Connect with us

Mysore

ಏ.1ರಿಂದ 30ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ

Published

on

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ  : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ  ಸಾಲಿಗ್ರಾಮ ಮತ್ತು ಕೆ ಆರ್  ನಗರ ಆವಳಿ ತಾಲ್ಲೂಕಿನಲ್ಲಿ ಪಶುವೈದ್ಯ ಇಲಾಖೆ ವತಿಯಿಂದ ಏ.1 ರಿಂದ 30 ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ ನಡೆಯಲಿದೆ.
ಲಸಿಕೆಯು ಸಂಪೂರ್ಣವಾಗಿ ಉಚಿತ ವಾಗಿದ್ದು, ಪಶುವೈದ್ಯ ಇಲಾಖೆಯಿಂದ ಲಸಿಕೆ ಹಾಕಲು ಮನೆಗಳ ಬಾಗಿಲಿಗೆ ಬಂದಾಗ ರೈತರು ಹಾಗೂ ಜಾನುವಾರುಗಳ ಮಾಲೀಕರು ಸಹಕಾರ ನೀಡಬೇಕು. 3 ತಿಂಗಳು ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಮಂಜುನಾಥ್ ಮನವಿ ಮಾಡಿದ್ದಾರೆ. ಪತ್ರಿಕೆಯ ಸಂದರ್ಶನದಲ್ಲಿ ಕಾಲುಬಾಯಿ ರೋಗ ನಿಯಂತ್ರಣ ಸಂಬಂಧ ಅವರು ಸಮಗ್ರ ಮಾಹಿತಿ ನೀಡಿದ್ದಾರೆ.
ಕಾಲುಬಾಯಿ ಜ್ವರದ ಲಕ್ಷಣಗಳೇನು: ಎತ್ತು, ಹೋರಿ, ಹಸು ಮತ್ತು ಎಮ್ಮೆಗಳಲ್ಲಿ ಅತಿಯಾದ ಜ್ವರ ಕಂಡುಬಂದು ಬಾಯಿಯಲ್ಲಿ ಹುಣ್ಣು, ಜೊಲ್ಲು ಸುರಿಸುವುದು, ಕಾಲು ಕುಂಟುವುದು, ಕೆಚ್ಚಲಿನ ಮೇಲೆ ಗುಳ್ಳೆಗಳು ಕಾಣಿಸಿಕೊಳ್ಳುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ. ರೋಗಗ್ರಸ್ತ ಪ್ರಾಣಿಗಳಿಂದ ನೇರ ಸಂಪರ್ಕ, ವೈರಾಣುಗಳಿಂದ ಕಲುಷಿತ ಗೊಂಡ ಮೇವು ಮತ್ತು ನೀರು, ಗಾಳಿ ಮುಖಾಂತರ ಹಾಗೂ ದನಗಳ ಸಂತೆ ಮತ್ತು ಜಾತ್ರೆಗಳಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.
ಕಾಲುಬಾಯಿ ರೋಗದ ನಿಯಂತ್ರಣಕ್ಕಿರುವ ಚಿಕಿತ್ಸಾ ಕ್ರಮಗಳು: ಕಾಲುಬಾಯಿ ಜ್ವರವು ಒಂದು ವೈರಾಣುವಿನಿಂದ ಹರಡುತ್ತಿದ್ದು, ನಿರ್ದಿಷ್ಟ ಚಿಕಿತ್ಸೆ ಇಲ್ಲ. ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ದ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬಹುದಾಗಿದೆ.
ಸಾಲಿಗ್ರಾಮ ಮತ್ತು ಕೆ ಆರ್ ನಗರ  ಆವಳಿ ತಾಲ್ಲೂಕಿನಲ್ಲಿ ಜಾನುವಾರು ಗಣತಿಯಂತೆ ದನ ಹಾಗೂ ಎಮ್ಮೆಗಳ ಸಂಖ್ಯೆ 74,8೦೦ ಇದ್ದು, ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಆವಳಿ ತಾಲ್ಲೂಕಿನ 34 ಗ್ರಾಮ ಪಂಚಾಯತಿಗಳ 25 ಪಶುವೈದ್ಯ ಆಸ್ಪತ್ರೆ ಹಾಗೂ ಕೇಂದ್ರ, ಚಿಕಿತ್ಸಾಲಯಗಳಲ್ಲಿ ಕಾಲುಬಾಯಿ ಜ್ವರದ ಲಸಿಕೆ ಹಾಕಲು ಈಗಾಗಲೇ ಕಾರ್ಯಕ್ರಮಕ್ಕೆ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದ್ದರಿಂದ ರೈತರು ಹಾಗೂ ಜಾನುವಾರು ಮಾಲೀಕರು ಪಶುವೈದ್ಯ ಇಲಾಖೆಯಿಂದ ಲಸಿಕೆ ಹಾಕಲು ನಿಮ್ಮ ಮನೆ ಮನೆ ಬಾಗಿಲಿಗೆ ಬಂದಾಗ ತಪ್ಪದೇ ಕಡ್ಡಾಯವಾಗಿ ತಮ್ಮ ತಮ್ಮ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದ್ದಾರೆ.

ಸೀಳುಗೊರಸುಗಳುಳ್ಳ ಪ್ರಾಣಿಗಳಿಗೆ ತಗುಲುವ ಕಾಲುಬಾಯಿ ಜ್ವರದ ಲಸಿಕೆಯನ್ನು ಅತ್ಯಗತ್ಯವಾಗಿ ಹಾಕಿಸಿಕೊಳ್ಳಬೇಕಾಗಿದೆ ರೈತರಿಗೆ ಆರ್ಥಿಕ ಸಂಕಷ್ಟವನ್ನುಂಟು ಮಾಡುವ ಈ ರೋಗವನ್ನು ತಡೆಗಟ್ಟಲು ನಾವೆಲ್ಲರೂ ಸನ್ನದ್ದರಾಗಬೇಕಾಗಿದೆ. ರಾಸುಗಳು ರೋಗದಿಂದ ಮುಕ್ತವಾದರೂ ಸಹ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ನಷ್ಟ ಮತ್ತು ಹಾಲಿನ ಇಳುವರಿ ಕಡಿಮೆಯಾಗುತ್ತದೆ ಆದ್ದರಿಂದ  ಸಾಲಿಗ್ರಾಮ ಮತ್ತು ಕೆ ಆರ್ ನಗರ  ತಾಲೂಕಿನ ಎಲ್ಲಾ ರೈತ ಬಾಂಧವರು ಕಾಲುಬಾಯಿ ಜ್ವರ ಲಸಿಕೆ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮೆಲ್ಲ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸ ಬೇಕು.

-ಡಾ.ಮಂಜುನಾಥ್, ಸಹಾಯಕ ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ,  ಸಾಲಿಗ್ರಾಮ ಮತ್ತು ಕೆ ಆರ್ ನಗರ  ತಾಲೂಕು.

Continue Reading
Click to comment

Leave a Reply

Your email address will not be published. Required fields are marked *

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ*

Published

on

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೊರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ

Published

on

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೋರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮುಡಾ ಅಕ್ರಮ ನಿವೇಶನ ಹಂಚಿಕೆ: ಏಕ ಸದಸ್ಯ ವಿಚಾರಣಾ ಆಯೋಗ ರಚನೆ

Published

on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ.

ಅಕ್ರಮಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು, ತಾಂತ್ರಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೀಡಲು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸಬೇಕು ಎಂದು ಸೂಚಿಸಲಾಗಿದೆ.

ಆಯೋಗವು ವಿಚಾರಣೆಗೆ ಬಯಸುವ ಎಲ್ಲ ಕಡತಗಳು ಮತ್ತು ದಾಖಲಾತಿಗಳನ್ನು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒದಗಿಸಬೇಕು. ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತನಿಖೆಗೆ ಆದೇಶಿಸಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಮುಡಾ ನಿವೇಶನ ಹಂಚಿಕೆಯ ವಿರುದ್ಧ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂಬ ಆಶಯದೊಂದಿಗೆ ರಾಜ್ಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ. ಎನ್. ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ತನಿಖೆಗೆ ವಹಿಸಿದೆ. ಪ್ರಕರಣದ ಕೂಲಂಕಷವಾದ ವಿಚಾರಣೆ ನಡೆದು, ಸತ್ಯಾಸತ್ಯತೆ ಹೊರಬರಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

Continue Reading

Trending

error: Content is protected !!