Connect with us

Hassan

ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿ

Published

on

ಹಾಸನ : ಓರ್ವ ಮಹಿಳೆಗೆ ತೀವ್ರ ಗಾಯ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶೆಟ್ಟಿಹಳ್ಳಿ ಬೈಪಾನ್‌ನಲ್ಲಿ ಘಟನೆ

ಅರಸೀಕೆರೆ ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದ ಮಧು (35), ಬೇಲೂರು ತಾಲ್ಲೂಕಿನ, ದೇವಿಹಳ್ಳಿ ಗ್ರಾಮದ ಜವರಯ್ಯ (65) ಮೃತರು

ಬೆಂಗಳೂರಿನಿಂದ ಪತ್ನಿ, ಮಾವನ ಜೊತೆ ಕಾರಿನಲ್ಲಿ ಬರುತ್ತಿದ್ದ ಮಧು

ಶೆಟ್ಟಿಹಳ್ಳಿ ಬೈಪಾಸ್ ಬಳಿ ಪಂಕ್ಚರ್ ಆದ ಕಾರಿನ ಟೈಯರ್

ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಟೈಯರ್ ಚೇಂಜ್ ಮಾಡುತ್ತಿದ್ದ ಮಧು

ಈ ವೇಳೆ ಬೆಂಗಳೂರು ಕಡೆಯಿಂದ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಲಾರಿ

ಸ್ಥಳದಲ್ಲೇ ಸಾವನ್ನಪ್ಪಿದ ಮಧು

ತೀವ್ರವಾಗಿ ಗಾಯಗೊಂಡಿದ್ದ ಜವರಯ್ಯ

ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಸಾಗಿಸುತ್ತಿದ್ದ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ ಜವರಯ್ಯ

ಮಧು ಪತ್ನಿ ಗೀತಾಗೆ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ

ಲಾರಿ ನಿಲ್ಲಿಸದೆ ಎಸ್ಕೇಪ್ ಆಗಿರುವ ಚಾಲಕ

KA-35, M-2916 ನಂಬರ್‌ನ ಕಾರು

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading
Click to comment

Leave a Reply

Your email address will not be published. Required fields are marked *

Hassan

ಶಿರಾಡಿ ಘಾಟ್ ಗುಡ್ಡ ಕುಸಿತ ಪ್ರದೇಶಕ್ಕೆ ಇಂದು ಸಿ‌.ಎಂ ಭೇಟಿ

Published

on

ಹಾಸನ.
ಶಿರಾಡಿ ಘಾಟ್ ಗುಡ್ಡ ಕುಸಿತ ಪ್ರದೇಶಕ್ಕೆ ಇಂದು ಸಿ‌.ಎಂ ಭೇಟಿ

ಸಕಲೇಶಪುರ ತಾಲ್ಲೂಕು ದೊಡ್ಡ ತಪ್ಪಲೆಗೆ ಆಗಮಿಸಲಿರೋ ಸಿ.ಎಂ ಸಿದ್ದರಾಮಯ್ಯ

ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ‌ ಪ್ರದೇಶಗಳನ್ನೂ ವೀಕ್ಷಿಸಲಿರೋ ಸಿ.ಎಂ

ದೊಡ್ಡ ತಪ್ಪಲೆ ಬಳಿ ಪದೇ ಪದೇ ಗುಡ್ಡ ಕುಸಿದು ಸೃಷ್ಟಿಯಾಗಿದ್ದ ಅವಾಂತರಗಳು

ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ್ದ ಅನೇಕ ವಾಹನಗಳು

ಈ ಪ್ರದೇಶಕ್ಕೆ ಭೇಟಿ ನೀಡಲು ಆಗಮಿಸಿ ಪರಿಶೀಲನೆ ನಡೆಸಲಿರೋ ಸಿ‌ಎಂ

ಮಧ್ಯಾಹ್ನ 1ಗಂಟೆ ಸುಮಾರಿಗೆ ಆಗಮಿಸುವ ಸಾಧ್ಯತೆ

ಮೈಸೂರಿನ ನಂಜನಗೂಡಿನಿಂದ ಹೊರಡುವ ಸಿಎಂ

Continue Reading

Hassan

ಸರ್ಕಾರಿ ಶಾಲಾ ಮಕ್ಕಳಿಗೆ ಕರವೇ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ರವರಿಂದ ಅಗತ್ಯ ಪರಿಕರಗಳ ವಿತರಣೆ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನ ಸಿಂಗೋಡನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಅಗತ್ಯ ಪುಸ್ತಕಗಳನ್ನು ಕರವೇ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ರವರು ಉಚಿತವಾಗಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಘು ಪಾಳ್ಯ ಅವರು, ಕಳೆದ 16 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿನ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಶಾಲಾ ಮಕ್ಕಳಿಗೆ ಸಮವಸ್ತ್ರ ಅಗತ್ಯ ಪುಸ್ತಕ, ಪರಿಕರಗಳನ್ನು ವಿತರಣೆ ಮಾಡುತ್ತಾ ಬಂದಿದ್ದೇನೆ. ಇಲ್ಲಿನ ಶಿಕ್ಷಕರು ಇದರ ಸದ್ಬಳಕೆ ಮಾಡಿಕೊಂಡು ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕು. ಮೌಲ್ಯಯುತ ಶಿಕ್ಷಣ ನೀಡಿ ಇವರನ್ನು ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಮುಖ್ಯ ಶಿಕ್ಷಕ ನಾಗರಾಜ್ ಮಾತನಾಡಿ, ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ನೀಡಿರುವ ಸಮವಸ್ತ್ರ ಪರಿಕರಗಳು ಹಾಗೂ ಪುಸ್ತಕಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ. ನಮ್ಮ ಶಾಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚಾಗಿದ್ದಾರೆ. ಪ್ರತಿ ವರ್ಷವೂ ರಘು ಪಾಳ್ಯರವರು ಸೇವಾ ಮನೋಭಾವದಿಂದ ನಮ್ಮ ಶಾಲೆಗೆ ನೀಡುತ್ತಿರುವ ಸಹಕಾರವನ್ನು ನಾವು ಶ್ಲಾಧಿಸುತ್ತೇವೆ ಮತ್ತು ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಗ್ರಾಮೀಣ ವಿದ್ಯಾರ್ಥಿಗಳಲ್ಲೂ ಪ್ರತಿಭಾವಂತರಿದ್ದು ಇಂತಹ ಸಂಘ ಸಂಸ್ಥೆಗಳು ಕೈಜೋಡಿಸಿದ್ದಲ್ಲಿ ಇವರನ್ನು ಕಲಿಕೆಯಲ್ಲಿ ಇನ್ನಷ್ಟು ಸಕ್ರೀಯಗೊಳಿಸುವ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪಾಳ್ಯ ಗ್ರಾಮ ಪಂಚಾಯತಿಯ ನಿಕಟ ಪೂರ್ವ ಅಧ್ಯಕ್ಷ ಪ್ರಕಾಶ್, ಶಿಕ್ಷಣ ಸಸಂಯೋಜಕರಾದ ಜಯಣ್ಣ, ರವಿ, ಶಾಲಾ ಸಹ ಶಿಕ್ಷಕರಾದ ಷಣ್ಮುಖಪ್ಪ, ಹಾಗೂ ಗ್ರಾಮದ ಗ್ರಾಮಸ್ಥರು ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು‌.

Continue Reading

Hassan

ಡೆಂಗ್ಯೂ ಆತಂಕ ಬೇಡ, ಅಗತ್ಯ ಮುನ್ನೆಚ್ಚರಿಕೆ ಕ್ರಮವಹಿಸಿ ತಾಲೂಕು ಆರೋಗ್ಯಾಧಿಕಾರಿ ಡಾ ನಿಸಾರ್ ಫಾತೀಮ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಡೆಂಗ್ಯೂ ತಡೆಗಟ್ಟಲು ನೈರ್ಮಲ್ಯ ಅಗತ್ಯವಾಗಿದ್ದು, ಸಾರ್ವಜನಿಕರು ವೇಶನಗಳಲ್ಲಿ, ಕಸದರಾಶಿ ಅಥವಾ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ನಿಸಾರ್ ಫಾತೀಮ ಹೇಳಿದರು.

ಆಲೂರು ಪಟ್ಟಣ ವ್ಯಾಪ್ತಿಯಲ್ಲಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಡೆಂಗ್ಯೂ ನಿಯಂತ್ರಣ ಜಾಗೃತಿ ಜಾಥಾ ಸರ್ವೆಯಲ್ಲಿ ಪಟ್ಟಣದ ವಿವಿಧ ವಾರ್ಡ್ ಗಳಲ್ಲಿನ ಸಾರ್ವಜನಿಕರ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಿ ಮಾತನಾಡಿದ ಅವರು. ಕುಡಿಯುವ ನೀರಿನ ಸರಬರಾಜು ಟ್ಯಾಂಕ್‍ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ

ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಲಾಗಿದೆ. ಮನೆಗಳು, ಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘ‌ಕಾಲ ನಿಲ್ಲದಂತೆ ಕ್ರಮ ವಹಿಸಬೇಕು ಮತ್ತು ಆವರಣಗಳು ಸ್ವತ್ಛವಾಗಿರುವಂತೆ ನೋಡಿಕೊಳ್ಳುಬೇಕು. ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಜಯಪ್ರಕಾಶ್ ಹಾಗೂ ಆರೋಗ್ಯ ಇಲಾಖೆ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

Continue Reading

Trending

error: Content is protected !!