Mandya
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
ಮಂಡ್ಯ: ಪೂರ್ವಿಕರ ಕಾಲದಿಂದಲೂ ಗ್ರಾಮದ ಸ್ಮಶಾನ, ಧನ ಕರುಗಳು ಕುಡಿಯಲು ಕೆರೆಕಟ್ಟೆ ಹಾಗೂ ಜಮೀನುಗಳಿಗೆ ತೆರಳಲು ಬಳಸುತ್ತಿದ್ದ ರಸ್ತೆಗೆ ಅಡ್ಡಲಾಗಿ ರೈತನೋರ್ವ ತಂತಿ ಬೇಲಿ ಹಾಕಿಕೊಂಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮದ್ಯೆದಲ್ಲಿಯ ಮೃತನ ಶವ ಸುಟ್ಟ ಘಟನೆಗೆ ಸಂವಂಧಿಸಿದಂತೆ ಜನಮಿತ್ರ ಪತ್ರಿಕೆ ಹಾಗೂ ಡಿಜಿಟಲ್ ವರದಿಗೆ ಫಲಶೃತಿ ದೊರೆತಿದೆ.
ಜನಮಿತ್ರ ವರದಿಯಿಂದ ಎಚ್ಚತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ರಸ್ತೆಯ ಇಕ್ಕೆಲಗಳ ಇಬ್ಬರೂ ರೈತರಿಂದ ಹತ್ತು, ಹತ್ತು ಅಡಿ ಜಾಗವನ್ನು ಸ್ಮಶಾಬದ ರಸ್ತೆಗೆ ಬಿಡಿಸಿ ಸಫಲತೆ ಕಂಡಿದೆ.
ಜನಮಿತ್ರ ವರದಿಯಿಂದ ಎಚ್ಚೆತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಗ್ರಾಮಕ್ಕೆ ತೆರಳಿದ್ದ ಅಧಿಕಾರಿಗಳ ತಂಡ, ಸ್ಮಶಾನ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗಾಗಿ ತೆರಳುವ ರಸ್ತೆಯ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ್ದಾರೆ.

ರಸ್ತೆಯ ಎರಡೂ ಬದಿಯಲ್ಲಿನ ರೈತರಾದ ಅಂಧಾನಿಗೌಡ ಹಾಗೂ ಯಶೋಧಮ್ಮ ರವರಿಂದ ತಲಾ ಹತ್ತು ಹತ್ತು ಅಡಿ ಜಾಗವನ್ನು ಸ್ಮಶಾನದ ರಸ್ತೆಗೆ ಬಿಟ್ಟುಕೊಡುವಂತೆ ಮನವಲೈಸಿದ್ದಾರೆ.
ತಾಲ್ಲೂಕು ಆಡಳಿತದ ಮದ್ಯಸ್ಥಿಕೆಯಿಂದಾಗಿ ಇದೀಗ ಹೆಬ್ಬಾಡಿಹುಂಡಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಜನಮಿತ್ರ ಪತ್ರಿಕೆ ಹಾಗೂ ಜನಮಿತ್ರ ಡಿಜಿಜಿಟಲ್ ನ್ಯೂಸ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Mandya
ಪಂಚ ಗ್ಯಾರಂಟಿ ಯೋಜನೆಯಡಿ 5 ವರ್ಷದಲ್ಲಿ 3 ಲಕ್ಷ ಕೋಟಿ ಹಣವನ್ನು ಫಲಾನುಭವಿಗಳಿಗೆ ನೀಡಲಾಗುವುದು: ಎನ್. ಚಲುವರಾಯ ಸ್ವಾಮಿ
ಮಂಡ್ಯ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಇತರೆ ರಾಜ್ಯಗಳು ಪ್ರಾರಂಭಿಸಲು ಪ್ರೇರೇಪಿತವಾಗುತ್ತಿದ್ದೂ, ಈವರೆಗೂ ಪಂಚ ಗ್ಯಾರಂಟಿ ಯೋಜನೆಯಡಿ 1 ಲಕ್ಷದ 25 ಸಾವಿರ ಕೋಟಿ ಹಣವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ತಲುಪಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಯಡಿ 5 ವರ್ಷದಲ್ಲಿ ಸುಮಾರು 3 ಲಕ್ಷ ಕೋಟಿ ಹಣವನ್ನು ಫಲಾನುಭವಿಗಳಿಗೆ ತಲುಪಿಸುವ ಗುರಿ ಇದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಅವರು ನಾಗಮಂಗಲದ ಟಿ.ಬಿ.ಸರ್ಕಲ್ ಬಡಗೂಡಮ್ಮ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮದ ಪ್ರಮುಖ ಉದ್ದೇಶವೇ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವುದಾಗಿದೆ. ಈ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದದಿಂದ ಸಾರ್ವಜನಿಕರಿಂದ ಅನೇಕ ಅರ್ಜಿಗಳನ್ನು ಸ್ವೀಕರಿಸಿ, ಪರಿಶೀಲಿಸಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲಾಗುತ್ತಿದೆ. ಜನರ ಸಮಸ್ಯೆಗೆ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.
ತಾಲೂಕು ಇಲಾಖೆಗಿಂತಲೂ ಜಿಲ್ಲಾಡಳಿತದ ಜವಾಬ್ದಾರಿ ದೊಡ್ಡದು, ಜಿಲ್ಲಾಡಳಿತ ಹೆಚ್ಚು ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ತಾಲೂಕು ಆಡಳಿತದಲ್ಲಿ ಅನುಭವದ ಕೊರತೆಯಿಂದ ಕೆಲಸ ನಿಧಾನ ಗತಿಯಾಗಿರಬಹುದು. ಜಿಲ್ಲೆಯಲ್ಲಿ ಕೆಲಸ ನಿರ್ವಹಣೆಯ ಜತೆಗೆ ಸಾರ್ವಜನಿಕರು ಕೆಲಸ ನಿರ್ವಹಣೆಯಲ್ಲಿ ಸಮಾಧಾನವಾದರೆ ಸಂತೋಷವಾಗುತ್ತದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದಾಗ ಸಾರ್ವಜನಿಕರು ಸಹಕರಿಸಿ ಎಂದರು.

ರಾಜ ಮನೆತನಗಳ ಕಾಲದಿಂದಲೂ ಸಂಪೂರ್ಣವಾಗಿ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಕಾಲದಲ್ಲಿ ಸಾಧ್ಯವಾದಷ್ಟು ಸಮಸ್ಯೆ ಬಗೆಹರಿಸುವ ಆದಿಯಲ್ಲಿದ್ದೇವೆ. ಎರಡು ವರೆ ವರ್ಷದಿಂದ ತಾಲೂಕಿನ ವಿವಿದೆಡೆ ಜನಸ್ಪಂದನ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು, ಕೊಪ್ಪ ಹೋಬಳಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ಥಳದಲ್ಲೇ ಸಮಸ್ಯೆಯನ್ನು ಸಹ ಪರಿಹರಿಸಿದ್ದೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸರ್ಕಾರದಿಂದ ಹಣ ದೊರೆಯದಿದ್ದರೂ ಜನರ ಪರವಾಗಿ ರಾಜ್ಯ ಸರಕಾರ ಆರ್ಥಿಕ ಪರಿಸ್ಥಿತಿ ಮೀರಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಹಾಲಿನ ಪ್ರೋತ್ಸಹ ಧನ, ಬಡ್ಡಿ ರಹಿತ ಸಾಲ, ಕೃಷಿ ಇಲಾಖೆ ಸೌಲಭ್ಯ, ಶಿಕ್ಷಣ, ಮಕ್ಕಳು, ಸಮಾಜ ಕಲ್ಯಾಣ ಇಲಾಖೆ ಸೌಲಭ್ಯ. ಸಾರ್ವಜನಿಕರಿಗೆ ಸಬ್ಸಿಡಿ, ಬರಗಾಲದ ಸಮಯದಲ್ಲಿ ಪರಿಹಾರ, ಮಳೆ ಹಾನಿ ಪರಿಹಾರಗಳಿಗಾಗಿ ಕೇಂದ್ರ ಸರಕಾರದ ಅನುದಾನ ನಿರೀಕ್ಷಿಸದೆ ಸ್ವಂತ ಖಜಾನೆಯಿಂದ ಸವಲತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡ್ಯ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ 8600 ಸಾವಿರ ಕ್ಕೂ ಹೆಚ್ಚು ಪಹಣಿಗಳನ್ನು ತಿದ್ದುಪಡಿ ಮಾಡಲಾಗಿದ್ದು, ಎ.ಸಿ ನ್ಯಾಯಾಲಯದಲ್ಲಿ 1600 ಕ್ಕೂ ಹೆಚ್ಚು ಕೋರ್ಟ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ನಾಗಮಂಗಲ ತಾಲ್ಲೂಕಿನಲ್ಲಿ ಸುಮಾರು 20 ಸಾವಿರ ಪೌತಿ ಖಾತೆ ಬದಲಾವಣೆ ಮಾಡಲಾಗಿದೆ. 2 ಲಕ್ಷದ 60 ಸಾವಿರ ಆಧಾರ್ ಸೀಡಿಂಗ್ ಮಾಡಲಾಗಿದೆ ಎಂದರು.
ನಾಗಮಂಗಲ ತಾಲ್ಲೂಕಿನಲ್ಲಿ 80 ಸಾವಿರ ಖಾತೆ ಬಾಕಿಯಿದ್ದು, ಮುಂದಿನ 06 ತಿಂಗಳಲ್ಲಿ ಹಂತ-ಹಂತವಾಗಿ ಗ್ರಾಮ ಮಟ್ಟದಲ್ಲಿ ಆಂದೋಲನ ನಡೆಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಮುಜರಾಯಿ ದೇವಸ್ಥಾನದ ಅರ್ಚಕರಿಗೆ 06 ತಿಂಗಳಿಗೆ 36 ಸಾವಿರ ಪ್ರತಿ ತಿಂಗಳಿಗೆ ಆರು ಸಾವಿರ ರೂಗಳಂತೆ ನಾಗಮಂಗಲ ತಾಲ್ಲೂಕಿನಲ್ಲಿ ಒಟ್ಟು 506 ದೇವಸ್ಥಾನಗಳಿಗೆ 30 ಲಕ್ಷಕ್ಕೂ ಹೆಚ್ಚು ಹಣ ನೀಡಲಾಗುತ್ತಿದೆ. NRLM ವತಿಯಿಂದ ಮಹಿಳೆಯರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯತ್ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.
18 ಲಕ್ಷ ಪಹಣಿಗಳಿಗೆ ಆಧಾರ್ ಜೋಡಣೆ ಮಾಡಲಾಗಿದೆ
ಒಟ್ಟು 1 ಲಕ್ಷ 7 ಸಾವಿರ ಸ. ನಂ ಪೌತಿ ಖಾತೆ. 2 ಸಾವಿರಕ್ಕೂ ಹೆಚ್ಚು ದರಖಾಸ್ತು ಪೋಡಿ. 20 ಸಾವಿರ ಪ್ರಕರಣಗಳನ್ನು ಡಿ.ಸಿ, ಎ.ಸಿ ಹಾಗೂ ತಹಸೀಲ್ದಾರ್ ರವರ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಲಾಗಿದೆ. 962 ಕೆರೆಗಳ ಅಳತೆ ಕಾರ್ಯಪೂರ್ಣಗೊಂಡಿದೆ. ರೆಕಾರ್ಡ್ ರೂಂ ನಲ್ಲಿ ಭೂ ಸುರಕ್ಷಾ ಯೋಜನೆಯಡಿ 1 ಕೋಟಿ 60 ಲಕ್ಷ ಪುಟಗಳ ಸ್ಕ್ಯಾನಿಂಗ್ ಮಾಡಲಾಗಿದೆ. 154 ಹೊಸ ಕಂದಾಯ ಗ್ರಾಮಗಳನ್ನು ರಚಿಸಲು ಕ್ರಮವಹಿಸಲಾಗಿದೆ. 59 ಸಾವಿರ ಸರ್ಕಾರಿ ಜಮೀನುಗಳ ಲ್ಯಾಂಡ್ ಬೀಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕೃಷಿ ಇಲಾಖೆ ವತಿಯಿಂದ ಸೂಕ್ಷ್ಮ ನೀರಾವರಿ ಯೋಜನೆ, ಕೃಷಿ ಯಾಂತ್ರೀಕರಣ,ಮಳೆಯಾಶ್ರಿತ ಪ್ರದೇಶ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ, ಕೃಷಿ ಭಾಗ್ಯ ಯೋಜನೆ, ರೈತರ ಆತ್ಮಹತ್ಯೆ ಹಾಗೂ ಆಕಸ್ಮಿಕ ಮರಣಕ್ಕಾಗಿ ಒಟ್ಟು 1.22 ಕೋಟಿ ಸಹಾಯಧನ ನೀಡಲಾಗಿದೆ ಎಂದರು.
ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದರು ಜನರನ್ನು ತೃಪ್ತಿ ಪಡಿಸಲಾಗುತ್ತಿಲ್ಲ. ನನ್ನಿಂದ ಸಾಧ್ಯವಾದಷ್ಟು ಸೇವೇ ಸಲ್ಲಿಸಲು ನಾನು ಸದಾಸಿದ್ದ ಜಿಲ್ಲೆಯಲ್ಲಿ ಇನ್ನಾ ಹೆಚ್ಚು ಬದಲಾವಣೆ ತರಲು ನಮ್ಮೊಂದಿಗೆ ಸಹಕರಿಸಿ ಹಾಗೂ ದಯಮಾಡಿ ಸವಲತ್ತುಗಳ ಸೌಲಭ್ಯ ಪಡೆದುಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ,ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ನಾಗಮಂಗಲ ತಹಸೀಲ್ದಾರ್ ಆದರ್ಶ್, ಪಾಂಡವಪುರ ಉಪವಿಭಾಗ ಅಧಿಕಾರಿ ಶ್ರೀನಿವಾಸ್, ಕೃಷಿ ಇಲಾಖೆ ಜಂಟಿ ನಿರ್ದೇಶ ಅಶೋಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಶ್ರೀ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಧಿಕಾರಿ ಮಂಜುಳಾ, ನಗರಾಭಿವೃದ್ಧಿ ಕೋಶ ಜಂಟಿ ನಿರ್ದೇಶಕರಾದ ನರಸಿಂಹ ಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಮಿಮ್ಸ್‌ಗೆ ಸಂಬಂಧಿಸಿದಂತೆ ಜಾಗದ ಒತ್ತುವರಿಯನ್ನು ತೆರವುಗೊಳಿಸಿ : ಕೆ.ಆರ್.ರವೀಂದ್ರ
ಮಂಡ್ಯ: ಮಿಮ್ಸ್‌ಗೆ ಸಂಬಂಧಿಸಿದಂತೆ ಜಾಗದ ಒತ್ತುವರಿಯನ್ನು ತೆರವುಗೊಳಿಸಿ, ಕಾನೂನು ಬಾಹಿರವಾಗಿ ಖಾಸಗಿ ವ್ಯಕ್ತಿಗಳು ಹಾಗೂ ಸಂಘ-ಸಂಸ್ಥೆಗಳಿಗೆ ಜಮೀನು ಮಂಜೂರು ಮಾಡಿರುವುದನ್ನು ರದ್ದು ಮಾಡಿ, ಲೋಪವೆಸಗಿದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ವಹಿಸುವಂತೆ ಜಿಲ್ಲಾಡಳಿತವನ್ನು ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಜಿಲ್ಲಾಸ್ಪತ್ರೆ ಹಾಗೂ ಸರ್ಕಾರಿ ಪ್ರೌಢಶಾಲೆಯ ಉದ್ದೇಶಕ್ಕೆ 78.15 ಎಕರೆ ಜಮೀನು ಮೀಸಲಿಡಲಾಗಿದ್ದು, ಅವುಗಳನ್ನು ಕೆಲವರು ಒತ್ತುವರಿ ಮಾಡಿಕೊಂಡರೆ, ಇನ್ನು ಕೆಲವರು ಅಕ್ರಮವಾಗಿ ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಸುಮಾರು 900 ಕೋಟಿ ರೂ. ಹೆಚ್ಚು ಬೆಳೆ ಬಾಳುವ ಜಮೀನನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಹಾಗೂ ಸಂಘ-ಸಂಸ್ಥೆಗಳು ಮಂಜೂರು ಮಾಡಿಸಿಕೊಂಡಿರುವುದನ್ನು ತನಿಕೆ ನಡೆಸಿ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಟ್ರಾಮಾ ಕೇರ್ ನಿರ್ಮಾಣಕ್ಕೆ ಮಂಡ್ಯ ಶಾಸಕರು ಡಿಎಚ್‌ಓ ಕಚೇರಿ ಸ್ಥಳವನ್ನು ತೆರವು ಮಾಡಿಸುವುದಾಗಿ ಹೇಳಿದ್ದಾರೆ. ಮಿಮ್ಸ್‌ಗೆ ಸಂಬಂಧಿಸಿದಂತೆ ಒತ್ತುವರಿ ಮಾಡಿಕೊಂಡ 2 ಎಕರೆ 33 ಗುಂಟೆ ಸ್ಥಳವಿದೆ. ಅಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಬುದು ಎಂದು ಸಲಹೆ ನೀಡಿದರು.
ತಮಿಳು ಕಾಲೋನಿ ಸಂಬಂಧ ಇರುವ ತಡೆಯಾಜ್ಞೆಯು 2026ರ ಫೆ.3ರಂದು ನ್ಯಾಯಾಲಯ ತೆರವು ಮಾಡಲಿದೆ. ಜಿಲ್ಲಾಧಿಕಾರಿಗಳು ಕೂಡಲೇ ತಮಿಳು ಕಾಲೋನಿ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮವಹಿಸಬೇಕು. ಈ ಸಂಬಂಧ ಜಿಲ್ಲೆಯ ರಾಜಕಾರಣಿಗೆ ಇಚ್ಛಾಸಕ್ತಿ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸಚಿವರು ಕೈಗಾರಿಕೆ ಸ್ಥಾಪಿಸಲು ಸ್ಥಳ ಹುಡುಕಾಟದಲ್ಲಿದ್ದಾರೆ. ಜಿಲ್ಲೆಯಲ್ಲಿ ಅಕ್ರಮವಾಗಿ ಭೂಮಿ ಕಬಳಿಕೆ ಮಾಡಿರುವುದನ್ನು ತೋರಿಸಿ. ಈ ಸಂಬಂಧ ದಾಖಲೆಗಳನ್ನು ಒದಗಿಸುತ್ತೇವೆ. ಅವುಗಳನ್ನು ತೆರವುಗೊಳಿಸಿ ಜಿಲ್ಲೆಯ ಅಭಿವೃದ್ದಿಗೆ ರಾಜ್ಯ-ಕೇಂದ್ರ ಸಚಿವರಿಬ್ಬರು ಶ್ರಮಿಸಬೇಕು. ಇವರ ಜಗಳದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ದೂರಿದರು.
ನಗರದಲ್ಲಿ ಸರ್ಕಾರಿ ಶಾಲೆ(ಕಲ್ಲುಕಟ್ಟಡ), ಮಿಮ್ಸ್‌ಗೆ ಸಂಬಂಧಿಸಿದಂತೆ ಮೈಸೂರು ರಾಜರು 3 ಗೆಜೆಟ್‌ಗಳಲ್ಲಿ 78 ಎಕರೆ 15 ಗುಂಟೆ ಜಮೀನು ಮಂಜೂರು ಮಾಡಿದ್ದರು. ಈ ಪೈಕಿ ತಮಿಳು ಕಾಲೋನಿ ಒತ್ತುವರಿ ಸಂಬಂಧ ಇದ್ದ ತಡೆಯಾಜ್ಞೆ ಫೆ.3ರಂದು ತೆರವುಗೊಳ್ಳಲಿದೆ. ಉಳಿದಂತೆ ಅಕ್ರಮವಾಗಿ ಮಂಜೂರು ಮಾಡಿಕೊಂಡಿರುವ ಸಂಘ-ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ನೋಟೀಸ್ ನೀಡಿ ತೆರವು ಕಾರ್‍ಯಕ್ಕೆ ಮುಂದಾಗುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಶಿವರಾಮೇಗೌಡ, ಕಿರಣ್‌ಕುಮಾರ್, ಮಾದು, ಅಣ್ಣಯ್ಯ ಇದ್ದರು.
Mandya
ಅಲೆಮಾರಿ ಜನಾಂಗದವರ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ
ಶ್ರೀರಂಗಪಟ್ಟಣ: ಗಂಜಾಂನ ಹೊರವಲಯದಲ್ಲಿ ಹೊರ ಜಿಲ್ಲೆಯಿಂದ ವಲಸೆ ಬಂದು ಸರ್ಕಸ್ ಪ್ರದರ್ಶನ ನೀಡಿ ಜೀವನ ಸಾಗಿಸುತ್ತಿರುವ ವಲಸೆ ಜನಾಂಗದ ಕುಟುಂಬದವರ ಮಕ್ಕಳಿಗೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಪಲ್ಸ್ ಪೋಲಿಯೋ ಲಸಿಕೆ ಹಾಕಿದರು.
ನಂತರ ಮಾತನಾಡಿದ ಅವರು, ಸುಮಾರು 10 ಕ್ಕೂ ಹೆಚ್ಚು ಕುಟುಂಬಗಳು ಗಂಜಾಂ ನ ಹೊರ ವಲಯದ ಟೆಂಟ್ ನಲ್ಲಿ ವಾಸವಿದ್ದು ಸಾರ್ವಜನಿಕರಿಗೆ ಸರ್ಕಸ್ ಪ್ರದರ್ಶನ ನೀಡಿ ಜೀವನ ಸಾಗಿಸುತ್ತಾ ಇರುವ ಇವರು ಒಂದು ವಾರ ಅಥವಾ ಎರಡು ವಾರ ಒಂದು ಊರಿನಲ್ಲಿ ಇದ್ದು, ನಂತರ ಮುಂದಿನ ಊರುಗಳಿಗೆ ತೆರಳುತ್ತಿರುತ್ತಾರೆ.

ಸರ್ಕಸ್ ಪ್ರದರ್ಶನ ನೀಡುವುದು ಇವರ ವೃತ್ತಿ ಸಾಮಾನ್ಯವಾಗಿದ್ದು,ಇವರ ಗುಂಪಿನಲ್ಲಿ ಐದು ವರ್ಷದ ಒಳಗಿನ 8 ಮಕ್ಕಳನ್ನು ಗುರುತಿಸಿ ಪಲ್ಸ್ ಪೋಲಿಯೋ ಹನಿ ಹಾಕಲಾಯಿತು.
ಜೊತೆಗೆ ಮಕ್ಕಳ ಆರೋಗ್ಯ, ಶುಚಿತ್ವದ ಕಡೆ ಗಮನ ಹರಿಸಬೇಕೆಂದು ಪೋಷಕರಿಗೆ ಕಿವಿಮಾತು ಹೇಳಿದ್ದಾಗಿ ತಿಳಿಸಿದರು.
ಈ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಾಣಿ, ಆರ್.ಬಿ.ಎಸ್.ಕೆ ತಂಡದ ಸವಿತಾ, ಹೇಮಾವತಿ ಹಾಜರಿದ್ದರು.
-
Hassan8 hours agoಎನ್.ಆರ್. ಸರ್ಕಲ್ನಲ್ಲಿ ಅವೈಜ್ಞಾನಿಕ ವಿನ್ಯಾಸ: ಸಂಚಾರ ದಟ್ಟಣೆ, ಅಪಘಾತ ಭೀತಿ – ತಕ್ಷಣ ಕ್ರಮಕ್ಕೆ ಹೆಚ್.ಎಂ. ಸುರೇಶ್ ಒತ್ತಾಯ
-
Mysore9 hours agoಕೂಡಿ ಬಾಳಿದರೆ ಸ್ವರ್ಗ ಸುಖ: ಸಿಂಚನಗೌಡ
-
Mysore7 hours agoಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಉಳಿಸಿ: ಗ್ರೇಡ್-1 ಮಹಾನಗರ ಪಾಲಿಕೆಯಿಂದ ಕೈಬಿಡುವಂತೆ ಸಿಎಂಗೆ ನಿವಾಸಿಗಳ ಮನವಿ
-
Special11 hours agoNHIDCL ನಲ್ಲಿ ಉದ್ಯೋಗಾವಕಾಶ
-
State40 minutes agoಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಗೌರವ ನೀಡುತ್ತೇವೆ: ಡಾ.ಜಿ. ಪರಮೇಶ್ವರ್
-
Mysore8 hours agoಜನರಿಂದ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ
-
Kodagu23 hours agoಮಹಿಳೆಯರು ಜಾಗೃತರಾದರೆ ಸ್ವಸ್ಥ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯ -ಜಿ.ವಿ. ಶ್ರೀನಾಥ್
-
Manglore7 hours agoಆ್ಯಂಬುಲೆನ್ಸ್ ಕಳವುಗೈದ ಅಸಾಮಿ ಅಂದರ್
