Connect with us

Mysore

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ

Published

on

ನಂಜನಗೂಡು:  ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಶಾಸಕ ದರ್ಶನ್ ಧ್ರುವ ನಾರಾಯಣ್ ಸಭೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ತಾಲ್ಲೂಕು ಬಿಟ್ಟು ತೊಲಗಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆ ಎಂಬುವುದನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ಮರೆಯಬಾರದು ಜಾಗೃತಿಯಿಂದ ಮತ್ತು ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದಕ್ಕೆ ಆಗುವುದಿಲ್ಲ ಕಳ್ಳಾಟ ಹಾಡಿ ದಿನದೊಡುತ್ತೇವೆ ಸಂಬಳ ಪಡೆಯುತ್ತೇವೆ ಎಂಬ ಮನಸ್ಥಿತಿ ಇರುವ ಅಧಿಕಾರಿಗಳೇ ನೀವಾಗಿ ನೀವೇ ತಾಲ್ಲೂಕು ಬಿಟ್ಟು ತೊಲಗಿ ಎಂದು ಖಡಕ್ಕಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ಎಚ್ಚರಿಸಿದರು.
ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಬೆರಳೆಣಿಕೆಯಷ್ಟು ಮಾತ್ರ ಅಧಿಕಾರಿಗಳು ಹಾಜರಾಗಿದ್ದರು. ಕೆಲವೇ ಕೆಲವು ಅಧಿಕಾರಿಗಳು ಮಾತ್ರ ಹಾಜರಿದ್ದರು. ಸಂಘ ಸಂಸ್ಥೆಗಳ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ರೀತಿಯಲ್ಲಿ ಹಾಜರಿದ್ದರು. ಇದನ್ನು ಗಮನಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್ ಗೈರಾದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ತಿಂಗಳ 15ರಂದು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಆಚರಿಸಲು ತಾಲ್ಲೂಕು ಆಡಳಿತ ಮುಂದಾಗಿದೆ. ಪ್ರತಿ ವರ್ಷದಂತೆ ನಡೆಯುವ ಕಾರ್ಯಕ್ರಮದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅತಿ ಹೆಚ್ಚು ಶಿಕ್ಷಣ ಇಲಾಖೆಗೆ ಜವಾಬ್ದಾರಿ ನೀಡಲಾಗಿದೆ. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಜೆ 4 ಗಂಟೆಗೆ ನಂಜನಗೂಡಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ, ವಿದ್ಯಾರ್ಥಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಪಥಸಂಚಲನ ಹಾಗೂ ವಿವಿಧ ಬಗೆಯ ಜಾಗೃತಿ ಸಂದೇಶಗಳನ್ನು ತಿಳಿಸುವ ಕಾರ್ಯಕ್ರಮಗಳನ್ನು ಕೂಡ ಮಾಡಲು ತಯಾರಿ ನಡೆಸಲಾಗಿದೆ. ಇಂತಹ ಪ್ರಮುಖ ಕಾರ್ಯಕ್ರಮಕ್ಕೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಈ ಪೂರ್ವಭಾವಿ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾರ್ಯಕ್ರಮದಲ್ಲಿ ಗೈರಾಗಿರುವ ಅಧಿಕಾರಿಗಳ ಪಟ್ಟಿ ಮಾಡಿ, ಅವರಿಗೆ ನೋಟಿಸ್ ನೀಡಿ, ಬೇಜವಾಬ್ದಾರಿಯಿಂದ ಕೆಲಸ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ತೊಲಗಲಿ, ಇಲ್ಲವಾದಲ್ಲಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಸ್ಪೆಂಡ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಸಿಡಿಪಿಒ ಭವ್ಯ ಶ್ರೀ, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಪಿಎಸ್ಐ ಪ್ರಕಾಶ್ ಸಿದ್ದಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Mysore

ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ನಿಂದ ಕೇಂದ್ರದ ನಿಲುವಿಗೆ ವಿರೋಧ- ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಮೈಸೂರು, ಆಗಸ್ಟ್ 8 : ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ತಿದ್ದುಪಡಿ ಬಿಲ್ ತರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಹಾಗೂ ಎನ್ ಡಿ ಎ ಯವರಿಗೆ ಅಲ್ಪಸಂಖ್ಯಾತರ ಮೇಲೆ ಕೋಪವಿರುವಂತಿದೆ.ಬಿಜೆಪಿಯವರು ಎಂದಿಗೂ ಜಾತ್ಯಾತೀತತೆ, ಸಾಮಾಜಿಕ ನ್ಯಾಯದ ಪರವಾಗಿ ನಿಂತವರಲ್ಲ. ಬಿಜೆಪಿ ಮೊದಲಿನಿಂದಲೂ ಕೋಮುವಾದಿ ಪಕ್ಷವಾಗಿಯೇ ಗುರುತಿಸಿಕೊಂಡಿದ್ದು, ಜಾತ್ಯಾತೀತ ತತ್ವವನ್ನು ನಂಬುವುದಿಲ್ಲ. ಮತಾಂತರ ನಿಷೇಧ ಕಾನೂನು, ಗೋಹತ್ಯೆ ತಿದ್ದುಪಡಿಗಳನ್ನು ಜಾರಿಗೆ ತಂದ ಬಿಜೆಪಿಯವರು ಇಂದು ವಕ್ಫ ಬೋರ್ಡ್ ತಿದ್ದುಪಡಿ ಪ್ರಯತ್ನಕ್ಕೂ ಕೈಹಾಕಿದ್ದಾರೆ. ವಕ್ಫ್ ಬೋರ್ಡ್ ಕಾನೂನು ಆ ಸಮುದಾಯದ ವೈಯಕ್ತಿಕ ಕಾನೂನಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವುದು ಸಂವಿಧಾನ ಬಾಹಿರ. ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟ, ಕೇಂದ್ರದ ಈ ನಿಲುವನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದರು.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಆರ್ ಟಿ ಐ ಕಾರ್ಯಕರ್ತರು ಮುಖ್ಯಮಂತ್ರಿಗಳ ವಿರುದ್ದ ದೂರು ದಾಖಲಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸುಳ್ಳು ಕೇಸುಗಳನ್ನು ದಾಖಲಿಸಿದರೆ, ಅವು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದರು.

Continue Reading

Mysore

ಹಸು ತೊಳೆಯಲು ಹೋಗಿ ಕಾಲು ಜಾರಿ ನಾಲೆಯಲ್ಲಿ ಮುಳುಗಿ ರೈತ ಸಾವು,

Published

on

ವರದಿ: ಎಸ್ ಬಿ ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ  : ನಾಲೆಯಲ್ಲಿ ಹಸು ತೊಳೆಯಲು ಹೋಗಿ ಕಾಲು ಜಾರಿ ನಾಲೆಯಲ್ಲಿ ಮುಳುಗಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಸಾಲಿಗ್ರಾಮ ತಾಲೂಕಿನ ಕರ್ತಾಳು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಟ್ಟೇಗೌಡ(61 ) ಎಂಬುವರು ಮಂಗಳವಾರ ಜಮೀನಿನಲ್ಲಿ ಕೆಲಸ ಮುಗಿಸಿ ಕಟ್ಟೆಪುರ ನಾಲೆಯಲ್ಲಿ ಹಸುಗಳನ್ನ ತೊಳೆಯಲು ಹೋದ ವೇಳೆ ಕಾಲು ಜಾರಿ ಬಿದ್ದು ನಾಲೆಯಲ್ಲಿ ಮುಳುಗಿರುವ ಘಟನೆ ನಡೆದಿದೆ.


ಮೃತರ ಮೃತ ದೇಹವನ್ನು‌ನಾಲೆಯಲ್ಲಿ ಹುಡುಕಾಟ ಮಾಡಿದರು ಪತ್ತೆಯಾಗದೇ ಬುಧವಾರ ಬೆಳಿಗ್ಗೆ 7 ಗಂಟೆಯ ಸುಮಾರಿನಲ್ಲಿ ಶವಪತ್ತೆಯಾಗಿದ್ದು ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ಮೃತರ ಮರಣೋತ್ತರ ಪರೀಕ್ಷೆಯನ್ನು ಹನಸೋಗೆ‌ ಪ್ರಾಥಮಿಕ ಕೇಂದ್ರದ ವೈದ್ಯರು ನಡೆಸಿ, ನಂತರ ಮೃತದೇಹವನ್ನು ವಾರಸುದಾರಿಗೆ ಒಪ್ಪಿಸಲಾಯಿತು ಘಟನೆಯ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರರಣ ದಾಖಲಾಗಿದೆ.

Continue Reading

Mysore

ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ, ಸಾಲ ಕೇಳಲು ಹೋದ ಮಹಿಳೆ ನಾಪತ್ತೆ

Published

on

ನಂಜನಗೂಡು:ಆ.07

ಸಂಘವೊಂದರಲ್ಲಿ ಸಾಲ ಮಾಡಿಕೊಂಡಿದ್ದ ಮಹಿಳೆ, ಹತ್ತು ಜನಗಳ ಮಧ್ಯದಲ್ಲಿ ಹಣ ಕಟ್ಟಲ್ದೆ ಇದ್ದರೆ, ಅವಮಾನ ವಾಗುತ್ತದೆ ಎಂದು ಸಾಲ ಕೇಳಿ ಬರುತ್ತೇನೆ ಎಂದು ಹೇಳಿ ಹೋದ ಮಹಿಳೆ ನಾಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ.

ದೇವನೂರು ಗ್ರಾಮದ ಮಹದೇವಯ್ಯ ಎಂಬುವವರ ಪತ್ನಿ 55 ವರ್ಷದ ಮಹದೇವಮ್ಮ ಕಾಣೆಯಾದ ಮಹಿಳೆಯಾಗಿ ದ್ದಾಳೆ. ಸಂಘದಲ್ಲಿ ಸಾಲ ತೆಗೆದುಕೊಂಡಿದ್ದು, ಆ ಹಣವನ್ನು ಕಟ್ಟಲು ಹಣವಿಲ್ಲದೆ ಮತ್ತೊಬ್ಬರಲ್ಲಿ ಸಾಲ ಕೇಳಿ ಬರುತ್ತೇನೆ ಎಂದು ಆ.06 ರಂದು ಬೆಳಿಗ್ಗೆ ಮಹದೇವಮ್ಮ ಮನೆಯಿಂದ ಹೊರಗೆ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಈ ಬಗ್ಗೆ ನೆಂಟರಿಷ್ಟರು ಹಾಗೂ ಸ್ನೇಹಿತರ ಮನೆಯಲ್ಲಿ ಹುಡುಕಿದರೂ ಇವರ ಸುಳಿವು ಪತ್ತೆಯಾಗಿಲ್ಲ. ನನ್ನ ಪತ್ನಿಯನ್ನು ಹುಡುಕಿಕೊಡಿ ಎಂದು ಪತಿ ಮಹದೇವಯ್ಯ ಕವಲಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಚಹರೆ ಹೀಗಿದ್ದು, 55 ವರ್ಷದ ಮಹದೇವಮ್ಮ, ಎಣ್ಣೆಗೆಂಪು ಮೈಬಣ್ಣ, ಸುಮಾರು 5 ಅಡಿ ಎತ್ತರ, ದುಂಡು ಮುಖ, ಕನ್ನಡ ಭಾಷೆ ಮಾತನಾಡುತ್ತಾರೆ. ಹೋಗುವಾಗ ಕಪ್ಪು ಬಣ್ಣದ ರವಿಕೆ, ನೀಲಿ ಮತ್ತು ಬಿಳಿ ಬಣ್ಣ ಮಿಶ್ರಿತ ಸೀರೆಯನ್ನು ಧರಿಸಿದ್ದಾರೆ ಇವರ ಸುಳಿವು ಸಿಕ್ಕಲ್ಲಿ ಕವಲಂದೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 9480805050 ಅಥವಾ 9900663539ಕ್ಕೆ ಕರೆ ಮಾಡುವಂತೆ ಪ್ರಕಟಣೆಯಲ್ಲಿ ಪೊಲೀಸರು ಕೋರಿದ್ದಾರೆ.

ನಂಜನಗೂಡು ಮಹದೇವಸ್ವಾಮಿಪಟೇಲ್.

Continue Reading

Trending

error: Content is protected !!