Connect with us

Chamarajanagar

ಹೇಮಾಶ್ರೀ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಅಧ್ಯಯನ ಪ್ರವಾಸ

Published

on

ತಾಲ್ಲೂಕಿನ ಹೊಸಮೋಳೆ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಸಂಸ್ಥೆ ವತಿಯಿಂದ ಹೇಮಾಶ್ರೀ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಯಿತು

ಪ್ರಥಮವಾಗಿ ಮಹಿಳಾ ಸಾಂತ್ವನ ಕೇಂದ್ರ ಭೇಟಿ ನೀಡಿ ಮಹಿಳೆಯರಿಗೆ ಸಿಗುವ ಸರ್ಕಾರಿ ಸೌಲಭ್ಯಗಳು, ಬಾಲ್ಯ ವಿವಾಹ, ಹೆಣ್ಣು ಮಕ್ಕಳ ಬ್ರೂಣ ಹತ್ಯೆ ಕುರಿತು ಆಪ್ತ ಸಮಾಲೋಚಕಿ ಉಷಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಸರಸ್ವತಿ ಮಾಹಿತಿ ನೀಡಿದರು.

ಪಟ್ಟಣದಲ್ಲಿರುವ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಭೇಟಿ ನೀಡಿ ಕಾನೂನು ಅರಿವು ಹಾಗೂ ನಿಯಮಗಳ ಬಗ್ಗೆ ನ್ಯಾಯಾದೀಶರಾದ ಆಕರ್ಶ್ ರವರು ಮಾರ್ಗದರ್ಶನ ನೀಡಿದರು. ಪಟ್ಟಣದಲ್ಲಿರುವ ಪೊಲೀಸ್ ಸ್ಟೇಷನ್ ಗೆ ಭೇಟಿ ನೀಡಿ ಅಲ್ಲಿಯ ಕಾರ್ಯವೈಖರಿ ಬಗ್ಗೆ, ಮೊಬೈಲ್ ಕರೆ ಓಟಿಪಿ ಅಪರಿಚಿತರಿಗೆ ನೀಡಬಾರದು, ಸೈಬರ್ ಕಳ್ಳತನ, ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಕ್ಕಳ ಬಗ್ಗೆ ಗಮನ ನೀಡುವ ಕುರಿತು ಹಾಗೂ ಏನಾದರೂ ಸಮಸ್ಯೆ ಬಂದಲ್ಲಿ 112 ಗೆ ಕರೆ ಮಾಡುವಂತೆ ಎ ಎಸ್ ಐ ಮಹದೇವಪ್ಪ ತಿಳಿಸಿದರು.

ಉಮ್ಮತ್ತೂರಿನ ಅಕೃತಿ ಇಂಡೇಸ್ಟ್ರಿ ಸ್ವ ಉದ್ಯೋಗ ಘಟಕ ಕ್ಕೆ ಭೇಟಿ ನೀಡಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಪೂರಕವಾಗಿ ಸಂಸ್ಥೆಯ ವರ್ಷ ಮಾಹಿತಿ ನೀಡಿ ಅಲ್ಲಿ ಬಾಳೆ ದಿಂಡುವಿನಲ್ಲಿ ಮಾಡುವ ಪರಿಕರಗಳು ಉಪ್ಪಿನಕಾಯಿ, ಮ್ಯಾಟ್, ಬ್ಯಾಗ್, ಹಗ್ಗ ತಯಾರಿಕೆ ಕುರಿತು ಪರಿಶೀಲಿಸುವ ಮೂಲಕ ಈ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು

ಈ ವೇಳೆ ವಿನುತಾ ಶೆಟ್ಟಿ ಸೇರಿದಂತೆ ಸಂಘದ ಸದಸ್ಯರು ಹಾಜರಿದ್ದರು.

Continue Reading

Chamarajanagar

ಗೌರಿ-ಗಣೇಶ ಹಬ್ಬದ ಹಿನ್ನೆಲೆ : ಅಗತ್ಯ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

Published

on

ಚಾಮರಾಜನಗರ: ಜಿಲ್ಲೆಯಲ್ಲಿ ಮುಂಬರುವ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ, ಉತ್ಸವದಂತಹ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಅನುಮತಿ ನೀಡುವ ಜೊತೆಗೆ ಹಬ್ಬದ ಸಂದರ್ಭದಲ್ಲಿ ಸುರಕ್ಷತೆ ಹಾಗೂ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶೋತ್ಸವ ಆಚರಣೆ ಸಂಬಂಧ ಅಧಿಕಾರಿಗಳು ಹಾಗೂ ನಗರದ ಶ್ರೀ ವಿದ್ಯಾಗಣಪತಿ ವಿದ್ಯಾಮಂಡಳಿ ಪದಾಧಿಕಾರಿಗಳು, ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೌರಿ ಗಣೇಶ ಪ್ರತಿಷ್ಠಾಪಿಸುವ ಆಯೋಜಕರಿಗೆ ಅನುಮತಿ ನೀಡುವ ಸಲುವಾಗಿ ಅಧಿಕಾರಿಗಳನ್ನೊಳಗೊಂಡ ಏಕಗವಾಕ್ಷಿ ಸಮಿತಿ ರಚಿಸಲಾಗಿದೆ. ಕಾರ್ಯಕ್ರಮಗಳ ಆಯೋಜಕರು ಆಯಾ ತಾಲೂಕು ವ್ಯಾಪ್ತಿಯ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕಿದೆ. ಆಯೋಜಕರು ಅರ್ಜಿ ಸಲ್ಲಿಸಿದ ಕೂಡಲೇ ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು. ಇ-ಮೇಲ್ ಮೂಲಕವು ಅರ್ಜಿ ಸಲ್ಲಿಸಿದ್ದಲ್ಲಿ ಪರಿಗಣಿಸಿ ಅನುಮತಿಸಬೇಕು ಎಂದರು.

ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಬೇಕು. ಗಣಪತಿ ವಿಸರ್ಜನೆಗಾಗಿ ನಿಗದಿ ಮಾಡಿರುವ ಸ್ಥಳಗಳಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು. ಗಣಪತಿ ಮೆರವಣಿಗೆ ಮಾರ್ಗಗಳ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಬ್ಬದ ವೇಳೆ ಕುಡಿಯುವ ನೀರು, ವಿದ್ಯುತ್, ಸ್ವಚ್ಚತೆ, ಸುರಕ್ಷತೆ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ತಿಳಿಸಿದರು.

ಈ ಹಿಂದಿನ ವರ್ಷದಲ್ಲಿಯೂ ಚಾಮರಾಜನಗರ ಪಟ್ಟಣದಲ್ಲಿ ವಿದ್ಯಾಗಣಪತಿ ಮಂಡಳಿಯವರು ಪ್ರತಿಷ್ಠಾಪಿಸಿದ್ದ ಗಣಪತಿ ಕಾರ್ಯಕ್ರಮ ಹಾಗೂ ಉತ್ಸವ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಜಿಲ್ಲಾಡಳಿತ ಪೊಲೀಸ್ ಇಲಾಖೆ ಎಲ್ಲ ಸಹಕಾರ ನೀಡಲಿದೆ. ಗಣಪತಿ ವಿಸರ್ಜನೆಗೆ ದೊಡ್ಡರಸನಕೊಳದಲ್ಲಿ ಅಗತ್ಯ ಸಿದ್ದತೆಗೆ ನಗರಸಭೆ ಅಧಿಕಾರಿಗಳು ಎಲ್ಲ ಕ್ರಮಗಳನ್ನು ಮುಂಚಿತವಾಗಿಯೇ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಮಾತನಾಡಿ, ಕಳೆದ ವರ್ಷ ನಗರದ ವಿದ್ಯಾಗಣಪತಿ ಮಂಡಳಿಯವರು ಸಹಕಾರ ನೀಡಿ ಗಣಪತಿ ಉತ್ಸವವನ್ನು ಕೈಗೊಂಡಿದ್ದರು. ಈ ಬಾರಿಯೂ ಗಣಪತಿ ಪ್ರತಿಷ್ಠಾಪನೆ ಮೆರವಣಿಗೆ ಸೇರಿದಂತೆ ಉತ್ಸವಕ್ಕೆ ನಮ್ಮ ಕಡೆಯಿಂದ ಎಲ್ಲ ಸಹಕಾರ ನೀಡಲಿದ್ದೇವೆ. ಪೊಲೀಸ್ ಇಲಾಖೆ ವತಿಯಿಂದ ಕೈಗೊಳ್ಳಬೇಕಿರುವ ಸಿದ್ದತೆಗಳನ್ನು ಮಾಡಲಿದ್ದೇವೆ ಎಂದರು.

ಸಭೆಯಲ್ಲಿ ಹಾಜರಿದ್ದ ಮಂಡಳಿಯ ಪದಾಧಿಕಾರಿಗಳು, ಮುಖಂಡರು ಮಾತನಾಡಿ, ಕಳೆದ ಬಾರಿಯೂ ಶಾಂತಿಯುತವಾಗಿ ಗಣೇಶ ಉತ್ಸವ ನಗರದಲ್ಲಿ ಜರುಗಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಈ ಸಲವು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ನವರಾತ್ರಿಗೂ ಮೊದಲು ವಿಸರ್ಜನೆ ಕಾರ್ಯವನ್ನು ಹಮ್ಮಿಕೊಳ್ಳಲಿದ್ದೇವೆ. ರಸ್ತೆ ಸೌಕರ್ಯ, ಸ್ವಚ್ಚತೆ, ಬೀದಿ ದೀಪ, ವಿಸರ್ಜನಾ ಸ್ಥಳದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಡಿವೈಎಸ್‍ಪಿ ಲಕ್ಷ್ಮಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಜಿಲ್ಲಾ ನಗರಾಭಿವೃದ್ದಿ ಕೋಶದ ಕಾರ್ಯಪಾಲಕ ಎಂಜಿನಿಯರ್ ಅಲ್ತಾಫ್, ತಹಶೀಲ್ದಾರ್ ಬಸವರಾಜು, ತನ್ಮಯ್, ನಗರಸಭಾ ಆಯುಕ್ತ ಎಸ್.ವಿ. ರಾಮದಾಸ್, ರಮೇಶ್, ಇನ್ನಿತರ ಅಧಿಕಾರಿಗಳು, ಗಣಪತಿ ಮಂಡಳಿಯ ಪದಾಧಿಕಾರಿಗಳಾದ ಬಾಲಸುಬ್ರಹ್ಮಣ್ಯ, ಮಹೇಶ್, ಶಿವಣ್ಣ, ಚಂದ್ರು, ಮನೋಜ್ ಪಟೇಲ್, ರಾಘವೇಂದ್ರ, ಬಂಗಾರು, ಶಿವು, ಕಿರಣ್, ಮಾದಣ್ಣ, ಪೃಥ್ವಿರಾಜ್, ನವೀನ್, ಅಶ್ವಿನ್, ಕೂಸಣ್ಣ, ಪ್ರವೀಣ್, ಇನ್ನಿತರರು  ಉಪಸ್ಥಿತರಿದ್ದರು.

Continue Reading

Chamarajanagar

ಬಸಪ್ಪನದೊಡ್ಡಿ ಶಾಲೆಯಲ್ಲಿ ಇಂಗ್ಲಿಷ್‌ ಮಾಧ್ಯಮ ಕೊಠಡಿ ಉದ್ಘಾಟಿಸಿದ ಶಾಸಕ ಎಂ.ಆರ್. ಮಂಜುನಾಥ್

Published

on

ಹನೂರು: ತಾಲೂಕಿನ ಬಸಪ್ಪನದೊಡ್ಡಿ ಶಾಲೆಯಲ್ಲಿ ಇಂಗ್ಲಿಷ್‌ ಮಾಧ್ಯಮ ಕೊಠಡಿಯನ್ನು ಶಾಸಕ ಎಂ.ಆರ್. ಮಂಜುನಾಥ್ ಉದ್ಘಾಟಿಸಿದರು.

ತಾಲೂಕಿನ ಬಸಪ್ಪನದೊಡ್ಡಿ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಒಂದನೇ ತರಗತಿ ಇಂಗ್ಲಿಷ್ ಮಾಧ್ಯಮ ಕೊಠಡಿ ಉದ್ಘಾಟಿಸಿ ನಂತರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅಕ್ಷರ ಅಭ್ಯಾಸ ಮಾಡಿಸಿದರು.

ನಂತರ ಮಾತನಾಡಿದ ಅವರು, ಸ್ಪರ್ಧಾ ತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಮಕ್ಕಳಿಗೆ ಬೇಕಾಗಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘ ನೀಯ ವಿಚಾರ. ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮವೇದಿಕೆಯಾಗಿದೆ. ವಿದ್ಯಾರ್ಥಿಗಳು ಜ್ಞಾನಾರ್ಜನೆ ಪಡೆದು ಉತ್ತಮ ಫಲಿತಾಂಶ ನೀಡುವುದರ ಮೂ ಲಕ ಹೆಸರು ತರಬೇಕು. ಶೈಕ್ಷಣಿಕ ವಲಯದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಸಹ ಶ್ರಮಿಸಬೇಕು ಎಂದರು.

ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಮುಖವಾಗಿ ಬೇಕಾಗಿರುವುದರಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಯನ್ನು ಆರಂ ಭಿಸಿರುವುದು ಸರ್ಕಾರಿ ಶಾಲೆಗಳ ವಿದ್ಯಾ ರ್ಥಿಗಳಿಗೆ ಅನುಕೂಲದಾಯಕವಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್. ಅಭಿವ್ಯಕ್ತ ಪಡಿಸಿದರು.

ಇದೇ ಸಂದರ್ಭದಲ್ಲಿ ಬಿ ಇ ಓ ಗುರುಲಿಂಗಯ್ಯ, ಗ್ರಾ. ಪ ಅಧ್ಯಕ್ಷ ಮುತ್ತುರಾಜು, ಎಸ್ ಡಿ ಎಂ ಸಿ ಅಧ್ಯಕ್ಷ ಮಲ್ಲೇಶ್,ಬಸಪ್ಪನದೋಡ್ಡಿ ಶಾಲೆಯ ಮುಖ್ಯ ಶಿಕ್ಷಕ ವೀರಪ್ಪ,ಮಹಾದೇವಪ್ರಸಾದ್, ನಾಗರಾಜು, ಹೊನ್ನಪ್ಪ, ಚಿನ್ನವೆಂಕಟ, ವಿಜಯ್ ಕುಮಾರ್,ಗುರು, ರಫೀಕ್,ಎಸ್ ಆರ್ ಮಹದೇವ್, ಶಿಕ್ಷಕರಾದ ದೊರೆಸ್ವಾಮಿ,ಸೋಮಣ್ಣ, ಪುಟ್ಟರಾಮು, ಸುಧಾಮಣಿ,ಮುತ್ತಮ್ಮ ಸೇರಿದಂತೆ ಮುಖಂಡರು ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Chamarajanagar

ಬಂಡಿಪುರ ವಲಯದಲ್ಲಿ ಹುಲಿಗಳ ಕಾದಾಟ

Published

on

ಗುಂಡ್ಲುಪೇಟೆ: ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶವಾದ ಕುಂದುಕೆರೆ ಅರಣ್ಯ ವಲಯದ ಕುನ್ನ ಮುಂಟಿ ಗುಡ್ಡದ ಸಮೀಪದಲ್ಲಿ ಎರಡು ಹುಲಿಗಳ ನಡುವೆ ಕಾದಾಟ ನಡೆಯಿತು.

ಹುಲಿಗಳ ಕಾದಾಟದಲ್ಲಿ ಒಂದು ಹುಲಿ ಅಸ್ವಸ್ಥಗೊಂಡು ಮಂಚಯ್ಯ ಎಂಬುವರ ಜಮೀನಿನಲ್ಲಿ ವಿಶ್ರಾಂತಿ ಪಡೆಯುತ್ತಿತ್ತು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಂದುಕೆರೆ ಅರಣ್ಯ ವಲಯ ಅಧಿಕಾರಿಗಳು ನಿತ್ರಾಣಗೊಂಡು ಬಿದ್ದಿರುವ ಹುಲಿ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಂಡರು.

ಕಾಳಗ ನಡೆಸುತ್ತಿದ್ದ ಇನ್ನೊಂದು ಹುಲಿಯನ್ನು ಸೆರೆ ಹಿಡಿಯಬೇಕೆಂದು ಕುಂದುಕೆರೆ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆಯವರು ಬಂಡಿಪುರದಿಂದ ಆನೆಯನ್ನು ಕರೆತಂದು ಆನೆ ಕ್ಯೂಬಿನ್ ಮಾಡಿ ಮತ್ತೊಂದು ಹುಲಿಯನ್ನು ಸೆರೆ ಹಿಡಿಯಲು ಪೂರ್ವ ತಯಾರಿ ಮಾಡಿಕೊಂಡು ಹುಲಿ ಹುಡುಕಾಟದ ಕಾರ್ಯಾಚರಣೆ ಆರಂಭಿಸಿದ್ದಾರೆ.

Continue Reading

Trending

error: Content is protected !!