Chamarajanagar
ಖಾಸಗಿ ಮೈಕ್ರೋ ಫೈನಾನ್ಸ್ ಗಳಿಂದ ಸಾಲ ವಸೂಲಾತಿಗೆ ಕಿರುಕುಳ ನೀಡಿದ್ದಲ್ಲಿ ದೂರವಾಣಿ ಮೂಲಕ ದೂರು ಸಲ್ಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ, ಜ.10:- ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಹಣಕಾಸು ಸಂಸ್ಥೆಗಳಾದ ಖಾಸಗಿ ಫೈನಾನ್ಸ್ ಗಳು, ಸಂಘ ಸಂಸ್ಥೆಗಳು, ಮೈಕ್ರೋ ಫೈನಾನ್ಸ್ ಗಳು ಹಾಗೂ ಇತರೆ ಬ್ಯಾಂಕ್‍ಗಳಿಂದ ಸಾಲ ವಸೂಲಿಗಾಗಿ ಬ್ಯಾಂಕ್‍ನ ರಿಕವರಿ ಏಜೆಂಟ್‍ಗಳು ದೌರ್ಜನ್ಯ, ಕಿರುಕುಳ, ಮಾನಸಿಕ ಹಿಂಸೆ ನೀಡುತ್ತಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ದೂರವಾಣಿ ಹಾಗೂ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ ದೂರು ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿರುವ ಖಾಸಗಿ ಫೈನಾನ್ಸ್ ಗಳು ಸಂಘ-ಸಂಸ್ಥೆಗಳು, ಮೈಕ್ರೋ ಫೈನಾನ್ಸ್ ಗಳು ಹಾಗೂ ಇತರೆ ಬ್ಯಾಂಕ್‍ಗಳಿಂದ ಮಹಿಳೆಯರು, ರೈತರು, ಬುಡಕಟ್ಟು ಜನರು, ಸಣ್ಣ ಪ್ರಮಾಣದ ವ್ಯಾಪಾರಸ್ಥರು ಮಾಡಿರುವ ಸಾಲದ ವಸೂಲಿಗಾಗಿ ಬ್ಯಾಂಕಿನ ರಿಕವರಿ ಏಜೆಂಟ್‍ಗಳು ದೌರ್ಜನ್ಯ, ಕಿರುಕುಳ, ಮಾನಸಿಕ ಹಿಂಸೆ ನೀಡುತ್ತಿದ್ದಲ್ಲಿ ದೂರನ್ನು ಜಿಲ್ಲಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08226-223160 ಹಾಗೂ ವಾಟ್ಸಾಪ್ ಸಂಖ್ಯೆ 9740942901, ಇ ಮೇಲ್- [email protected] ಗೆ ಮತ್ತು ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 9480804600 ಗೆ ನೀಡುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ಡಿ. 10ಕ್ಕೆ ಚಾ.ನಗರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿರುವ ಲೋಕಾಯುಕ್ತ ಅಧಿಕಾರಿಗಳು
ಚಾಮರಾಜನಗರ : ಜಿಲ್ಲೆಯ ಲೋಕಾಯುಕ್ತ ಕಚೇರಿಯ ಅಧಿಕಾರಿಗಳು ಚಾಮರಾಜನಗರ ಪ್ರವಾಸಿಮಂದಿರದಲ್ಲಿ (ಐ.ಬಿ) ಡಿಸೆಂಬರ್. 10ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಕರ್ನಾಟಕ ಲೋಕಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅನಗತ್ಯ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ನಮೂನೆ-1 ಮತ್ತು 2 ರಲ್ಲಿ ಭರ್ತಿಮಾಡಿ ಸಲ್ಲಿಸಬಹುದು.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ವಿಭಾಗದ ಉಪಾಧೀಕ್ಷಕ ಜಿ.ಎಸ್. ಗಜೇಂದ್ರ ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ಚಾಮರಾಜನಗರ, ನಂಜನಗೂಡು, ಕಡಕೊಳ, ಅಶೋಕಪುರಂ ರೈಲು ನಿಲ್ದಾಣಗಳಿಗೆ ಡಿಆರ್‌ಎಂ ಭೇಟಿ, ಪರಿಶೀಲನೆ
ಮೈಸೂರು: ಮೈಸೂರು ವಿಭಾಗದ ನೈರುತ್ಯ ರೈಲ್ವೆ ವ್ಯವಸ್ಥಾಪಕ ನಿರ್ದೇಶಕ ಮುದಿತ್ ಮಿತ್ತಲ್ ಅವರು ಚಾಮರಾಜನಗರ, ನಂಜನಗೂಡು ಟೌನ್, ಕಡಕೊಳ ಮತ್ತು ಅಶೋಕಪುರಂ ರೈಲು ನಿಲ್ದಾಣಗಳನ್ನು ಸೋಮವಾರ ಪರಿಶೀಲಿಸಿದರು.

ಚಾಮರಾಜನಗರದಲ್ಲಿ ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಅವರು ಪರಿಶೀಲಿಸಿ, ಪ್ರಯಾಣಿಕರ ಸೌಲಭ್ಯಗಳು, ಮೂಲಸೌಕರ್ಯ ಸುಧಾರಣೆಗಳು ಮತ್ತು ನಿಲ್ದಾಣ ಪುನರ್ವಿಕಾಸಕ್ಕೆ ಸಂಬಂಧಿಸಿದ ಅಂಶಗಳ ಮೇಲೆ ವಿಶೇಷ ಗಮನ ಹರಿಸಿದರು. ಅಲ್ಲದೇ, ನಿಲ್ದಾಣದಲ್ಲಿನ ಉದ್ಯೋಗಿಗಳು ಮತ್ತು ಸಿಬ್ಬಂದಿಯೊಂದಿಗೆ ಕೂಡ ಸಂವಾದ ನಡೆಸಿದರು.
ನಂಜನಗೂಡು ಪಟ್ಟಣದ ಗೂಡ್ಸ್ ಶೆಡ್ ಪರಿಶೀಲಿಸಿ, ಅದರ ಕಾರ್ಯಾಚರಣಾ ದಕ್ಷತೆ ಹಾಗೂ ಭವಿಷ್ಯದ ಸಾಮರ್ಥ್ಯ ವೃದ್ಧಿ ಅಗತ್ಯಗಳನ್ನು ಅವಲೋಕಿಸಿದರು. ನಂತರ ಕಡಕೊಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಕಂಟೇನರ್ ಲೋಡಿಯಿಂಗ್ ಪಾಯಿಂಟ್ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.

ಈ ವೇಳೆ ಸರಕು ಹಸ್ತಾಂತರ ಸೌಲಭ್ಯಗಳು ಹಾಗೂ ಸರಕು ಸಾಗಣೆ ಕಾರ್ಯಕ್ಷಮತೆ ಮುಂಬರುವ ಅಭಿವೃದ್ಧಿ ಚಟುವಟಿಕೆಗಳನ್ನು ಪರಿಶೀಲಿಸಿದರು.
ಅಶೋಕಪುರಂ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳು, ಸುರಕ್ಷತಾ ಕ್ರಮಗಳು ಹಾಗೂ ನಿಲ್ದಾಣದ ನಿರ್ವಹಣೆಯನ್ನೂ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಗತಿ ಶಕ್ತಿ ಸಿಪಿಎಂ ಆನಂದ್ ಭಾರತಿ ಮತ್ತು ವಿವಿಧ ವಿಭಾಗದ ಹಿರಿಯ ಅಧಿಕಾರಿಗಳು ಇದ್ದರು.
Chamarajanagar
ಇ-ಸ್ವತ್ತು ಹಾಗೂ ನೋಂದಣಿ ಗೆ ಒತ್ತಾಯಿಸಿ ಪ್ರತಿಭಟನೆ
ವರದಿ : ಸುನೀಲ್ ಪ್ರಶಾಂತ್
ಕೊಳ್ಳೇಗಾಲ: ಇ-ಸ್ವತ್ತು ಹಾಗೂ ನೋಂದಣಿ ಮಾಡಿಕೊಡುವಂತೆ ಮಹಿಳಾ ನಿವಾಸಿಗಳು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ನಗರಸಭೆ ಮುಂಭಾಗದಲ್ಲಿ ಜಮಾಯಿಸಿದ ಮುಡಿಗುಂಡ ಹಾಗೂ ಶಂಕನಪುರ ಬಡಾವಣೆಗಳ ಸ್ಲಮ್ ಬೋರ್ಡ್ ಮನೆಗಳ ಇ-ಸ್ವತ್ತು ಹಾಗೂ ನೋಂದಣಿ ಮಾಡಿಕೊಡುವಂತೆ ಒತ್ತಾಯಿಸಿ ಇಲ್ಲಿನ ಮುಡಿಗುಂಡ ಹಾಗೂ ಶಂಕನಪುರ ಬಡಾವಣೆಯ ಮಹಿಳಾ ವಾಸಿಗಳು ಪ್ರತಿಭಟನೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಮಾತನಾಡಿ ನಮ್ಮ ಸಮಸ್ಯೆ ಕುರಿತು ಅಳಲು ತೋಡಿಕೊಂಡರು.
ಪ್ರತಿಭಟನೆಯಲ್ಲಿ ಮಹಿಳಾ ಹೋರಾಟಗಾರ್ತಿ ಶಿವಮ್ಮ, ನಿವಾಸಿಗಳಾದ ಕವಿತಾ, ಸುಮ, ನಿಂಗಮ್ಮ,ರಾಧ, ಪುಟ್ಟನಂಜಮ್ಮ, ನಾಗವೇಣಿ, ದೀಪಾ, ಜಯಮ್ಮ,
ಮಹದೇವ, ನಿಂಗರಾಜು ಇತರರು ಇದ್ದರು.
-
Mandya12 hours agoಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
-
Mysore10 hours agoಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ
-
Mandya18 hours agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Hassan14 hours agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Hassan14 hours agoಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ
-
Mysore20 hours agoಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ
-
Kodagu16 hours agoಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ : ಗಾಯತ್ರಿ ನರಸಿಂಹ
-
Mysore14 hours agoದೌರ್ಜನ್ಯ ತಡೆಗೆ ಕೆಪಿಎ- ಸಾವಿತ್ರಿಬಾ ಫುಲೆ ಸಂಸ್ಥೆ ನಡುವೆ ಒಡಂಬಡಿಕೆ
