Hassan
ರೈತರಿಗೆ-ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದಂತೆ ನಿಗಾವಹಿಸಿ: ಹೆಚ್.ಪಿ. ಸ್ವರೂಪ್
ತಾಲೂಕು ಅಧಿಕಾರಿಗಳಿಗೆ ಶಾಸಕ ಹೆಚ್.ಪಿ. ಸ್ವರೂಪ್ ಸೂಚನೆ
ಹಾಸನ: ಇಲಾಖೆಯಡಿ ಸಿಗುವ ಸೌಲಭ್ಯವನ್ನು ಸರಿಯಾಗಿ ತಲುಪಿಸಿ ರೈತರಿಗೆ ಮತ್ತು ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಪ್ರಚಾರ ಮಾಡಿ ನಿಗಾವಹಿಸಬೇಕೆಂದು ತಾಲೂಕು ಅಧಿಕಾರಿಗಳಿಗೆ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಅವರು ಸಲಹೆ ನೀಡಿ ಸೂಚಿಸಿದರು.
ನಗರದ ಹಾಸನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರದಂದು ಕ್ಷೇತ್ರದ ಶಾಸಕ ಹೆಚ್.ಪಿ.ಸ್ವರೂಪ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಮಾತನಾಡಿದ ಅವರು, ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುತ್ತಿದ್ದಾರೆಯೇ ಹಾಗೂ ಅಲ್ಲಿನ ಸ್ವಚ್ಚತೆ, ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು. ಶಿಥಿಲವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಗುರುತಿಸಿ ನರೇಗಾ ಯೋಜನೆಯಡಿ ದುರಸ್ಥಿಪಡಿಸಬೇಕು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ಮುಂತಾದ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದರು.
ಇತ್ತೀಚಿಗೆ ಕೋವಿಡ್ ಪ್ರಕರಣ ಕಡೆ ಹೆಚ್ಚಾಗುತ್ತಿದ್ದು ಆರೋಗ್ಯ ಇಲಾಖೆ ಅವರು ಅದರ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋರೋನಾ ವೈರಸ್ ತಡೆಗಟ್ಟಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ತಡೆಗಟ್ಟಲು ಸಹಕರಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಹಾಸನ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಪರಪ್ಪಸ್ವಾಮಿ ಅವರು ಮಾತನಾಡಿ, ರೇಷ್ಮೆ ಬೆಳೆಯಲ್ಲಿ ಉತ್ತಮ ಆದಾಯಗಳಿಸಬಹುದಾಗಿದ್ದು, ನರೇಗಾ ಯೋಜನೆಯಡಿ ಸಿಗುವ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಹೆಚ್ಚಿನ ರೈತರು ರೇಷ್ಮೆ ಬೆಳೆ ಬೆಳೆಯುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಅವರು ಸಲಹೆ ನೀಡಿದರು. ಪ್ರಸ್ತುತ ಬರಗಾಲದ ವೇಳೆಯಲ್ಲಿ ಜಾನುವಾರುಗಳಿಗೆ ಯಾವುದೇ ರೀತಿ ಮೇವಿನ ಕೊರತೆಯಾಗದಂತೆ ಮುಂಜಗ್ರಾತ ಕ್ರಮವಹಿಸಬೇಕು ಎಂದರಲ್ಲದೆ ಹಸುಗಳಿಂದ ಹಾಲು ಕರೆಯುವ ಸ್ಪರ್ಧೆಗಳನ್ನು ಏರ್ಪಡಿಸಿ ರೈತರಲ್ಲಿ ಹಸು ಸಾಕಣೆ ಮಾಡಲು ಉತ್ತೇಜನ ನೀಡಿ ಎಂದು ಸಲಹೆ ನೀಡಿದರು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಬರುವ ಕೆರೆಗಳನ್ನು ಹರಾಜು ಹಾಕುವ ಮೂಲಕ ಕೆರೆಗಳಿಗೆ ಮೀನಿನ ಮರಿಗಳನ್ನು ಬಿಡಬೇಕು.
ಅಂಗನವಾಡಿ ಕೇಂದ್ರಗಳಲ್ಲಿರುವ ಮಕ್ಕಳಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಬೇಕು ಅಪೌಷ್ಠಿಕತೆ, ಕಡಿಮೆ ತೂಕ ಇರುವಂತಹ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು ಎಂದು ಅವರು ಹೇಳಿದರು.
ಇದೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಮಾತನಾಡಿ, ಬರ ಪರಿಹಾರ ಹಣವು ಮೊದಲ ಹಂತದಲ್ಲಿ ಬಿಡುಗಡೆಯಾಗಿದ್ದು ರೈತರ ಖಾತೆಗೆ ಹಣವು ಜಮೆಯಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ದೊರೆಯುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ರವಿ ಅವರು ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ನರೇಗಾ ಯೋಜನೆಯಡಿ ದೊರೆಯುವ ತೆಂಗು, ಅಡಿಕೆ, ಬಾಳೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬಹದು ಎಂದು ಮಾಹಿತಿ ನೀಡಿದರು.
ಜೇನು ಸಾಕಾಣಿಕೆ, ತೋಟಗಾರಿಕೆ ಇಲಾಖೆ ಪ್ರಗತಿ ಸಾಧನೆ ಹಾಗೂ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು. ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿ ಸಾಧನೆಯ ಬಗ್ಗೆ ಅಂಕಿ ಅಂಶ ನೀಡಿದರು.

ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ. ಗಿರೀಶ್ ಅವರು ಮಾತನಾಡಿ, ನರೇಗಾ ಯೋಜನೆಯಡಿ ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಅನೇಕ ರೀತಿಯ ಸೌಲಭ್ಯಗಳು ಲಭ್ಯವಿದ್ದು ಸಾರ್ವಜನಿಕರು ಅದರ ಯೋಜನೆಯನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಜಾನುವಾರು ಕೊಟ್ಟಿಗೆ, ಕುರಿ ಶೆಡ್, ಹಂದಿಶೆಡ್ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುವುದು ಸಾರ್ವಜನಿಕರು ಅದರ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಉತ್ತಮ ಜೀವನ ನಿರ್ವಹಣೆಗೆ ಸಹಕಾರಿಯಾಗುತ್ತದೆ ಜೊತೆಗೆ ಕೃಷಿ ಚಟುವಟಿಕೆಗಳು ಹಾಗೂ ಹಸುಗಳ ಸಾಕಾಣಿಕೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಸಲಹೆ ನೀಡಿದರು.
ಹಾಸನ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಸ್ವರೂಪ್ ಪ್ರಕಾಶ್ ಅವರು ಕೆಡಿಪಿ ಸಭೆಗೂ ಮುನ್ನ ವಿಶೇಷ ಚೇತನರಿಗೆ ಉಚಿತವಾಗಿ ಬೈಕ್ ಗಳನ್ನು ವಿತರಿಸಿದರು.
ಸಭೆಯಲ್ಲಿ ಹಾಸನ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಸಿ.ಬಿ ದಿನೇಶ್ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು
Hassan
ಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
ಹಾಸನ: ಗಾಂಜಾ ಅಮಲಿನಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ಶವನದ ಮುಂದೆಯೇ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವಿಕೃತಿ ಮೆರೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಲೂರು ತಾಲೂಕು ದೊಡ್ಡಕಣಗಾಲು ಗ್ರಾಮದ ಆಟೋರಿಕ್ಷಾ ಚಾಲಕ ಉಲ್ಲಾಸ್ ಕ್ಯಾಟಿ(21) ಬಂಧಿತ ಆರೋಪಿ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಮಾತನಾಡಿ , ಬಂಧಿತ ಆರೋಪಿ ಹಾಗೂ ಕೊಲೆಯಾದ ಯುವಕ ಹೂವಿನಹಳ್ಳಿ ಗ್ರಾಮದ ಕೀರ್ತಿ (21) ಇಬ್ಬರೂ ಆಟೋ ಚಾಲಕರಾಗಿದ್ದು ಸ್ನೇಹಿತರಾಗಿದ್ದು ಡಿ. 8ರಂದು ಸಂಜೆ ಕ್ಷುಲ್ಲಕ ಕಾರಣಕ್ಕೆ ಕೀರ್ತಿಯೊಂದಿಗೆ ಜಗಳ ತೆಗೆದು ಉಲಾಸ್ ಹಾಗೂ ಇತರ ಆರೋಪಿಗಳು ಕೀರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಬಂಧಿತ ಆರೋಪಿ ಉಲ್ಲಾಸ್ ಶವದ ಮುಂದೆಯೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಎಂದು ಮಾಹಿತಿ ನೀಡಿದ್ದಾರೆ.

ಡಿ. 9 ರಂದು ಬೆಳಗ್ಗೆ ಮೃತ ಕೀರ್ತಿ ಸಹೋದರ ಕಿರಣ್ ಅವರ ಮೊಬೈಲ್‌ಗೆ ಬಂದ ವೀಡಿಯೋ ನೋಡಿ ಕೂಡಲೇ ಹಾಸನ ನಗರ ಪೊಲೀಸ್ ಠಾಣೆಗೆ ಹೋಗಿ ಮಾಹಿತಿ ತಿಳಿಸಿದ್ದರು. ಬಳಿಕ ನಗರ ಠಾಣೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಿಯಾಂಕ, ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಹರೀಶ್, ಸಿಬ್ಬಂದಿ ಲತೇಶ ಅವರೊಂದಿಗೆ ವಿಡಿಯೋದಲ್ಲಿದ್ದ ಜಾಗದ ಅಂದಾಜಿನಲ್ಲಿ ಚನ್ನಪಟ್ಟಣ ಮತ್ತು ಬಿಟ್ಟಗೌಡನಹಳ್ಳಿ ಜಂಕ್ಷನ್ ನಡುವಿನ ಪವನಪುತ್ರ ಕೋಳಿ ಫಾರಂ ಹಿಂಭಾಗದ ಖಾಲಿ ಜಾಗದ ಮುಳ್ಳು ಮತ್ತು ಗಿಡಗಳ ನಡುವೆ ಹುಡುಕುತ್ತಾ ಬಂದಾಗ ಕೀರ್ತಿ ಶವ ಪತ್ತೆಯಾಗಿದೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಮುಖ ಆರೋಪಿ ಉಲ್ಲಾಸ್‌ನನ್ನು ಬಂಧಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದರು.
Hassan
ಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
ಅರಸೀಕೆರೆ: ನಗರದ ಶಿವಾಲಯ ಹಿಂಭಾಗದ ಶಿವಾಜಿ ಕಾಲೋನಿಯಲ್ಲಿರುವ ಶ್ರೀ ಮೆಳೆಯಮ್ಮದೇವಿ ಮತ್ತು ಚಿಕ್ಕಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ಡಿ. 11ರಿಂದ 14 ರವರೆಗೆ ಅದ್ದೂರಿಯಾಗಿ ನಡೆಸಲು ಸೇವಾ ಸಮಿತಿ ನಿರ್ಧರಿಸಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಶ್ರೀಮೆಳೆಯಮ್ಮ ದೇವಿ, ಶ್ರೀ ಚಿಕ್ಕಮ್ಮ ದೇವಿ, ಶ್ರೀ ದೂತರಾಯ ಮತ್ತು ಕೆಂಚರಾಯ ಸ್ವಾಮಿಯವರ 27ನೇ ವರ್ಷದ ಜಾತ್ರಾ ಮಹೋತ್ಸವವನ್ನು ಅರಸೀಕೆರೆ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿ, ಶ್ರೀ ಮಲ್ಲಿಗೆಮ್ಮ ದೇವಿ, ಶ್ರೀ ಆಲಘಟ್ಟದಮ್ಮದೇವಿ ಮತ್ತು ಕಿತ್ತನಕೆರೆಯ ಶ್ರೀ ಚೌಡೇಶ್ವರಿ ದೇವಿಯವರ ಸಮ್ಮುಖದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದೆ.

ಡಿ. 11ರಂದು ದೇವಸ್ಥಾನದಲ್ಲಿ ಧ್ವಜಾರೋಹಣ ನಂತರ ಮದುವಣಿಗೆ ಶಾಸ್ತ್ರ ಸಂಜೆ ಸಂಜೆ ಮೆರವಣಿಗೆ ನಡೆಯಲಿದೆ. ಡಿ.12 ರಂದು ಬಳುವನೇರಲು ಗ್ರಾಮದೇವತೆ ಉಡುಸಲಮ್ಮ ಶ್ರೀ ಚೌಡೇಶ್ವರಿ ದೇವಿ ಶ್ರೀ ಧೂತರಾಯ ಸ್ವಾಮಿಯ ವರ ಸಮ್ಮುಖದಲ್ಲಿ ಅಮ್ಮನವರ ಮೂಲ ದೇವಸ್ಥಾನದಲ್ಲಿ ಬೆಳಗ್ಗೆ 11ಕ್ಕೆ ಬನ್ನಿಮರ ಹತ್ತುವುದು ನಂತರ ಮಹಾ ಮಂಗಳಾರತಿ ಮಧ್ಯಾಹ್ನ 2ಕ್ಕೆ ಅಮ್ಮನವರ ಸಿಡಿ. ರಾತ್ರಿ 7ಕ್ಕೆ ತೇರಿನ ಬೀದಿಯಲ್ಲಿ ಉತ್ಸವ ಆರತಿಬಾನ ಹಮ್ಮಿಕೊಳ್ಳಲಾಗಿದೆ.

ಡಿ. 13 ರಂದು ಶಿವಾಲಯದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಗಂಗಾ ಪೂಜೆ. ಸಂಜೆ ನಗರದ ಪ್ರಮುಖ ಬೀದಿಗಳಲ್ಲಿ ಗ್ರಾಮ ದೇವರುಗಳ ಮೆರವಣಿಗೆ ನಡೆಯಲಿದೆ. ಡಿ.14 ರಂದು ಮಧ್ಯಾಹ್ನ 12ಕ್ಕೆ ಮಹಾ ರಥೋತ್ಸವ ನಡೆಯಲಿದ್ದು, ಮಧ್ಯಾಹ್ನ 1:00 ಗಂಟೆಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀದೇವಿಯವರ ಕೃಪೆಗೆ ಪಾತ್ರರಬೇಕು. ಇನ್ನೂ ರಾತ್ರಿ 8 ಗಂಟೆಗೆ ಮಣೆವು ಹಮ್ಮಿಕೊಳ್ಳಲಾಗಿದೆ ಎಂದು ದೇಗುಲದ ಸೇವಾ ಸಮಿತಿ ತಿಳಿಸಿದೆ.
Hassan
ವಿಶ್ವ ಮಾನವ ಹಕ್ಕುಗಳು ಹುಟ್ಟಿನಿಂದಲೇ ದೊರೆಯುವ ಹಕ್ಕುಗಳು: ನ್ಯಾ.ದೇವರಾಜು
ಹಾಸನ: ಮಾನವನಿಗೆ ಅವನ ಹುಟ್ಟಿನಿಂದಲೇ ದೊರೆಯುವ ಹಕ್ಕುಗಳೆಂದರೇ ಬದುಕು, ಮಾತನಾಡುವುದು, ಧರ್ಮ, ಭಾಷೆ, ಉದ್ಯೋಗ ಇವುಗಳನ್ನು ಯಾರೂ ಮೊಟಕು ಮಾಡಬಾರದು. ಇವುಗಳನ್ನು ಕಾಪಾಡುವುದು ನಮ್ಮ ಸಂವಿಧಾನ ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ದೇವರಾಜು ತಿಳಿಸಿದರು.
ನಗರದ ಸಾಲಗಾಮ ರಸ್ತೆ ಬಳಿ ಇರುವ ಎಂ. ಕೃಷ್ಣ ಕಾನೂನು ಕಾಲೇಜು ಸಭಾಂಗಣದಲ್ಲಿ ನಾಗರಿಕ ಹಕ್ಕುಗಳ ಸಂರಕ್ಷಣ ಸಂಘ, ಜಿಲ್ಲಾ ಚಾಪ್ಟರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಂ. ಕೃಷ್ಣ ಕಾನೂನು ಕಾಲೇಜು, ಸರ್ಕಾರಿ ಕಾನೂನು ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಭೂಮಿ ಮೇಲೆ ಜೀವಿಸುವ ಸ್ವಾತಂತ್ರ್ಯ, ಉದ್ಯೋಗ ಸೇರಿದಂತೆ ಇತರೆ ಮಾನವನ ಹಕ್ಕುಗಳಿವೆ. ಯಾರ ಹಕ್ಕುಗಳನ್ನು ಯಾರು ಮೊಟಕುಗೊಳಿಸಬಾರದು. ಮಾನವನ ಹಕ್ಕುಗಳು ಉಲ್ಲಂಘನೆಯಾದ ಪರಿಣಾಮ ಕಾನೂನುಗಳ ರಚನೆಯಾಗಿ ಜಾರಿಯಾಗುತ್ತಿದೆ. 1948ರಲ್ಲಿ ವಿಶ್ವ ಸಂಸ್ಥೆಯವರು ಮಾನವನ ಹಕ್ಕುಗಳ ಉಲ್ಲಂಘನೆ ಕುರಿತು ಡಿ.10 ದಿನವನ್ನು ವಿಶ್ವ ಮಾನವ ಹಕ್ಕುಗಳ ದಿನವನ್ನಾಗಿ ಘೋಷಣೆ ಮಾಡಿದೆ ಎಂದರು.
ವಿಶ್ವ ಮಾನವ ಹಕ್ಕುಗಳ ಮುಖ್ಯ ಉದ್ದೇಶ ಏನೆಂದರೆ ಪ್ರತಿಯೊಬ್ಬ ವ್ಯಕ್ತಿಗೂ ಅವರದೆಯಾದಂತಹ ಕಾನೂನಿನ ವ್ಯಾಪ್ತಿಯಾದಂತಹ ಜೀವನವನ್ನು ನಡೆಸುವುದು. ಮಾತನಾಡುವುದು ತನಗೆ ಸೂಕ್ತವಾದಂತಹ ಧರ್ಮ ಆಚರಣೆ ಮಾಡುವಂತಹ ಮತ್ತು ಸೂಕ್ತವಾದಂತಹ ಭಾಷೆಯಲ್ಲಿ ಮಾತನಾಡಲು, ಉದ್ಯೋಗ ಮಾಡುವುದು ಸೇರಿದಂತೆ ಪ್ರತಿಯೊಂದು ಹಕ್ಕುಗಳಿವೆ. ಯಾವುದೇ ವ್ಯಕ್ತಿಗೆ ಲಿಂಗದ ಆಧಾರದ ಮೇಲೆ ಇಲ್ಲವೇ ಧರ್ಮದ ಆಧಾರದ ಮೇಲೆ ಮತ್ತೆ ಇತರೆ ಯಾವುದೇ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂದು ಹೇಳಿದರು.

ಇತಿಹಾಸ ನೋಡಿದರೇ ತಾರತಮ್ಯ ಎಂಬುದು ಮೊದಲಿನಿಂದಲೂ ನಡೆಯುತ್ತಿದೆ. ಸ್ವಾತಂತ್ರ್ಯದ ನಂತರ ಕೂಡ ತಾರತಮ್ಯವನ್ನು ಕಾಣುತ್ತಿದ್ದೇವೆ. ಒಂದು ಪುರುಷ ಮತ್ತು ಮಹಿಳೆಯರ ನಡುವೆ ತಾರತಮ್ಯ. ಲಿಂಗ ಶೋಷಣೆ, ಧರ್ಮ-ಧರ್ಮಗಳ ನಡುವೆ ವೈಮನಸ್ಸು, ಇನ್ನೊಂದು ಧರ್ಮವನ್ನು ದ್ವೇಷ ಮಾಡು, ಯಾವುದು ಕಡಿಮೆ ಹೆಚ್ಚು ಎಂದು ಯಾವ ಧರ್ಮವು ಹೇಳುವುದಿಲ್ಲ. ನಮ್ಮ ಅನುಕೂಲಕ್ಕೆ ತಕ್ಕಂತೆ ಧರ್ಮವನ್ನು ಪಾಲಿಸುತ್ತಿದ್ದೇವೆ ಎಂದು ಕಿವಿಮಾತು ಹೇಳಿದರು.
ಆದರೆ ಮತ್ತೊಂದು ಧರ್ಮದ ಬಗ್ಗೆ ಯಾವುದೇ ಕಾರಣಕ್ಕೂ ತಾರತಮ್ಯ ಮಾಡಬಾರದು. ಪ್ರತಿಯೊಬ್ಬರಿಗೂ ಸಹ ಉತ್ತಮವಾಗಿ ನಮ್ಮ ಸಂವಿಧಾನದ ವ್ಯಾಪ್ತಿಯಲ್ಲಿ ಗೌರವಯುತ ಜೀವನ ಮಾಡುವಂತಹ ಹಕ್ಕುಗಳಿದ್ದು, ಅದನ್ನು ಯಾರು ಮೊಟಕು ಮಾಡಬಾರದು. ಮೊಟಕು ಮಾಡುವುದನ್ನು ತಡೆಯುವುದಕ್ಕೆ ಇರುವುದು ಒಂದೇ ವರ್ಗ ಅದೇ ಮಾನವ ವರ್ಗ ಎಂದು ಸಲಹೆ ನೀಡಿದರು.

ಭವಿಷ್ಯದ ಕಾನೂನು ವಿದ್ಯಾರ್ಥಿಗಳು ಮಾನವ ಹಕ್ಕುಗಳ ರಕ್ಷಣೆಯಂತಹ ಕಾರ್ಯ ಮಾಡಬೇಕು. ನಾನು ಪೋಕ್ಸೊ ವಿಶೇಷ ಕೋರ್ಟಿನಲ್ಲಿ ಕೆಲಸ ಮಾಡಲಾಗುತ್ತಿದ್ದು, ಹದಿಹರೆಯದ ವಯಸ್ಸಿನಲ್ಲಿ ಆಕರ್ಷಣೆ ಆಗುವುದು ಸಹಜವಾಗಿದೆ. ಸಮಾಜವನ್ನು ಮುಂದೆ ಹೇಗೆ ಎದುರಿಸಬೇಕು ಬಗ್ಗೆ ಒಮ್ಮೆಲೆ ಯೋಚಿಸಬೇಕು. ನಾವು ಬಂದಿರುವುದ ಉದ್ದೇಶ ಏನು? ಗುರಿ ಬಗ್ಗೆ ಸಾಧಿಸುವ ಛಲ ನಿಮ್ಮೊಳಗೆ ಬೆಳೆಸಿಕೊಂಡು ಮುಂದಿನ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಲು ಎಚ್ಚರಿಕೆಯಿಂದ ನೀವು ದಾಟಿದರೆ ಮಾತ್ರ ಜೀವನ ಉತ್ತಮವಾಗುತ್ತದೆ ಎಂದು ಹೇಳಿದರು.
ಎ.ಪಿ.ಸಿ.ಆರ್. ಜಿಲ್ಲಾ ಛಾಪರ‍್ಸ್ ಜಿಲ್ಲಾಧ್ಯಕ್ಷ ಅಬ್ದೂಲ್ ಹಮೀದ್ ಪ್ರಾಸ್ತಾವಿಕ ನುಡಿಯಲ್ಲಿ ಮಾತನಾಡಿ, ಸಮಾಜದಲ್ಲಿ ಮಾನವನಾಗಿ ಹುಟ್ಟಿದ ಮೇಲೆ ಮಾನವ ಗುಣ ಬೆಳೆಸಿಕೊಳ್ಳಬೇಕು. ಬದುಕಿದ್ದರೇ ಕಾನೂನು ಕಟ್ಟಲೆ, ಬದುಕೆ ಇಲ್ಲದಿದ್ದರೇ ಈ ಬಗ್ಗೆ ತಿಳಿಯಬೇಕು. ಪ್ರತಿ ಹಂತದಲ್ಲಿ ಮಾನವ ಹಕ್ಕುಗಳು ಅನ್ವಯಿಸುತ್ತದೆ. ಮಾನವ ಹಕ್ಕುಗಳನ್ನು ರಕ್ಷಣೆ ಮಾಡಬೇಕು. ಮಾನವ ಹಕ್ಕುಗಳ ರಕ್ಷಣೆ ಮಾಡುವ ಒಳ್ಳೆ ಕೆಲಸವನ್ನು ಕಾನೂನು ವಿದ್ಯಾರ್ಥಿಗಳಾಗಿ ಬೇರೆಯವರಿಗೆ ತಿಳಿಸಿ ಅನುಸರಿಸಬೇಕು. ಮಾನವ ಹಕ್ಕುಗಳು ಎಂದರೆ ಜೀವನಕ್ಕೆ ಬೇಕಾಗಿರುವ ಹಕ್ಕುಗಳಾಗಿದೆ. ಮನೆಯಲ್ಲಿ, ಶಾಲೆಯಿಂದಲೇ ಈ ಮಾನವ ಹಕ್ಕುಗಳು ಪ್ರಾರಂಭವಾಗುತ್ತದೆ ಎಂದರು.

ಸಮಾಜದಲ್ಲಿ ನಡೆಯುವ ದೌರ್ಜನ್ಯ ಎಲ್ಲಾ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಅದಕ್ಕಾಗಿ ಕಾನೂನು ರಚಿತವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗೌರವ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ, ಎಂ. ಕೃಷ್ಣ ಕಾನೂನು ಕಾಲೇಜು ಪ್ರಾಂಶುಪಾಲ ಡಾ. ವಿ. ಶ್ರೀನಿವಾಸ್, ಸರ್ಕಾರಿ ಕಾನೂನು ಕಾಲೇಜು ಪ್ರಾಂಶುಪಾಲರಾದ ಶೀನಾ ಥಾಮಸ್, ವಕೀಲ ಅನ್ಸದ್ ಪಾಳ್ಯ, ಪ್ರಬುದ್ಧ ಮನಸ್ಸು ಸಮಾಜ ಪ್ರಗತಿಪರ ಚಿಂತಕ ಹೆಚ್.ಕೆ. ವಿವೇಕಾನಂದ, ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಸ್. ಶರಣ್ಯ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಸಹನ ನೆರವೇರಿಸಿದರು, ಉಷಾ ಪ್ರಾರ್ಥಿಸಿದರು.
-
Mandya12 hours agoಜಿಲ್ಲಾಧಿಕಾರಿಗಳಿಂದ ಗುತ್ತಲು ಕೆರೆಗೆ ಭೇಟಿ ಮತ್ತು ಪರಿಶೀಲನೆ
-
State9 hours agoIPL, ಟಿ-20 ವಿಶ್ವಕಪ್ ಕ್ರಿಕೆಟ್ ಸಂಬಂಧ ಸಿಎಂ, ಡಿಸಿಎಂರನ್ನು ಭೇಟಿ ಮಾಡಿದ ವೆಂಕಟೇಶ್ ಪ್ರಸಾದ್
-
Chamarajanagar4 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
Mandya10 hours agoಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಡಿಸಿ ಭೇಟಿ
-
State4 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Hassan7 hours agoಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
-
Hassan6 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Chamarajanagar5 hours agoರಾಗಿ ಒಕ್ಕಣೆ ಮಿಷನ್ ನಿಂದ ಕೂಲಿ ಕಾರ್ಮಿಕಳೊಬ್ಬಳ ಕೈ ತುಂಡು
