Connect with us

Mysore

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಯ ಕೊಲೆ ಹತ್ಯೆಯನ್ನು ನಂಜನಗೂಡು ವೀರಶೈವ ಸಮಾಜದಿಂದ ಖಂಡಿಸಿದ್ದೇವೆ.

Published

on

ನಂಜನಗೂಡು: ಇತ್ತೀಚಿನ ದಿನದ ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ಕೊಲೆ ಹತ್ಯೆ ಖಂಡಿಸುತ್ತೇವೆ ಎಂದು ನಂಜನಗೂಡು ವೀರಶೈವ ಸಮಾಜದವರು,ಹಾಗೂ ಕ್ರಾಂತಿಕಾರಿ ವೀರಶೈವ ಬಳಗದ ಅಧ್ಯಕ್ಷ ಜಗದೀಶ್ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇಂದು ನಂಜನಗೂಡು ತಾಲೂಕು ಪತ್ರಕರ್ತ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಾ ರಾಜ್ಯ ಸರ್ಕಾರ ಮುಖ್ಯಮಂತ್ರಿ ಮತ್ತು ಗೃಹಮಂತ್ರಿ ಹುಬ್ಬಳ್ಳಿಯಲ್ಲಿ ವೀರಶೈವ ಸಮಾಜದ ವಿದ್ಯಾರ್ಥಿನಿ ಹತ್ಯೆಯಾದ ಕುಟುಂಬಕ್ಕೆ ಶಾಂತ್ವಾನ ಹೇಳುವ ಕೃತಜ್ಞತೆ ಇಲ್ಲದ ಜವಾಬ್ದಾರಿ ಇಲ್ಲದಂತಾವಾಗಿದೆ.

ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ನ್ಯಾಯದ ಪರವಾಗಿ ಕೆಲಸ ಮಾಡುವುದು ಬಿಟ್ಟು ಯಾವುದು ಹೇಳಿಕೆಗೆ ತಿರಕರಿಸುತ್ತಾರಲ್ಲಾ..?

ಆ ಕೃತ್ಯವನ್ನು ನಮ್ಮ ಸಮಾಜದಿಂದ ಖಂಡಿಸುತ್ತೇವೆ ಆರೋಪಿಗೆ ಕಠಿಣವಾದ ಕ್ರಮ ಜರಿಸಬೇಕೆಂದು ಒತ್ತಾಯಿಸುತ್ತೇವೆ.

ಮುಂದಿನ ದಿನದಲ್ಲಿ ಪೆಂಜಿನ ಮೆರವಣಿಗೆಯನ್ನು ಮಾಡಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.

ಎನ್‌.ಸಿ. ಬಸವಣ್ಣ ಮಾತನಾಡಿ ಶಿಕ್ಷಣ ಸಂಸ್ಥೆಯಲ್ಲಿ ಏಕಾಏಕಿ ಒಬ್ಬ ಪುಡಾರಿ ಒಳಗಡೆ ನುಗ್ಗಿ ವಿದ್ಯಾರ್ಥಿಯನ್ನು ಚಾಕುನಿಂದ ಚುಚ್ಚಿ ಚುಚ್ಚಿ ಕೊಲೆ ಮಾಡುವ ಸಂದರ್ಭದಲ್ಲಿ ಸಂಸ್ಥೆ ಏನು ಮಾಡುತ್ತಿತ್ತು.? ಇದಕ್ಕೆ ಒಳಸಂಚಿನ ಅನುಮಾನ ಸ್ಪಂದನ ಯಾಗಿರಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಕೋಆಪರೇಟ್ ಸೊಸೈಟಿ ಅಧ್ಯಕ್ಷ ಎನ್ ಸಿ ಬಸವಣ್ಣ, ಮಾಜಿನಗರ ಸಭಾಧ್ಯಕ್ಷ ಮಹದೇವಸ್ವಾಮಿ, ಮಹದೇವ ಪ್ರಸಾದ್, ವಿನಯ್, ಗುರುಸ್ವಾಮಿ, ಸೇರಿದಂತೆ ಉಪಸ್ಥಿತರಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್,

Continue Reading
Click to comment

Leave a Reply

Your email address will not be published. Required fields are marked *

Mysore

ಕೇರಳ ವಯನಾಡಿನ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಕರ್ನಾಟಕ ರಾಜ್ಯ ರೈತ ಪರ್ವ ಸಾಂತ್ವನ

Published

on

 

ಮಂಡ್ಯ ಜಿಲ್ಲೆಯ ಕೆ, ಆರ್, ಪೇಟೆ ತಾಲ್ಲೂಕಿನ ಕತ್ತರಘಟ್ಟದ ಅಜ್ಜಿ ಮತ್ತು ಮೊಮ್ಮಗ ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದು, ಈ ಕುಟುಂಬವನ್ನು ಇಂದು ಕರ್ನಾಟಕ ರಾಜ್ಯ ರೈತ ಪರ್ವ ಸಂಘಟನೆಯ ಪದಾಧಿಕಾರಿಗಳು ಭೇಟಿ ಮಾಡಿ ಸಾಂತ್ವನ ಹೇಳಿ ನೆರವು ನೀಡಿದ್ದಾರೆ

ಈ ವೇಳೆ ಅಧ್ಯಕ್ಷರಾದ ಅರುಣ್ ಕುಮಾರ್, ಗೌರವಾಧ್ಯಕ್ಷರಾದ ಕುಮಾರ್, ಕಾರ್ಯಾಧ್ಯಕ್ಷ ನವೀನ್, ಕಾರ್ಯದರ್ಶಿ, ಚಾಮರಾಜು, ಮಹಿಳಾ ಪ್ರಧಾನ ಕಾರ್ಯದರ್ಶಿ ಸುಶೀಲ, ಉಪಾಧ್ಯಕ್ಷ ಪುಟ್ಟರಾಜು, ಮೈಸೂರು ಜಿಲ್ಲಾಧ್ಯಕ್ಷರಾದ ಬಸವರಾಜು,ಹೆಚ್ ಡಿ ಕೋಟೆ ತಾಲೂಕು ಅಧ್ಯಕ್ಷ ಕುಮಾರ್, ಸಂಘಟನೆ ಕಾರ್ಯದರ್ಶಿ ಇಮ್ರಾನ್,ಹೆಚ್ ಡಿ ಕೋಟೆ ಯುವ ಅಧ್ಯಕ್ಷ ಸಿದ್ದಲಿಂಗೇಗೌಡ, ನಂದೀಶ್ ಉಪಸ್ಥಿತರಿದ್ದರು

Continue Reading

Mysore

ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ

Published

on

ಮೈಸೂರು ಆ.03:- ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ ಮಹದೇವಪ್ಪ ಅವರು ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ನಂಜನಗೂಡು ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ ಅವರು ಪ್ರವಾಹದಿಂದ ಹಾನಿ ಆಗಿರುವ ಬೆಳೆ ನಾಶ ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿರುವ ಕುರಿತು ಪರಿಶೀಲನೆ ನಡೆಸಿದರು. ನಂತರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿದರು. ಶಾಲೆಯ ಪಕ್ಕದ ಅಂಗನವಾಡಿ ಕೇಂದ್ರದಲ್ಲಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದ್ದು ಈ ಸಂಬಂಧ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಬಿನಿ ನದಿಯಿಂದ ಪ್ರವಾಹ ಉಂಟಾಗಿದ್ದು ಇದರಿಂದ ಹಾನಿ ಆಗಿರುವ ಮನೆ ಹಾಗೂ ಬೆಳೆ ಹಾನಿ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಪರಿಹಾರ ನೀಡಲಾಗುವುದು. ಈಗ ತಾತ್ಕಾಲಿಕವಾಗಿ ಗಂಜಿ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.

ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಕಬಿನಿಯಿಂದ ಹೆಚ್ಚಿನ ನೀರು ಹರಿಸಿದ್ದರಿಂದ ಪ್ರವಾಹ ಉಂಟಾಗಿ ರೈತರ ಬೆಳೆ ಹಾಗೂ ಮನೆ ಹಾನಿ ಉಂಟಾಗಿದೆ. ಮೈಸೂರು ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ಕಡಿಮೆ ಪ್ರಮಾಣದ ಹಾನಿ ಆಗಿದೆ. ಎನ್ ಡಿ ಆರ್ ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. 46 ಮನೆಗಳಿಗೆ ನೀರು ಬಂದಿದೆ. ಗಂಜಿ ಕೇಂದ್ರದಲ್ಲಿ 446 ಜನ ಸೌಲಭ್ಯ ಪಡೆಯುತ್ತಿದ್ದಾರೆ. 80 ಕುಟುಂಬಗಳು ಪ್ರವಾಹದಿಂದ ಪಿಡಿತರಾಗಿದ್ದಾರೆ. ಈ 80 ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.

 


ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ, ಸೂಕ್ತ ಜಾಗವನ್ನು ಗುರುತಿಸಿ ಅಲ್ಲಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿ, ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲು ಸರ್ಕಾರದ ವತಿಯಿಂದ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಬೊಕ್ಕಹಳ್ಳಿ ಗ್ರಾಮ ಪ್ರತಿ ವರ್ಷ ಮುಳುಗಡೆ ಆಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಬೇರೆ ಕಡೆ ನಿವೇಶನಗಳನ್ನು ಕೊಟ್ಟು ಮನೆ ನಿರ್ಮಿಸಿ ಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ಇದೇ ವೇಳೆ ಸಂತ್ರಸ್ತರಿಗೆ ಬೆಡ್ ಶಿಟ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Continue Reading

Mysore

ಅತೀ ವೃಷ್ಟಿಯಿಂದ ಬಾಧಿತ ಪ್ರದೇಶಗಳಿಗೆ ಕಬಿನಿ ಜಲಾಶಯ ವಿಶೇಷ ಭೂಸ್ವಾಧಿನಾಧಿಕಾರಿ ಸುಪ್ರಿಯಾ ಬಣಗಾರ್ ಭೇಟಿ, ಪರಿಶೀಲನೆ

Published

on

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ: ಅತೀ ವೃಷ್ಟಿಯಿಂದ ವಿಶೇಷ ಬಾಧಿತ ಪ್ರದೇಶಗಳಿಗೆ ಪ್ರಾಕೃತಿಕ ವಿಕೋಪ ನಿರ್ವಹಣೆ ನೋಡಲ್ ಅಧಿಕಾರಿಯೂ ಆದ ಕಬಿನಿ ಜಲಾಶಯ ವಿಶೇಷ ಭೂಸ್ವಾಧೀನಾಧಿಕಾರಿ ಸುಪ್ರಿಯಾ ಬಾಣಗಾರ್ ಅವರು  ಭೇಟಿ ನೀಡಿ ಪರಿಶೀಲಿಸಿದರು.
ಕಾವೇರಿ‌ ನದಿ ದಡದಲ್ಲಿರುವ ಸಾಲಿಗ್ರಾಮ  ತಾಲೂಕಿನ ದೊಡ್ಡಹನಸೋಗೆ ಗ್ರಾಮಕ್ಕೆ ಭೇಟಿ‌ ನೀಡಿದ  ಅವರು,ಉಕ್ಕಿ ಹರಿಯುತ್ತಿರುವ ನದಿಯ ದಡಕ್ಕೆ ಜನರು ಪ್ರವೇಶಿಸದಂತೆ‌ ನಿರ್ಬಂಧ ವಿಧಿಸುವಂತೆ ಸ್ಥಳೀಯ ಕಂದಾಯ ಹಾಗು ಗ್ರಾಮಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ಹನಸೋಗೆ ಗ್ರಾಮದ ಕಾವೇರಿ  ನದಿ‌ ಬಳಿ ಮನೆ ನಿರ್ಮಿಸಿಕೊಂಡು ವಾಸವಿರುವ ಕುಮಾರ್ ಹಾಗು ರಾಜಮ್ಮಣ್ಣಿ ಕುಟುಂಬವನ್ನು ತೆರವು ಮಾಡಿ ಸೂಕ್ತ ಸ್ಥಳದಲ್ಲಿ‌ ವಾಸವಿರಲು ಅನುಕೂಲ ಕಲ್ಪಿಸುವಂತೆ ನಿರ್ದೇಶನ ನೀಡಿದರು.ಮಳೆಯಿಂದಾಗುವ ಹಾನಿ ಸಂಬಂಧ ನಿತ್ಯ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

45 ಮನೆಗಳಿಗೆ ಹಾನಿ:ಈ ವೇಳೆ ಮಾತನಾಡಿದ ತಹಸೀಲ್ದಾರ್ ನರಗುಂದ ಅವರು,ಸಾಲಿಗ್ರಾಮ ತಾಲೂಕಿನಲ್ಲಿ ಅತೀ ವೃಷ್ಟಿಯಿಂದ 45 ವಾಸದ ಮನೆಗಳಿಗೆ ಹಾನಿಯಾಗಿದೆ.ಮಿರ್ಲೆ ಗ್ರಾಮದಲ್ಲಿ ಸುಮಾರು 4 ಎಕರೆ ತೋಟದ‌ ಬೆಳೆಗಳಿಗೆ ಹಾನಿಯಾಗಿದ್ದು,ಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.  ಉಪತಹಸೀಲ್ದಾರ್ ಗಳಾದ ಆರ್.ಎ.ಮಹೇಶ್,ಶರತ್ ಕುಮಾರ್   ಗ್ರಾಮ ಆಡಳಿತ ಅಧಿಕಾರಿಗಳು,ಸ್ಥಳೀಯ ಗ್ರಾ.ಪಂ.ಸಿಬ್ಬಂದಿ‌ ಇದ್ದರು.

Continue Reading

Trending

error: Content is protected !!