Connect with us

Chamarajanagar

ಜಲಾಯನ‌ ಯಾತ್ರೆಗೆ ಚಾಲನೆ ನೀಡಿದ ಜಂಟಿ ನಿರ್ದೇಶಕ ಎಸ್ ಎಸ್ ಅಭೀದ್

Published

on

ವರದಿ : ಗೋವಿಂದ ಕೆ ಗೌಡ ಹನೂರು

ಹನೂರು: ಪ್ರತಿಯೊಬ್ಬ ರೈತರು ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡುವ ಕಾರ್ಯಕ್ಕೆ ಮುಂದಾಗಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಸ್ ಎಸ್ ಅಭೀದ್ ತಿಳಿಸಿದರು.

ಹನೂರು ತಾಲೂಕಿನ ಕೊರಟ್ಟಿ ಹೊಸೂರು ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಲಾಯನ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಂದು ಹನಿ ಹನಿ ನೀರನ್ನು ಸಂರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ. ಬೇಸಿಗೆ ಕಾಲದಲ್ಲಿ ನೀರಿನ ಬಳಕೆಯನ್ನು ಮುನ್ನೆಚ್ಚರಿಕೆಯಿಂದ ಬಳಸುವ ಮೂಲಕ ನಾವು ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳಬಹುದು.. ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಸಮೃದ್ಧ ಪರಿಸರವನ್ನು ಕಲ್ಪಿಸಬಹುದು. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ ದೊರೆಯುವ ವೈಜ್ಞಾನಿಕ ತಂತ್ರಜ್ಞಾನ ಹಾಗೂ ಮಾರ್ಗದರ್ಶನಗಳನ್ನು ಅನುಸರಿಸಿದರೆ ರೈತರು ಕೃಷಿಯಲ್ಲಿ ಆರ್ಥಿಕವಾಗಿ ಸಬಲರಾಗಬಹುದು. ಜೊತೆಗೆ ಮಣ್ಣು ಫಲವತ್ತಾಗಿ, ಪರಿಸರ ಸ್ನೇಹಿಯಾಗಿಸಲು ಸಾಧ್ಯವಿದೆ. ಈ ಎಲ್ಲಾ ಕಾರ್ಯಕ್ರಮವು ನಮ್ಮ ಪರಿಸರ ಮತ್ತು ಕೃಷಿಯ ಭವಿಷ್ಯವನ್ನು ಸುರಕ್ಷಿತವಾಗಿಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರಾಮಾಪುರ ರೈತ ಸಂಪನ್ಮೂಲ ಕೇಂದ್ರದ ಕೃಷಿ ಅಧಿಕಾರಿ ಮನೋಹರ್ ಮಾತನಾಡಿ ದೇಶಕ್ಕೆ ಸೈನಿಕ ಎಷ್ಟು ಮುಖ್ಯವೋ, ರೈತನು ಕೂಡ ಅಷ್ಟೇ ಮುಖ್ಯ, ಸೈನಿಕ ದೇಶವನ್ನು ಸಂರಕ್ಷಣೆ ಮಾಡಿದರೆ ರೈತ ಇಡೀ ದೇಶಕ್ಕೆ ಅನ್ನ ನೀಡುತ್ತಾನೆ. ರೈತರು ವಲಸೆ ಹೋಗುವುದನ್ನು ತಪ್ಪಿಸಲು ಕೃಷಿ ಇಲಾಖೆ ವತಿಯಿಂದ ಸರ್ಕಾರ ವಿವಿಧ ಯೋಜನೆಗಳ ಮೂಲಕ ಮನೆಯ ಬಾಗಿಲಿಗೆ ಹಲವು ಕಾರ್ಯಕ್ರಮಗಳನ್ನು ತಲುಪಿಸುತ್ತಿದೆ. ಪ್ರತಿಯೊಬ್ಬರು ಆಗಾಗ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದಿಂದ ಸಿಗುವ ಸೌಲತ್ತುಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಲಾನಯನ ಕಾರ್ಯಕ್ರಮದ ಬಗ್ಗೆ ಚಿತ್ರಕಲೆ ಪ್ರಬಂಧ ಸೇರಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪ್ರಶಸ್ತಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ನೀರು ಮಣ್ಣಿನ ಪಾತ್ರದ ಮಹತ್ವದ ಕುರಿತು ಜನರಲ್ಲಿ ಹರಿವು ಮೂಡಿಸಲು ಜಲಾಯನ ಯಾತ್ರೆಯ ಕಿರುಚಿತ್ರವನ್ನು ಪ್ರದರ್ಶನದ ಜೊತೆಗೆ ರಂಗವಾಹಿನಿ ಚಾಮರಾಜನಗರ ತಂಡದಿಂದ ನಾಟಕ ಪ್ರದರ್ಶನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ನಟರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ, ಅಧಿಕಾರಿಗಳಾದ ನಿಶಾಂತ್, ನಾಗೇಂದ್ರ, ಧರ್ಮೇಂದ್ರ, ಉಪೇಂದ್ರ, ಜಗದೀಶ್ ಸ್ಥಳಿಯ ಮುಖಂಡರಾದ ಶಿವಣ್ಣ ಪೊನ್ನು ಶೆಟ್ಟಿ ಜಗ ಮಲ್ಲೇಶ್ ಸೇರಿದಂತೆ ಇತರರು ಹಾಜರಿದ್ದರು.

Continue Reading

Chamarajanagar

ಸ್ವಾಮಿ ವಿವೇಕಾನಂದರ ತತ್ವ ಸಿದ್ಧಾಂತವನ್ನು ಪಾಲಿಸಿ: ಮಹಮದ್ ಅಸ್ಗರ್ ಸಲಹೆ

Published

on

ಚಾಮರಾಜನಗರ: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಸಲಹೆ ನೀಡಿದರು.

ನಗರದ ಜೆಎಸ್ಎಸ್ ಕಾಲೇಜಿನ ಸಭಾಂಗಣದಲ್ಲಿ ಭಾರತ ಸರ್ಕಾರದ ಮೈ ಭಾರತ್ ಕೇಂದ್ರ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ, ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯ ಬಿಎಡ್ ಕಾಲೇಜು ಇವರ ಸಹಯೋಗದೊಂದಿಗೆ ಸೋಮವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ 163 ನೇ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೇಳಿ ಎದ್ದೇಳಿ ಗುರಿ ಮುಟ್ಟು ತನಕ ನಿಲ್ಲದಿರಿ ಎಂಬ ಸಂದೇಶದಿಂದ ಯುವಜನರಲ್ಲಿ ಜಾಗೃತಿ ಮೂಡಿಸಿದ ಮಹಾನ್ ಚೇತನ ಸ್ವಾಮಿವಿವೇಕಾನಂದರು. 1893ರಲ್ಲಿ ಚಿಕಾಗೋ ಧರ್ಮಸಮ್ಮೇಳನದಲ್ಲಿ ನಡೆದ ಅವರ ಭಾಷಣವು ಭಾರತದ ಗೌರವವನ್ನು ಜಗತ್ತಿನಾದ್ಯಂತ ಹೆಚ್ಚಿಸಿತು. ಭಾರತೀಯ ಸಂಸ್ಕೃತಿ, ಸಹಿಷ್ಣುತೆ ಮತ್ತು ಮಾನವೀಯತೆಯ ಸಂದೇಶವನ್ನು ಅವರು ವಿಶ್ವಕ್ಕೆ ಸಾರಿದ್ದಾರೆ. ವಿವೇಕಾನಂದ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಶ್ರಮ, ಪ್ರಾಮಾಣಿಕತೆ ಮತ್ತು ಸೇವಾಭಾವನೆಯೊಂದಿಗೆ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಬೇಕು. ಸ್ವಾಮಿ ವಿವೇಕಾನಂದರ ಚಿಂತನೆಗಳು ನಮ್ಮೆಲ್ಲರಿಗೂ ಶಾಶ್ವತ ಪ್ರೇರಣೆಯಾಗಲಿ ಎಂದು ಹೇಳಿದರು.

ಚಾಮರಾಜನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಕೆ ರವಿಕುಮಾರ್ ಮಾತನಾಡಿ, ಸ್ವಾಮಿ ವಿವೇಕಾನಂದರು 1863 ಜನವರಿ 12ರಂದು ಜನಿಸಿ ಬಾಲ್ಯದಿಂದಲೇ ಸಮಾಜ ಸೇವೆಯಲ್ಲಿ ತೊಡಗಿಕೊಂಡು ನಂತರ ವಿಶ್ವದಾದ್ಯಂತ ಪ್ರಯಾಣ ಮಾಡಿ ಲಕ್ಷಾಂತರ ಮಂದಿಗೆ ದಾರಿದೀಪವಾಗಿದ್ದಾರೆ. ಸ್ವಾಮಿ ವಿವೇಕಾನಂದರನ್ನು ವಿದ್ಯಾರ್ಥಿಗಳ ಅನುಸರಿಸಬೇಕು. ಕಠಿಣ ಶ್ರಮ ನಿರಂತರ ಅಧ್ಯಯನದಿಂದ ವಿದ್ಯಾರ್ಥಿಗಳು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದರು.

ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆಯ ಅಧ್ಯಕ್ಷ ಜಿ. ಬಂಗಾರು ಮಾತನಾಡಿ, ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ರಾಷ್ಟ್ರೀಯ ಯುವ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಯುವಜನತೆಯಲ್ಲಿ ಆತ್ಮವಿಶ್ವಾಸ, ಶಿಸ್ತು, ದೇಶಭಕ್ತಿ ಮತ್ತು ಸೇವಾಮನೋಭಾವನೆ ಬೆಳೆಸುವುದೇ ಇದರ ಮುಖ್ಯ ಉದ್ದೇಶ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಯುವಜನರ ವಿಧ್ಯಾಭ್ಯಾಸಕ್ಕೆ ಹೆಚ್ಚಿನ ಸೌಲಭ್ಯ ಒದಗಿಸುತ್ತಿದೆ ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಶಿಕ್ಷಣ ಪಡೆಯಿರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯ ಬಿಎಡ್ ಕಾಲೇಜಿನ ಪ್ರಾಂಶುಪಾಲ ಕೆ.ಸಿ.ಬಸವಣ್ಣ, ಉಪನ್ಯಾಸಕರಾದ ಯೋಗೇಶ್, ಶಿವಶಂಕರರಾಜ ಅರಸ್, ಸಿದ್ದರಾಜು, ಶ್ರೀಧರ್, ಶಿವಕುಮಾರ್, ಮೈ ಭಾರತ್ ಕೇಂದ್ರದ ಸಹನಾ ಹಾಗೂ ಇತರರು ಹಾಜರಿದ್ದರು

Continue Reading

Chamarajanagar

ಸೋಲಾರ್ ದೀಪ ಅಳವಡಿಕೆ ಕಾಮಗಾರಿಗೆ ಶಾಸಕ ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ

Published

on

ಚಾಮರಾಜನಗರ: ಹೈಮಾಸ್ಟ್, ಸೋಲಾರ್ ದೀಪ ಅಳವಡಿಕೆ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ತಾಲ್ಲೂಕಿನ ಪುಣಜನೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಎತ್ತೇಗೌಡನದೂಡ್ಡಿ, ಶ್ರೀನಿವಾಸಪುರ, ಮುನೇಶ್ವರ ಕಾಲೋನಿ, ಹೊಸಪೋಡು, ಭದ್ರಯ್ಯನಪೋಡು, ಗೋಡೆ ಮಡುವಿನದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳ ಕಾಲೋನಿಗಳಲ್ಲಿ ಎಸ್ಸಿಪಿ, ಟಿಎಸ್‌ಪಿ ಯೋಜನೆ ಅನುದಾನ1.5ಕೋಟಿ ರೂ.ವೆಚ್ಚದಲ್ಲಿ ಹೈಮಾಸ್ಟ್, ಸೋಲಾರ್ ದೀಪ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾಡಂಚಿನ ಗ್ರಾಮಗಳಲ್ಲಿನ ಜನರಿಗೆ ಕುಡಿಯುವ ನೀರು, ರಸ್ತೆ, ಚರಂಡಿಯಂತಹ ಮೂಲಸೌಕರ್ಯ ಕಲ್ಪಿಸುತ್ತ ಬರಲಾಗಿದೆ. ಇದೀಗ ಹಾಡಿಗಳ ಕಾಲೋನಿಗಳಿಗೆ ಹೈಮಾಸ್ಟ್ ಸೇರಿದಂತೆ ಸೋಲಾರ್‌ಲೈಟ್ ಅಳವಡಿಸುವ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗಿದೆ ಎಂದರು.

ಗ್ರಾಮಗಳ ಕಾಲೋನಿಗಳಿಗೆ ಅಗತ್ಯವಾಗಿ ಬೇಕಾದ ರಸ್ತೆ, ಚರಂಡಿ ಸಮುದಾಯ ಭವನ, ಕುಡಿಯುವ ನೀರು, ಗಂಗಾ ಕಲ್ಯಾಣಯೋಜನೆ, ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ, ನಿವೇಶನ, ಸೇರಿದಂತೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಸಮಗ್ರವಾಗಿ ಕಲ್ಪಿಸಲಾಗಿದೆ.ಮುಂದಿನ ದಿನಗಳಲ್ಲಿ ಇನ್ನು ಅಗತ್ಯ ಮೂಲಸೌಕರ್ಯ ಕಲ್ಪಿಸಲು ಬದ್ದ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪುಣಜನೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷ ರಾಚಪ್ಪ, ಪಿಎಸಿಸಿ ಅಧ್ಯಕ್ಷ ಮಣಿನಾಯ್ಕ, ಮುಖಂಡರಾದ ಶಾಮೀರ್ ಪಾಷಾ, ತಾಪಂ ಮಾಜಿ ಸದಸ್ಯ ಕುಮಾರ ನಾಯಕ, ಗ್ರಾಪಂ ಮಾಜಿ ಅಧ್ಯಕ್ಷೆ ಶಾಂತಮ್ಮ, ಜಡೆಯಪ್ಪ, ಉಲ್ಲೇಶ್ ನಾಯಕ, ಗಣೇಶ ನಾಯಕ, ಶಂಕರ್, ಕೆಆರ್‌ಐಡಿಎಲ್ ಎಂಜಿನಿಯರ್ ಮಹದೇವಪ್ರಸಾದ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

Continue Reading

Chamarajanagar

ಬ್ರೇಕ್ ವೈಫಲ್ಯ: ಕೆಎಸ್‌ಆರ್‌ಟಿಸಿ ಬಸ್‌ಗೆ ಟಿಟಿ ವಾಹನ ಡಿಕ್ಕಿ

Published

on

ಚಾಮರಾಜನಗರ: ಬ್ರೇಕ್ ವೈಫಲ್ಯವಾಗಿ ಕೆಎಸ್‌ಆರ್‌ಟಿಸಿ ಬಸ್ ಗೆ ಟಿಟಿ ವಾಹನ ಡಿಕ್ಕಿ ಹೊಡೆದಿರುವ ಘಟನೆ ತಾಲೂಕಿನ ಪುಣ್ಯದುಂಡಿ ಸಮೀಪದಲ್ಲಿ ಸಂಭವಿಸಿದೆ.

ಚಾಮರಾಜನಗರ ನಗರದಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಗೆ ಹಿಂಬದಿಯಿಂದ ಬರುತ್ತಿದ್ದ ಟಿಟಿ ವಾಹನ ಬ್ರೇಕ್ ವೈಪಲ್ಯವಾಗಿ ಡಿಕ್ಕಿ ಹೊಡೆದಿದ್ದು, ಟಿಟಿ ವಾಹನದ ಮುಂಭಾಗ ಜಖಂ ಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

Continue Reading

Trending

error: Content is protected !!