Connect with us

Hassan

ಕಾಮಗಾರಿ ಗುಣ ಮಟ್ಟ ವೀಕ್ಷಣೆ ಮಾಡಿದ ಶಾಸಕ ಹೆಚ್.ಪಿ. ಸ್ವರೂಪ್

Published

on

ಹಾಸನ: ನಗರದ ಹೊಸಲೈನ್ ರಸ್ತೆಯಿಂದ ಅಮೀರ್ ಮೊಹಲ್ಲಾ ವೃತ್ತದವರೆಗೂ ಸಂಪರ್ಕ ಕಲ್ಪಿಸುವ ನೂರು ಮೀಟರ್ ರಸ್ತೆ ಮತ್ತು ಒಳಚರಂಡಿ ಕಾಮಗಾರಿಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದ ನಂತರ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಇದೆ ವೇಳೆ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಸೂಚಿಸಿದರು.

Continue Reading
Click to comment

Leave a Reply

Your email address will not be published. Required fields are marked *

Hassan

ಜಾಲತಾಣದಲ್ಲಿ ಪೋಸ್ಟ್ ಹಾಕಿದ ನಾಗೇಶ್ ಗೆ ಕಠಿಣ ಶಿಕ್ಷೆ ವಿಧಿಸುವಂತೆ ಬನವಾಸೆ ರಂಗಸ್ವಾಮಿ ಆಗ್ರಹ

Published

on

ಹಾಸನ: ಹಿಂದುಳಿದ ವರ್ಗಗಳ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂರುವ ಬಿಜೆಪಿ ಪಕ್ಷದ ನಾಗೇಶ್ ಎಂಬವನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರು ಆಗ್ರಹಿಸಿ ಎಸ್ಪಿ ಅವರಲ್ಲಿ ಮನವಿ ಮಾಡಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಿಡಿಗೇಡಿ ಬಿಜೆಪಿ ಕಾರ್ಯಕರ್ತನೋರ್ವ ಮುಸ್ಲಿಂ, ಕ್ರಿಶ್ಚನ್ ಹಾಗೂ ಅಲ್ಪಸಂಖ್ಯಾತರು ಸೇರಿ ಕಾಂಗ್ರೆಸ್ ಗೆ ಸಹಕಾರ ಕೊಡುತ್ತಿದ್ದಾರೆ. ದೇಶದ್ರೋಹಿಗಳು ಎಂದು ಜಾಲತಾಣಗಳಲ್ಲಿ ಪೋಸ್ಟರ್ ಹಾಕಲಾಗಿದ್ದು, ಕೂಡಲೇ ಆತನನ್ನು ಈ ಕ್ಷಣದಲ್ಲಿ ಬಂಧಿಸಿ ಶಿಕ್ಷೆ ಕೊಡಬೇಕೆಂದು ಮನವಿ ಮಾಡುತ್ತಿದ್ದೇವೆ. ಕಠಿಣ ಶಿಕ್ಷೆ ಏನಾದರೂ ಕೊಡದಿದ್ದರೇ ಕಾಂಗ್ರೆಸ್ ಪಕ್ದವತಿಯಿಂದ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ದೇಶದಲ್ಲಿರುವ ಎಲ್ಲಾರೂ ಕೂಡ ಅಣ್ಣ ತಮ್ಮಂದಿರಂತೆ ಹಿಂದೂ, ಮುಸ್ಲಿಂ, ಕ್ರಿಶ್ಚನ್ ಬಾಳಿ ಬದುಕುತ್ತಿದ್ದೇವೆ. ಆದರೇ ಇದಕ್ಕೆ ಹುಳಿ ಇಂಡುವ ಕೆಲಸ ಬಿಜೆಪಿಯ ಕೆಲ ಚೇಲಗಳು ಮಾಡುತ್ತಿದ್ದಾರೆ. ಕೂಡಲೇ ನಾಗೇಶ್ ಎನ್ನುವ ವ್ಯಕ್ತಿಯನ್ನ ಗಡಿಪಾರು ಮಾಡಿ ಶಿಕ್ಷೆ ವಿಧಿಸುವಂತೆ ಆಗ್ರಹವ್ಯಕ್ತಪಡಿಸಿದರು.

Continue Reading

Hassan

ಪ್ರಜ್ವಲ್ ಲೈಂಗಿಕ ಪ್ರಕರಣ : ಬಂಧನಕ್ಕೆ ಆಗ್ರಹಿಸಿ ಮೇ. 30 ರಂದು ಹಾಸನ ಚಲೋ

Published

on

ಮಂಡ್ಯ: ಸಂಸದ ಪ್ರಜ್ವಲ್ ರೇವಣ್ಣ ಅವರ ಡಿಪ್ಲೋಮೆಟಿಕ್ ಪಾಸ್ಪೋರ್ಟ್ ರದ್ದುಪಡಿಸಿ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ, ಇದೇ ಮೇ 30ರಂದು ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮಿ ತಿಳಿಸಿದರು .

ವರ್ಗಾವಣೆ, ಬಡ್ತಿ ಸೇರಿದಂತೆ ಇನ್ನಿತರ ವಿಚಾರವಾಗಿ ಸಹಾಯ ಬಯಸಿ ಹೋದ ಹೆಣ್ಣನ್ನು ಸಂಸದ ಪ್ರಜ್ವಲ್ ರೇವಣ್ಣ ಈ ರೀತಿ ಬಳಸಿಕೊಂಡಿರುವುದು ಖಂಡನನಯ ಎಂದರು .

ಇಂತಹ ಘಟನೆಗಳು ನಡೆದಾಗ ಜನಪ್ರತಿನಿಧಿಗಳ ಹತ್ತಿರ ಮಾತನಾಡಲು ಆಗುವುದಿಲ್ಲ. ಈ ವಿಚಾರದಲ್ಲಿ ಎಲ್ಲಾ ಪಕ್ಷಗಳು ರಾಜಕಾರಣ ಮಾಡುತ್ತಿದ್ದು , ತಪ್ಪಿತಸ್ಥರಿಗೆ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೋರಾಡಬೇಕು ಎಂದರು.

ಎಸ್ಐಟಿ ರಚನೆಯಾದ ನಂತರ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ಪರಾರಿಯಾಗಿದ್ದಾರೆ. ಈ ವಿಚಾರ ಕೇಂದ್ರ ಸರ್ಕಾರ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಗೊತ್ತಿದೆ. ಆದರೆ ಇದುವರೆಗೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ನೇಹ ವಿಚಾರದಲ್ಲಿ ಬಿಜೆಪಿ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದು ಹೋರಾಟ ಮಾಡುತ್ತಿದೆ. ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣರ ಮೂಲ ವಿಚಾರದ ಬಗ್ಗೆ ಮಾತನಾಡುತ್ತಿಲ್ಲ. ದೇವೇಗೌಡರು ಈ ವಿಚಾರ ನನಗೆ ನೋವು ತಂದಿದೆ ಎನ್ನುತ್ತಿದ್ದು, ಆದರೆ ಹೆಣ್ಣು ಮಕ್ಕಳಿಗೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿಲ್ಲ ಎಂದು ದೂರಿದರು.

ಈಗ ನಡೆದಿರುವ ಘಟನೆ ಹೆಣ್ಣಿನ ಘನತೆ ವಿಚಾರವಾಗಿದೆ. ರಾಜಕೀಯ ಪಕ್ಷಗಳು ರಾಜಕೀಯವನ್ನು ಬದಿಗಿಟ್ಟು ಹೆಣ್ಣಿನ ಘನತೆ ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ಸಿಐಟಿಯು ವತಿಯಿಂದ ಮೇ 30ರಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸಿ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಹಾಸನ ಚಲೋ ನಡೆಸಲಾಗುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಂ.ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಜಿಲ್ಲಾ ಖಜಾಂಚಿ ಮಹದೇವಮ್ಮ, ಬಿಸಿಯೂಟ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಉಪಸ್ಥಿತರಿದ್ದರು.

Continue Reading

Hassan

ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು

Published

on

||ರಾಜ್ಯ ಸರಕಾರ ವಿರುದ್ಧ ಜೆಡಿಎಸ್ ನೇರ ಆರೋಪ||

||ಡಿಕೆಶಿ ಸ್ಲೀಪರ್ ಸೆಲ್ ನಿಂದ 4 ಸಂಚು||

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ಅಲ್ಲದೆ; ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದಿರುವ ಜೆಡಿಎಸ್; ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುರುತರ ಆರೋಪಗಳನ್ನು ಮಾಡಿದೆ.

ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.


ಕಳಚಿ ಬಿದ್ದ ಕಾಂಗ್ರೆಸ್ ಅಸಲಿ ಮುಖ:

ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ… ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. CDಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.


ಡಿಕೆಶಿಯಿಂದ ನಾಲ್ಕು ಸಂಚು:

CDಶಿವಕುಮಾರ್ ಗ್ಯಾಂಗಿನ ಸಂಚುಗಳು ಹೀಗಿವೆ ಎಂದಿರುವ ಜೆಡಿಎಸ್, ಡಿ.ಕೆ.ಶಿವಕುಮಾರ್ ಹೂಡಿರುವ ಸಂಚುಗಳನ್ನು ಪಟ್ಟಿ ಮಾಡಿದೆ.

•ಸಂಚು ನಂ.1: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು.
•ಸಂಚು ನಂ.2: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು.
•ಸಂಚು ನಂ.3: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು.
•ಸಂಚು ನಂ.4: ಹೆಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು.

ಡಿಕೆಶಿ ಸ್ಲೀಪರ್ ಸೆಲ್ ಟೂಲ್ ಕಿಟ್ ಏನು?


ಈ ಸಂಚು ಜಾರಿಗೆ CDಶಿವಕುಮಾರ್ ಸ್ಲೀಪರ್ ಸೆಲ್ ನ ಟೂಲ್ ಕಿಟ್ ವ್ಯವಹಾರದ ಬಗ್ಗೆ ಜೆಡಿಎಸ್ ಎಳೆಎಳೆಯಾಗಿ ವಿವರಿಸಿದೆ.

•ಈ ಮಹಾಸಂಚು ಸಾಕಾರಕ್ಕೆ CDಶಿವಕುಮಾರ್ ಹೂಡಲಿದ್ದ ಬಂಡವಾಳ ಬರೋಬ್ಬರಿ ₹100 ಕೋಟಿ!!
•ಹೆಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ವಕೀಲ ದೇವರಾಜೇಗೌಡರಿಗೆ ₹100 ಕೋಟಿ ಆಫರ್!!
•ಅಡ್ವಾನ್ಸ್ ಆಗಿ ₹5 ಕೋಟಿ ಹಣವನ್ನು ಬೌರಿಂಗ್ ಕ್ಲಬ್ಬಿನ ಕೊಠಡಿ ಸಂಖ್ಯೆ 110ಕ್ಕೆ ರವಾನೆ.
•ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ರೆಡಿ ಮಾಡಿದ್ದೇ CDಶಿವಕುಮಾರ್.
•ಮೋದಿ, ಕುಮಾರಸ್ವಾಮಿ ಅವರುಗಳ ವಿರುದ್ಧ ಅಪಪ್ರಚಾರ ನಡೆಸಲು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ CDಶಿವಕುಮಾರ್.
•ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ ನ ಮಹಾನ್ ಟಾರ್ಗೆಟ್!!

ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್ಸಿಗೆ ಧಿಕ್ಕಾರ ಎಂದು ಜೆಡಿಎಸ್ ಕಿಡಿಕಾರಿದೆ.

ಅಲ್ಲದೆ; ನೂರುಕೋಟಿ CDಶಿವಕುಮಾರ್, CDಶಿವಕುಮಾರ್, ಪೆನ್ ಡ್ರೈವ್ ಗ್ಯಾಂಗ್, CDಶಿವಕುಮಾರ್ ಸ್ಲೀಪರ್ ಸೆಲ್, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದೆಲ್ಲಾ ಡಿಕೆಶಿಯನ್ನು ಕುಟುಕಿದೆ ಜೆಡಿಎಸ್.

Continue Reading

Trending

error: Content is protected !!