Connect with us

Hassan

ಬಾಕಿ, ಕನಿಷ್ಠ ವೇತನ, ಗ್ಯಾಚ್ಯುಟಿ, ಸೇವಾ ಮುಂಬಡ್ತಿ ಕ್ರಮಕ್ಕೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

Published

on

ಹಾಸನ: ಸಿಐಟಿಯು ನೇತೃತ್ವದಲ್ಲಿ ನಡೆಸಲಾಗುತ್ತಿರುವ ಮೂರನೇ ದಿನದ ಪ್ರತಿಭಟನೆಯಲ್ಲಿ ಜಿಲ್ಲೆಯಲ್ಲಿ ಇರುವ ಎಲ್ಲಾ ಗ್ರಾಮ ಪಂಚಾಯಿತಿಗಳ ನೌಕರರಿಗೆ ಏಕಕಾಲದಲ್ಲಿ ಅನುಮೋದನೆ ನೀಡುವಂತೆ, ಬಾಕಿ ವೇತನ, ಕನಿಷ್ಠ ವೇತನ, ಗ್ರಾಚ್ಯುಟಿ ಮತ್ತು ಸೇವಾ ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಡಿಸಿ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಇದೆ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಉದ್ದೇಶಿಸಿ ಮಾತನಾಡಿ, ಕೇಂದ್ರ ಸರಕಾರವು ಕಳೆದ ೫ ವರ್ಷಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನೀಡಬೇಕಾದ ಒಟ್ಟು ರೂ. ೨೧೮೭೭ ಕೋಟಿಗಳಲ್ಲಿ ಇದುವರೆಗೂ ಕೇವಲ ೭೨೪೭ ಕೋಟಿ ರೂಪಾಯಿಗಳನ್ನು ಮಾತ್ರ ನೀಡಿ, ಇನ್ನೂ ೧೪೬೩೦ ಕೋಟಿ ಬಾಕಿ ಉಳಿಸಿಕೊಂಡು ಕರ್ನಾಟಕ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ನೀಡದೆ ಜನರಿಗೆ ಸ್ಥಳೀಯವಾಗಿ ಅಲ್ಪಸ್ವಲ್ಪ ಇದ್ದ ಸೇವೆಯನ್ನು ಕಿತ್ತುಕೊಳ್ಳುತ್ತಿದೆ. ಕೇಂದ್ರ ಸರಕಾರವು ರಾಜ್ಯಗಳಿಂದ ಸಂಗ್ರಹಿಸುವ ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆಗಳಲ್ಲಿ ರಾಜ್ಯಕ್ಕೆ ನೀಡಬೇಕಾದ ೧೫ನೇ ಹಣಕಾಸು ಆಯೋಗವು ನಿಗದಿ ಮಾಡಿದ ಪಾಲಿನಲ್ಲಿ ಈ ಹಿಂದೆ ೧೪ನೇ ಹಣಕಾಸಿನ ಆಯೋಗವು ಶೇ. ೪.೭೪% ರಷ್ಟೂ ಪಾಲು ಸಂದಾಯವಾಗಬೇಕು ಎಂಬುದನ್ನು ೧೫ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಶೇಕಡ. ೩.೬೪ಕ್ಕೆ ಇಳಿಸಿತು. ಹಣಕಾಸು ಆಯೋಗವು ಕಡಿಮೆ ಮಾಡುವುದಕ್ಕೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ನೀತಿಯಿಂದ ಕರ್ನಾಟಕ ರಾಜ್ಯಕ್ಕೆ ರೂ. ೩೬,೯೪೫ ಕೋಟಿ ಕೊಡದೆ ರಾಜ್ಯದ ಜನತೆಯನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದರು. ಸುಪ್ರಿಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಿ ಕನಿಷ್ಠ ವೇತನ ನಿಗಧಿಪಡಿಸಬೇಕೆಂದು ನ್ಯಾಯಾಲಯ ಆದೇಶಿಸಿತು. ಸಂಘವು ನ್ಯಾಯಾಲಯದ ಆದೇಶವನ್ನು ಜಾರಿ ಮಾಡುವಂತೆ ಹೋರಾಟ ರೂಪಿಸಿದ ಮೇಲೆ ಕಾರ್ಮಿಕ ಸಚಿವರು ಮತ್ತು ಅಧಿಕಾರಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರು ಮತ್ತು ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಆದರೂ ಸರಕಾರ ಮೀನಾ ಮೇಷ ಎಣಿಸುತ್ತಿದೆ ತಕ್ಷಣವೇ ಸರ್ಕಾರ ಕನಿಷ್ಟ ವೇತನ ರೂ. ೩೧,೦೦೦ ನೀಡಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.

ರಾಜ್ಯದ ಗ್ರಾಮ ಪಂಚಾಯಿತಿಂಗಳಲ್ಲಿ ಕರ ವಸೂಲಿಗಾರ, ಗುಮಾಸ್ತ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಜವಾನ, ನೀರುಗಂಟಿ, ಸ್ವಚ್ಛತಾಗಾರರು. ಇತ್ಯಾದಿ ನೌಕರರು ಗ್ರಾಮ ಪಂಚಾಯಿತಿಗಳು ಆರಂಭವಾದ ಕಾಲದಿಂದಲೂ ಕನಿಷ್ಠ ಕೂಲಿ ಹೊರತುಪಡಿಸಿ ಬೇರೆ ಯಾವುದೇ ಸೌಲಭ್ಯವಿಲ್ಲದೆ ತಮ್ಮ ಜೀವಮಾನವೇ ದುಡಿದು ನಿವೃತ್ತಿಯಾದಾಗ ಇಳಿ ವಯಸ್ಸಿನಲ್ಲಿ ಜೀವನ ನಡೆಸುವುದಕ್ಕೆ ಬಹಳ ದುಃಸ್ಪರವಾಗಿರುವುದರಿಂದ ಸರ್ಕಾರವೇ ಪಿಂಚಣಿ ನೀಡಲು ಒಂದು ಆಯೋಗ ರಚನೆ ಮಾಡಿತ್ತು. ಆ ಸಮಿತಿಯು ವರದಿಯನ್ನು ಇಲಾಖೆಗೆ ನೀಡಿದೆ. ಆ ವರದಿ ಮೇಲೆ ಸಂಘದ ಜೊತೆ ಚರ್ಚೆ ನಡೆದಿದ್ದರು ಸಹ ಜಾರಿಯಾಗಿಲ್ಲ ತಕ್ಷಣ ಕನಿಷ್ಟ ರೂ.೬೦೦೦ ಪಿಂಚಣಿ ಜಾರಿ ಮಾಡಬೇಕೆಂದು ಒತ್ತಾಯಿಸುತ್ತೇವೆ. ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ನೇಮಕಗೊಂಡು ಕೆಲಸ ಮಾಡುವ ಬಿಲ್‌ಕಲೆಕ್ಟರ್, ಕ್ಲರ್ಕ್, ಡಿಇಒ, ವಾಟರ್‌ಮನ್, ಅಟೆಂಡರ್ ಮತ್ತಿತರೆ ನೌಕರರು ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಅಡಿಯಲ್ಲಿ ಸಂಘಟಿತರಾಗಿ ನಿರಂತರವಾಗಿ ಹಲವು ವರ್ಷಗಳ ಕಾಲ ನಡೆಸಿದ ಹೋರಾಟದ ಫಲವಾಗಿ ಕರ್ನಾಟಕ ಸರ್ಕಾರ ಗ್ರಾ.ಪಂ. ನೌಕರರಿಗೆ ಕನಿಷ್ಟ ವೇತನ, ಅನುಮೋದನೆ, ಗ್ರಾಚ್ಯುಟಿ, ರಜಾ ಸೌಲಭ್ಯ, ಸೇವಾ ಮುಂಬಡ್ತಿ ಹಾಗೂ ಮತ್ತಿತರೆ ಸೇವಾ ಸೌಲಭ್ಯಗಳನ್ನು ನೀಡುವ ಆದೇಶಗಳನ್ನು ಹೊರಡಿಸಿದೆ. ಆದರೆ ಸರ್ಕಾರದ ಈ ಆದೇಶಗಳು ಹಾಸನ ಜಿಲ್ಲೆಯ ಗ್ರಾ.ಪಂ.ಗಳಲ್ಲಿ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ದೂರಿದರು.

ನಿರ್ಧಿಷ್ಟ ಕಾಲಮಿತಿಯೊಳಗೆ ಎಲ್ಲಾ ನೌಕರರಿಗೆ ಅನುಮೋದನೆ ನೀಡುವಂತೆ ಸರ್ಕಾರದ ಆದೇಶವಿದ್ದರೂ ನೌಕರರಿಗೆ ಅನುಮೋದನೆ ಸಿಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಪರಿಶೀಲಿಸಿ ಸರ್ಕಾರದ ಆದೇಶದಂತೆ ೨೦೧೭ ನವೆಂಬರ್ ತಿಂಗಳಿಗೂ ಮೊದಲು ನೇಮಕಗೊಂಡಿರುವ ಎಲ್ಲಾ ಗ್ರಾ.ಪಂ. ನೌಕರರಿಗೆ ಯಾವುದೇ ರೀತಿಯ ತಾರತಮ್ಯ ಮತ್ತು ವಿಳಂಬ ಮಾಡದೆ ಏಕಕಾಲದಲ್ಲಿ ನಿಯಮಾನುಸಾರ ಅನುಮೋದನೆ ನೀಡಿ ಘೋಷಣೆ ಮಾಡಬೇಕು. ಜೊತೆಗೆ ಅನುಕಂಪದ ಆದಾರದಲ್ಲಿ ನೇಮಕಗೊಂಡಿರುವವರಿಗೆ ಯಾವುದೇ ತಕರಾರು ಮಾಡದೆ ನೀಡಬೇಕು. ಹಾಗೂ ನೌಕರರ ಅನುಮೋದನೆ ಪ್ರಸ್ತಾವನೆಗಳನ್ನು ಸಮರ್ಪಕವಾಗಿ ಒದಗಿಸದೆ ಬಾಕಿ ಉಳಿಸಿಕೊಂಡಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಟಿ. ಹೊನ್ನೇಗೌಡ, ಜಿಲ್ಲಾ ಖಜಾಂಚಿ ಕುಮಾರಸ್ವಾಮಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಗ್ರಾ.ಪಂ. ನೌಕರರ ಮುಖಂಡರಾದ ಕರಿಯಪ್ಪ, ಅಶೋಕ ಅತ್ನಿ, ನಂದೀಶ್ ಹಾಗೂ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್, ಸೌಮ್ಯ, ಜಿ.ಪಿ.ಸತ್ಯನಾರಾಯಣ, ಎಂ.ಜಿ. ಪೃಥ್ವಿ ಮತ್ತುತರರು ಪ್ರತಿಭಟನೆಯ ನೇತೃತ್ವವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಫೆ.15 ಮತ್ತು 16 ರಂದು ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ಜಾತ್ರೆ

Published

on

ಸತೀಶ್ ಚಿಕ್ಕಕಣಗಾಲು

ಆಲೂರು: ತಾಲೂಕಿನ ಎರಡು ಹೋಬಳಿಗಳ ಧಾರ್ಮಿಕ ಸಂಬಂಧ ಬೆಸೆಯುವ ಪುರಾಣ ಪ್ರಸಿದ್ಧ ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ದೇವರ ಐತಿಹಾಸಿಕ ಜಾತ್ರೆ ಫೆ.೧೫ ಮತ್ತು ೧೬ ರಂದು ನಡೆಯಲಿದೆ.

ದೇವಸ್ಥಾನದಲ್ಲಿ ಫೆ.೮ ರಿಂದ ೧೭ ರವರೆಗೆ ಉತ್ಸವಗಳು ಮತ್ತು ಅನ್ನ ಸಂತರ್ಪಣೆ ನಡೆಯುತ್ತದೆ. ಇತಿಹಾಸ ಹೇಳುವಂತೆ ಒಬ್ಬ ಕೊರಮನು ಬುಟ್ಟಿ ಹೆಣೆಯಲು ಬಿದಿರು ತರಲು ಹೋಗಿದ್ದನು. ಬಿದಿರು ಮೆಣೆ (ಗುಂಪೊದಕ್ಕೆ) ಕತ್ತಿಯನ್ನು ಹೊಡೆಯುವಾಗ ಆಯತಪ್ಪಿ ಏಟು ಒಂದು ಬಂಡೆಗೆ ತಾಗುತ್ತದೆ. ಆ ಬಂಡೆಯಿಂದ ಒಂದು ಬದಿಯಲ್ಲಿ ಹಾಲು ಮತ್ತೊಂದು ಬದಿಯಲ್ಲಿ ರಕ್ತ ಬರುತ್ತದೆ ಇದರಿಂದ ಗಾಬರಿಯಾದ ಅವನು ಪ್ರಜ್ಞೆ ತಪ್ಪಿ ಬೀಳುವನು. ಮನೆಗೆ ವಾಪಾಸು ಬಾರದ ಈತನನ್ನು ಮನೆಯವರು ಹುಡುಕಿಕೊಂಡು ಹೋದರು. ಪ್ರಜ್ಞೆಬಂದ ವ್ಯಕ್ತಿಯು ನಡೆದ ವಿಷಯವನ್ನು ತಿಳಿಸುತ್ತಾನೆ.

ಸ್ಥಳವನ್ನು ಗಮನಿಸಿದಾಗ ಬ್ರಹ್ಮದೇವನ ವಿಗ್ರಹ ಪತ್ತೆಯಾಗುತ್ತದೆ.ಆ ಉದ್ಭವ ಮೂರ್ತಿಯನ್ನು ಪಾಳೆಗಾರರಿಂದ ರಕ್ಷಿಸಲೆಂದು ವಿಷ್ಣುವರ್ಧನ ರಾಜನು ದೇವಾಲಯವನ್ನು ನಿರ್ಮಾಣ ಮಾಡಿಸುತ್ತಾನೆ. ಹೊಯ್ಸಳ ದೊರೆ ವಿಷ್ಣುವರ್ಧನ ಜೈನ ಧರ್ಮದಿಂದ ವೈಷ್ಣವ ಧರ್ಮಕ್ಕೆ ಮತಾಂತರ ಹೊಂದಿದ್ದರಿಂದ ಬ್ರಹ್ಮದೇವನನ್ನು ರಂಗನಾಥನೆಂಬ ಹೆಸರಿನಿಂದ ಕರೆಯಲಾರಂಭಿಸಿದರು.

ಕೆಂಚಮ್ಮನ ಹೊಸಕೋಟೆ ಮತ್ತು ಕುಂದೂರು ಹೋಬಳಿಗೆ ಸೇರಿದ ಸುಮಾರು ೪೮ ಹಳ್ಳಿಗಳಿಗೆ ಸಂಬಂಧಿಸಿದ ಈ ಜಾತ್ರೆ ಸಂಕ್ರಾಂತಿ ಹಬ್ಬದ ದಿನದಂದು ಕುಂದೂರು ಹೋಬಳಿ ವ್ಯಾಪ್ತಿಗೊಳಪುಡುವ ಸುಮಾರು ೨೦ ಗ್ರಾಮಗಳಿಗೆ ಅಡ್ಡೆ ದೇವರು ಹೋಗುತ್ತದೆ. ಉತ್ಸವ ಮುಗಿದ ನಂತರ ಜಾತ್ರೆ ನಡೆಯುವ ಏಳು ದಿನಗಳ ಮೊದಲು ಬೆಟ್ಟದಲ್ಲಿರುವ ದೇವಾಲಯಕ್ಕೆ ಕರೆತರಲಾಗುತ್ತದೆ.

ಮೊದಲ ದಿನ ಶನಿವಾರ ದೊಡ್ಡ ಹರಿಸೇವೆ. ಭಾನುವಾರ, ಸೋಮವಾರ ಹಕ್ಕಿನ ಉತ್ಸವ ನಡೆಯುತ್ತದೆ. ಮಂಗಳವಾರ ಬಿಂದಿಗಮ್ಮ ಕಳಸ ಹೊರುವ ಪೂಜಾರಿಯವರಿಗೆ ತಲೆ ಬೋಳಿಸಿ, ಹಸೆ ಹಾಕಿ ಕಾಸೆ ವೇಷದೊಂದಿಗೆ ದೇವಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ. ಇವರು ಜಾತ್ರಾ ಮಹೋತ್ಸವ ಮುಗಿಯುವವರೆಗೂ ಹಣ್ಣ-ಹಂಪಲು ಬಿಟ್ಟರೆ ಬೇರೆನನ್ನೂ ಸೇವಿಸದೆ ಪೂಜಾ ಕೈಂಕರ್ಯದಲ್ಲಿ ತೊಡಗುತ್ತಾರೆ. ಶ್ರೀ ರಂಗನಾಥಸ್ವಾಮಿಗೂ ಬಿಂದಿಗಮ್ಮನಿಗೂ ಮದುವೆ ಮಾಡಿ ಆ ವೈಭವವನ್ನು ಆನಂದಿಸುವುದು ಈ ಜಾತ್ರೆಯ ವಿಶೇಷವಾಗಿದೆ.

ದೇವಾಲಯದಲ್ಲಿ ಗುರುವಾರ ರಾತ್ರಿ ಬಿಂದಿಗಮ್ಮನವರಿಗೆ ಹಸೆ ಹಾಕುವ ವಿಶೇಷ ಪೂಜೆ ಇರುತ್ತದೆ. ಶುಕ್ರವಾರ ರಾತ್ರಿ ಗಂಡನ ಕಡೆ ಊರಾದ ಭರತೂರಿನ ಹೊಳೆ ದಡಕ್ಕೆ ಉತ್ಸವ ಮೂರ್ತಿಯೊಂದಿಗೆ ಬಿಂದಿಗಮ್ಮನವರನ್ನು ಕರೆ ತರಲಾಗುವುದು. ಶನಿವಾರ ಹೊಳೆ ದಡದಲ್ಲಿ ಜಾತ್ರೆ ನಡೆಯುತ್ತದೆ. ಸಂಜೆ ಬಿಂದಿಗಮ್ಮನವರನ್ನು ಗಂಡನ ಮನೆಗೆ ಅಂದರೆ ರಂಗನಾಥಸ್ವಾಮಿ ದೇವಾಲಯಕ್ಕೆ ಕಳುಹಿಸುವ ಸಂದರ್ಭ ನೋಡಲೇಬೇಕಾದುದು. ಕಳಸ ಹೊರಡುವ ಮುನ್ನ ಕುಂದೂರಿನ ಗ್ರಾಮಸ್ಥರನ್ನು ಭರತೂರು ಗ್ರಾಮಸ್ಥರು ಬರಮಾಡಿಕೊಂಡು ವಿಶೇಷ ಆತಿಥ್ಯ ನೀಡಿ ಗೌರವಿಸುತ್ತಾರೆ.

ಹೂವು ತುಳಸಿಯಿಂದ ಅಲಂಕೃತವಾದ ಹರಿವಾಣದಲ್ಲಿ ಬಿಂದಿಗಮ್ಮನವರ ಕಳಸವನ್ನು ತಲೆ ಬೋಳಿಸಿದ್ದ ಪೂಜಾರಿ ತಲೆ ಮೇಲೆ ಇಡಲಾಗುತ್ತದೆ. ಸ್ವಲ್ಪ ದೂರ ನಿಧಾನವಾಗಿ ನಡೆದು ಹೋಗುತ್ತಿದ್ದ ಕಳಸ ಹೊತ್ತವರು, ನಂತರದಲ್ಲಿ ತಲೆ ಮೇಲಿರುವ ಕಳಸವನ್ನು ಕೈಯಲ್ಲಿ ಹಿಡಿಯದೆ ಓಡಲು ಪ್ರಾರಂಭ ಮಾಡುತ್ತಾರೆ. ಹೊಳೆಯಿಂದ ಸುಮಾರು ೧೦ ಕಿ. ಮೀ. ದೂರದ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಏಳು ಊರು ಬಾಗಿಲಗಳನ್ನು ದಾಟಿಕೊಂಡು ಕೇವಲ ಮುಕ್ಕಾಲು ಗಂಟೆಯಲ್ಲಿ ತಲುಪುತ್ತದೆ.

ಊರು ಬಾಗಿಲಲ್ಲಿ ಅಕ್ಕಿ ಹಸೆ ಬರೆದು ಹಣ ಹಾಕಿರುತ್ತಾರೆ. ಬಾಗಿಲು ದಾಟುವ ಸಂದರ್ಭದಲ್ಲಿ ಕಳಸ ಹೊತ್ತವರು ತನ್ನ ಗದ್ದದಿಂದ ನೆಲದ ಮೇಲಿಟ್ಟ ಹಣವನ್ನು ಮುಟ್ಟುತ್ತಾರೆೆ. ಕಳಸ ಮುಂದೆ ಹೋದ ಕೂಡಲೆ ನೆರೆದಿದ್ದವರು ಹಸೆ ಅಕ್ಕಿಯನ್ನು ಮುಗಿಬಿದ್ದು ತೆಗೆದುಕೊಳ್ಳುತ್ತಾರೆ. ಈ ಸಂದರ್ಭ ನೋಡಲು ಅತ್ಯಂತ ಕುತೂಹಲಕಾರಿಯಾಗಿರುತ್ತದೆ.

ಭಾನುವಾರ ಬೆಟ್ಟದ ಮೇಲೆ ಹಗಲು ಜಾತ್ರೆ ನಡೆಯುತ್ತದೆ. ಸೋಮವಾರ ಹೇಮಾವತಿ ನದಿ ನೀರಿನಿಂದ ಅಭಿಷೇಕದೊಂದಿಗೆ ಜಾತ್ರಾ ವಿಶೇಷ ಪೂಜಾ ಕಾರ್ಯಕ್ಕೆ ನಾಂದಿ ಹಾಡಲಾಗುತ್ತದೆ. ನಂತರ ಯುಗಾದಿ ಹಬ್ಬದ ಸಂದರ್ಭದಲ್ಲಿ ಭರತೂರು ಕಡೆಗೆ ಸೇರುವ ಸುಮಾರು ೧೦ ಗ್ರಾಮಗಳಲ್ಲಿ ಅಡ್ಡೆ ಉತ್ಸವ ನಡೆಯುತ್ತದೆ ಮುಜರಾಯಿ ಇಲಾಖೆಗೆ ಸೇರಿದ ಅಡಿಬೈಲು ಶ್ರೀ ರಂಗನಾಥಸ್ವಾಮಿ ದೇವರ ಜಾತ್ರೆ ಫೆ. ೧೫ ರಂದು ಭರತೂರು ಗ್ರಾಮ ಹೇಮಾವತಿ ಹಿನ್ನಿರು ಬದಿಯಲ್ಲಿ ಮತ್ತು ೧೬ ರಂದು ರಂಗನಬೆಟ್ಟದ ಮೇಲೆ ನಡೆಯುತ್ತದೆ ಆಲೂರಿನಿಂದ ೧೮ ಕಿ. ಮೀ. ಮಗ್ಗೆ-ರಾಯರಕೊಪ್ಪಲು ಮಾರ್ಗವಾಗಿ ಪ್ರತಿದಿನ ಸಾರಿಗೆ ಬಸ್ ವ್ಯವಸ್ಥೆ ಇರುತ್ತದೆ ಭಕ್ತರು ಸ್ವಚ್ಚತೆಯನ್ನು ಕಾಪಾಡಬೇಕು ಎನ್ನುತ್ತಾರೆ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಿ. ಉಮೇಶ್.

Continue Reading

Hassan

ಅರಕಲಗೂಡು: ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಟ ಮುಷ್ಕರ

Published

on

ವರದಿ:-ರಾಜೇಂದ್ರ ಸುಹಾಸ್

ಅರಕಲಗೂಡು: ತಾಲೂಕು ಕಛೇರಿಯ ಆವರಣದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆಗೆ ಮುಂದಾಗಿದ್ದಾರೆ.

ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ ತಾಲೂಕು ಗ್ರಾಮ ಆಡಳಿತ ಅದಿಕಾರಿಗಳ ಸಂಘದ ಪ್ರದೀಪ್ ಮಾತನಾಡಿ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದು, ಇದರ ಬಗ್ಗೆ ಹಿಂದೆ ಪ್ರತಿಭಟನೆಯ ಮೂಲಕವೇ ರಾಜ್ಯ ಸರ್ಕಾರದ ಗಮನವನ್ನ ಸೆಳೆಯಲಾಗಿತ್ತಾದರೂ ನಮ್ಮ ಬೇಡಿಕೆಗಳು ಈಡೇರಿಲ್ಲ. ಸರ್ಕಾರ ರಾಜ್ಯದ ಅಭಿವೃದ್ದಿಗೆ ಹಗಲಿರುಳು ನಮ್ಮನ್ನ ಬಳಸಿಕೊಳ್ಳುತ್ತದೆ. ಆದರೆ ನಮ್ಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮೀನಾಮೇಷ ಎಣಿಸುತ್ತಿದೆ. ಈ ಬಾರೀ ನಮ್ಮಗಳ ಬೇಡಿಕೆಯನ್ನ ಈಡೇರಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

ತಾಲೂಕು ಕಛೇರಿ ಆವರಣದಲ್ಲಿ ಪ್ರತಿಭಟನಕಾರರು, ತಹಸಿಲ್ದಾರ್ ಮಲ್ಲಿಕಾರ್ಜುನ್ ರವರಿಗೆ ಮನವಿ ಪತ್ರ ಸಲ್ಲಿಸಿದರು.

Continue Reading

Hassan

ಅರಕಲಗೂಡು: ಪಟ್ಟಣ ಪಂಚಾಯತಿ ಬಜೆಟ್ ಮಂಡನೆ

Published

on

ವರದಿ: ರಾಜೇಂದ್ರ ಸುಹಾಸ್

ಅರಕಲಗೂಡು: ಪಟ್ಟಣದ ಸಮಗ್ರ ಅಭಿವೃದ್ದಿಗಾಗಿ 2025-26 ನೇ ಸಾಲಿನ ಆಯವ್ಯಯದಲ್ಲಿ ಆಧ್ಯತೆ ನೀಡಲಾಗಿದೆ ಎಂದು ಪಪಂಚಾಯಿತಿ ಅಧ್ಯಕ್ಷ ಪ್ರದೀಪ್‌ಕುಮಾರ್ ಆಯವ್ಯಯ ಮಂಡಿಸಿ ಸಭೆಗೆ ತಿಳಿಸಿದರು.

ಪ.ಪಂಚಾಯಿತಿ ಸಭಾಂಗಣದಲ್ಲಿ ಇಂದು ಪಪಂಚಾಯಿತಿ ಅಧ್ಯಕ್ಷ ಪ್ರದೀಪ್‌ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2025-26 ನೇ ಸಾಲಿನ ಆಯವ್ಯಯವನ್ನ ಮಂಡಿಸಿದ ಅವರು ಪ್ರಾರಂಭ ಶುಲ್ಕ 1,24,37,294 ಸೇರಿಕೊಂಡಂತೆ ಈ ವರ್ಷದ ನಿರೀಕ್ಷಿತ ಆಧಾಯ 18 ಕೋಟಿ 18 ಲಕ್ಷ 26 ಸಾವಿರದ 567 ರೂ.ಗಳು ಸೇರಿ ಒಟ್ಟು 19 ಕೋಟಿ 42 ಲಕ್ಷದ 61 ಸಾವಿರದ 861 ರೂ.ಗಳು ನಿರೀಕ್ಷೆಯಲ್ಲಿದ್ದು, ಖರ್ಚು 19 ಕೋಟಿ 32 ಲಕ್ಷದ 88 ಸಾವಿರದ 295 ನ್ನು ಅಂದಾಜಿಸಿದ್ದು, ಉಳಿತಾಯ 9 ಲಕ್ಷದ 73 ಸಾವಿರದ 566 ರೂಗಳನ್ನ ನಿರೀಕ್ಷಿಸುವ ಮೂಲಕ ಈ ವರ್ಷದ ಪಪಂಚಾಯಿತಿ ಅಯವ್ಯಯ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಸಭೆಗೆ ಅಧ್ಯಕ್ಷರು ಮಂಡಿಸಿದರು. ಆಗ ಸಭೆ ಸರ್ವಾನುಮತದಿಂದ ಅನುಮೋದಿಸಿತು.

ಆಯವ್ಯಯದ ಮುಖ್ಯಾಂಶಗಳು: ಪಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದನ್ನ ಗಮನದಲ್ಲಿಟ್ಟುಕೊಂಡು ರಸ್ತೆ, ಶುದ್ದಕುಡಿಯುವ ನೀರು, ಚಿರಂಡಿ, ಉಧ್ಯಾನವನ ಅಭಿವೃದ್ದಿ, ಬೀದಿ ದೀಪ ಹಾಗೂ ಸ್ವಚ್ಚತೆ ಮತ್ತು ಸ್ಮಶಾಣದ ಅಭಿವೃದ್ದಿಗೆ ಹೆಚ್ಚು ಆಧ್ಯತೆಯನ್ನ ನೀಡಲಾಗಿದೆ. ಈ ಬಾರೀ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುಧಾನವನ್ನ ಹೆಚ್ಚು ನಿರೀಕ್ಷಿಸಲಾಗಿದ್ದು, ಇದನ್ನ ಹೊರತುಪಡಿಸಿದರೆ ಪಪಂಚಾಯಿತಿಯ ಮಳಿಗೆಗಳ ಆಧಾಯದ ಮೇಲೆ ಹೆಚ್ಚು ಕಣ್ಣಿರಿಸಲಾಗಿದೆ.

ವಿರೋದ ಪಕ್ಷದ ಸಧಸ್ಯರಿಂದ ಶ್ಲಾಘನೆ: ಪ.ಪಂಚಾಯಿತಿಯ ಆಯವ್ಯಯ ಮಂಡಿಸಿದ ನಂತರ ಬಿ.ಜೆ.ಪಿ. ಸಧಸ್ಯೆ ರಶ್ಮಿ ಸಭೆಯನ್ನ ಉದ್ದೇಶಿಸಿ ಮಾತನಾಡಿ ಪ್ರತೀ ವರ್ಷಗಳಿಗಿಂತಲೂ ಈ ವರ್ಷ ಉತ್ತಮ ಆಯವ್ಯಯವನ್ನ ಮಂಡಿಸಿದ್ದೀರಿ, ನಿಮಗೆ ಶುಭವಾಗಲೀ, ಪಟ್ಟಣದಲ್ಲಿ ಫುಡ್‌ಕೋರ್ಟ್ ನಿರ್ಮಾಣಕ್ಕೆ ಆಧ್ಯತೆ ನೀಡಬೇಕಿತ್ತು ಎಂದು ಸಭೆಯಲ್ಲಿ ತಿಳಿಸಿದಾಗ ಅಧ್ಯಕ್ಷರು ತಮ್ಮ ನಿರೀಕ್ಷೆಯಂತೆ ಫುಡ್‌ಕೋರ್ಟ್ ನಿರ್ಮಾಣಕ್ಕೆ ಈಗಾಗಲೇ ಅಂದಾಜು ವೆಚ್ಚವನ್ನ ತಯಾರಿಸಿ ಕಾಮಗಾರಿ ಟೆಂಡರ್ ಹಂತಕ್ಕೆ ತಲುಪಿದೆ, ಶೀಘ್ರದಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಪರ್ತಕರ್ತರ ಆರೋಗ್ಯ ನಿಧಿ ಸ್ಥಾಪನೆ: ಇದೇ ಪ್ರಪ್ರಥಮ ಭಾರಿಗೆ ಪಪಂಚಾಯಿತಿಯ ಆಯವ್ಯಯದಲ್ಲಿ ಪತ್ರಕರ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಪತ್ರಕರ್ತರ ಆರೋಗ್ಯ ನಿಧಿ ಸ್ಥಾಪಿಸಿ ನಿಧಿಗೆ ೫೦ ಸಾವಿರ ಹಣವನ್ನ ಮೀಸಲಿರಿಸಿದ್ದಾರೆ.

ಇಂದಿನ ಆಯವ್ಯಯದಲ್ಲಿ ಪತ್ರಕರ್ತರಿಗೆ ನೀಡಿದ ಸಹಾಯ ಹಸ್ತಕ್ಕೆ ಪತ್ರಕರ್ತರು ಪಪಂಚಾಯಿತಿ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ಪಪಂಚಾಯಿತಿ ಮುಖ್ಯಾಧಿಕಾರಿ ಬಸವರಾಜು ಠಾಕಪ್ಪ ಶಿಗ್ಗಾವಿ, ಉಪಾಧ್ಯಕ್ಷ ಸುಭಾನ್ ಷರೀಫ್, ಉಪಸ್ಥಿತರಿದ್ದರು. ಅಕೌಂಟೆಂಟ್ ವಿಮಲಶಂಕರ್ ಸಭೆಯಲ್ಲಿ ಸ್ವಾಗತ ಮಾಡಿದರು.

Continue Reading

Trending

error: Content is protected !!