Chikmagalur
ಮೈತ್ರಿ ಗೆಳೆಯ ಜೆಡಿಎಸ್ ಭೋಜೇಗೌಡರಿಗೆ ಮಾತಿನಲ್ಲಿ ತಿವಿದ ಸಿ.ಟಿ.ರವಿ
ವೇದಿಕೆ ಮೇಲಿದ್ದ ಜೆಡಿಎಸ್ ಎಂಎಲ್ಸಿ ಭೋಜೇಗೌಡರ ಕಾಲೆಳೆದ ಸಿ.ಟಿ. ರವಿ
4 ಬಾರಿ ಶಾಸಕನಾಗಿದ್ದಾಗ ಹೆಚ್ಚು ಕೆಲಸ ಮಾಡಿದ್ದು 2018-2023
ಆದರೆ, ಈ ಬಾರಿ ಹೆಚ್ಚು ಕೆಲಸ ಮಾಡಿದ್ರು ಸೋತೆ
ಚುನಾವಣೆ ಸಂದರ್ಭದಲ್ಲಿ ಕೆಲಸ ಚರ್ಚೆಯಾಗಲಿಲ್ಲ, ಅಪಪ್ರಚಾರ ಚರ್ಚೆಯಾಯಿತು
ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗೇ ಕೆಲಸ ಮಾಡ್ತು
ನಮ್ಮ ನಾಯಕರ ಹೆಸರನ್ನೂ ಬಳಸಿಕೊಂಡು ನನ್ನ ಬಗ್ಗೆ ಅಪಪ್ರಚಾರ ಮಾಡಿದ್ರು
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಸೋಲನ್ನ ನೆನೆದ ಸಿ.ಟಿ.ರವಿ
Chikmagalur
ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪಂಚ ಗ್ಯಾರಂಟಿ ಶಕ್ತಿ ತುಂಬಿದೆ: ಸಚಿವ ಜಾರ್ಜ್
ಚಿಕ್ಕಮಗಳೂರು: ಜನರಲ್ಲಿ ಆರ್ಥಿಕ ಶಕ್ತಿ ತುಂಬಲು ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಈ ಯೋಜನೆ ಅನುಕೂಲವಾಗಿದೆ ಎಂದು ಮಾನ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೆ.ಜೆ.ಜಾರ್ಜ್ ಅವರು ಹೇಳಿದರು.
ಚಿಕ್ಕಮಗಳೂರು ಕ್ಷೇತ್ರದ ಬೆಳವಾಡಿ ಕೆರೆಗೆ ಇಂದು ಬಾಗಿನ ಅರ್ಪಿಸಿ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಜನಸಂಖ್ಯೆಯಲ್ಲಿ ಶೇ.50 ರಷ್ಟು ಮಹಿಳೆಯರಿದ್ದು, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿದರೆ ಇಡೀ ಕುಟುಂಬಕ್ಕೆ ಬಲ ಬಂದಂತಾಗಲಿದೆ. ಯುವಕರಿಗೆ ಯುವನಿಧಿ, 1.60 ಕೋಟಿ ಜನರಿಗೆ 200 ಯೂನಿಟ್‌ಗಳಷ್ಟು ಉಚಿತ ವಿದ್ಯುತ್ ನೀಡುವ ವ್ಯವಸ್ಥೆ,. ಅಂತೆಯೇ ಮಹಿಳೆಯರಿಗೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ, ಗೃಹಲಕ್ಷ್ಮೀ ಯೋಜನೆಯಡಿ ನೀಡಲಾಗುವ 2,000 ರೂ.ಗಳು ಸರಾಸರಿ ಪರಿಗಣಿಸಿದರೆ ಒಂದು ಕುಟುಂಬಕ್ಕೆ 5 ಸಾವಿರ ರೂ. ದೊರೆತಂತಾಗುತ್ತಿದೆ ಎಂದರು.

ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಸೋಲಾರ್ ವ್ಯವಸ್ಥೆಯನ್ನು ಹೆಚ್ಚು ಮಾಡಲು ಯೋಜನೆ ರೂಪಿಸಲಾಗಿದೆ. ಜೊತೆಗೆ ಶರಾವತಿ ಪಂಪ್ ಸ್ಟೋರೇಜ್ ನೀರು ಬಳಸಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯದ ಅನುಮತಿ ಕೋರಲಾಗಿದೆ. ಪಾವಗಡದಲ್ಲಿ ಇನ್ನೂ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಮುಂದಾಗಿದ್ದೇವೆ. ಇದಕ್ಕೆ ರೈತರಿಂದ ಗುತ್ತಿಗೆ ಪಡೆದ ಭೂಮಿಗೆ ಸರ್ಕಾರ ಪ್ರತೀ ತಿಂಗಳು ಹಣ ಪಾವತಿಸುತ್ತಿದೆ. ಕುಸುಮ್-ಸಿ ಯೋಜನೆಯಡಿ 2,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಂಬಂಧ ಖಾಸಗಿಯವರು ಬಂಡವಾಳ ಹೂಡಲಿದ್ದು, ಅವರಿಂದ 2 ಅಥವಾ 2.10 ರೂ.ಗಳಿಗೆ ಕೊಡಲು ಮುಂದೆ ಬಂದಿದ್ದಾರೆ. ಇದಕ್ಕೆ ಸುಮಾರು 10 ಸಾವಿರ ಕೋಟಿ ರೂ. ಬಂಡವಾಳ ಹೂಡುವ ಅವಶ್ಯಕತೆ ಇದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಡೆಗಳಲ್ಲಿ ಕೊಳವೆ ಬಾವಿಗಳಿಗೆ ಸೋಲಾರ್ ಮೂಲಕ ವಿದ್ಯುತ್ ಅನ್ನು ಒದಗಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಬೆಳವಾಡಿ ಸುತ್ತಮುತ್ತ ವಿದ್ಯುತ್ ಉಪ ಕೇಂದ್ರ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಚಿಕ್ಕಮಗಳೂರು ಕ್ಷೇತ್ರದ ಶಾಸಕರಾದ ಹೆಚ್.ಡಿ.ತಮ್ಮಯ್ಯ ಪ್ರಾಸ್ತಾವಿಕ ಮಾತನಾಡಿ, ಕಳೆದ ೨೫ ವರ್ಷಗಳಿಂದೀಚೆಗೆ ದೇವನೂರು ಕೆರೆ ಮಳೆಯಿಂದ ಮಾತ್ರ ಒಮ್ಮೆ ತುಂಬಿತ್ತು. ಬಹುಶಃ ಇದೊಂದು ತೆಂಗು ಹಾಗೂ ಅಡಿಕೆಯ ನಾಡಾಗಿತ್ತು. ಬರಗಾಲ ಬಂದು ಈ ಎರಡು ಕೆರೆಗೆ ನೀರಿಲ್ಲದೆ ಬರಡಾಯಿತು. ಬಹುಶಃ ಬೆಳವಾಡಿ, ದೇವನೂರಿನಂತಹ ದೊಡ್ಡ ಗ್ರಾಮಗಳಿಂದ ಜನರು ಬೆಂಗಳೂರಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಕಾಲದಲ್ಲಿ ನೀರು ಮತ್ತು ವಿದ್ಯುತ್ ದೊರಕಿದರೆ ಇಲ್ಲಿನ ರೈತರು ಉತ್ತಮ ಬೆಳೆ ಬೆಳೆದು ಬೆಲೆ ಸಿಕ್ಕಿದ್ದಲ್ಲಿ ಅವರೆಲ್ಲಾ ಸ್ವಾಭಿಮಾನಿಗಳಾಗಿ ಬದುಕುತ್ತಾರೆ. ಅನೇಕ ರೈತ ಮುಖಂಡರು ಈ ಕೆರೆಯನ್ನು ತುಂಬಿಸಲು ಪ್ರಯತ್ನಿಸಿದ್ದರು ಎಂದು ಹೇಳಿದರು.

ಈ ಹಿಂದೆ ಮಲ್ಲಿಕಾರ್ಜುನ ಪ್ರಸನ್ನ ಅವರು ಸಣ್ಣ ನೀರಾವರಿ ಸಚಿವರಾದ ಬಳಿಕ ಜನಪ್ರತಿನಿಧಿಗಳಾಗಿದ್ದ ಕೆ.ಬಿ.ಮಲ್ಲಿಕಾರ್ಜುನ್, ಧರ್ಮೇಗೌಡರು, ಸಿ.ಟಿ.ರವಿ ಇವರುಗಳು ಕರಗಡ ಯೋಜನೆಗೆ ಶ್ರಮಪಟ್ಟಿದ್ದಾರೆ. ಆದರೆ ಕರಗಡ ಯೋಜನೆ ಕಳಸಾಪುರ ಮತ್ತು ಈಶ್ವರಹಳ್ಳಿ ಕೆರೆಗಳನ್ನು ಮಾತ್ರ ತುಂಬಲು ಶಕ್ತವಾಗಿದೆ. ಈ ಕೆರೆಗಳಿಗೆ ನೀರು ತುಂಬಿಸಲು ರಣಘಟ್ಟ ಯೋಜನೆ, ಭದ್ರಾ ಉಪ ಕಣಿವೆ ಯೋಜನೆ ಇದ್ದರೂ ಈ ಯೋಜನೆಗಳು ಕೈಗೂಡುವವರೆಗೆ ಇನ್ನೂ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಜಿಲ್ಲೆಯ ಉಸ್ತುವಾರಿ ಸಚಿವ ಜಾರ್ಜ್ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಮಾಡಿದ ಫಲವಾಗಿ ಎತ್ತಿನಹೊಳೆ ನೀರು ಇಲ್ಲಿಯವರೆಗೆ ನೀರು ಹರಿದು ಬಂದಿದೆ. ಆದರೆ ಮುಂದೆ ರಣಘಟ್ಟ ಯೋಜನೆಯನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿದರು. ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ರಾಜ್ಯ ಪರಿಸರ ತಜ್ಞರ ಮೌಲ್ಯ ಮಾಪನ ಸಮಿತಿಯ ಅಧ್ಯಕ್ಷ ಎ.ಎನ್.ಮಹೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ, ಮುಖಂಡರಾದ ಹೆಚ್.ಪಿ.ಮಂಜೇಗೌಡ, ತಾ.ಪಂ. ಮಾಜಿ ಅಧ್ಯಕ್ಷ ಬಸವರಾಜ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ತಹಸೀಲ್ದಾರ್ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
Chikmagalur
ಗಿರೀಶ್ ಮಟ್ಟಣ್ಣನವರ್ ನಕ್ಸ್‌ಲ್ ಪೀಡಿತ ಪ್ರದೇಶದಲ್ಲಿ ರೆಸಾರ್ಟ್ ಮಾಡಿದ್ದಾನೆ: ರಘುಪತಿ ಭಟ್ ಆರೋಪ
ಚಿಕ್ಕಮಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಪ್ರತಿನಿತ್ಯ ಸಾಮಾಜಿಕ ಜಾಲತಾಣದಲ್ಲಿ ಕಥೆ ಹೇಳುತ್ತಿರುವ ಗಿರೀಶ್ ಮಟ್ಟಣ್ಣನವರ್ ನಕ್ಸಲ್ ಪೀಡಿತ ಪ್ರದೇಶದಲ್ಲಿ ರೆಸಾರ್ಟ್ ಮಾಡಿದ್ದಾನೆ. ಈತನಿಗೆ ಎಲ್ಲಿಂದ ಆದಾಯ ಬಂತು? ಎಂದು ರಾಜ್ಯ ಬ್ರಾಹ್ಮಣ ಅರ್ಚಕರು ಹಾಗೂ ಪುರೋಹಿತ ಪರಿಷತ್‌ನ ಉಪಾಧ್ಯಕ್ಷ ರಘುಪತಿ ಭಟ್ ಗಂಭೀರ ಆರೋಪ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗಿರೀಶ್ ಮಟ್ಟಣ್ಣನವರ್ ಶೃಂಗೇರಿ ಸಿರಿಮನೆ ಫಾಲ್ಸ್ ಹತ್ತಿರ ಹತ್ತಾರು ಎಕರೆಯಲ್ಲಿ ರೆಸಾರ್ಟ್ ಮಾಡಿದ್ದಾನೆ. ಇವನಿಗೆ ಆದಾಯ ಎಲ್ಲಿಂದ ಬರುತ್ತೆ? ಸಿರಿಮನೆ, ಕಿಗ್ಗಾ, ಬುಕ್ಕಡಿಬೈಲ್ ಸುತ್ತಮುತ್ತಲಿನ ಪ್ರದೇಶ ನಕ್ಸಲ್ ಪೀಡಿತ ಪ್ರದೇಶವಾಗಿದೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಆ ನಕ್ಸಲ್ ಪೀಡಿತ ಜಾಗದಲ್ಲಿ ದೊಡ್ಡ ರೆಸಾರ್ಟ್ ಮಾಡಿದ್ದಾನೆ. ಸರ್ಕಾರ ಅದಿವಾಸಿಗಳಿಗೆ ನೀಡಿದ ವಸತಿ ಪ್ರದೇಶದಲ್ಲಿ ರೆಸಾರ್ಟ್ ಮಾಡಿದ್ದಾನೆ. ಇದೆಲ್ಲವನ್ನ ಹೇಗೆ ಮಾಡಿದ? ಎಂದು ಪ್ರಶ್ನಿಸಿದರು.
Chikmagalur
79 ನೇ ಸ್ವತಂತ್ರ ದಿನಾಚರಣೆ, ಉಸ್ತುವಾರಿ ಸಚಿವರಿಂದ ಧ್ವಜಾರೋಹಣ
ಚಿಕ್ಕಮಗಳೂರು : 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಅವರಿಂದ ಧ್ವಜಾರೋ ಹಣ.
ಚಿಕ್ಕಮಗಳೂರು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಇಂಧನ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಅವರು ಧ್ವಜಾರೋಹಣ ನೆರವೇರಿಸಿದರು.
ಪೊಲೀಸ್ ಇಲಾಖೆ ಅರಣ್ಯ, ಇಲಾಖೆ, ಗೃಹರಕ್ಷಕ ದಳ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ಪಥ ಸಂಚರಿನ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಶಾಸಕರುಗಳಾದ ಟಿಡಿ ರಾಜೇಗೌಡ, ಎಚ್.ಡಿ ತಮ್ಮಯ್ಯ, ಎಂಎಲ್ಸಿ ಸಿ.ಟಿ ರವಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್ಪಿ ವಿಕ್ರಂ ಅಮಟೆ, ಜಿಲ್ಲಾ ಪಂಚಾಯಿತಿ ಸಿಇಒ ಕೀರ್ತನಾ ಸೇರಿದಂತೆ ಹಲವರು ಉಪಸ್ಥಿತರಿದ್ದರು
-
Chamarajanagar14 hours agoಕೆಎಸ್ಆರ್ಟಿಸಿ ಬಸ್ – ದ್ವಿಚಕ್ರ ಡಿಕ್ಕಿ: ಇಬ್ಬರು ಸಾ*ವು
-
Kodagu12 hours agoವಿರಾಜಪೇಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದ ಕಾರು -ಮಾರ್ಗ ಮಧ್ಯೆ ಅಪಘಾತ ಸ್ಥಳ ವೀಕ್ಷಿಸಿ ಮಾಹಿತಿ ಪಡೆದ ಶಾಸಕ ಪೊನ್ನಣ್ಣ
-
Mysore11 hours agoನ್ಯಾ. ನಾಗಮೋಹನ್ ದಾಸ್ ವರದಿ ಬಲಗೈ ಜನಾಂಗದವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ: ಸೋಸಲೆ ಶಶಿಕಾಂತ್
-
Politics16 hours agoಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ: ಎಚ್.ಕೆ.ಪಾಟೀಲ್
-
Chikmagalur14 hours agoಗಿರೀಶ್ ಮಟ್ಟಣ್ಣನವರ್ ನಕ್ಸ್‌ಲ್ ಪೀಡಿತ ಪ್ರದೇಶದಲ್ಲಿ ರೆಸಾರ್ಟ್ ಮಾಡಿದ್ದಾನೆ: ರಘುಪತಿ ಭಟ್ ಆರೋಪ
-
Kodagu15 hours agoಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ ಕಾಮಗಾರಿಗೆ ಶಿಲಾನ್ಯಾಸ
-
Mysore14 hours agoಸರ್ಕಾರದ ಸಹಾನುಭೂತಿಯ ಫಲ: ಶ್ರೀವತ್ಸ
-
Special20 hours agoಇಂದಿನಿಂದ ವಾರ್ಷಿಕ ಫಾಸ್ಟ್ ಟ್ಯಾಗ್ ಪಾಸ್ ಜಾರಿ : ಅರ್ಜಿ ಸಲ್ಲಿಸುವುದು ಹೇಗೆ?
