Connect with us

Kodagu

ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಸನ್ಮಾನ

Published

on

ಕುಶಾಲನಗರ : ಕುಶಾಲನಗರ ನಳಂದ ಇಂಟರ್ ನ್ಯಾಷನಲ್ ಪಿಯು ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದೇಚಮ್ಮ ಎಂ ಎಸ್, ಜಪಾನ್ ನಲ್ಲಿ ನಡೆದ ಪ್ರೆಸ್ಟೀಜಿಯನ್ಸ್ ಅಂತರರಾಷ್ಟ್ರೀಯ ಸಕುರಾ ವಿಜ್ಞಾನ ವಿನಿಮಯ (SAKURA Science Conference, JAPAN ) ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ ಹಿನ್ನೆಲೆ ಕಾಲೇಜು ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು.
ದೇಚಮ್ಮ ಎಂ ಎಸ್ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಫೂರ್ತಿ ಮಾನಕ್ (INSPIRE MANAK SCHEME) ಯೋಜನೆಯಲ್ಲಿ ಓವರ್ ಹೆಡ್ ಟ್ಯಾಂಕ್ ಕ್ಲೀನರ್ ಯೋಜನೆಯನ್ನು ಯಶಸ್ವಿ ಪೂರ್ಣಗೊಳಿಸಿದ ಹಿನ್ನೆಲೆ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನಕ್ಕೆ ಆಯ್ಕೆಯಾಗಿದ್ದರು.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೇಚಮ್ಮ ಎಂ ಎಸ್ ನವರಿಗೆ ಕಾಲೇಜಿನಲ್ಲಿ ಪ್ರಶಸ್ತಿಯನ್ನು ನೀಡುವ ಮೂಲಕ ಸನ್ಮಾನಿಸಲಾಯಿತು.
ಪ್ರಮುಖರಾದ ಕವಿತಾ ಸತಪನ್, ಶೈಕ್ಷಣಿಕ ಸಲಹೆಗಾರ ಎಫ್ ಎ ಎಸ್ ಸುರೇಂದ್ರ, ಪ್ರಾಂಶುಪಾಲ ಷಜಿ ಅಲುಂಗಲ್ ಜೋಸೆಫ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಸತಿ ನಿರ್ದೇಶಕ ನಮ್ಗಿಲ್ ಎನ್ ಪ್ರಶಸ್ತಿಯನ್ನು ದೇಚಮ್ಮನವರಿಗೆ ನಿಡುವ ಮುಲಕ ಸನ್ಮಾನಿಸಿದರು.

Continue Reading

Kodagu

ಕೊಡಗಿನಲ್ಲಿ ಶೇ.37 ಮಳೆ ಕೊರತೆ: ಬೆಳೆ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ವರದಿ – ಸಚಿವ ನರೇಂದ್ರಸ್ವಾಮಿ

Published

on

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಇದುವರೆಗಿನ ಮಳೆ ಪ್ರಮಾಣ, ಹಾರಂಗಿ ಜಲಾಶಯದ ನೀರಿನ ಮಟ್ಟ, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಸ್ಥಿತಿಗತಿ ಸೇರಿದಂತೆ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹವಾಮಾನ ವೈಪರಿತ್ಯದಿಂದ ಮುಂಗಾರು ತಡವಾಗಿ ಆರಂಭವಾಗಿದ್ದು, ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ ಎಂದರು. ಆದರೆ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಭತ್ತ ನಾಟಿ ಸೇರಿದಂತೆ ಕೃಷಿ ಚಟುವಟಿಕೆಗಳು ವೇಗ ಪಡೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಳೆಯಿಂದ ಹಾನಿಗೊಳಗಾದ ರಸ್ತೆಗಳನ್ನು ತುರ್ತಾಗಿ ದುರಸ್ತಿಪಡಿಸಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದ ಸಚಿವರು, ರಸ್ತೆ ಕಾಮಗಾರಿಗಳಿಗೆ ತ್ವರಿತವಾಗಿ ಟೆಂಡರ್ ಆಹ್ವಾನಿಸಿ, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.37ರಷ್ಟು ಮಳೆ ಕೊರತೆ ದಾಖಲಾಗಿದ್ದು, ಜುಲೈ ತಿಂಗಳಲ್ಲಿ ವಾಡಿಕೆಯ 859 ಮಿ.ಮೀ. ಮಳೆಯ ಬದಲಿಗೆ ಈ ಬಾರಿ 599 ಮಿ.ಮೀ. ಮಾತ್ರ ಮಳೆಯಾಗಿದೆ ಎಂದು ತಿಳಿಸಿದರು. ಶಾಂತಳ್ಳಿ, ಕುಶಾಲನಗರ ಹಾಗೂ ಹುದಿಕೇರಿ ಭಾಗಗಳಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ ಎಂದರು.

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 20 ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮನೆ ಹಾನಿ ಹಾಗೂ ಜೀವಹಾನಿ ಪ್ರಕರಣಗಳಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ಜಿಲ್ಲೆಯಲ್ಲಿ 19 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಮತ್ತು ಮುಸುಕಿನ ಜೋಳ ಬಿತ್ತನೆ ಗುರಿ ಹೊಂದಲಾಗಿದ್ದು, ಇದುವರೆಗೆ 2,800 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಭತ್ತ ಬಿತ್ತನೆಯಾಗಿದೆ ಎಂದು ಹೇಳಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಭತ್ತ ನಾಟಿ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಮಳೆ ಕೊರತೆಯಿಂದ ಅಲ್ಪಾವಧಿ ಹಾಗೂ ಮಧ್ಯಮಾವಧಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ಮಳೆಯಿಂದ ಹಾಳಾದ ರಸ್ತೆಗಳನ್ನು ತುರ್ತಾಗಿ ದುರಸ್ತಿಪಡಿಸಬೇಕು ಹಾಗೂ ಕುಶಾಲನಗರ ಒಳಚರಂಡಿ ಕಾಮಗಾರಿ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿ ಹಾಗೂ ಮಳೆ ಪರಿಸ್ಥಿತಿಗೆ ಸಂಬಂಧಿಸಿದ ಮಾಹಿತಿ ನೀಡಿದರು.

ಸಭೆಯ ಬಳಿಕ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರು ಹಾರಂಗಿ ಸಮೀಪದ ಹುಲಸೆ ಗ್ರಾಮದ ಕೃಷಿ ಪ್ರದೇಶಕ್ಕೆ ಭೇಟಿ ನೀಡಿ, ಮಳೆ ಕೊರತೆಯಿಂದ ಬೆಳೆಗಳ ಮೇಲೆ ಉಂಟಾದ ಪರಿಣಾಮವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

Continue Reading

Kodagu

ತಮಿಳುನಾಡು ಜನರ ಸಮಸ್ಯೆಗಳಿಗೂ ಸ್ಪಂದಿಸುವ ಅವಶ್ಯಕತೆ ಇದೆ – ಸಚಿವ ಪಿ.ಎಂ. ನರೇಂದ್ರ ಸ್ವಾಮಿ

Published

on

ಕುಶಾಲನಗರ : ತಮಿಳುನಾಡು ಜನರ ಸಮಸ್ಯೆಗಳಿಗೂ ಸ್ಪಂದಿಸುವ ಅವಶ್ಯಕತೆ ಇದೆ ಎಂದು ಸಚಿವ ಪಿ ಎಂ ನರೇಂದ್ರ ಸ್ವಾಮಿ ಹೇಳಿದರು.

ಕೊಡಗು ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಾವೇರಿ ತಾಯಿಯ ಆರ್ಶಿವಾದ ನಾಡಿನ ಜನತೆಯ ಮೇಲೆ ಇದೆ. ಈಗ ಕಾವೇರಿಯ ತವರಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆ ಬರುತ್ತಿದೆ. ಹಾರಂಗಿ ಜಲಾಶಯ ಭರ್ತಿಯಾಗಿದೆ. ಕೆಆರ್ಎಸ್ ಕೂಡ ಸಾಧಾರಣ ಮಟ್ಟಕ್ಕೆ ಭರ್ತಿಯಾಗುತ್ತಿದೆ ಎಂದರು.


ಹಾರಂಗಿ ಜಲಾಶಯ ಭರ್ತಿಯಾಗಿದ್ದು ರೈತರು ಕೃಷಿಗೆ ಕಾಲುವೆಗಳಿಗೆ ನೀರು ಹರಿಸಬೇಕೆಂಬ ಒತ್ತಾಯ ಇದೆ. ಜೊತೆಗೆ ತಮಿಳುನಾಡಿಗೆ ನೀರು ಹರಿಸುವ ಅವಶ್ಯಕತೆ ಇದೆಯೇ ಎಂಬ ಪ್ರಶ್ನೆಗೆ ವಿಸ್ತೃತವಾದ ರೀತಿಯಲ್ಲಿ ಈ ಸಮಸ್ಯೆಯನ್ನು ವಿಶ್ಲೇಷಿಸಬೇಕು. ನಮ್ಮ ರಾಜ್ಯದ ಈ ಪ್ರದೇಶದ ಕುಡಿಯುವ ನೀರು ಮತ್ತು ರೈತರ ಕೃಷಿಗೆ ಬೇಕಾಗುವ ನೀರನ್ನು ಬಳಸುವುದು ಎಷ್ಟು ಮುಖ್ಯವೋ ಅದೇ ರೀತಿ ನಮ್ಮಿಂದ ಕೆಳಭಾಗದಲ್ಲಿರುವ ತಮಿಳುನಾಡು ಜನರ ಸಮಸ್ಯೆಗಳಿಗೂ ಸ್ಪಂದಿಸುವ ಅವಶ್ಯಕತೆ ಇದೆ. ಎಲ್ಲಕ್ಕೂ ಸರ್ಕಾರ ಅಂತರರಾಜ್ಯ ಮಾತುಕತೆಯ ಮೂಲಕ ನಮ್ಮ ವರದಿ ಆಧರಿಸಿ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತದೆ ಎಂದರು.

ಕಾವೇರಿ ತುಂಬಿದರೆ ತಮಿಳುನಾಡಿನವರೆಗೆ ಸಂಭ್ರಮ ಇರುತ್ತದೆ ಆದರೆ ಜಲಾಶಯ ಇರುವ, ಯಥೇಚ್ಛವಾಗಿ ಮಳೆ ಸುರಿಯುವ ಕೊಡಗಿನಲ್ಲಿ ಆ ಸಂಭ್ರಮ ಇರುವುದಿಲ್ಲ ಇದು ವಿಪರ್ಯಾಸವೇ ಎಂದರು.

Continue Reading

Kodagu

2029ರ ವೇಳೆಗೆ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬುದು ನಮ್ಮ ಗುರಿ: ಸಚಿವ ಪಿ.ಎಂ. ನರೇಂದ್ರ ಸ್ವಾಮಿ

Published

on

ಕುಶಾಲನಗರ: 2029ರ ವೇಳೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುವುದು ನಮ್ಮ ಪಕ್ಷದ ಉದ್ದೇಶ ಹಾಗೂ ಮುಂದಿನ ಗುರಿಯಾಗಿದೆ ಎಂದು ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಹೇಳಿದರು.

ಕೊಡಗು ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ ಹಾಗೂ ಸಚಿವ ಸ್ಥಾನದ ಆಕಾಂಕ್ಷೆಯಲ್ಲಿರುವ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಪಕ್ಷದ ಆಂತರಿಕ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸುವುದು ಸೂಕ್ತವಲ್ಲ. ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲ ಸಮಸ್ಯೆಗಳನ್ನು ಪಕ್ಷದ ಹಿರಿಯ ನಾಯಕರು ಬಗೆಹರಿಸಲಿದ್ದಾರೆ. ಇದು ಕುಟುಂಬದ ವಿಚಾರವಾಗಿದ್ದು, ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.

ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬುದು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಅವರಿಗೆ ಸಂಬಂಧಿಸಿದ ವಿಚಾರವಾಗಿದೆ. ನಮ್ಮೆಲ್ಲರ ಉದ್ದೇಶ ಒಂದೇ ಆಗಿದ್ದು, ನಾವೆಲ್ಲರೂ ಕಾಂಗ್ರೆಸ್ಸಿಗರು ಎಂದು ಸಚಿವರು ತಿಳಿಸಿದರು.

Continue Reading

Trending

error: Content is protected !!