodagu

ಮಹಾತ್ಮ ಗಾಂಧಿ ನರೇಗಾ ಬಚಾವೋ ಸಂಗ್ರಮ

Published

on

ಗೋಣಿಕೊಪ್ಪ: ಮಹಾತ್ಮ ಗಾಂಧಿ ನರೇಗಾ ಬಚಾವೋ ಸಂಗ್ರಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಐದು ಕಿಲೋಮೀಟರ್ ಕಾಲ್ನಡಿಗೆ ಜಾಥ ನಡೆಸಿದರು.

ಗೋಣಿಕೊಪ್ಪ ಉಮಾಮಹೇಶ್ವರಿ ದೇವಸ್ಥಾನದಿಂದ ಪೊನ್ನಂಪೇಟೆ ಗಾಂಧಿ ಪ್ರತಿಮೆವರೆಗೆ ಪಾದಯಾತ್ರೆ ಸಾಗಿ ಬಂದಿತ್ತು.
ಸಾವಿರಾರು ಕಾರ್ಯಕರ್ತರು ಮನರೇಗಾ ಯೋಜನೆ ಹೆಸರು ಬದಲಾವಣೆಯ ಕೇಂದ್ರ ಸರ್ಕಾರದ ನಡೆಯ ಪ್ರಶ್ನಿಸಿ, ಘೋಷಣೆಗಳು ಹಾಕಿ ವಿರೋಧಿಸಿದರು.

ಪಾದಯಾತ್ರೆಯಲ್ಲಿ ಭಾಗವಹಿಸಿದ ಕಾರ್ಯಕರ್ತರಿಗೆ ರಸ್ತೆಯ ಉದ್ದಕ್ಕೂ ಕುಡಿಯುವ ನೀರು, ಮಜ್ಜಿಗೆ, ತಂಪುಪಾನೀಯ, ಪಾಯಸ, ವಡೆ ವಿತರಿಸಲಾಯಿತು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್ ಪೊನ್ನಣ್ಣ ಅವರ ಮುಂದಾಳತ್ವದಲ್ಲಿ ಕಾಲ್ನಡಿಗೆ ಜಾಥ ಸಾಗಿ ಬಂದಿತ್ತು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೆ.ಪಿ.ಸಿ.ಸಿ ವಕ್ತಾರ ಎಂ. ಲಕ್ಷ್ಮಣ್, ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಕಾರ್ಯದರ್ಶಿ, ಶಾಂತೆಯಡ ವೀಣಾ ಅಚ್ಚಯ್ಯ, ಪ್ರಮುಖರುಗಳಾದ ಆಪಟ್ಟೀರ ಟಾಟು ಮೊಣ್ಣಪ್ಪ, ಕುಲ್ಲಚಂಡ ಪ್ರಮೋದ್ ಗಣಪತಿ, ಕೊಲ್ಲೀರ ಬೋಪಣ್ಣ, ಚಂದ್ರಕಲಾ, ಮಿದೇರಿರ ನವೀನ್, ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಗಫೂರ್ ಇದ್ದರು.

ನಂತರ ಪೊನ್ನಂಪೇಟೆ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಾಥಕ್ಕೆ ಸಮಾಪ್ತಿ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್ ಪೊನ್ನಣ್ಣ, ಭಾರತ ದೇಶವನ್ನು ಪ್ರಪಂಚದಲ್ಲೇ ಗುರುತಿಸುವಂತೆ ಮಾಡಿದ ಮಹಾತ್ಮನ ಹೆಸರನ್ನ ಕಾಯ್ದೆಯಿಂದ ಕಿತ್ತೊಗೆಯುವ ಕಾರಣಕ್ಕೆ ಸ್ಪಷ್ಟತೆಯನ್ನು ಕೊಡಿ ಎಂದು ಕಾನೂನಾತ್ಮಕವಾದ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳಿದರೆ ಯಾವುದೇ ಉತ್ತರ ನೀಡುತ್ತಿಲ್ಲ. ಇದಕ್ಕೆ ವಿರೋಧವಾಗಿ ಭಾವನಾತ್ಮಕವಾದ, ದ್ವೇಷ ಆಧಾರಿತವಾದ, ಪ್ರಜಾತಂಕಕಾರಿಯಾದ ರಾಜಕಾರಣವನ್ನ ಮಾಡುತ್ತಿದ್ದಾರೆ. ನರೇಗಾ ಕಾನೂನು ತಿದ್ದುಪಡಿಯಿಂದ ರೈತರ ಗ್ರಾಮೀಣ ಜನರ ದಲಿತರ ಕೂಲಿ ಕಾರ್ಮಿಕರ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕುವ ಪ್ರಯತ್ನ ಸಾಗುತ್ತಿದೆ ಎಂದು ದೂರಿದರು.


ಭಾರತದ ಸ್ವಾತಂತ್ರ್ಯಕ್ಕಾಗಿ 17 ವರ್ಷಗಳ ಕಾಲ ಕಾರಗೃಹ ಶಿಕ್ಷೆಯನ್ನು ಅನುಭವಿಸಿದ ಗಾಂಧೀಜಿ ಹೆಸರನ್ನು ಕೇಂದ್ರ ಸರ್ಕಾರ ಮರೆತು ಹೋಗುತ್ತಿದೆ ಎಂಬುದೇ ವಿಪರ್ಯಾಸ. ಇಂತಹ ಬೆಳವಣಿಗೆಗೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆತಂಕಕಾರಿಯಾಗಿದೆ ಎಂದು ಹೇಳಿದರು.

ಭಾರತವನ್ನು ತಿಳಿಯಬೇಕಾದರೆ ಭಾರತದ ಗ್ರಾಮಗಳನ್ನ ನೋಡಬೇಕು ಎಂಬ ಗಾಂಧಿ ಕಲ್ಪನೆಯನ್ನು ಮುಂದಾಲೋಚನೆಯ ಮೂಲಕ 2005ರಲ್ಲಿ ಜಾರಿಗೆ ತಂದ ನರೇಗಾ ಯೋಜನೆ ಕಳೆದ 20 ವರ್ಷಗಳಿಂದ ಗ್ರಾಮೀಣ ಜನರಿಗೆ ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಇಂದು ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹೊರೆಯನ್ನು ಹಾಕಿ ಯೋಜನೆ ಅನುಷ್ಠಾನವಾಗದಂತೆ ನೋಡಿಕೊಳ್ಳುವ ಪ್ರಯತ್ನ ಸಾಗುತ್ತಿದೆ ಎಂದರು.

ಹಿಂದೆ ಕೇಂದ್ರ ಸರ್ಕಾರ ಶೇಕಡ 90ರಷ್ಟು ಮತ್ತು ರಾಜ್ಯ ಸರ್ಕಾರ 10ರಷ್ಟು ಒದಗಿಸುತ್ತಿತ್ತು. ಇದೀಗ ರಾಜ್ಯ ಸರ್ಕಾರ 40ರಷ್ಟು ಅನುದಾನ ಒದಗಿಸುವಂತೆ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದೊಂದು ಮರಣ ಶಾಸನದಂತಾಗಿದೆ ಎಂದು ಹೇಳಿದರು.


ಯಾವುದೇ ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ ಏಕಾಏಕಿ ಕಾನೂನು ಜಾರಿ ಮಾಡುವ ಮೂಲಕ ಸಂವಿಧಾನ ವಿರೋಧ ಚಟುವಟಿಕೆಯನ್ನು ಕೇಂದ್ರ ಸರ್ಕಾರ ಅನುಸರಿಸಿದೆ ಇದು ಮಹಾತ್ಮನ ತತ್ವ, ಸಿದ್ಧಾಂತ ನಡೆಗಳಿಗೆ ವಿರೋಧದ ವ್ಯವಸ್ಥೆಯಾಗಿದೆ. ಈ ವಿಚಾರವನ್ನು ತೀವ್ರವಾಗಿ ಖಂಡಿಸಲಾಗುತ್ತಿದೆ ಎಂದು ಹೇಳಿದರು.

Continue Reading

Kodagu

ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ, ಸದಸ್ಯರ ತಂಡ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

Published

on

ಮಡಿಕೇರಿ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಮತ್ತು ತಂಡದ ಸದಸ್ಯರು ನಗರದ ನ್ಯಾಯಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಮಧ್ಯಾಹ್ನದ ಉಪಾಹಾರ ಯೋಜನೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿರುವ ಎನ್‍ಆರ್‌ಸಿ ಘಟಕ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ.ದೊಡ್ಡಲಿಂಗನವರ್, ಎ.ರೋಹಿಣಿ ಪ್ರಿಯಾ, ಕೆ.ಎಸ್.ವಿಜಯಲಕ್ಷ್ಮಿ ಹಾಗೂ ಸದಸ್ಯ ಕಾರ್ಯದರ್ಶಿ ಸುಜಾತ ಡಿ ಹೊಸಮನಿ ಅವರು ಪರಿಶೀಲನಾ ಸಂದರ್ಭದಲ್ಲಿ ಇದ್ದು, ಆಹಾರ ಸುರಕ್ಷತೆ, ಪೌಷ್ಠಿಕ ಆಹಾರ ವಿತರಣೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು.


ಮೊದಲಿಗೆ ನಗರದ ಜನತಾ ಬಜಾರ್ ಸಂಖ್ಯೆ 59 ಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಮತ್ತು ತಂಡದ ಸದಸ್ಯರು ಆಹಾರ ದಾಸ್ತಾನುವಿನಲ್ಲಿ ವ್ಯತ್ಯಾಸ, ಜಾಗೃತಿ ನಾಮಫಲಕ ಪ್ರದರ್ಶನ ಹಾಗೂ ತೂಕ ನವೀಕರಣ ಪತ್ರ ಇಲ್ಲದಿರುವುದು ಸೇರಿದಂತೆ ಹಲವು ನ್ಯೂನತೆಗಳನ್ನು ಕಂಡುಬಂದಿರುವುದನ್ನು ಮನಗಂಡ ಆಹಾರ ಆರೋಗ್ಯದ ಅಧ್ಯಕ್ಷರಾದ ಕೃಷ್ಣ ಅವರು ಅಮಾನತು ಮಾಡುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಭೋದಕ ಆಸ್ಪತ್ರೆಯ ಅಡುಗೆ ಕೋಣೆಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಜಿಲ್ಲಾಸ್ಪತ್ರೆ ಎನ್‍ಆರ್‍ಸಿ ಘಟಕಕ್ಕೆ ಭೇಟಿ ನೀಡಿ ಕಡತ ನಿರ್ವಹಣೆ ಪರಿಶೀಲಿಸಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಸಮರ್ಪಕ ನಿರ್ವಹಣೆ ಮಾಡದಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.


ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಗುಣಮಟ್ಟದ ಹಾಗೂ ಪೌಷ್ಠಿಕ ಆಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ಮುಲಾಜಿಗೆ ಒಳಗಾಗಬಾರದು ಎಂದು ತಾಕೀತು ಮಾಡಿದರು.

ಸರ್ಕಾರಿ ಆಸ್ಪತ್ರೆಯನ್ನು ನಂಬಿ ಹಲವು ಬಡ ಕುಟುಂಬಗಳು ಚಿಕಿತ್ಸೆಗೆ ದಾಖಲಾಗುತ್ತಾರೆ. ಅವರಿಗೆ ಸರಿಯಾದ ಊಟೋಪಚಾರ ಮತ್ತು ವೈದ್ಯಕೀಯ ಚಿಕಿತ್ಸೆ ನೀಡುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಆಹಾರ ಆಯೋಗದ ಅಧ್ಯಕ್ಷರು ಸ್ಪಷ್ಟ ಸೂಚನೆ ನೀಡಿದರು.


ಬಳಿಕ ದಾಸವಾಳ ಬಳಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಆಹಾರ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಅಲ್ಲಿನ ಮಕ್ಕಳ ಹಾಜರಾತಿ, ತಾಯಿ ಕಾರ್ಡು ವಿತರಣೆ, ಗರ್ಭಿಣೀಯರು ಮತ್ತು ಬಾಣಂತಿಯರಿಗೆ ಪೌಷ್ಠಿಕ ಆಹಾರ ಪೂರೈಕೆ, ಮೊಟ್ಟೆ, ಕಾರದಪುಡಿ, ಹೆಸರು ಕಾಳು, ಸಕ್ಕರೆ, ಅಕ್ಕಿ, ಗೋಧಿ ವಿತರಣೆ ಬಗ್ಗೆ ಸಂಬಂಧಪಟ್ಟವರಿಗೆ ಸಂಚಾರಿ ಮೊಬೈಲ್ ಮೂಲಕ ಕರೆ ಮಾಡಿ ಖಾತರಿಪಡಿಸಿಕೊಂಡರು.

ಮೊಟ್ಟೆ, ಹೆಸರು ಕಾಳು, ಸಕ್ಕರೆ, ಅಕ್ಕಿ, ಗೋದಿ ಮತ್ತಿತರ ಪೌಷ್ಠಿಕ ಆಹಾರ ವಿತರಿಸುತ್ತಿದ್ದಾರೆ ಎಂದು ಗರ್ಭಿಣೀಯೊಬ್ಬರು ಪ್ರತಿಕ್ರಿಯಿಸಿದರು.

ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ರಾಜ್ಯ ಆಹಾರ ಆಯೊಗದ ಅಧ್ಯಕ್ಷರು ಮತ್ತು ಸದಸ್ಯರ ತಂಡವು ಮಧ್ಯಾಹ್ನದ ಬಿಸಿಯೂಟ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದರು.

ಸರ್ಕಾರ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಸಾಕಷ್ಟು ಹಣ ನೀಡುತ್ತಿದೆ. ಬಡ ಮಕ್ಕಳಿಗೆ ಸದ್ಬಳಕೆಯಾಗಬೇಕು. ಪೌಷ್ಠಿಕ ಆಹಾರದ ಜೊತೆಗೆ ವಿದ್ಯಾರ್ಜನೆಗೆ ಕಡೆಗೆ ಮಕ್ಕಳು ಗಮನ ನೀಡಬೇಕು. ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸುತ್ತಿದ್ದು, ಸರ್ಕಾರದ ಯೋಜನೆಗಳು ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪಬೇಕು ಎಂದು ಹೇಳಿದರು.

ನಂತರ ನಗರದ ರೈತ ಸಂಪರ್ಕ ಕೇಂದ್ರ ಹಾಗೂ ಕೀಟನಾಟಕ ಔಷಧಿ ದಾಸ್ತಾನು ಮಳಿಗೆ ವೀಕ್ಷಿಸಿದ ಅಧ್ಯಕ್ಷರು ಮತ್ತು ತಂಡದವರು ಕೀಟನಾಶಕ ಔಷಧಿ ವಿತರಣೆ ಬಗ್ಗೆ ಪರಿಶೀಲಿಸಿ, ಮಾಹಿತಿ ಪಡೆದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರಾದ ಭೀಮರಾಯ ಕಲ್ಲೂರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್, ಡಾ.ನಂಜುಂಡಯ್ಯ, ಡಾ.ಸೋಮಶೇಖರ್, ಡಾ.ಅಭಿನಂದನ್, ಡಾ.ಪುರುಷೋತ್ತಮ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ರಾಜ್ಯ ಆಹಾರ ಆಯೋಗದ ಸದಸ್ಯರ ತಂಡವು ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲ್ಲೂಕುಗಳಿಗೆ ಭೇಟಿ ಪರಿಶೀಲಿಸಿ, ಮಾಹಿತಿ ಪಡೆದರು.

Continue Reading

Kodagu

ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯೋಜನೆಗೆ ವಿರೋಧ

Published

on

ಗೋಣಿಕೊಪ್ಪ : ರಾಜ್ಯ ಸರ್ಕಾರ ಶೇಕಡ ೪೦ರಷ್ಟು ಭಾಗಂಶ ನೀಡಲು ಸಾಧ್ಯವಾಗದ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನದಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯನ್ನು ವಿರೋಧಿಸುತ್ತಿದೆ ಎಂದು ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಆರೋಪಿಸಿದ್ದಾರೆ.

ಗೋಣಿಕೊಪ್ಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಗಾಂಧೀಜಿ ಹೆಸರನ್ನುತೆಗೆದು ರಾಮನ ಹೆಸರು ನಾಮಕರಣ ಮಾಡಲುಕೇಂದ್ರ ಸರ್ಕಾರದ ಮುಂದಾಗಿದೆ ಎಂದು ಹೇಳುತ್ತಾ ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನ ನಡೆಸುತ್ತಿದೆ.


ಈ ವಿಚಾರದ ಪರವಾಗಿ ಒಂದು ಸಮುದಾಯದವನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿಕಾಂಗ್ರೆಸ್ ಪಕ್ಷ ಮುಂದಾಳತ್ವ ವಹಿಸುತ್ತಿದೆ.ಈ ನಿಟ್ಟಿನಲ್ಲಿ ಯೋಜನೆಯನ್ನು ವಿರೋಧಿಸಿ ಕಾಲ್ನಡಿಗೆ ಜಾಥ ನಡೆಸುತ್ತಿರುವುದು ಹಾಸ್ಯಸ್ಪದವಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತೆಗೆದುಕೊಂಡಿರುವುದು ವಿರೋಧದ ನಡೆಯಾಗಿದೆ ಎಂಬುವುದು ಪ್ರಜ್ಞಾವಂತಜನರಿಗೆ ಪೂರ್ಣಅರಿವಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ವಿಬಿ-ಜಿ ರಾಮ್‌ಜಿ  ಹೊಸ ನಾಮಕರಣದೊಂದಿಗೆತರುತ್ತಿರುವಯೋಜನೆಯುಗ್ರಾಮೀಣಜನರಿಗೆ ಬಹು ಉಪಯೋಗವಾಗಿದೆ. ಸಣ್ಣರೈತರು, ಕಾರ್ಮಿಕರು, ಬಿಪಿಎಲ್ ಪಡಿತರ ಫಲಾನುಭವಿಗಳಿಗೆ ಅನುಕೂಲಕರವಾಗಲಿದೆ. ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರ ಈ ದೇಶದ ಮುನ್ನಡೆ ಸಾಧ್ಯ ಎಂಬ ಚಿಂತನಾಪರಅಧ್ಯಯನ ಶೀಲತೆಗೆ ಈ ಯೋಜನೆ ಪೂರಕವಾಗಿ ಮಾರ್ಪಾಡಾಗಿದೆಎಂದು ಮಾಹಿತಿ ಒದಗಿಸಿದರು.


2027ಕ್ಕೆ ಭಾರತ ವಿಶ್ವದಲ್ಲಿಯೇ ಮೊದಲ ಸ್ಥಾನದಲ್ಲಿ ನಿಲ್ಲಬೇಕೆಂಬ ಗಮನಾರ್ಹ ವಿಚಾರವನ್ನು ಮುಂದಿಟ್ಟು ವಿಕಸಿತ ಭಾರತಕ್ಕೆ ಮುನ್ನುಡಿಯನ್ನುಯೋಜನೆಯ ಮೂಲಕ ತರುವಉದ್ದೇಶವನ್ನು ಹೊಂದಲಾಗಿದೆ.
ಈ ಪರಿಸ್ಕೃತಯೋಜನೆಯಿಂದ ನೂರು ದಿನಗಳ ಬದಲಿಗೆ 125 ದಿನಗಳ ಉದ್ಯೋಗ ಸೃಷ್ಟಿಯಾಗಲಿದೆ. ಸಣ್ಣ ಮತ್ತು ಮಧ್ಯಮರೈತರಿಗೆ ಕೃಷಿ ಚಟುವಟಿಕೆಗಳಲ್ಲಿ 60 ದಿನದ ಬಿಡುವು ತೆಗೆದುಕೊಳ್ಳಲು ಸಾಧ್ಯವಿದೆ.
ಹಿಂದಿನ ವೇತನಕ್ಕಿಂತ ಶೇಕಡವಾರು ವೇತನಏರಿಸಲಾಗಿದೆ. ಗ್ರಾಮಗಳು ಮಾಡಬೇಕಾದ ಕಾಮಗಾರಿಗಳ ಪಟ್ಟಿ, ಫಲಾನುಭವಿಗಳ ಪಟ್ಟಿ, ಸ್ಥಳೀಯ ವಾರ್ಡ್ ಸಭೆ ಮತ್ತುಗ್ರಾಮ ಸಭೆಗಳಲ್ಲಿ ಆಯ್ಕೆ ಮಾಡುವ ಮೂಲಕ ಅಂತಿಮ ನಿರ್ಣಯ ತೆಗೆದುಕೊಳ್ಳಲು ಇದರಿಂದ ಸಾಧ್ಯವಿದೆ. ಜಿಪಿಎಸ್‌ ತಂತ್ರಜ್ಞಾನದಿಂದಕಾಮಗಾರಿ ಲೋಪದೋಷ ಆಗದಂತೆತಡೆಹಿಡಿಯಲು ಸಾಧ್ಯವಿದೆ.  ಜೊತೆಗೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾಡುವುದರಿಂದ ಭ್ರಷ್ಟಾಚಾರಕ್ಕೆಇಲ್ಲಿಅವಕಾಶವಿರುವುದಿಲ್ಲ.


ಈ ಎಲ್ಲಾ ನಿರ್ಣಯಗಳನ್ನು ಮತ್ತುಯೋಜನೆಯ ಫಲಾನುಫಲತೆಗಳನ್ನು ಗ್ರಾಮೀಣ ಭಾಗದಜನರಿಗೆ ಒದಗಿಸಿಕೊಡುವ ನಿಟ್ಟಿನಲ್ಲಿಕೇಂದ್ರ ಸರಕಾರಕಾರ್ಯ ಪ್ರವೃತ್ತವಾಗಿದೆ .ಆದರೆ,ಕಾಂಗ್ರೆಸ್ ಪಕ್ಷ ಇದನ್ನು ತೀವ್ರವಾಗಿ ವಿರೋಧಿಸುವ ಮೂಲಕ ಜನರ ಮನದಲ್ಲಿ ಸಂಶಯ ಮತ್ತುಗೊಂದಲದ ವಿಚಾರಗಳಿಗೆ ಸಂಬಂಧಿಸಿದಂತೆ ವರ್ತಿಸುತ್ತಿರುವುದರಲ್ಲಿ ಭ್ರಷ್ಟಚಾರಕ್ಕೆ ಪ್ರೇರಣೆ ಮತ್ತು ಲೇಪನವೇ ಕಾರಣವಾಗುತ್ತಿದೆಎಂದು ಆರೋಪಿಸಿದರು.

Continue Reading

Trending

error: Content is protected !!