Connect with us

Mandya

ಐಸ್ ಕ್ರೀಂ ತಿಂದು ಅವಳಿ ಮಕ್ಕಳು‌ ಸಾವು

Published

on

ಶ್ರೀರಂಗಪಟ್ಟಣ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ತಾಲ್ಲೂಕಿನ ಅರಕೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಟ್ಟಹಳ್ಳಿ ಗ್ರಾಮದಲ್ಲಿ ಈ‌ ಧಾರುಣ ಘಟನೆ ನಢದಿದ್ದು, ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು‌ ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆ ಗ್ರಾಮಕ್ಕೆ ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್ ಕ್ರೀಂ ಖರೀದಿಸಿ ತಿಂದಿದ್ದ ತಾಯಿ ಮತ್ತು ಮಕ್ಕಳು,
ಐಸ್ ಕ್ರೀ ತಿಂದು ಅಸ್ವಸ್ಥರಾಗಿ ಮಕ್ಕಳು ಮನೆಯಲ್ಲಿ ಸಾವಾಗಿದ್ದು, ತಾಯಿ ತೀವ್ರ ಅಸ್ವಸ್ಥಗೊಂಡಿದ್ದಾರೆ.

ಮಕ್ಕಳ ಮೃತ ದೇಹವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ.

ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

Continue Reading
Click to comment

Leave a Reply

Your email address will not be published. Required fields are marked *

Mandya

ಹಲ್ಲೆಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಜನತೆಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಹೋರಾತ್ರಿ ಧರಣಿ ಎಚ್ಚರಿಕೆ

Published

on

ಮಂಡ್ಯ: ಹಲ್ಲೆಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಜನತೆಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಆಗಸ್ಟ್ 14ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಹೋರಾತ್ರಿ ಪ್ರತಿಭಟನೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ದಿನ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಸಮಿತಿಯ ಮಂಡ್ಯ ಜಿಲ್ಲಾ ಸಂಚಾಲಕ ಎಂ.ವಿ.ಕೃಷ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ತಾಲೂಕು ಬಸರಾಳು ಹೋಬಳಿ ಹಲ್ಲೇಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲ್ಲೇಗೆರೆ ಮೊಳೆ ಗ್ರಾಮ ಠಾಣ ಜಾಗ ಆರು ಎಕರೆ ಮತ್ತು ಹಲ್ಲೆಗೆರೆ ಸರ್ವೇ ನಂಬರ್ 153ರ ಹಿರೇಮಡಿ ಒಂದು ಎಕರೆ ಜಮೀನಿದೆ. ಈ ಜಮೀನಿನಲ್ಲಿ ಹಲ್ಲೆಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ನಿವೇಶನ ರಹಿತ ಮತ್ತು ಬಡಜನರಿಗೆ ನಿವೇಶನ ನೀಡುವಂತೆ ಹಲವಾರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ ಎಂದರು.

ಈ ಜಾಗವನ್ನು ಮೂರು ಬಾರಿ ಸರ್ವೇ ಮಾಡಲಾಗಿದೆ. ಆದರೆ ಕೆಲ ಅಧಿಕಾರಿಗಳು ಹಲವರ ಆಮಿಷಕ್ಕೆ ಬಲಿಯಾಗಿ ಬಡವರಿಗೆ ನಿವೇಶನ ನೀಡಲು ಅಡ್ಡಿ ಮಾಡುತ್ತಿದ್ದಾರೆ ಎಂದು ದೂರಿದರು.

ತಕ್ಷಣವೇ ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಿ ಬಡವರಿಗೆ ನಿವೇಶನ ನೀಡಬೇಕು. ಹಾಗಾಗಿ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಅಹೋರಾತ್ರಿ ಪ್ರತಿಭಟನೆ ಮತ್ತು ಕಪ್ಪು ಬಾವುಟ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಗೋಷ್ಠಿಯಲ್ಲಿ ಸಮಿತಿಯ ತಾಲೂಕು ಸಂಚಾಲಕ ಮಾಚಹಳ್ಳಿ ಕೃಷ್ಣಪ್ಪ, ಚಿಕ್ಕಬಳ್ಳಿ ಶಂಕರ್ ಉಪಸ್ಥಿತರಿದ್ದರು.

Continue Reading

Mandya

ಸಂಜಯ ಪ್ರಕಾಶನದ 100ನೇ ಕಾರ್ಯಕ್ರಮವನ್ನು ಆಗಸ್ಟ್ 11ರಂದು ಆಯೋಜಿಸಲಾಗಿದೆ‌ – ಅಪ್ಪಾಜಿ

Published

on

ಮಂಡ್ಯ: ಸಂಜಯ ಪ್ರಕಾಶನ ಹಾಗೂ ಶ್ರೀರಂಗಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಸಂಜಯ ಪ್ರಕಾಶನದ 100ನೇ ಕಾರ್ಯಕ್ರಮವನ್ನು ಆ.11ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ಸಂಜಯ ಪ್ರಕಾಶನದ ಅಪ್ಪಾಜಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದೃಶ್ಯ ಮಾಧ್ಯಮಗಳ ಹಾವಳಿಯಿಂದ ಸಾಂಸ್ಕೃತಿಕ,
ಸಾಮಾಜಿಕ ಕಾರ್ಯಕ್ರಗಳಿಂದ ದೂರ ಸರಿಯುತ್ತಿದ್ದಾರೆ. ಈ ಹಿನ್ನೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಯುವ ಸಮುದಾಯವನ್ನು ಇತ್ತ ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದರು.

ಸಂಜಯ ಪ್ರಕಾಶನದಿಂದ ಪ್ರತಿ ತಿಂಗಳು ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಲವಾರು ವರ್ಷಗಳಿಂದ ನಡೆಸಲಾಗುತ್ತಿದೆ.

ಇದು ಸಂಜಯ ಪ್ರಕಾಶನದ ನೂರನೇ ಕಾರ್ಯಕ್ರಮವಾಗಿದ್ದು, ಶ್ರೀರಂಗಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಗಸ್ಟ್ 11ರಂದು ವೈದ್ಯ ಡಾಕ್ಟರ್ ಬಿ ಸುಜಯ್ ಕುಮಾರ್ ಅವರ ನೇತೃತ್ವದಲ್ಲಿ ದೀನಬಂದು ಸಂಸ್ಥೆಯ ಪ್ರೊಫೆಸರ್ ಜಿಎಸ್ ಜಯದೇವ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದರು.

 

ಸಂಸ್ಕೃತಿ ಚಿಂತಕ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್ ಅವರು ಅಂದು ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶ್ವ ಸಹೋದರತ್ವಕ್ಕೆ ಕದನದ ಕರಿ ನೆರಳು ಎಂಬ ವಿಷಯದ ಬಗ್ಗೆ ವಿಚಾರ ಮಂಡನೆ ಮಾಡಲಿದ್ದು, ನಂತರ ಸಂವಾದ ನಡೆಯಲಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಸಂಜಯ ಪ್ರಕಾಶನದ ಅಧ್ಯಕ್ಷ ಶಿವಕುಮಾರ್, ಜಯಶಂಕರ್ ಉಪಸ್ಥಿತರಿದ್ದರು.

Continue Reading

Mandya

ಸಿದ್ದರಾಮಯ್ಯ ಅವರೇ ದಾಖಲೆಗಳು ನಮ್ಮ ಬಳಿ ಇವೆ ನೀವು ಮಾತನಾಡಿ : ಆರ್.ಅಶೋಕ್ ಸವಾಲು

Published

on

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಮೂಡಾ ಅಕ್ರಮದ ಬಗ್ಗೆ ದಾಖಲೆಗಳು ನಮ್ಮ ಬಳಿ ಇವೆ ನೀವು ಮಾತನಾಡಿ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸವಾಲು ಹಾಕಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಾಲ್ಮೀಕಿ ಮತ್ತು ಮುಡಾ ಹಗರಣದ ಬಗ್ಗೆ ನಿಲುವಳಿ ಸೂಚನೆ ಮಂಡಿಸಿದ್ದೇವೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀವು ಮಾತನಾಡಿ, ನಿಮಗೆ ಉತ್ತರ ಕೊಡುವ ದಾಖಲೆಗಳು ನಮ್ಮಲ್ಲಿವೆ ಅಂದಿದ್ದೇವು ಯಾಕೆ ನೀವು ಪಲಾಯನ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

ನಾನು ವಿಧಾನಮಂಡಲದಲ್ಲಿ 3 ಗಂಟೆಗೂ ಹೆಚ್ಚು ಕಾಲ ಮಾತನಾಡಿದ್ದೇನೆ. ಸಂತೆ ಭಾಷಣ ಮಾಡಲಿಲ್ಲ. ದಾಖಲೆ ಸಮೇತ ಹೇಳಿದ್ದೇನೆ . ಮುಡಾ ಹಗರಣದ ಬಗ್ಗೆಯೂ ನಿಲುವಳಿ ಸೂಚನೆ ಮಂಡಿಸಲಾಗಿತ್ತು. ಆದರೆ ಅವಕಾಶ ಸಿಗಲಿಲ್ಲ. ಮುಖ್ಯಮಂತ್ರಿಗಳು ಅವಕಾಶ ನೀಡದೆ ಪಲಾಯನ ಮಾಡಿದರು. ಒಂದು ವೇಳೆ ಅವಕಾಶ ನೀಡಿದ್ದರೆ ಪಾದಯಾತ್ರೆ ಬಗ್ಗೆ ಚಿಂತನೆ ನಡೆಸಬಹುದಿತ್ತು ಎಂದರು.

ವಿಧಾನ ಪರಿಷತ್ತು ಮತ್ತು ವಿಧಾನಸಭೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡದ ಕಾರಣ ಬಿಜೆಪಿ ಮತ್ತು ಜೆಡಿಎಸ್ನಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದರು.

ವಾಲ್ಮೀಕಿ ನಿಗಮದಲ್ಲಿ ಲೂಟಿ ಹೊಡೆದ ಹಣ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಕೆಲವರು ಜೈಲಿನಲ್ಲಿದ್ದಾರೆ ಎಂದರು.
ಡಿಕೆ ಶಿವಕುಮಾರ್ ಅವರು ಬಿಚ್ಚಿಡುತ್ತೇನೆ, ಬಿಚ್ಚಿಡುತ್ತೇನೆ ಎನ್ನುತ್ತಿದ್ದಾರೆ. ಅವರು ನಮ್ಮ ವಿಚಾರದ ಬಗ್ಗೆ ವಿಧಾನಸಭೆಯಲ್ಲಿ ಎಲ್ಲವನ್ನು ಬಿಚ್ಚಿಡಬಹುದಿತ್ತು. ಆದರೆ ಏನನ್ನು ಮಾಡಲಿಲ್ಲ ಎಂದರು.

ವಿಧಾನಸಭೆಯಲ್ಲಿ ನೀಲುವಳಿ ಮಂಡನೆಗೆ ಅವಕಾಶ ವಂಚನೆ ಮಾಡಿದ ಕಾರಣ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಆದರೆ ಇವರು ಆಡಳಿತ ಪಕ್ಷದವರಾಗಿ ಯಾಕೆ ಸಮಾವೇಶ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ದಾಖಲೆ ನೀಡಿದ್ದರೆ ಇಷ್ಟು ಆಗುತ್ತಿರಲಿಲ್ಲ ಎಂದು ತಿಳಿಸಿದ ಅವರು, ರೀಡೂ ಮಾಡಿದ್ದು ಅವರಿಗೆ ಕಪ್ಪು ಚುಕ್ಕೆ ಅಲ್ಲವೇ ಎಂದು ಮತ್ತೊಮ್ಮೆ ಪ್ರಶ್ನಿಸಿದರು.

ಬೊಮ್ಮಾಯಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಅವರು ಈ ಬಗ್ಗೆ ವಿರೋಧ ಪಕ್ಷದವರಾಗಿ ದಾಖಲೆಯನ್ನು ಬಿಡುಗಡೆ ಮಾಡಬಹುದಿತ್ತು. ಆಗ ಮಾಡದೆ ಈಗ ಅಧಿಕಾರದಲ್ಲಿರುವಾಗ ಬಿಜೆಪಿ ಮೇಲೆ ಆಪಾದನೆ ಮಾಡಿದರೆ ಜನರು ಇದಕ್ಕೆ ಬೆಲೆ ಕೊಡುತ್ತಾರಾ ಎಂದು ಮತ್ತೊಂದು ಬಾರಿ ಪ್ರಶ್ನಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದು 14 ತಿಂಗಳಿನಲ್ಲಿ ಮಾಡಿರುವ ಅವ್ಯವಹಾರದ ಬಗ್ಗೆ ಪುಸ್ತಕ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದ ಅವರು, ಕಾಂಗ್ರೆಸ್ ಪಕ್ಷ ಬ್ರಾಂಡ್ ಬೆಂಗಳೂರನ್ನು ಬ್ಯಾಡ್ ಮಾಡಿದೆ. ಹಿಂದೂ ಯುವಕರ ಮೇಲೆ ಮತ್ತು ಮಹಿಳೆಯರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಬರ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದರು .

ಕಾಂಗ್ರೆಸ್ ಪಕ್ಷದ ಸಮಾವೇಶಕ್ಕೂ ಮುನ್ನ ಆ ಪಕ್ಷದ ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷ ನಡೆಸುತ್ತಿರುವುದು ಜನಾಂದೋಲನ ಸಮಾವೇಶ ಅಲ್ಲ. ಬದಲಿಗೆ ಜನರಿಗೆ ಮೋಸ ಮಾಡುವ ಆಂದೋಲನ ಆಗಿದೆ ಎಂದು ಜರಿದರು .

ಇದೇ ಸಂದರ್ಭದಲ್ಲಿ ಭ್ರಷ್ಟ ಕಾಂಗ್ರೆಸ್ ಹಗರಣಗಳ ಸರ್ಕಾರ ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಚಂದ್ರಶೇಖರ್, ಮಾಧ್ಯಮ ಸಂಚಾಲಕ ನಾಗೇಶ್, ಶಾಸಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ವಕ್ತಾರ ಸಿಟಿ ಮಂಜುನಾಥ್, ಕನಕ ಮೂರ್ತಿ, ನಾಗನಂದ್ ಉಪಸ್ಥಿತರಿದ್ದರು

Continue Reading

Trending

error: Content is protected !!