ಪ್ಯಾಲೇಸ್ ಮೈದಾನದಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ನೂರಾರು ಕೆಎಸ್‌ಸಿಎ ಸದಸ್ಯರು ಪಾಲ್ಗೊಂಡಿದ್ದರು. ಟೀಂ ಗೇಮ್ ಚೇಂಜರ್ಸ್ ಪರವಾಗಿ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬ್ರಿಜೇಶ್ ಬಣದ ಆಡಳಿತದ ವೈಫಲ್ಯಗಳನ್ನು ಪ್ರಸಾದ್ ಬಣವು ಪಿಪಿಟಿ ಮೂಲಕ ಸದಸ್ಯರಿಗೆ ವಿವರಣೆ ನೀಡಿತ್ತು.

ಸಂವಾದದ ನಂತರ ಮಾತನಾಡಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಪ್ರಸ್ತುತ ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವೆಂಕಟೇಶ್ ಪ್ರಸಾದ್ ತಂಡ ಗೆಲ್ಲಲೇಬೇಕು. ರಾಜ್ಯದಲ್ಲಿ ಕ್ರಿಕೆಟ್ ಉದ್ಧಾರ ಆಗಬೇಕಾದರೆ ಬದಲಾವಣೆ ಅನಿವಾರ್ಯ. ನಾವು ಅಧಿಕಾರದಲ್ಲಿದ್ದಾಗ ಎರಡು ಹೆಜ್ಜೆ ಮುಂದೆ ಇಟ್ಟಿದ್ದೇವೆ. ಈಗ 10 ಹೆಜ್ಜೆ ಹಿಂದೆ ಹೋಗಿದ್ದೇವೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಫ್ರಾಸ್ಟ್ರಕ್ಚರ್ ಬದಲಾಗಬೇಕು. ಪ್ರಸಾದ್ ತಂಡ ಇದನ್ನು ಸಾಧಿಸುವ ಸಾಮರ್ಥ್ಯ ಹೊಂದಿದೆ. ಕೆಎಸ್‌ಸಿಎನಲ್ಲಿ ದುಡ್ಡಿಗೆ ಕೊರತೆಯಿಲ್ಲ. ಆದರೆ ಕ್ರಿಕೆಟ್ ಬೆಳವಣಿಗೆ ಆಗಬೇಕು. ಮತ ಕೇವಲ ಕ್ಲಬ್‌ಗೆ ಅಲ್ಲ. ಕ್ರಿಕೆಟ್ ಕನಸು ಕಟ್ಟಿಕೊಂಡಿರುವ ಮಕ್ಕಳಿಗಾಗಿ ಎಂದು ಹೇಳಿದರು.
ಇನ್ನೂ ನಾಳೆ ನಿರ್ಣಾಯಕ ದಿನವಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಮತದಾನ ಆರಂಭವಾಗಲಿದೆ. ಅಲ್ಲದೇ ನಾಳೆಯೇ ಕೆಎಸ್‌ಸಿಎ ಹೊಸ ಆಡಳಿತ ನಿರ್ಧಾರವಾಗಲಿದ್ದು, ಪ್ರಸಾದ್-ಬ್ರಿಜೇಶ್ ಬಣಗಳ ನಡುವೆ ಕಠಿಣ ಪೈಪೋಟಿ ಎದುರಾಗಲಿದೆ.


