Connect with us

Chikmagalur

ಮಹಾಮಳೆಗೆ ಕೊಚ್ಚಿ ಹೋದ ಅರ್ಧ ಎಕರೆ ಅಡಿಕೆ‌ ತೋಟ

Published

on

ಚಿಕ್ಕಮಗಳೂರು :

ಕಾಫಿನಾಡಲ್ಲಿ ಮುಂದುವರಿದ ಮಳೆ ಅಬ್ಬರ

ನಿರಂತರ ಮಳೆಯಿಂದ ಮಲೆನಾಡಿನಲ್ಲಿ ಸರಣಿ ಅನಾಹುತಗಳು

ಭದ್ರಾ ನದಿ ಪ್ರವಾಹದಿಂದ ತೋಟ-ಗೆದ್ದೆಗಳು ಜಲಾವೃತ

ಮಹಾಮಳೆಗೆ ಕೊಚ್ಚಿ ಹೋದ ಅರ್ಧ ಎಕರೆ ಅಡಿಕೆ‌ ತೋಟ

 

ಕಳಸ ತಾಲೂಕಿನ ಮಕ್ಕಿಮನೆಯ ನಾಗೇಂದ್ರ ಎಂಬುವರಿಗೆ ಸೇರಿದ ತೋಟ

*ತೋಟದಲ್ಲಿ ಮಣ್ಣು ಕುಸಿತವಾಗಿ ಅರ್ಧ ಎಕರೆ ಅಡಿಕೆ ಗಿಡಗಳು ಮಣ್ಣುಪಾಲು*

ನಡ್ಲುಮನೆಯ ವರ್ಧಮಾನಯ್ಯ ಎನ್ನುವುರ 3 ಎಕರೆ ನಾಟಿ ಮಾಡಿದ ಭತ್ತದ ಗದ್ದೆ ಜಲಾವೃತ್ತ

ಭದ್ರಾ ನದಿ ಪ್ರವಾಹದಿಂದ ಜಲಾವೃತ್ತವಾಗಿರುವ ತೋಟ, ಗೆದ್ದೆಗಳು

ಕಳಸ ತಾಲೂಕಿನ ಮಕ್ಕಿಮನೆ, ನಡ್ಲುಮನೆ ಗ್ರಾಮಗಳಲ್ಲಿ ಭದ್ರೆ ಪ್ರವಾಹ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು

Continue Reading

Chikmagalur

apk file ಅನ್ನು ಡೌನ್ಲೋಡ್ ಮಾಡುವ ಮೊದಲು ಇರಲಿ ಎಚ್ಚರ..!!

Published

on

ಚಿಕ್ಕಮಗಳೂರು : ವ್ಯಕ್ತಿಯೊಬ್ಬರು ಅನುಮಾನಾಸ್ಪದ ಲಿಂಕ್ .apk file ನ್ನು ಕ್ಲಿಕ್ ಮಾಡಿ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡ ಪರಿಣಾಮವಾಗಿ ಸೈಬರ್ ಖದೀಮರು Remote Access ಪಡೆದು ಅವರ ಬ್ಯಾಂಕ್ ಖಾತೆಗಳಿಂದ 10,65,899/- ರೂ ಹಣವನ್ನು ಲಪಟಾಯಿಸಿರುವ ಕುರಿತು ಪ್ರಕರಣ ದಾಖಲಿಸಿರುವ ಬಗ್ಗೆ

ಚಿಕ್ಕಮಗಳೂರು ನಗರದಲ್ಲಿ ಮಹಿಳೆಯೋರ್ವರು 02 ಬ್ಯಾಂಕ್ ಖಾತೆಗಳ ಬ್ಯಾಲೆನ್ಸ್ ನ್ನು ಚೆಕ್ ಮಾಡಿದಾಗ ಎರಡೂ ಖಾತೆಗಳಲ್ಲಿಯೂ ಗಮನಕ್ಕೆ ಬಾರದ ರೀತಿಯಲ್ಲಿ ಹಣ ಕಡಿತ ಗೊಂಡಿರುವುದು ಕಂಡುಬಂದಿರುತ್ತದೆ.
ಸದರಿ ವಿಷಯವಾಗಿ ಸಂಬಂಧಪಟ್ಟ ಬ್ಯಾಂಕ್ ನಲ್ಲಿ ವಿಚಾರಿಸಿದ್ದು ಪೇಟಿಯಂ ಆಪ್ ಮುಖಾಂತರ ಯಾವುದೋ ಮೊಬೈಲ್ ಗೇಮಿಂಗ್ ಆಪ್ ಗಳಿಗೆ ಹಣ ಕಟಾವು ಆಗಿರುವ ಬಗ್ಗೆ ಬ್ಯಾಂಕ್ ನವರು ಮಾಹಿತಿ ನೀಡಿರುತ್ತಾರೆ.
ಆದರೆ ಪೇಟಿಯಂ ಆಪ್ ಯಾಗಲಿ ಅಥವಾ ಯಾವುದೇ ಗೇಮ್ ಆಪ್ ಆಗಲಿ ಮಹಿಳೆಯು ತನ್ನ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿರುವುದಿಲ್ಲ ಆದರೆ ಸೈಬರ್ ವಂಚಕರು ಮಹಿಳೆಯ ಮೊಬೈಲ್ ಗೆ .APK FILE ಅನ್ನು ಕಳುಹಿಸಿ ಅವರ ಮೊಬೈಲ್ ನ ಸಂಪೂರ್ಣ Access ನ್ನು ಪಡೆದುಕೊಂಡು ಪೆಟಿಎಂ ಆಪ್ ನ್ನು ಮಹಿಳೆಯ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿ 02 ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ದಿ:24-06-2025 ರಿಂದ ದಿ:10/08/2025 ರವರೆಗೆ ಒಟ್ಟು 10,65,899/- ರೂ ಗಳನ್ನು ಸೈಬರ್ ವಂಚಕರು ಬೇರೆ ಬೇರೆ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿ ಮಹಿಳೆಗೆ ವಂಚನೆ ಮಾಡಿರುತ್ತಾರೆ.
ಸದರಿ ವಿಚಾರಕ್ಕೆ ಸಂಬಂಧಿಸಿದಂತೆ ದಿ:15/08/2025 ರಂದು ನಗರದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಆದ್ದರಿಂದ ಮೊಬೈಲ್ ಗಳಿಗೆ ಬರುವಂತಹ ಯಾವುದೇ ರೀತಿಯ ಅಪರಿಚಿತ, ಅನುಮಾನಾಸ್ಪದ .APK FILE ಗಳನ್ನು ಸೂಕ್ತ ಪರಿಶೀಲನೆಗೆ ಒಳಪಡಿಸದೇ ಇನ್ಸ್ಟಾಲ್ ಮಾಡಿಕೊಳ್ಳಬಾರದಾಗಿ ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ವತಿಯಿಂದ ವಿನಂತಿಸಿದೆ.

ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗಿದ್ದಲ್ಲಿ ಕೂಡಲೇ ತಡಮಾಡದೇ ಅಗತ್ಯ ಮಾಹಿತಿಯೊಂದಿಗೆ
ಟೋಲ್ ಫ್ರೀ ಸಂಖ್ಯೆ 1930 ಗೆ ಕರೆಮಾಡಿ ದೂರು ದಾಖಲಿಸುವಂತೆ ಕೋರಲಾಗಿದೆ.

Continue Reading

Chikmagalur

ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪಂಚ ಗ್ಯಾರಂಟಿ ಶಕ್ತಿ ತುಂಬಿದೆ: ಸಚಿವ ಜಾರ್ಜ್

Published

on

ಚಿಕ್ಕಮಗಳೂರು: ಜನರಲ್ಲಿ ಆರ್ಥಿಕ ಶಕ್ತಿ ತುಂಬಲು ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಈ ಯೋಜನೆ ಅನುಕೂಲವಾಗಿದೆ ಎಂದು ಮಾನ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೆ.ಜೆ.ಜಾರ್ಜ್ ಅವರು ಹೇಳಿದರು.

ಚಿಕ್ಕಮಗಳೂರು ಕ್ಷೇತ್ರದ ಬೆಳವಾಡಿ ಕೆರೆಗೆ ಇಂದು ಬಾಗಿನ ಅರ್ಪಿಸಿ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಜನಸಂಖ್ಯೆಯಲ್ಲಿ ಶೇ.50 ರಷ್ಟು ಮಹಿಳೆಯರಿದ್ದು, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿದರೆ ಇಡೀ ಕುಟುಂಬಕ್ಕೆ ಬಲ ಬಂದಂತಾಗಲಿದೆ. ಯುವಕರಿಗೆ ಯುವನಿಧಿ, 1.60 ಕೋಟಿ ಜನರಿಗೆ 200 ಯೂನಿಟ್‌ಗಳಷ್ಟು ಉಚಿತ ವಿದ್ಯುತ್ ನೀಡುವ ವ್ಯವಸ್ಥೆ,. ಅಂತೆಯೇ ಮಹಿಳೆಯರಿಗೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ, ಗೃಹಲಕ್ಷ್ಮೀ ಯೋಜನೆಯಡಿ ನೀಡಲಾಗುವ 2,000 ರೂ.ಗಳು ಸರಾಸರಿ ಪರಿಗಣಿಸಿದರೆ ಒಂದು ಕುಟುಂಬಕ್ಕೆ 5 ಸಾವಿರ ರೂ. ದೊರೆತಂತಾಗುತ್ತಿದೆ ಎಂದರು.

ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಸೋಲಾರ್ ವ್ಯವಸ್ಥೆಯನ್ನು ಹೆಚ್ಚು ಮಾಡಲು ಯೋಜನೆ ರೂಪಿಸಲಾಗಿದೆ. ಜೊತೆಗೆ ಶರಾವತಿ ಪಂಪ್ ಸ್ಟೋರೇಜ್ ನೀರು ಬಳಸಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯದ ಅನುಮತಿ ಕೋರಲಾಗಿದೆ. ಪಾವಗಡದಲ್ಲಿ ಇನ್ನೂ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಮುಂದಾಗಿದ್ದೇವೆ. ಇದಕ್ಕೆ ರೈತರಿಂದ ಗುತ್ತಿಗೆ ಪಡೆದ ಭೂಮಿಗೆ ಸರ್ಕಾರ ಪ್ರತೀ ತಿಂಗಳು ಹಣ ಪಾವತಿಸುತ್ತಿದೆ. ಕುಸುಮ್-ಸಿ ಯೋಜನೆಯಡಿ 2,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಂಬಂಧ ಖಾಸಗಿಯವರು ಬಂಡವಾಳ ಹೂಡಲಿದ್ದು, ಅವರಿಂದ 2 ಅಥವಾ 2.10 ರೂ.ಗಳಿಗೆ ಕೊಡಲು ಮುಂದೆ ಬಂದಿದ್ದಾರೆ. ಇದಕ್ಕೆ ಸುಮಾರು 10 ಸಾವಿರ ಕೋಟಿ ರೂ. ಬಂಡವಾಳ ಹೂಡುವ ಅವಶ್ಯಕತೆ ಇದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಡೆಗಳಲ್ಲಿ ಕೊಳವೆ ಬಾವಿಗಳಿಗೆ ಸೋಲಾರ್ ಮೂಲಕ ವಿದ್ಯುತ್ ಅನ್ನು ಒದಗಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಬೆಳವಾಡಿ ಸುತ್ತಮುತ್ತ ವಿದ್ಯುತ್ ಉಪ ಕೇಂದ್ರ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಚಿಕ್ಕಮಗಳೂರು ಕ್ಷೇತ್ರದ ಶಾಸಕರಾದ ಹೆಚ್.ಡಿ.ತಮ್ಮಯ್ಯ ಪ್ರಾಸ್ತಾವಿಕ ಮಾತನಾಡಿ, ಕಳೆದ ೨೫ ವರ್ಷಗಳಿಂದೀಚೆಗೆ ದೇವನೂರು ಕೆರೆ ಮಳೆಯಿಂದ ಮಾತ್ರ ಒಮ್ಮೆ ತುಂಬಿತ್ತು. ಬಹುಶಃ ಇದೊಂದು ತೆಂಗು ಹಾಗೂ ಅಡಿಕೆಯ ನಾಡಾಗಿತ್ತು. ಬರಗಾಲ ಬಂದು ಈ ಎರಡು ಕೆರೆಗೆ ನೀರಿಲ್ಲದೆ ಬರಡಾಯಿತು. ಬಹುಶಃ ಬೆಳವಾಡಿ, ದೇವನೂರಿನಂತಹ ದೊಡ್ಡ ಗ್ರಾಮಗಳಿಂದ ಜನರು ಬೆಂಗಳೂರಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಕಾಲದಲ್ಲಿ ನೀರು ಮತ್ತು ವಿದ್ಯುತ್ ದೊರಕಿದರೆ ಇಲ್ಲಿನ ರೈತರು ಉತ್ತಮ ಬೆಳೆ ಬೆಳೆದು ಬೆಲೆ ಸಿಕ್ಕಿದ್ದಲ್ಲಿ ಅವರೆಲ್ಲಾ ಸ್ವಾಭಿಮಾನಿಗಳಾಗಿ ಬದುಕುತ್ತಾರೆ. ಅನೇಕ ರೈತ ಮುಖಂಡರು ಈ ಕೆರೆಯನ್ನು ತುಂಬಿಸಲು ಪ್ರಯತ್ನಿಸಿದ್ದರು ಎಂದು ಹೇಳಿದರು.

ಈ ಹಿಂದೆ ಮಲ್ಲಿಕಾರ್ಜುನ ಪ್ರಸನ್ನ ಅವರು ಸಣ್ಣ ನೀರಾವರಿ ಸಚಿವರಾದ ಬಳಿಕ ಜನಪ್ರತಿನಿಧಿಗಳಾಗಿದ್ದ ಕೆ.ಬಿ.ಮಲ್ಲಿಕಾರ್ಜುನ್, ಧರ್ಮೇಗೌಡರು, ಸಿ.ಟಿ.ರವಿ ಇವರುಗಳು ಕರಗಡ ಯೋಜನೆಗೆ ಶ್ರಮಪಟ್ಟಿದ್ದಾರೆ. ಆದರೆ ಕರಗಡ ಯೋಜನೆ ಕಳಸಾಪುರ ಮತ್ತು ಈಶ್ವರಹಳ್ಳಿ ಕೆರೆಗಳನ್ನು ಮಾತ್ರ ತುಂಬಲು ಶಕ್ತವಾಗಿದೆ. ಈ ಕೆರೆಗಳಿಗೆ ನೀರು ತುಂಬಿಸಲು ರಣಘಟ್ಟ ಯೋಜನೆ, ಭದ್ರಾ ಉಪ ಕಣಿವೆ ಯೋಜನೆ ಇದ್ದರೂ ಈ ಯೋಜನೆಗಳು ಕೈಗೂಡುವವರೆಗೆ ಇನ್ನೂ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಜಿಲ್ಲೆಯ ಉಸ್ತುವಾರಿ ಸಚಿವ ಜಾರ್ಜ್ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಮಾಡಿದ ಫಲವಾಗಿ ಎತ್ತಿನಹೊಳೆ ನೀರು ಇಲ್ಲಿಯವರೆಗೆ ನೀರು ಹರಿದು ಬಂದಿದೆ. ಆದರೆ ಮುಂದೆ ರಣಘಟ್ಟ ಯೋಜನೆಯನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿದರು. ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ರಾಜ್ಯ ಪರಿಸರ ತಜ್ಞರ ಮೌಲ್ಯ ಮಾಪನ ಸಮಿತಿಯ ಅಧ್ಯಕ್ಷ ಎ.ಎನ್.ಮಹೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ, ಮುಖಂಡರಾದ ಹೆಚ್.ಪಿ.ಮಂಜೇಗೌಡ, ತಾ.ಪಂ. ಮಾಜಿ ಅಧ್ಯಕ್ಷ ಬಸವರಾಜ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ತಹಸೀಲ್ದಾರ್ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.

Continue Reading

Chikmagalur

ಗಿರೀಶ್‌ ಮಟ್ಟಣ್ಣನವರ್‌ ನಕ್ಸ್‌ಲ್‌ ಪೀಡಿತ ಪ್ರದೇಶದಲ್ಲಿ ರೆಸಾರ್ಟ್‌ ಮಾಡಿದ್ದಾನೆ: ರಘುಪತಿ ಭಟ್‌ ಆರೋಪ

Published

on

ಚಿಕ್ಕಮಗಳೂರು: ಧರ್ಮಸ್ಥಳ ಪ್ರಕರಣದ  ಕುರಿತು ಪ್ರತಿನಿತ್ಯ ಸಾಮಾಜಿಕ ಜಾಲತಾಣದಲ್ಲಿ ಕಥೆ ಹೇಳುತ್ತಿರುವ ಗಿರೀಶ್‌ ಮಟ್ಟಣ್ಣನವರ್‌  ನಕ್ಸಲ್‌ ಪೀಡಿತ ಪ್ರದೇಶದಲ್ಲಿ ರೆಸಾರ್ಟ್‌ ಮಾಡಿದ್ದಾನೆ. ಈತನಿಗೆ ಎಲ್ಲಿಂದ ಆದಾಯ ಬಂತು? ಎಂದು ರಾಜ್ಯ ಬ್ರಾಹ್ಮಣ ಅರ್ಚಕರು ಹಾಗೂ ಪುರೋಹಿತ ಪರಿಷತ್‌ನ ಉಪಾಧ್ಯಕ್ಷ ರಘುಪತಿ ಭಟ್‌ ಗಂಭೀರ ಆರೋಪ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗಿರೀಶ್‌ ಮಟ್ಟಣ್ಣನವರ್‌ ಶೃಂಗೇರಿ ಸಿರಿಮನೆ ಫಾಲ್ಸ್ ಹತ್ತಿರ ಹತ್ತಾರು ಎಕರೆಯಲ್ಲಿ ರೆಸಾರ್ಟ್ ಮಾಡಿದ್ದಾನೆ. ಇವನಿಗೆ ಆದಾಯ ಎಲ್ಲಿಂದ ಬರುತ್ತೆ? ಸಿರಿಮನೆ, ಕಿಗ್ಗಾ, ಬುಕ್ಕಡಿಬೈಲ್ ಸುತ್ತಮುತ್ತಲಿನ ಪ್ರದೇಶ ನಕ್ಸಲ್ ಪೀಡಿತ ಪ್ರದೇಶವಾಗಿದೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

 

ಆ ನಕ್ಸಲ್ ಪೀಡಿತ ಜಾಗದಲ್ಲಿ ದೊಡ್ಡ ರೆಸಾರ್ಟ್ ಮಾಡಿದ್ದಾನೆ. ಸರ್ಕಾರ ಅದಿವಾಸಿಗಳಿಗೆ ನೀಡಿದ ವಸತಿ ಪ್ರದೇಶದಲ್ಲಿ ರೆಸಾರ್ಟ್ ಮಾಡಿದ್ದಾನೆ. ಇದೆಲ್ಲವನ್ನ ಹೇಗೆ ಮಾಡಿದ? ಎಂದು ಪ್ರಶ್ನಿಸಿದರು.

 

 


Continue Reading

Trending

error: Content is protected !!