Connect with us

Mysore

ಜಪದಕಟ್ಟೆ ಏತ ನೀರಾವರಿ ಕಾಮಗಾರಿಗಳ ಪರಿವಿಕ್ಷಣೆಯನ್ನು ನಡೆಸಿದ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು

Published

on

ಸಾಲಿಗ್ರಾಮ: ಜಪದಕಟ್ಟೆ ಏತ ನೀರಾವರಿಯಿಂದ ಸುಮಾರು 110 ಕೆರೆಕಟ್ಟೆಗಳಿಗೆ ನೀರನ್ನು ತುಂಬಿಸುವ ಕಾರ್ಯವನ್ನು ಮಾಡಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ಅವರು ತಾಲೂಕಿನ ಜಪದಕಟ್ಟೆ ಏತ ನೀರಾವರಿ ಕಾಮಗಾರಿಗಳ ಪರಿವಿಕ್ಷಣೆಯನ್ನು ನಡೆಸಿ ಮಾತನಾಡಿದರು.

ಕೆರೆಕಟ್ಟೆಗಳಿಗೆ ನೀರನ್ನು ತುಂಬಿಸುವುದರಿಂದ ಅಂತರ್ಜಲವೂ ಹೆಚ್ಚುವುದು. ಈ ಏತ
ನೀರಾವರಿಯಿಂದ ಸುಮಾರು 4,500 ಎಕರೆಗೂ ಹೆಚ್ಚಿನ ಕೃಷಿ ಭೂಮಿಗೆ ಅನುಕೂಲವಾಗಲಿದೆ ಎಂದರು.

3000 ಕಾಮಗಾರಿಗಳ ಬಿಲ್ಲಿಂಗ್ ಪೇಮೆಂಟ್ ಕಾರ್ಯವು ನಡೆಯುತ್ತಿದೆ. 5,000 ಕೋಟಿಯ ಕಾಮಗಾರಿಗಳ ಟೆಂಡರ್ ಆಗಿರುವಂತಹ ಹಾಗೂ ಮಾಡುವಂತಹ ಕೆಲಸವು ನಡೆಯುತ್ತಿದೆ. ಇದರ ಜೊತೆಗೆ ಸುಮಾರು 5,000 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವಂತೆ ಶಾಸಕರು, ಸಚಿವರುಗಳು ಪ್ರಪೋಸಲ್ ಕೊಟ್ಟಿದ್ದಾರೆ ಎಂದರು.

ಮೊದಲ ಭಾಗವಾಗಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ಮುಗಿಯುವ ಹಂತದಲ್ಲಿರುವ ಕಾಮಗಾರಿಗಳನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಅವುಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅದರ ಉಪಯೋಗವಾಗುವಂತೆ ನೋಡಿಕೊಳ್ಳುವ ಕೆಲಸವನ್ನು ಮಾಡಲಾಗುತ್ತಿದೆ. ಆ ಕಾರಣಕ್ಕಾಗಿ ಖುದ್ದಾಗಿ ರಾಜ್ಯದ ವಿವಿಧ ಭಾಗಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿನ ರೈತರು, ಜನಪ್ರತಿನಿಧಿಗಳಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದರು. ಜಪದಕಟ್ಟೆ ಏತ ನೀರಾವರಿ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಿ ರೈತರುಗಳಿಗೆ ಅನುಕೂಲವಾಗುವಂತೆ ಮಾಡಲಾಗುವುದು ಎಂದರು.

ಶಾಸಕ ಡಿ.ರವಿಶಂಕರ್ ಮಾತನಾಡಿ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಾವರಿ ಇಲಾಖೆಯಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಹೆಚ್ಚಿನ ಅನುದಾನವನ್ನು ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಸ್ಥಳದಲ್ಲಿ ಹಾಜರಿದ್ದ ಸುತ್ತಮುತ್ತಲ ಗ್ರಾಮದ ಜನರು ಸಚಿವರು ಹಾಗೂ ಶಾಸಕರಲ್ಲಿ ತಮ್ಮ ಭಾಗಕ್ಕೆ ನೀರಾವರಿ ಇಲಾಖೆ ವತಿಯಿಂದ ಆಗಬೇಕಾದ ಕೆಲಸಗಳನ್ನು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾ.ಪಂ. ಮಾಜಿ ಅಧ್ಯಕ್ಷರಾದ ಹೆಚ್.ಟಿ.ಮಂಜಪ್ಪ, ಹೆಬ್ಬಾಳು ನಾಗರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಕೆಡಗ ನಟರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಉದಯಶಂಕರ್, ಮಹದೇವ್, ಎಸ್ ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ಗ್ರಾ.ಪಂ. ಅಧ್ಯಕ್ಷ ಶಿವಣ್ಣ, ಮಾಜಿ ಅಧ್ಯಕ್ಷರಾದ ತೇಜೋಮೂರ್ತಿ, ಹರೀಶ್, ಸದಸ್ಯರಾದ ಸಿದ್ದರಾಜು, ಶಂಭುಲಿಂಗಾಚಾರ್, ನಾಗೇಶ್, ಪಿಎಸ್ಐ ಕುಮುದ, ಪಿಡಿಓ ಕೆ.ನವೀನ್, ರಾಜಶ್ವ ನಿರೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಆರತಿ, ಎಸ್​ಡಿಎ ಮಂಜೇಗೌಡ, ಮುಖಂಡರುಗಳಾದ
ಗುಣಪಾಲಜೈನ್, ಕೊತ್ವಾಲ್ ಮಂಜು, ಜವರಯ್ಯ, ಕುಮಾರಸ್ವಾಮಿ, ಹೆಬ್ಬಾಳು ರಾಜಶೇಖರ್, ಹೆಚ್.ಟಿ.ಪ್ರಕಾಶ್, ಮುತ್ತಾರ್ ಪಾಷಾ, ಶ್ರೀನಿವಾಸ, ಮೂರ್ತಿ, ನೀರಾವರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಜಿಯೋ ಪ್ಯಾಕ್ ಕಾಖಾ೯ನೆಯಲ್ಲಿ ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸಾವು

Published

on

ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ.
24 ವರ್ಷದ ಆಶೀಸ್ ಸುಖದಾಸ್ ಪಾಟ್ಲೆ ಮೃತ ಯುವ ಕಾರ್ಮಿಕನಾಗಿದ್ದಾನೆ.
ಮಹಾರಾಷ್ಟ್ರ ಮೂಲದ ಯುವಕನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.


ಇಂದು ಮೆಷಿನ್ ಗೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆ ಮೆಷಿನ್ ಗೆ ತಾಕಿದೆ. ತಲೆಗೆ ಮೆಷಿನ್ ಹೊಡೆದ ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ನಂಜನಗೂಡು ಹೆದ್ದಾರಿ ರಸ್ತೆ ಮಲ್ಲನ ಮೂಲೆ ಮಠ ಬಳಿ ಬೈಕ್ ಗೆ ಲಾರಿ ಡಿಕ್ಕಿ – ಬೈಕ್ ಸವಾರ ಸಾವು

Published

on

ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು-ಮೈಸೂರು ರಸ್ತೆಯ ತಾಲ್ಲೂಕಿನ ಮಲ್ಲನ ಮೂಲೆ ಮಠದ ಬಳಿ ನಡೆದಿದೆ.
ನಂಜನಗೂಡಿನ ಚಾಮಲಾಪುರದ ಹುಂಡಿ ಬಡಾವಣೆಯ ನಿವಾಸಿ 61 ವರ್ಷದ ಶಂಕರ್ ಮೃತ ದುರ್ಧೈವಿಯಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಇಂದಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಯಗೊಂಡ ವ್ಯಕ್ತಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

Published

on

ಸಾಲಿಗ್ರಾಮ  ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.

ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ  ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ  ಧರಣಪ್ಪಗೌಡ, ಕರ್ಪೂರವಳ್ಳಿ  ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ   

Continue Reading

Trending