Crime
ಚಾಮಲಾಪುರದ ಹುಂಡಿಯಲ್ಲಿಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನೇ ಕೊಲೆಗೈದ ಪಾಪಿ ಪತಿ!

ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನೇ ಪಾಪಿ ಗಂಡ ಕೊಲೆಗೈದಿರುವ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ.
26 ವರ್ಷದ ಶೋಭಾ ಮೃತ ದುರ್ದೈವಿಯಾಗಿದ್ದಾಳೆ. 27 ವರ್ಷದ ಮಂಜು ಅಲಿಯಾಸ್ ಮಂಜುನಾಥ್ ಈಗ ಪೊಲೀಸರ ಅತಿಥಿಯಾಗಿದ್ದಾನೆ.
8 ವರ್ಷಗಳ ಹಿಂದೆ ಶೋಭಾ ಮತ್ತು ಮಂಜು ಇಬ್ಬರು ಪರಸ್ಪರ ಪ್ರೀತಿಸಿಕೊಂಡು ಮದುವೆಯಾಗಿದ್ದರು. ಗಂಡ ಹೆಂಡತಿ ನಡುವೆ ಹಾಗಾಗ್ಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈಗಾಗಲೇ ಒಂದು ಐದು ವರ್ಷದ ಗಂಡು ಮಗುವಿದ್ದು, ಮತ್ತೊಂದು ಮಗುವಿಗೆ ಶೋಭಾ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ತವರು ಮನೆಯಿಂದ ಗಂಡನ ಮನೆಗೆ ಪತ್ನಿ ಬರುತ್ತಿಲ್ಲವೆಂದು ಜಗಳ ತೆಗೆದ ಪತಿರಾಯ, ಕುಡಿದ ಮತ್ತಿನಲ್ಲಿ ಬ್ಲೇಡ್ ನಿಂದ ಕುತ್ತಿಗೆಗೆ ಕುತ್ತಿಗೆ ಕುಯ್ದು ಕೊಲೆ ಮಾಡಿದ್ದಾನೆ. ತಾಯಿಯ ಗರ್ಭದಲ್ಲಿದ್ದ ಮಗು, ಪ್ರಪಂಚವನ್ನು ನೋಡುವಷ್ಟರಲ್ಲಿ ಇಬ್ಬರ ಪ್ರಾಣವನ್ನು ತೆಗೆದಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಂಜನಗೂಡು ಪಟ್ಟಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾರಣಾಂತಿಕವಾಗಿ ಗಾಯಗೊಂಡಿದ್ದ ಗರ್ಭಿಣಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ವೈದ್ಯರು ಗರ್ಭಿಣಿ ಮತ್ತು ಮಗುವನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನೂ ಪೊಲೀಸರು ಭೇಟಿ ನೀಡಿ, ಮಹಜರು ನಡೆಸಿ, ತನಿಖೆ ಕೈಗೊಂಡಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Crime
ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ವ್ಯಕ್ತಿ ಬಂಧನ

ವಿರಾಜಪೇಟೆ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಅಸ್ಸಾಂ ರಾಜ್ಯದ ಅಬ್ದುಲ್ ಮಜೀದ್ (31) ಬಂಧಿತ ಆರೋಪಿ. ಆರೋಪಿಯನ್ನು 300 ಗ್ರಾಂ ಗಾಂಜಾದೊAದಿಗೆ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುವ ಹಿನ್ನೆಲೆ ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವೀರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್ ಮೋಹನ್ ಕುಮಾರ್ ಹಾಗೂ ಇತರ ಸಿಬ್ಬಂದಿಗಳ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಡಿ. 4 ರಂದು ಕಡಂಗಮರೂರು-ಬೆಳ್ಳುಮಾಡು ಜಂಕ್ಷನ್ ಬಳಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
Chikmagalur
ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ

ಚಿಕ್ಕಮಗಳೂರು : ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ
ನಾಯಿ ಮಾಲೀಕರ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆಯವರು
ಸಾಕಿದ ನಾಯಿ ಬೊಗಳಿದ್ದಕ್ಕೆ ಯಜಮಾನ ಸುಂದರನಿಂದ ನಾಯಿಗೆ ಬೈಗುಳ
ನಮಗೆ ಬೈಯುತ್ತಿದ್ದಾನೆ ಎಂದು ತಿಳಿದು ಆಸಿಡ್ ದಾಳಿ
ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ಘಟನೆ
ಸುಂದರ್ ರಾಜ್ ಎಂಬುವರ ಮೇಲೆ ಆಸಿಡ್ ದಾಳಿ
ಆಸಿಡ್ ದಾಳಿಗೊಳಗಾದ ಬಳಿಕ ಸುಂದರರಾಜ್ ಪರಿಸ್ಥಿತಿ ಗಂಭೀರ
ಎಡಗಣ್ಣಿಗೆ ಗಂಭೀರ ಗಾಯ, ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚನೆ
ಗಾಯಾಳು ಸುಂದರ್ ರಾಜ್ ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಗೆ ದಾಖಲು
ಜೇಮ್ಸ್, ಸುಂದರ್ ರಾಜ್ ಮೇಲೆ ಆಸಿಡ್ ದಾಳಿದ ವ್ಯಕ್ತಿ
ನಾಯಿ ಹೆಸರಿನಲ್ಲಿ ಜೇಮ್ಸ್ ಗೆ ಬೈಯುತ್ತಿರುವ ಆರೋಪ
ಸುಂದರಾಜ್ ಮೇಲಿನ ಸಿಟ್ಟಿನಿಂದ ಆಸಿಡ್ ನಿಂದ ದಾಳಿ ಮಾಡಿದ ಜೇಮ್ಸ್
ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲು
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು
Crime
ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆ; ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಪತಿ

ನಂಜನಗೂಡು: ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಪತಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 39 ವರ್ಷದ ಮಹದೇವಸ್ವಾಮಿ ಮೃತ ದುರ್ಧೈವಿಯಾಗಿದ್ದಾನೆ. 40 ವರ್ಷದ ಸೋಮಯ್ಯ ಎಂಬುವವರ ಪತ್ನಿ ಜೊತೆ ಮಹದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿಯನ್ನು ಸೋಮಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ಸೋಮಯ್ಯ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಡಿವೈಎಸ್ ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Mysore4 days ago
ಮುಖ್ಯ ಶಿಕ್ಷಕ ಮತ್ತು ಡಿ ದರ್ಜೆ ನೌಕರ, ಶಾಲಾ ಪ್ರವಾಸದ ಸಂದರ್ಭ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ – ಆರೋಪ
-
Hassan1 day ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore4 days ago
ಹಳೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ದರಿದ್ರ ನನಗೆ ಬಂದಿಲ್ಲ, ಹೊಸದಾಗಿ ತರುವ ತಾಕತ್ತು ನನಗೆ ಇದೆ – ಶಾಸಕ ಡಿ. ರವಿಶಂಕರ್