Sports
IND vs AUS: ಕೊನೆ ಪಂದ್ಯ ಸೋತ್ರು ಸಹ ಸರಣಿ ಗೆದ್ದಿರುವ ಭಾರತ !
IND vs AUS: ಕೊನೆ ಪಂದ್ಯ ಸೋತ್ರು ಸಹ ಸರಣಿ ಗೆದ್ದಿರುವ ಭಾರತ !
ಭಾರತ ಮತ್ತು ಆಸ್ಟ್ರೇಲಿಯಾ : ರಾಜ್ ಕೌಟ್ ನಲ್ಲಿ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂ ಬುದುವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ 66 ರನ್ನುಗಳ ಮೂಲಕ ಗೆಲುವು ಸಾಧಿಸಿದೆ.
ಭಾರತದ ವಿರುದ್ಧ ಮೂರನೇ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ
Glen Maxwell ಮಾರಕ ಬೌಲಿಂಗ್ ದಾಳಿಗೆ ನಲುಗಿ ಹೋದ ಭಾರತದ ತಂಡ
ಕೊನೆ ಪಂದ್ಯದಲ್ಲಿ ಸೋತರು ಸರಣಿ ಗೆಲುವು ಸಾಧಿಸಿರುವ ನಮ್ಮ ಟೀಮ್ ಇಂಡಿಯಾ
ದೆಹಲಿ : ಆಸ್ಟ್ರೇಲಿಯಾದ ವಿರುದ್ಧ ಮೂರನೇ ಮತ್ತು ಕೊನೆ ಪಂದ್ಯದಲ್ಲಿ ಸೋತಿದ್ದರು ಭಾರತ ತಂಡವು ಸರಣಿ ಗೆಲುವನ್ನು ಸಾಧಿಸಿದೆ
ಟಾಸ್ಕ್ ಗೆದ್ದಿರುವ ಆಸ್ಟ್ರೇಲಿಯಾದ ನಿಗದಿತ 50 ಓವರ್ ಗಳಲ್ಲಿ ಏಳು ವಿಕೆಟ್ ನಾಷ್ಟಕ್ಕೆ ಅವರು 352 ರನ್ನುಗಳ ಬೃಹತ್ ಬಾರಿಸಿದ್ದಾರೆ.
ಆಶಿಶ್ ಪರ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ 56 ರನ್ ಮಿಚಲ್ ಮಾರ್ಚ್ 96 ರನ್ ಸಿಡಿಲು ಅಬ್ಬರದ ಬ್ಯಾಟಿಂಗ್ ಅನ್ನು ಪ್ರದರ್ಶಿಸಿದ್ದಾರೆ.
ನಂತರ ಬಂದಂತಹ ಸ್ಟೀವ್ ಸ್ಮಿತ್ 74 ರನ್ ಹಾಗೂ ಮರಣ 72 ರನ್ನುಗಳ ಸಹ ಭರ್ಜರಿಯಾಗಿ ಅರ್ಧ ಶತಕ ಬಾರಿಸಿದ್ದಾರೆ.
ಈ ನಾಲ್ಕು ಜನರು ಸ್ಪೋಟಕ ಆಟ ಆಡಿದ ಪರಿಣಾಮ ಆಸ್ಟ್ರೇಲಿಯಾ 350 ರನ್ ಗಳ ಗಡಿಯನ್ನು ದಾಟಿ ಭಾರತಕ್ಕೆ ಅತಿ ದೊಡ್ಡ ಟಾರ್ಗೆಟ್ ನೀಡಲು ಸಾಧ್ಯ ಆಯಿತು.
ಭಾರತದ ಪರವಾಗಿ ಬೌಲಿಂಗನಲ್ಲಿ ಜಸ್ಪೃತ್ ಭೂಮ್ರ ಮೂರು ಕುಲದೀಪ ಯಾದವ ಮೂರು ಪ್ರಸಿದ್ ಕೃಷ್ಣ ಒಂದೊಂದು ವಿಕೆಟ್ ಕಬಳಿಸಿದ್ದಾರೆ
ಚೇಸಿಂಗ್‍ನಲ್ಲಿ ಎಡವಿದ ನಮ್ಮ ಭಾರತ..!
ಆಸ್ಟ್ರೇಲಿಯಾದ ಅತಿದೊಡ್ಡ ಟಾರ್ಗೆಟನ್ನ ಬೆನ್ನತ್ತಿದ ನಮ್ಮ ಭಾರತ ತಂಡವು ಆರಂಭದಲ್ಲಿ ಉತ್ತಮವಾಗಿ ಪ್ರಾರಂಭಿಸಿ ಚೇಜ್ ಮಾಡಿತು. ನಾಯಕ ರೋಹಿತ್ ಶರ್ಮಾ ರವರು 81 ಭರ್ಜರಿ ಮುಕ್ಕಾಲುಶತಕ ಬಾರಿಸಿದ್ದಾರೆ.
ಹಾಗೂ ನಮ್ಮ ವಿರಾಟ್ ಕೊಹ್ಲಿ ಅರ್ಧಶತಕ 56 ಶ್ರೇಯಸ್ ಅಯ್ಯರ್ 48 ಹಾಗೂ ರವೀಂದ್ರ ಜಡೇಜಾ 35 ಮತ್ತು ಕೆ ಎಲ್ ರಾಹುಲ್ 26 ರನ್ನುಗಳನ್ನು ಗಳಿಸಿದ್ದಾರೆ.
ಆಶಿಶ್ ಭಾವನಗಳ ದಾಳಿಗೆ ನನಗಿ ಹೋದ ಭಾರತ ಅಂತಿಮವಾಗಿ 49 ಪಾಯಿಂಟ್ ನಾಲ್ಕು ಓವರ್ ಗಳಲ್ಲಿ ತನ್ನ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 286 ರನ್ನುಗಳನ್ನ ಗಳಿಸಿದೆ.
ಆಸ್ಟ್ರೇಲಿಯಾದ ಪರವಾಗಿ ಅತ್ಯುತ್ತಮ ಭಾವನೆ ಪ್ರದರ್ಶಿಸಿರುವ ಮ್ಯಾಕ್ಸ್ವೆಲ್ ನಾಲ್ಕು ವಿಕೆಟ್ ಕಬಳಿಸಿ ಮಿಂಚುತ್ತಿದ್ದಾರೆ.
ಮಿಚೆಲ್ ಸ್ಟಾರ್ ಕ್ಯಾಮೆರಾ.ತನ್ವೀರ್ ಸಂಘ , ಪ್ಯಾಟ್ ಕಮ್ಮಿನ್ಸ್, ಕ್ಯಾಮರೂನ್ ಗ್ರೀನ್ ಮಿಚೆಲ್ ಸ್ಟಾರ್ಕ್ & ಜೋಶ್ ಹ್ಯಾಜಲ್ವುಡ್, ರವರು ತಲಾ ಒಂದು ವಿಕೆಟ್ ಪಡೆದಿದ್ದಾರೆ. ಅಂತಿಮ ಏಕದಿನ ಪಂದ್ಯ ಇಲ್ಲಿ ಸೋತರು ಟೀಮ್ ಇಂಡಿಯಾ ಆಸ್ಟ್ರೇಲಿಯಾದ ವಿರುದ್ಧ ಸರಣಿಯನ್ನ ಗೆದ್ದುಕೊಂಡಿರುತ್ತದೆ ಸಿಕ್ಕಿತ್ತು. ಹಾಗಾಗಿ ಭಾರತ 2-1 ಅಂತರದಲ್ಲಿ ಸರಣಿ ಗೆಲುವು ಸಾಧಿಸಿರುತ್ತದೆ.
Sports
IPL-2026ರ ಪಂದ್ಯಗಳು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫಿಕ್ಸ್: KSCA ಅಧಿಕೃತ ಘೋಷಣೆ
ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್- 2026 ಪಂದ್ಯಗಳು ನಡೆಯಲಿವೆ ಎಂದು ಕೆಎಸ್‌ಸಿಎ ಅಧಿಕೃತವಾಗಿ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಇಂದುನಡೆದ ಸುದ್ದಿಗೋಷ್ಠಿಯಲ್ಲಿ ಕೆಎಸ್‍ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಜಿಬಿಎ, ಬೆಸ್ಕಾಂ, ಜಲಮಂಡಳಿಗೂ ಮನವಿ ಮಾಡಿದ್ದೇವೆ. ಕೆಎಸ್‍ಸಿಎ ಸುರಕ್ಷತೆಗೆ ಅಧಿಕ ಆದ್ಯತೆ ನೀಡಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಇತ್ತೀಚೆಗೆ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್, ಅಂತಾರಾಷ್ಟ್ರೀಯ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿತ್ತು.
National
ವಿರಾಟ್ ಕೊಹ್ಲಿ ಈಗ ವಿಶ್ವದ ನಂ.1 ಬ್ಯಾಟ್ಸ್‌ಮನ್
ಮುಂಬೈ: ರನ್ ಮಿಷಿನ್ ವಿರಾಟ್ ಕೊಹ್ಲಿ ತಮ್ಮ 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.
ಇಂದು ಬಿಡುಗಡೆಯಾದ ನೂತನ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ 785 ಅಂಕ ಪಡೆಯುವ ಮೂಲಕ ಅಗ್ರಸ್ಥಾನಕ್ಕೇರಿದ್ದಾರೆ.

2013ರಲ್ಲಿ ಮೊಟ್ಟ ಮೊದಲ ಬಾರಿಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದಿದ್ದ ಕೊಹ್ಲಿ, 2018ರಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಪುನಃ ಅಗ್ರಸ್ಥಾನಕ್ಕೆ ಜಿಗಿದಿದ್ದರು. ಆ ನಂತರ ಟಾಪ್ 11 ರಲ್ಲಿ ಅನೇಕ ಸ್ಥಾನಗಳಲ್ಲಿದ್ದ ಕೊಹ್ಲಿ 5 ವರ್ಷಗಳ ಬಳಿಕ ಮತ್ತೆ ನಂ.1 ಪಟ್ಟಕ್ಕೇರಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಮೊದಲ ಎರಡೂ ಪಂದ್ಯಗಳಲ್ಲಿ ಕೊಹ್ಲಿ ಡಕೌಟ್ ಆಗಿದ್ದರು. ಮೂರನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ಇನ್ನೂ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 2 ಶತಕ, 1 ಅರ್ಧಶತಕ ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಕಿವೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 91 ಎಸೆತಗಳಲ್ಲಿ 93 ರನ್ ಗಳಿಸಿದ್ದರು. ಈ ಮೂಲಕ 785 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಮೊದಲು ಐದು ಸ್ಥಾನಗಳಲ್ಲಿರುವ ಆಟಗಾರರು ಯಾರು?
ಹೊಸದಾಗಿ ಬಿಡುಗಡೆಯಾದ ಐಸಿಸಿ ಏಕದಿನ ರ‍್ಯಾಂಕಿಗ್‌ನಲ್ಲಿ 785 ಅಂಕಗಳೊಂದಿಗೆ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ಡೇರಿಲ್ ಮಿಚೆಲ್ 784, ರೋಹಿತ್ ಶರ್ಮಾ 775, ಇಬ್ರಾಹಿಂ ಜದ್ರಾನ್ 764, ಶುಭಮನ್ ಗಿಲ್ 725 ಅಂಕ ಅಂಕಗಳೊಂದಿಗೆ ಮೊದಲ 5 ಸ್ಥಾನಗಳಲ್ಲಿದ್ದಾರೆ.
Sports
ಐಸಿಸಿ ಅಂಡರ್-19 ವಿಶ್ವಕಪ್: ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ BCCI
ಮುಂಬೈ: 2026 ರಂದು ನಡೆಯಲಿರುವ ಟಿ-20 ವಿಶ್ವಕಪ್‌ಗೆ ಬಿಸಿಸಿಐ (BCCI) ಕೆಲವೇ ದಿನಗಳ ಹಿಂದೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ ಅದಕ್ಕೂ ಮೊದಲು ಐಸಿಸಿ ಅಂಡರ್-19 ವಿಶ್ವಕಪ್ ನಡೆಯಲಿದ್ದು, ಈ ವಿಶ್ವಕಪ್‌ಗಾಗಿ ಟೀಂ ಇಂಡಿಯಾ ಯುವ ತಂಡವನ್ನು ಇದೀಗ ಪ್ರಕಟಿಸಲಾಗಿದೆ.
ಬಿಸಿಸಿಐ ಇಂದು ಈ ಟೂರ್ನಮೆಂಟ್‌ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಘೋಷಿಸಿದೆ. ಇದರಲ್ಲಿ 14 ವರ್ಷದ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಸೇರಿದ್ದು, ಎಂದಿನಂತೆ ಆಯುಷ್ ಮ್ಹಾತ್ರೆ ಅವರಿಗೆ ಇನ್ನೊಮ್ಮೆ ತಂಡದ ನಾಯಕತ್ವ ನೀಡಲಾಗಿದೆ. ಜನವರಿ. 15 ರಂದು ಯುನೈಟೆಡ್ ಸ್ಟೇಟ್ಸ್ ವಿರುದ್ಧದ ಗುಂಪು ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ವಿಶ್ವಕಪ್ ಅನ್ನು ಆಡಲಿದೆ.

ಬಿ ಗುಂಪಿನಲ್ಲಿ ಟೀಂ ಇಂಡಿಯಾ ತಂಡ
ಅಂಡರ್-19 ವಿಶ್ವಕಪ್ ಜ. 15 ರಿಂದ ಫೆ. 6 ರವರೆಗೆ ಜಿಂಬಾಬ್ವೆ ಹಾಗೂ ನಮೀಬಿಯಾದಲ್ಲಿ ನಡೆಯಲಿದೆ. 16 ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಐದು ಬಾರಿ ಅಂಡರ್-19 ವಿಶ್ವಕಪ್ ವಿಜೇತ ಭಾರತವನ್ನು ನ್ಯೂಜಿಲೆಂಡ್, ಯುನೈಟೆಡ್ ಸ್ಟೇಟ್ಸ್ ಮತ್ತು ಬಾಂಗ್ಲಾದೇಶದೊಂದಿಗೆ ಗ್ರೂಪ್ ಬಿಯಲ್ಲಿ ಇರಿಸಲಾಗಿದೆ.
ಟೀಂ ಇಂಡಿಯಾ ಜ. 15 ರಂದು ಅಮೆರಿಕ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ. ಬಳಿಕ ತಂಡವು ಜ. 17 ರಂದು ಬಾಂಗ್ಲಾದೇಶ ಹಾಗೂ ಜ. 24 ರಂದು ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಟೂರ್ನಿಯ ಫೈನಲ್ ಪಂದ್ಯ ಹರಾರೆಯಲ್ಲಿ ನಡೆಯಲಿದೆ.

-
Manglore4 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan5 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan4 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
-
Hassan5 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
National7 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State8 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Mandya10 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Mysore5 hours agoಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ
