National - International
6ನೇ ಬಾರಿಗೆ ಆಸೀಸ್ ಚಾಂಪಿಯನ್
ಟೀಮ್ ಇಂಡಿಯಾ ನೀಡಿದ್ದ 241 ರನ್‌ಗಳನ್ನು ಬೆನ್ನತ್ತಿದ ಆಸೀಸ್, 47 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತ್ತಾದರೂ, ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಸಮಯೋಚಿತ ಆಟದಿಂದ 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಆ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಬೇಕೆಂಬ ಕೋಟ್ಯಂತರ ಭಾರತೀಯರ ಕನಸು ನುಚ್ಚು ನೂರಾಗಿದೆ.
ಆಸೀಸ್ ಪರ ಬ್ಯಾಟಿಂಗ್‌ನಲ್ಲಿ ಟ್ರಾವಿಸ್ ಹೆಡ್ ಹಾಗೂ ಲಾಬೂಶೈನ್ ಅವರು ನಡೆದ 192 ರನ್‌ಗಳ ಬೃಹತ್ ಜೊತೆಯಾಟದ ಪರಿಣಾಮ ಟೀಮ್ ಇಂಡಿಯಾ ಸೋಲನುಭವಿಸಿತು. ಟ್ರಾವಿಸ್ ಹೆಡ್ ಶತಕ(137) ಬಾರಿಸಿ ಮಿಂಚಿದರೆ, ಲಾಬೂಶೈನ್ ಔಟಾಗದೆ 58 ರನ್ ದಾಖಲಿಸಿದರು. ಈ ಜೋಡಿ 4ನೇ ವಿಕೆಟ್‌ಗೆ 192 ರನ್‌ಗಳ ಜೊತೆಯಾಟ ನಡೆಸಿ, ಆಸ್ಟ್ರೇಲಿಯಾವನ್ನು ವಿಜಯದ ಕಡೆಗೆ ತೆಗೆದುಕೊಂಡು ಹೋದರು.
6ನೇ ಬಾರಿಗೆ ಆಸೀಸ್ ಚಾಂಪಿಯನ್
ಈ ಪ್ರಶಸ್ತಿಯ ಮೂಲಕ ಆಸ್ಟ್ರೇಲಿಯಾ ತಂಡ 6ನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಮೊದಲು 1987, 1999, 2003, 2007 ಹಾಗೂ 2015ರಲ್ಲಿ ಚಾಂಪಿಯನ್ ಆಗಿತ್ತು.
ವಿಶ್ವಕಪ್ ಟೂರ್ನಿಯುದ್ಧಕ್ಕೂ ಉತ್ತಮ ಪ್ರದರ್ಶನ ತೋರಿದ್ದ ಟೀಮ್ ಇಂಡಿಯಾ, ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ನೀರಸ ಪ್ರದರ್ಶನ ತೋರಿತ್ತು. ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ, ಆಸೀಸ್‌ನ ಉತ್ತಮ ಕ್ಷೇತ್ರ ರಕ್ಷಣೆ ಹಾಗೂ ಅತ್ಯುತ್ತಮ ಬೌಲಿಂಗ್‌ನಿಂದ 50 ಓವರ್‌ಗಳಲ್ಲಿ ಆಲೌಟ್ ಆಗಿ 240 ರನ್ ಗಳಿಸಿ ಆಸ್ಟ್ರೇಲಿಯಾಗೆ ಸಾಧಾರಣ ಗುರಿ ನೀಡಿತ್ತು.
ಅಹಮದಾಬಾದ್‌ನ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಭಾರತವನ್ನು ಬ್ಯಾಟಿಂಗ್ ಆಹ್ವಾನಿಸಿದ್ದರು.
ಆರಂಭದಲ್ಲಿ ಮೇಲುಗೈ ಸಾಧಿಸಿದ್ದ ಟೀಮ್ ಇಂಡಿಯಾ ಬೌಲರ್‌ಗಳು
ಬುಮ್ರಾ ಎಸೆದ ಮೊದಲ ಓವರ್‌ನಲ್ಲೇ ಆಸೀಸ್‌ನ ಆರಂಭಿಕ ಬ್ಯಾಟರ್‌ಗಳು 15 ರನ್‌ಗಳನ್ನು ಬಾಚುವ ಮೂಲಕ ಸ್ಫೋಟಕ ಆರಂಭದ ಮುನ್ಸೂಚನೆ ನೀಡಿದರು. ಆದರೆ ಇದಕ್ಕೆ 2ನೇ ಓವರ್ ಎಸೆದ ಸೆಮಿಫೈನಲ್ ಪಂದ್ಯದ ಹೀರೋ ಮೊಹಮ್ಮದ್ ಶಮಿ ಅವಕಾಶ ನೀಡಲಿಲ್ಲ.
ಮೊಹಮ್ಮದ್ ಶಮಿ ಎಸೆದ 2ನೇ ಓವರ್ನ 2ನೇ ಎಸೆತದಲ್ಲಿ ಸ್ಲಿಪ್ನಲ್ಲಿದ್ದ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡುವ ಮೂಲಕ ಡೇವಿಡ್ ವಾರ್ನರ್ 7 ರನ್ ಬಾರಿಸಿ ಔಟಾದರೆ, ಜಸ್ಪ್ರೀತ್ ಬುಮ್ರಾ ಎಸೆದ 5ನೇ ಓವರ್ನ 3ನೇ ಎಸೆತದಲ್ಲಿ ವಿಕೆಟ್ ಕೀಪರ್ ಕೆಎಲ್ ರಾಹುಲ್ಗೆ ಕ್ಯಾಚ್ ನೀಡಿ 15 ಎಸೆತಗಳಲ್ಲಿ 15 ರನ್ ಬಾರಿಸಿದ್ದ ಮಿಚೆಲ್ ಮಾರ್ಷ್ ಔಟಾದರು.
ಆ ಬಳಿಕ ಜಸ್ಪ್ರೀತ್ ಬುಮ್ರಾ ಎಸೆದ 7ನೇ ಓವರ್ನ 4ನೇ ಎಸೆತದಲ್ಲಿ ಆಕರ್ಷಕ ಸ್ಟ್ರೈಡ್ ಡ್ರೈವ್ ಫೋರ್ ಬಾರಿಸಿದ ಸ್ಟೀವ್ ಸ್ಮಿತ್, ಕೊನೆಯ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದು, 4 ರನ್ ಗಳಿಸಿದ್ದ ಸ್ಟೀವ್ ಸ್ಮಿತ್ ನಿರ್ಗಮಿಸಿದರು. ಆ ಮೂಲಕ ಟೀಮ್ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ಮೂರನೇ ಯಶಸ್ಸು ತಂದುಕೊಟ್ಟರು.
ಸ್ಟೀವ್ ಸ್ಮಿತ್ ಎಲ್‌ಬಿಡಬ್ಲ್ಯೂ ನಿಜವಾಗಿಯೂ ಔಟ್ ಅಲ್ಲ. ರಿವೀವ್ಯೂ ತೆಗೆಯುವ ಅವಕಾಶವಿದ್ದರೂ ಅದನ್ನು ಬಳಸಿಕೊಳ್ಳದೇ, ನೇರವಾಗಿ ಪೆವಿಲಿಯನ್ ಕಡೆಗೆ ತೆರಳಿದರು.
National - International
ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ, ಸಚಿವ ಹುಸೇನ್ ಸೇರಿ ಹಲವರ ಸಾವು
ಟೆಹ್ರಾನ್(ಇರಾನ್): ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವ ದಹನವಾಗಿದ್ದಾರೆಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi), ಸಚಿವ ಹುಸೇನ್ ಅಮಿರ್ ಸೇರಿ ಎಂಟಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಾಗಿ ಇರಾನ್ ಮಾಧ್ಯಮಗಳ ವರದಿಗಳು ಹೇಳಿವೆ.
ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ರೈಸಿ ನೆರೆಯ ರಾಷ್ಟ್ರವಾದ ಅಝರ್ಬೈಜಾನ್ನಲ್ಲಿ ಆ ದೇಶದ ಅಧ್ಯಕ್ಷ ಇಲ್ಹಾಮ್ ಅಲಿಯಎವ್ ಜತೆ ಅಣೆಕಟ್ಟು ಉದ್ಘಾಟಿಸಿದ್ದರು. ಉಭಯ ರಾಷ್ಟ್ರಗಳು ಅರಾಸ್ ನದಿಗೆ ನಿರ್ಮಿಸಿದ ಮೂರನೇ ಅಣೆಕಟ್ಟು ಇದಾಗಿದೆ.
ರೈಸಿ ಅವರಿದ್ದ ಹೆಲಿಕಾಪ್ಟರ್‌ನೊಂದಿಗೆ ಪ್ರಯಾಣಿಸುತ್ತಿದ್ದ ಇತರ ಎರಡು ಬೆಂಗಾವಲು ಹೆಲಿಕಾಪ್ಟರ್‌ಗಳು ಸುರಕ್ಷಿತವಾಗಿ ಹಿಂದಿರುಗಿವೆ.
ಬೆಂಗಾವಲು ಹೆಲಿಕಾಪ್ಟರ್‌ಗಳಲ್ಲಿ ಇಂಧನ ಸಚಿವ ಅಲಿ ಅಕ್ಬರ್ ಮೆಹ್ರಾಬಿಯಾನ್ ಹಾಗೂ ವಸತಿ ಸಚಿವ ಮೆಹ್ರದಾದ್ ಇದ್ದು ಅವರು ಸುರಕ್ಷಿತವಾಗಿ ಮರಳಿದ್ದಾರೆ.
ರೆಡ್ ಕ್ರೆಸೆಂಟ್ ಅನ್ನು ಉಲ್ಲೇಖಿಸಿ ಹಲವಾರು ಇರಾನಿನ ಮಾಧ್ಯಮ ಚಾನೆಲ್‌ಗಳು, ರಕ್ಷಣಾ ತಂಡಗಳು ರೈಸಿಯ ಹೆಲಿಕಾಪ್ಟರ್‌ನ ಅವಶೇಷಗಳನ್ನು ಪತ್ತೆಮಾಡಿದ್ದವು. ಇರಾನ್ ಅಧ್ಯಕ್ಷ ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಎಂಬ ಮಾಹಿತಿಯನ್ನು ರೆಡ್ ಕ್ರೆಸೆಂಟ್ ನೀಡಿರಲಿಲ್ಲ. ಅಪಘಾತದ ಸ್ಥಳದಲ್ಲಿ ಯಾರೂ ಜೀವಂತವಾಗಿರುವ ಯಾವುದೇ ಕುರುಹು ಕಂಡುಬಂದಿರಲಿಲ್ಲ. ಇದೀಗ ಇಬ್ರಾಹಿಂ ರೈಸಿ ಮೃತಪಟ್ಟಿರುವ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ.
National - International
Covid-19: ಸಿಂಗಾಪುರದಲ್ಲಿ ಕೊರೋನ ಸ್ಫೋಟ, ಒಂದೇ ವಾರದಲ್ಲಿ 25,900 ಕೇಸ್ ದಾಖಲು !! ಎಲ್ಲೆಡೆ ಮಾಸ್ಕ್ ಕಡ್ಡಾಯ !!
Covid-19: ಮೇ 5 ರಿಂದ 11 ರವರೆಗೆ ಬರೋಬ್ಬರಿ 25,900 ಪ್ರಕರಣ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಈ ಬೆನ್ನಲ್ಲೇ ಸಿಂಗಾಪುರ ಸರ್ಕಾರ(Singapura Government) ಮತ್ತೆ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.
Covid-19: ಕೋವಿಡ್ ಮಹಾಮಾರಿಯನ್ನು ಜನ ಮರೆತು ನೆಮ್ಮದಿಯಿಂದ ಜೀವನ ನಡೆಸುವಾಗಲೇ ಈ ರೋಗ ಮತ್ತೆ ಹೊಸ ರೂಪದಲ್ಲಿ ವಕ್ಕರಿಸಿಕೊಂಡು, ಸಿಂಗಾಪುರ(Singapura) ದಲ್ಲಿ ಸ್ಪೋಟಗೊಂಡಿದೆ.
ಹೌದು, 2020 ರಲ್ಲಿ ಎಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಕೋವಿಡ್ – 19(Covid-19) ಅಲೆ ಸಿಂಗಾಪುರದಲ್ಲಿ ಮತ್ತೆ ಹೊಸ ರೂಪದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡಿದೆ. ಮೇ 5 ರಿಂದ 11 ರವರೆಗೆ ಬರೋಬ್ಬರಿ 25,900 ಪ್ರಕರಣ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಈ ಬೆನ್ನಲ್ಲೇ ಸಿಂಗಾಪುರ ಸರ್ಕಾರ(Singapura Government) ಮತ್ತೆ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.
ಸಾವಿರಗಟ್ಟಲೆ ಪ್ರಕರಣ ದಾಖಲಾದ ಬಳಿಕ ಎಚ್ಚೆತ್ತು ಸಿಂಗಾಪುರ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ನೀಡಿದೆ. ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು, ಜಸಂದಣಿಯಿಂದ ದೂರವಿರುವುದು, ಅನಾರೋಗ್ಯ, ಕೋವಿಡ್ ಲಕ್ಷಣ ಕಾಣಿಸಿಕೊಂಡರೆ ತಕ್ಷಣವೇ ಸಮೀಪದ ವೈದ್ಯರು, ಆಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಿದೆ.
ಇನ್ನು ಆರೋಗ್ಯ ಸಚಿವ ಓಂಗ್ ಯೆ ಕುಂಗಾ ಅವರು ‘ನಾವು ಹೊಸ ಅಲೆಯ ಆರಂಭಿಕ ಹಂತದಲ್ಲಿದ್ದೇವೆ. ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ಮುಂದಿನ ಎರಡರಿಂದ ನಾಲ್ಕು ವಾರಗಳಲ್ಲಿ ಅಲೆಯು ಉತ್ತುಂಗಕ್ಕೇರುತ್ತದೆ ಎಂದು ಊಹಿಸಲಾಗಿದೆ. ಅಂದರೆ ಜೂನ್ ಮಧ್ಯ ಮತ್ತು ಅಂತ್ಯದ ನಡುವೆ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ
ಇತ್ತ ಲಸಿಕೆಯಿಂದ ಅಡ್ಡಪರಿಣಾಮ ಕುರಿತು ವರದಿ ಬಹಿರಂಗವಾದ ಬಳಿಕ ಆತಂಕ ಹೆಚ್ಚಾಗಿದೆ. ಹೀಗಾಗಿ ಕೋವಿಡ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇದರ ನಡುವೆ ಕೋವಿಡ್ ಅಲೆ ಕಾಣಿಸಿಕೊಂಡಿರುವುದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.
National - International
ತತ್ಕಾಲ್ ಟಿಕೆಟ್ ಬುಕ್ ಮಾಡಲು ಇಲ್ಲಿದೆ ಕ್ಷಣಾರ್ಧದ ಉಪಾಯ
ಸಾಮಾನ್ಯವಾಗಿ ನಾವು ಪ್ರವಾಸವನ್ನು ಮಾಡುತ್ತೇವೆ. ದೂರದ ಸ್ಥಳಗಳಿಗೆ ಪ್ರಯಾಣಿಸಲು ಟ್ರೈನ್ ಟಿಕೇಟ್ ಗಳನ್ನು, ಅಥವಾ ಬಸ್ ಟಿಕೇಟ್ ಗಳನ್ನು ಬುಕ್ ಮಾಡುತ್ತೇವೆ. ಆದರೆ ಈಗ ನೀವು ತತ್ಕಾಲ್ ನಲ್ಲಿ ವೇಗವಾಗಿ ಹಾಗೂ ಸುಲಭವಾಗಿ ರೈಲು ಟಿಕೇಟ್ ಗಳನ್ನು ಬುಕ್ ಮಾಡಬಹುದು. ಕೆಳಗಿನಂತೆ ಟಿಕೇಟ್ ಬುಕ್ ಮಾಡಬಹುದಾಗಿದೆ.
ಐಆರ್‌ಸಿಟಿಸಿ ಅಪ್ಲಿಕೇಶನ್ ಮೂಲಕವೇ ಆನ್‌ಲೈನ್‌ನಲ್ಲಿ ರೈಲು ಟಿಕೇಟ್ ಗಳನ್ನು ಸುಲಭವಾಗಿ ಬುಕ್ ಮಾಡಬಹುದಾಗಿದೆ.
ಕೆಲವೆ ಕೆಲವು ನಿಮಿಷಗಳಲ್ಲಿ ತತ್ಕಾಲ್ ನಲ್ಲಿ ಟಿಕೆಟ್ ಅನ್ನು ಬುಕಿಂಗ್ ಮಾಡಬಹುದು.
ಪ್ರಯಾಣಕ್ಕೆ ಒಂದು ದಿನ ಮೊದಲೇ ತತ್ಕಾಲ್ ವೆಬ್ ಸೈಟ್ ಓಪನ್ ಇರುತ್ತದೆ.
ಕಡಿಮೆ ಖರ್ಚಿನ ಪ್ರಯಾಣಕ್ಕೆ ರೈಲು ಹೆಸರುವಾಸಿಯಾಗಿದೆ. ನೀವು ಐಆರ್‌ಸಿಟಿಸಿ ಅಪ್ಲಿಕೇಷನ್ ಅಥವಾ ವೆಬ್‌ಸೈಟ್ ನ ಮೂಲಕ. ಯಾವಾಗ ಬೇಕಾದರೂ ಯಾವ ರೈಲನ್ನು ಬೇಕಾದರೂ ಬುಕ್ ಮಾಡಬಹುದು. ಒಂದು ವೇಳೆ ನೀವು ಎಲ್ಲಿಗಾದರೂ ಹೋಗಬೇಕಾದ ಸಂದರ್ಭದಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ನಿಮಗೆ ಬಹಳಷ್ಟು ಉಪಯೋಗವಾಗಲಿದೆ.
ಬುಕಿಂಗ್ ವ್ಯವಸ್ಥೆ
ನಾವು ಪ್ರಯಾಣಿಸುವ ಒಂದು ದಿನದ ಮೊದಲೇ ಟಿಕೇಟ್ ಬುಕ್ ಮಾಡಿಕೊಂಡು ನಮ್ಮ ಸೀಟ್ ಅನ್ನು ದೃಢೀಕರಿಸಿ ಕೊಳ್ಳಬಹುದು. ಆದರೆ ಕೆಲವರು ಐಆರ್‌ಸಿಟಿಸಿಯ ತತ್ಕಾಲ್ ನಲ್ಲಿಯೂ ಸಹ ಟಿಕೇಟ್ ಬುಕ್ ಆಗುತ್ತಿಲ್ಲ ಎಂದು ಹೇಳುತ್ತಾರೆ. ಇದಕ್ಕೆ ಕಾರಣ ನಾವು ಟಿಕೇಟ್ ಬುಕ್ ಮಾಡುವಾಗ ಮಾಡುವ ತಪ್ಪುಗಳು ಇರಬಹುದು ಎನ್ನುತ್ತಾರೆ.
ನೀವು ತತ್ಕಾಲ್ ನಲ್ಲಿ ಟಿಕೇಟ್ ಬುಕ್ ಮಾಡುವಾಗ ಈ ಅಂಶಗಳನ್ನು ಗಮನಿಸಬೇಕು.
ನೀವು ಪ್ರಯಾಣಿಸುವ ಮಾಡಬೇಕಿರುವ ಸ್ಥಳಕ್ಕೆ ಒಂದು ದಿನದ ಮುಂಚೆಯೇ ಟಿಕೇಟ್ ಬುಕ್ ಮಾಡಿಕೊಳ್ಳಬೇಕು.
ಮುಖ್ಯವಾಗಿ ಬೆಳಗ್ಗೆ 10 ಗಂಟೆಗೆ ತತ್ಕಾಲ್‌ನ ಎಸಿ ಕೋಚ್ಗಳ ಬುಕಿಂಗ್ ಆರಂಭವಾಗುತ್ತದೆ.
ಸಾಮಾನ್ಯ ಕೋಚ್ ಗಳ ಟಿಕೇಟ್ ಗಳು ಬೆಳಗ್ಗೆ 11 ಗಂಟೆಗೆ ಓಪನ್ ಆಗುತ್ತೇವೆ.
ಆನ್ಲೈನ್ ಅಲ್ಲಿ ಟಿಕೇಟ್ ಬುಕ್ ಮಾಡುವ ವಿಧಾನ ಇಲ್ಲಿದೆ.
ನಿಮ್ಮ ಮೊಬೈಲ್ ನಲ್ಲಿ ಐಆರ್‌ಸಿಟಿಸಿ ಯನ್ನು ಓಪನ್ ಮಾಡಿಕೊಳ್ಳಿ, ನಂತರ ನಿಮ್ಮ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಮಾಡಿ. ನಿಮ್ಮ ಐಆರ್‌ಸಿಟಿಸಿ ಖಾತೆ ಇಲ್ಲದಿದ್ದರೆ, ಸೈನ್ ಅಪ್ ಮಾಡಿ ಲಾಗಿನ್ ಆಗಿ. ನಿಮಗೆ ಬುಕಿಂಗ್ ಶೋ ಆಗುತ್ತದೆ. ಪ್ರಯಾಣದ ದಿನಾಂಕ, ನೀವು ತಲುಪಬೇಕಾದ ನಿಲ್ದಾಣ, ರೈಲು ಮತ್ತು ವರ್ಗವನ್ನು ಸರಿಯಾಗಿ ಭರ್ತಿ ಮಾಡಿ. ನಂತರ ಪೇಮೆಂಟ್ ಮಾಡಿ. ಹಣ ಪಾವತಿಯ ಕೂಡಲೇ ಟಿಕೇಟ್ ಬುಕ್ ಆಗುತ್ತದೆ. ನಂತರ ನೀವು ಟಿಕೇಟ್ ಡೌನ್ಲೋಡ್ ಮಾಡಿಕೊಳ್ಳಬಹುದು.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized1 month ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.