Connect with us

Hassan

ಕ್ರಿಕೆಟ್ ಫೈನಲ್ ಪಂದ್ಯಕ್ಕೆ ಅಭಿಮಾನಿಗಳು ಕಾತರ

Published

on

ನಾಳೆ ಅಹಮದಾಬಾದ್‌ನ ನರೇಂದ್ರಮೋದಿ ಸ್ಟೇಡಿಯಂನಲ್ಲಿ 2023 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗಲಿವೆ. ನಾಳಿನ ಪಂದ್ಯವನ್ನು ಇಡೀ ಭಾರತ ಎದುರು ನೋಡುತ್ತಿದ್ದು, ಭಾರತ ತಂಡ ಜಯಭೇರಿ ಭಾರಿಸುವ ಮೂಲಕ ಮೂರನೇ ಬಾರಿಗೆ ವಿಶ್ವಕಪ್ ಎತ್ತಿ ಹಿಡಿಯಲಿದೆ ಎಂದು ಕ್ರಿಕೆಟ್ ಅಭಿಮಾನಿಗಳು ಅತೀವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಟೀಂ ಇಂಡಿಯಾ ಈಗಾಗಲೇ ಹತ್ತು ಪಂದ್ಯಗಳನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಗಳಲ್ಲೂ ಬಲಿಷ್ಠವಾಗಿದ್ದು ನಾಳಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯಲಿದೆ ಎಂದು ಕ್ರಿಕೆಟ್ ಪ್ರೇಮಿಗಳು ಭಾರತ ತಂಡವನ್ನು ಕೊಂಡಾಡುತ್ತಿದ್ದಾರೆ. ಜನಪ್ರತಿನಿಧಿಗಳು,ವಿಧ್ಯಾರ್ಥಿಗಳಾದಿಯಾಗಿ ಬಹುತೇಕರು ಭಾರತ ತಂಡವೇ ಗೆಲ್ಲಲಿದೆ, ಗೆದ್ದು ಬಾ ಇಂಡಿಯಾ ಎಂದು ಶುಭ ಹಾರೈಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ| ಸಂಸದ ಶ್ರೇಯಸ್‌ ಎಂ.ಪಟೇಲ್‌ ಓಡಿಶಾ ರಾಜ್ಯದ ಕಾಂಗ್ರೆಸ್ ಘಟಕದ ವೀಕ್ಷಕರಾಗಿ ನೇಮಕ

Published

on

ಹಾಸನ: ಹಾಸನ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಶ್ರೇಯಸ್ ಎಂ.ಪಟೇಲ್ ಅವರಿಗೆ ಎಐಸಿಸಿ ದೊಡ್ಡ ಜವಾಬ್ದಾರಿ ನೀಡಿದ್ದು, ಅವರನ್ನು ಓಡಿಶಾ ರಾಜ್ಯದ ಕಾಂಗ್ರೆಸ್ ಘಟಕದ ವೀಕ್ಷಕರಾಗಿ ಆಯ್ಕೆ ಮಾಡಿದೆ.

ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗಿರುವ ಶ್ರೇಯಸ್ ಅವರನ್ನು ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ ಸಂಘಟನ್ ಶ್ರೀಜನ್ ಅಭಿಯಾನದ ಅಂಗವಾಗಿ ಓಡಿಶಾ ರಾಜ್ಯದ ಕಾಂಗ್ರೆಸ್ ಘಟಕದ ವೀಕ್ಷಕರಾಗಿ ನೇಮಿಸಿದೆ.

ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಕಿರಿಯ ವಯಸ್ಸಿನಲ್ಲೇ ಯುವ ಸಂಸದರಿಗೆ ದೊಡ್ಡ ಜವಾಬ್ದಾರಿ ಸಿಕ್ಕಿರುವುದಕ್ಕೆ ಹಾಸನ ಜಿಲ್ಲೆಗೆ ಹೆಮ್ಮೆ ಮತ್ತು ಸಂತಸದ ವಿಷಯ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹರ್ಷ ವ್ಯಕ್ತಪಡಿಸಿದೆ.

ಈ ಮಹತ್ವದ ಜವಾಬ್ದಾರಿ ಸಂಸದರ ಪಕ್ಷ ನಿಷ್ಠೆ ಪರಿಶ್ರಮ ಹಾಗೂ ಸಂಘಟನೆಗೆ ನೀಡುತ್ತಿರುವ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ ಎಂದು ಜಿಲ್ಲೆಯ ಹಲವು ಮುಖಂಡರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.

Continue Reading

Hassan

ಹಾಸನ: ಚಲಿಸುತ್ತಿದ್ದ ರೈಲಿನ ಬೋಗಿಯ ಕೆಳಗೆ ಕಾಣಿಸಿಕೊಂಡ ಸ್ಪಾರ್ಕ್‌

Published

on

ಹಾಸನ: ಹಾಸನ ಜಂಕ್ಷನ್‌ನ ರೈಲ್ವೆ ನಿಲ್ದಾಣದಲ್ಲಿ  ಚಲಿಸುತ್ತಿದ್ದ ರೈಲಿನ ಬೋಗಿಯ ಕೆಳಗೆ ಬೆಂಕಿ ಕಾಣಿಸಿಕೊಂಡಿದೆ.

ಚಲಿಸುತ್ತಿದ್ದ ರೈಲಿನ ಬೋಗಿಯ ಕೆಳಗೆ ಸ್ಪಾರ್ಕ್ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ಹಾಸನ ರೈಲ್ವೆ ನಿಲ್ದಾಣದ ಸಿಬ್ಬಂದಿಗಳು ಬೆಂಕಿ ನಂದಿಸುವ ಮೂಲಕ ಅಪಾಯ ತಪ್ಪಿಸಿದ್ದಾರೆ.

ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಾಸನ ರೈಲು ನಿಲ್ದಾಣ ಪ್ಲಾಟ್ ಸಂಖ್ಯೆ ಎರಡರಲ್ಲಿ ನಿಂತಿದ್ದಾಗ ಬೋಗಿವೊಂದರ ಕೆಳ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಪ್ರಯಾಣಿಕರು, ರೈಲ್ವೆ ನಿಲ್ದಾಣದಲ್ಲಿದ್ದ ಕೊಂಚ ಗಾಬರಿಗೊಂಡಿದ್ದಾರೆ. ಅಲ್ಲದೇ  ರೈಲು ಸರಿಪಡಿಸಿದನ್ನು ಖಾತರಿ ಮಾಡಿಕೊಂಡ ಮೇಲೆ ತಡವಾಗಿ ಹೊರಟಿದೆ.

Continue Reading

Hassan

ಹಾಸನ| ಶಿರಾಡಿ ಘಾಟ್‌ ಬಂದ್‌: ಸಕಲೇಶಪುರ-ಮಂಗಳೂರು ಮಾರ್ಗದ ವಾಹನಗಳನ್ನು ಚಾರ್ಮಾಡಿ ಮೂಲಕ ಸೂಚನೆ

Published

on

ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಈ ಮಧ್ಯೆ ಟ್ರಾಫ್‌ ಜಾಮ್ ತೆರವುಗೊಳಿಸಲು ಪೊಲೀಸರ ಹರಸಾಹಸ ಮಾಡುತ್ತಿದ್ದು, ಸಕಲೇಶಪುರ-ಮಂಗಳೂರು ಮಾರ್ಗದ ವಾಹನಗಳನ್ನು ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.

 

ಸಕಲೇಶಪುರ ತಾಲೂಕಿನ ಪಶ್ಚಿಮಘಟ್ಟ ಪ್ರದೇಶದಲ್ಲಿ ನಾಲ್ಕೈದು ತಾಸುಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಮಾರ್ಗದಲ್ಲಿ ಭೂ ಕುಸಿತದ ಪ್ರಮಾಣ ಹೆಚ್ಚಾಗಿದ್ದು, ವಾಹನ ಸಂಚಾರ ಬಂದ್ ಆಗಿದೆ.

 

 

Continue Reading

Trending

error: Content is protected !!