Sports
IPL2025: ಪಠಾಣ್ ಹಾಡಿಗೆ ಬೊಂಬಾಟ್ ಸ್ಟೆಪ್ ಹಾಕಿದ ಕಿಂಗ್ ಕೊಹ್ಲಿ: ಬಾದ್‌ಷಾ ಸಾಥ್
ಕೊಲ್ಕತ್ತಾ: ಬಹುನಿರೀಕ್ಷಿತ ಚುಟುಕು ಕ್ರಿಕೆಟ್‌ನ ಮನೆಮಾತಾಗಿರುವ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್)ನ 18ನೇ ಆವೃತ್ತಿಗೆ ಅದ್ದೂರಿ ಚಾಲನೆ ಸಿಕ್ಕಿದೆ.
ಕೊಲ್ಕತ್ತಾದ ಈಡೆನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡಯುತ್ತಿರುವ 18ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಹಾಡುಗಾರ್ತಿ ಶ್ರೇಯಾ ಗೋಷಾಲ್ ತಮ್ಮ ಗಾಯನದಿಂದ ನೆರೆದಿದ್ದವರನ್ನು ಮೋಡಿ ಮಾಡಿದರು. ಜೈ ಹೋ ಹಾಡನ್ನು ಹಾಡುವ ಮೂಲಕ ದೇಶ ಪ್ರೇಮವನ್ನು ಹೊರಹಾಕಿದರು.
ಇನ್ನು ಬಾಲಿವುಡ್ ಹಾಡುಗಳಿಗೆ ಸಖತ್ ಸ್ಟೆಪ್ ಹಾಕಿದ ಬಾಲಿವುಡ್ ನಟಿ ದಿಶಾ ಪಠಾನಿ ಎಲ್ಲರ ಹುಬ್ಬೇರುವಂತೆ ಮಾಡಿದರು. ಇನ್ನು ಸಿಂಗರ್ ಕರಣ್ ಥೋಬಾ ಹಾಡಿನ ಮೂಲಕ ಎಲ್ಲರ ಮನ ರಂಜಿಸಿದರು.
ಬಳಿಕ ಉದ್ಘಾಟನಾ ಕಾರ್ಯಕ್ರಮವನ್ನು ಬಾಲಿವುಡ್ ಬಾದ್‌ಷಾ ನಡೆಸಿಕೊಟ್ಟರು. ಈ ವೇಳೆ 18ನೇ ಆವೃತ್ತಿ ಆಗಿರುವುದರಿಂದ ವಿರಾಟ್ ಕೊಹ್ಲಿ ಜೆರ್ಸಿ ನಂಬರ್ ಸಹಾ 18 ಆಗಿದ್ದು, ವಿರಾಟ್ ಅವರಿಗೆ ಸೀಸನ್ 18ರ ಮೊಮೆಂಟೋ ನೀಡಿ ಗೌರವಿಸಲಾಯಿತು.
ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನಾ ವೇದಿಕೆ ಆಗಮಿಸಿದ ವಿರಾಟ್ ಕೊಹ್ಲಿ ಹಾಗೂ ರಿಂಕು ಸಿಂಗ್, ಶಾರುಖ್ ಖಾನ್ ಅವರ ಹಾಡಿಗೆ ನೃತ್ಯ ಮಾಡಿದರು. ವಿರಾಟ್ ಕೊಹ್ಲಿ ಪಠಾಣ್ ಚಿತ್ರದ ಟೈಟಲ್ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದರು.
Sports
IPL-2026ರ ಪಂದ್ಯಗಳು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫಿಕ್ಸ್: KSCA ಅಧಿಕೃತ ಘೋಷಣೆ
ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್- 2026 ಪಂದ್ಯಗಳು ನಡೆಯಲಿವೆ ಎಂದು ಕೆಎಸ್‌ಸಿಎ ಅಧಿಕೃತವಾಗಿ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಇಂದುನಡೆದ ಸುದ್ದಿಗೋಷ್ಠಿಯಲ್ಲಿ ಕೆಎಸ್‍ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಜಿಬಿಎ, ಬೆಸ್ಕಾಂ, ಜಲಮಂಡಳಿಗೂ ಮನವಿ ಮಾಡಿದ್ದೇವೆ. ಕೆಎಸ್‍ಸಿಎ ಸುರಕ್ಷತೆಗೆ ಅಧಿಕ ಆದ್ಯತೆ ನೀಡಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಇತ್ತೀಚೆಗೆ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್, ಅಂತಾರಾಷ್ಟ್ರೀಯ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿತ್ತು.
National
ವಿರಾಟ್ ಕೊಹ್ಲಿ ಈಗ ವಿಶ್ವದ ನಂ.1 ಬ್ಯಾಟ್ಸ್‌ಮನ್
ಮುಂಬೈ: ರನ್ ಮಿಷಿನ್ ವಿರಾಟ್ ಕೊಹ್ಲಿ ತಮ್ಮ 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.
ಇಂದು ಬಿಡುಗಡೆಯಾದ ನೂತನ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ 785 ಅಂಕ ಪಡೆಯುವ ಮೂಲಕ ಅಗ್ರಸ್ಥಾನಕ್ಕೇರಿದ್ದಾರೆ.

2013ರಲ್ಲಿ ಮೊಟ್ಟ ಮೊದಲ ಬಾರಿಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದಿದ್ದ ಕೊಹ್ಲಿ, 2018ರಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಪುನಃ ಅಗ್ರಸ್ಥಾನಕ್ಕೆ ಜಿಗಿದಿದ್ದರು. ಆ ನಂತರ ಟಾಪ್ 11 ರಲ್ಲಿ ಅನೇಕ ಸ್ಥಾನಗಳಲ್ಲಿದ್ದ ಕೊಹ್ಲಿ 5 ವರ್ಷಗಳ ಬಳಿಕ ಮತ್ತೆ ನಂ.1 ಪಟ್ಟಕ್ಕೇರಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಮೊದಲ ಎರಡೂ ಪಂದ್ಯಗಳಲ್ಲಿ ಕೊಹ್ಲಿ ಡಕೌಟ್ ಆಗಿದ್ದರು. ಮೂರನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ಇನ್ನೂ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 2 ಶತಕ, 1 ಅರ್ಧಶತಕ ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಕಿವೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 91 ಎಸೆತಗಳಲ್ಲಿ 93 ರನ್ ಗಳಿಸಿದ್ದರು. ಈ ಮೂಲಕ 785 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಮೊದಲು ಐದು ಸ್ಥಾನಗಳಲ್ಲಿರುವ ಆಟಗಾರರು ಯಾರು?
ಹೊಸದಾಗಿ ಬಿಡುಗಡೆಯಾದ ಐಸಿಸಿ ಏಕದಿನ ರ‍್ಯಾಂಕಿಗ್‌ನಲ್ಲಿ 785 ಅಂಕಗಳೊಂದಿಗೆ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ಡೇರಿಲ್ ಮಿಚೆಲ್ 784, ರೋಹಿತ್ ಶರ್ಮಾ 775, ಇಬ್ರಾಹಿಂ ಜದ್ರಾನ್ 764, ಶುಭಮನ್ ಗಿಲ್ 725 ಅಂಕ ಅಂಕಗಳೊಂದಿಗೆ ಮೊದಲ 5 ಸ್ಥಾನಗಳಲ್ಲಿದ್ದಾರೆ.
Sports
ಐಸಿಸಿ ಅಂಡರ್-19 ವಿಶ್ವಕಪ್: ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ BCCI
ಮುಂಬೈ: 2026 ರಂದು ನಡೆಯಲಿರುವ ಟಿ-20 ವಿಶ್ವಕಪ್‌ಗೆ ಬಿಸಿಸಿಐ (BCCI) ಕೆಲವೇ ದಿನಗಳ ಹಿಂದೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ ಅದಕ್ಕೂ ಮೊದಲು ಐಸಿಸಿ ಅಂಡರ್-19 ವಿಶ್ವಕಪ್ ನಡೆಯಲಿದ್ದು, ಈ ವಿಶ್ವಕಪ್‌ಗಾಗಿ ಟೀಂ ಇಂಡಿಯಾ ಯುವ ತಂಡವನ್ನು ಇದೀಗ ಪ್ರಕಟಿಸಲಾಗಿದೆ.
ಬಿಸಿಸಿಐ ಇಂದು ಈ ಟೂರ್ನಮೆಂಟ್‌ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಘೋಷಿಸಿದೆ. ಇದರಲ್ಲಿ 14 ವರ್ಷದ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಸೇರಿದ್ದು, ಎಂದಿನಂತೆ ಆಯುಷ್ ಮ್ಹಾತ್ರೆ ಅವರಿಗೆ ಇನ್ನೊಮ್ಮೆ ತಂಡದ ನಾಯಕತ್ವ ನೀಡಲಾಗಿದೆ. ಜನವರಿ. 15 ರಂದು ಯುನೈಟೆಡ್ ಸ್ಟೇಟ್ಸ್ ವಿರುದ್ಧದ ಗುಂಪು ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ವಿಶ್ವಕಪ್ ಅನ್ನು ಆಡಲಿದೆ.

ಬಿ ಗುಂಪಿನಲ್ಲಿ ಟೀಂ ಇಂಡಿಯಾ ತಂಡ
ಅಂಡರ್-19 ವಿಶ್ವಕಪ್ ಜ. 15 ರಿಂದ ಫೆ. 6 ರವರೆಗೆ ಜಿಂಬಾಬ್ವೆ ಹಾಗೂ ನಮೀಬಿಯಾದಲ್ಲಿ ನಡೆಯಲಿದೆ. 16 ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಐದು ಬಾರಿ ಅಂಡರ್-19 ವಿಶ್ವಕಪ್ ವಿಜೇತ ಭಾರತವನ್ನು ನ್ಯೂಜಿಲೆಂಡ್, ಯುನೈಟೆಡ್ ಸ್ಟೇಟ್ಸ್ ಮತ್ತು ಬಾಂಗ್ಲಾದೇಶದೊಂದಿಗೆ ಗ್ರೂಪ್ ಬಿಯಲ್ಲಿ ಇರಿಸಲಾಗಿದೆ.
ಟೀಂ ಇಂಡಿಯಾ ಜ. 15 ರಂದು ಅಮೆರಿಕ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ. ಬಳಿಕ ತಂಡವು ಜ. 17 ರಂದು ಬಾಂಗ್ಲಾದೇಶ ಹಾಗೂ ಜ. 24 ರಂದು ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಟೂರ್ನಿಯ ಫೈನಲ್ ಪಂದ್ಯ ಹರಾರೆಯಲ್ಲಿ ನಡೆಯಲಿದೆ.

-
Manglore20 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan19 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
-
Hassan20 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan20 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
State23 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
National22 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
Hassan23 hours agoಕೆಪಿಎಸ್ ಮ್ಯಾಗ್ನೆಟ್ ಶಾಲೆ ತೆರೆಯದಂತೆ ಆಗ್ರಹ: ಎಐಡಿಎಸ್ಓ ಸಂಘಟನೆಯಿಂದ ನಿಟ್ಟೂರಿನಲ್ಲಿ ಬೃಹತ್ ಸಮಾವೇಶ
-
Hassan23 hours agoಬಾರ್ನಲ್ಲಿ ಕುಡಿಯುವಾಗ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಗಲಾಟೆ
