State
ಅಕ್ರಮ ಹಣ ವರ್ಗಾವಣೆ ಕೇಸ್: ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು ಮಾಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್ ತಿಳಿಸಿದೆ.

ಲಿವರ್ ಕಸಿ ಬಗ್ಗೆ ಎರಡು ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಕೋರ್ಟ್ ನಿರ್ದೇಶನ ನೀಡಿದೆ.
ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ ಬೀರಬಾರದು. ವಿಚಾರಣಾ ನ್ಯಾಯಾಲಯ ವಿಚಾರಣೆಗೆ ತೊಂದರೆ ಉಂಟು ಮಾಡಬಾರದು. ಐದು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಒಂದು ಭದ್ರತಾ ಖಾತರಿ ಒದಗಿಸಬೇಕು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ.
State
ನೀರಾವರಿ ಬಗ್ಗೆ ಕೇಂದ್ರಕ್ಕೆ ಎಚ್‌ಡಿಡಿ ಮನವಿ| ಯೋಜನೆ ಜಾರಿ ಮಾಡಿದರೆ ಸಂತಸ: ಕೆ.ಎಂ.ಶಿವಲಿಂಗೇಗೌಡ
ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಜಾರಿ ಮಾಡಿಸಿದರೆ ಸಂತಸವಾಗುತ್ತದೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ತಿಳಿಸಿದ್ದಾರೆ.
ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಕೇಳಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜ್ಯಸಭೆಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರು ಭಾವನಾತ್ಮಕವಾಗಿ ಮಾತನಾಡಿದ್ದಾರೆ. ರಾಜ್ಯದ ನೀರಾವರಿ ಯೋಜನೆ ಬಗ್ಗೆ ಮಾತಾಡಿದ್ದನ್ನು ಸ್ವಾಗತಿಸುವೆ ಎಂದಿದ್ದಾರೆ.

ಎಚ್. ಡಿ.ದೇವೇಗೌಡರು ಆಡಳಿತ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಮಾತನಾಡಿ, ನೀರಾವರಿ ಯೋಜನೆಗಳಿಗೆ ಅನುಮತಿ ನೀಡಿಸಬೇಕು. ರಾಜ್ಯದ ನೀರಾವರಿ ಯೋಜನೆಗಳನ್ನು ಜಾರಿ ಮಾಡಿಸಿದರೆ ಸಂತಸವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವಿಧಾನಸಭೆ ಕಲಾಪದಲ್ಲಿ ಬುಧವಾರ ವಿಪಕ್ಷ ಬಿಜೆಪಿ ವಿರುದ್ದ ಏಕವಚನದಲ್ಲಿ ಮಾತನಾಡಿದ ವಿಚಾರ ಬಗ್ಗೆ ಮಾತನಾಡಿದ ಅವರು, ನಿನ್ನೆ ಸದನದಲ್ಲಿ ಅಹಿತಕರ ಘಟನೆ ನಡೆಯಿತು. ವಿಪಕ್ಷ ಸದಸ್ಯರು ಪ್ರತಿಭಟನೆ ಮಾಡುತಿದ್ದರು. ಈ ವೇಳೆ ನನಗೆ ಮಾತನಾಡಲು ಅವಕಾಶ ನೀಡಿದರು. ಆಗ ನನ್ನ ಮೇಲೆ ವೈಯಕ್ತಿಕ ನಿಂದನೆ ಮಾಡಿದರು. ಹೀಗಾಗಿ ಬಿರುಸಿನಿಂದ ಮಾತನಾಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
Special
BSNL Recruitment 2026: ಬಿಎಸ್‌ಎನ್‌ಎಲ್‌ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಇಂಜಿನಿಯರಿಂಗ್ ಮತ್ತು ಫೈನಾನ್ಸ್ ಹಿನ್ನೆಲೆಯ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶ. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) 2026ನೇ ಸಾಲಿನ Senior Executive Trainee (SET) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.
ಹುದ್ದೆಗಳ ವಿವರ:
ಟೆಲಿಕಾಂ ವಿಭಾಗ
•ಹುದ್ದೆಗಳ ಸಂಖ್ಯೆ: 95
•ಅರ್ಹತೆ: ಇಂಜಿನಿಯರಿಂಗ್ ಹಿನ್ನೆಲೆ ಹೊಂದಿದ ಅಭ್ಯರ್ಥಿಗಳು
ಫೈನಾನ್ಸ್ ವಿಭಾಗ :
•ಹುದ್ದೆಗಳ ಸಂಖ್ಯೆ: 25
•ಅರ್ಹತೆ: ಲೆಕ್ಕಪತ್ರ ಮತ್ತು ವಾಣಿಜ್ಯ ಕ್ಷೇತ್ರದ ಅಭ್ಯರ್ಥಿಗಳು
ಶೈಕ್ಷಣಿಕ ಅರ್ಹತೆ:
ಟೆಲಿಕಾಂ ವಿಭಾಗ: 60% ಅಂಕಗಳೊಂದಿಗೆ BE / B.Tech ಪದವಿ ಹೊಂದಿರಬೇಕು.
ಫೈನಾನ್ಸ್ ವಿಭಾಗ: ಕಾಲ್ ಅಥವಾ CMA (ಕಾಸ್ಟ್ & ಮ್ಯಾನೇಜ್‌ಮೆಂಟ್ ಅಕೌಂಟೆಂಟ್) ಪದವಿ ಪೂರ್ಣಗೊಳಿಸಿರುವವರು
ವಯೋಮಿತಿ: 21-30 ವರ್ಷ
ಮೀಸಲಾತಿಗೆ ಅನುಗುಣವಾಗಿ ವಯೋಸಡಿಲಿಕೆ ಇರುತ್ತದೆ
ವೇತನ ವಿವರ:
•ಮೂಲ ವೇತನ: ₹24,900 – ₹50,500
•HRA, DA, TA, ವೈದ್ಯಕೀಯ ಹಾಗೂ ಇತರೆ ಭತ್ಯೆಗಳು ಸೇರಿ
ಒಟ್ಟು ಮಾಸಿಕ ವೇತನ: ಸುಮಾರು ₹80,000 ರಿಂದ ₹90,000
ಆಯ್ಕೆ ಪ್ರಕ್ರಿಯೆ ಹಂತಗಳು:
•ಕಂಪ್ಯೂಟರ್ ಆಧಾರಿತ ಪರೀಕ್ಷೆ
•ದಾಖಲೆಗಳ ಪರಿಶೀಲನೆ
ಅರ್ಜಿ ಸಲ್ಲಿಸುವ ವಿಧಾನ:
* ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ನೀಡುವುದರ ಮೂಲಕ ಅರ್ಜಿ ಪೂರ್ಣಗೊಳಿಸಬೇಕು
ಅಧಿಕೃತ ವೆಬ್ಸೈಟ್ : https://bsnl.co.in
ಅರ್ಜಿ ಶುಲ್ಕ:
•General / OBC / EWS: ₹2,500
•SC / ST / PwBD: ₹1,250
ಪ್ರಮುಖ ದಿನಾಂಕಗಳು:
•ಅರ್ಜಿ ಪ್ರಾರಂಭ: 05 ಫೆಬ್ರವರಿ 2026
•ಅರ್ಜಿ ಕೊನೆಯ ದಿನ: 07 ಮಾರ್ಚ್ 2026
•ಅರ್ಜಿ ತಿದ್ದುಪಡಿ ಅವಧಿ: 08 ರಿಂದ 15 ಮಾರ್ಚ್ 2026
•ಪರೀಕ್ಷೆ (ತಾತ್ಕಾಲಿಕ): 29 ಮಾರ್ಚ್ 2026
ಉತ್ತಮ ವೇತನ, ಕೇಂದ್ರ ಸರ್ಕಾರದ ಉದ್ಯೋಗ ಭದ್ರತೆ ಹಾಗೂ ವೃತ್ತಿ ಬೆಳವಣಿಗೆಯ ಅವಕಾಶಗಳನ್ನು ಬಯಸುವ ಅಭ್ಯರ್ಥಿಗಳಿಗೆ ಒಂದು ಅತ್ಯುತ್ತಮ ಅವಕಾಶವಾಗಿದೆ. ನೀವು ಅರ್ಹರಾಗಿದ್ದರೆ ಕೊನೆಯ ದಿನಾಂಕದವರೆಗೆ ಕಾಯದೆ ಈಗಲೇ ಅರ್ಜಿ ಸಲ್ಲಿಸುವುದು ಉತ್ತಮ.
Special
Kisan Tractor Yojana : ಸರ್ಕಾರದಿಂದ ರೈತರಿಗೆ ಅರ್ಧ ಬೆಲೆಗೆ ಹೊಸ ಟ್ರಾಕ್ಟರ್
ರೈತರ ಕೃಷಿ ಕೆಲಸವನ್ನು ಸುಲಭಗೊಳಿಸುವ ಹಾಗೂ ಯಾಂತ್ರೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರವು Kisan Tractor Yojana ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ರೈತರಿಗೆ ಹೊಸ ಟ್ರಾಕ್ಟರ್ ಖರೀದಿಗೆ ಶೇಕಡಾ 50ರಷ್ಟು ಸಹಾಯಧನ (ಸಬ್ಸಿಡಿ) ನೀಡಲಾಗುತ್ತದೆ. ಇದರಿಂದ ಕಡಿಮೆ ಆದಾಯ ಹೊಂದಿರುವ ಸಣ್ಣ ಹಾಗೂ ಅಲ್ಪಭೂಧರ ರೈತರು ಕೂಡ ಆಧುನಿಕ ಟ್ರಾಕ್ಟರ್‌ಗಳನ್ನು ಖರೀದಿಸಲು ಸಾಧ್ಯವಾಗುತ್ತದೆ.
ಯೋಜನೆಯ ಉದ್ದೇಶ:
ಈ ಯೋಜನೆಯ ಮುಖ್ಯ ಉದ್ದೇಶ ಕೃಷಿಯಲ್ಲಿ ಮಾನವ ಶ್ರಮದ ಅವಲಂಬನೆಯನ್ನು ಕಡಿಮೆ ಮಾಡಿ, ಉತ್ಪಾದಕತೆಯನ್ನು ಹೆಚ್ಚಿಸುವುದಾಗಿದೆ. ಟ್ರಾಕ್ಟರ್ ಬಳಕೆಯಿಂದ ಬಿತ್ತನೆ, ಹೊಲ ಉಳುವುದು,ಸಾಗಣೆ ಮುಂತಾದ ಕೆಲಸಗಳು ವೇಗವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಮುಗಿಯುತ್ತವೆ. ಇದರಿಂದ ರೈತರ ಸಮಯವೂ ಉಳಿಯುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:
1. ಅರ್ಜಿದಾರರು ಭಾರತೀಯ ನಾಗರಿಕರಾಗಿರಬೇಕು.
2. ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
3. ಒಂದು ಕುಟುಂಬಕ್ಕೆ ಒಂದೇ ಸಬ್ಸಿಡಿ.
4. ಈ ಹಿಂದೆ ಯಾವುದೇ ಟ್ರ್ಯಾಕ್ಟರ್‌ನ ಸಬ್ಸಿಡಿ ಪಡೆದಿರಬಾರದು.
5. ಅರ್ಜಿದಾರರು ಮೂಲ ಭೂ ದಾಖಲೆಗಳನ್ನು ಹೊಂದಿರಬೇಕು.

ಅಗತ್ಯ ದಾಖಲೆಗಳು:
1. ಆಧಾರ್ ಕಾರ್ಡ್
2. ಭೂಮಿ ದಾಖಲೆ (RTC / ಪಹಣಿ)
3. ಬ್ಯಾಂಕ್ ಪಾಸ್‌ಬುಕ್
ಪಾಸ್‌ಪೋರ್ಟ್ ಗಾತ್ರದ ಫೋಟೋ
ಅರ್ಜಿಸುವ ವಿಧಾನ:
ರೈತರು ಈ ಅರ್ಜಿಯನ್ನು ಆನ್‌ಲೈನ್ ಅಥವಾ ಆಫ್ ಲೈನ್ ಮೂಲಕ ಸಲ್ಲಿಸಬಹುದು. ಮೊದಲು,ಕೃಷಿ ಯಾಂತ್ರಿಕರಣ ಪೋರ್ಟಲ್ agrimachinery.nic.in ಗೆ ಭೇಟಿ ನೀಡಿ, ಅಗತ್ಯ ಮಾಹಿತಿಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಿ.
ಆಫ್ ಲೈನ್ ನಲ್ಲಿ, ಸಮೀಪದ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
Kisan Tractor Yojana ರೈತರ ಬದುಕಿಗೆ ಬದಲಾವಣೆ ತರುವಂತಹ ಮಹತ್ವದ ಯೋಜನೆಯಾಗಿದ್ದು, ಹೆಚ್ಚಿನ ವೆಚ್ಚದ ಟ್ರ್ಯಾಕ್ಟರ್ ಖರೀದಿಸಲು ಹಿಂಜರಿಯುತ್ತಿದ್ದ ರೈತರಿಗೆ ಇದೊಂದು ಸದವಕಾಶವಾಗಿದೆ. ರೈತರು ಇದರ ಸದುಪಯೋಗ ಪಡೆಯಬೇಕು.
-
Politics22 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Special6 hours agoBSNL Recruitment 2026: ಬಿಎಸ್‌ಎನ್‌ಎಲ್‌ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
-
Kodagu18 minutes agoಫೆ. 7ಕ್ಕೆ ಕೆಎಸ್ಆರ್ಟಿಸಿ ನೂತನ ಬಸ್ಸು ನಿಲ್ದಾಣ ಉದ್ಘಾಟನೆ
-
Hassan20 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
National23 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Mysore23 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ
-
National4 hours agoಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್ – ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್
-
Mysore5 hours agoಫುಟ್ಪಾತ್ ವ್ಯಾಪಾರಿಗಳಿಗೆ ನಂಜನಗೂಡು ನಗರಸಭೆ ಆಯುಕ್ತ ಎಂ. ಬಸವರಾಜು ಎಚ್ಚರಿಕೆ
