Connect with us

Hassan

ಕೇಂದ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ, ಹಾಸನ ಜಿಲ್ಲೆಯಲ್ಲಿ ಮುನಿಸು

Published

on

ನಾಮಪತ್ರ ಸಲ್ಲಿಸಲು ಸಿದ್ದರಾದ ಹೆಚ್.ಪಿ. ಕಿರಣ್, ಪೂಜೆ ಸಲ್ಲಿಸಿ ಪ್ರಚಾರ ಆರಂಭ

ಹಾಸನ: ಕೇಂದ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಆಗಿದ್ದರೂ ರಾಜ್ಯದಿಂದ ಸೂಚನೆ ಬಾರದೆ ಹಾಸನ ಜಿಲ್ಲೆಯಲ್ಲಿ ಮುನಿಸು ಎಂಬಂತೆ ಹೊಂದಾಣಿಕೆ ಆಗದೇ ಬಿಜೆಪಿ ಮುಖಂಡರಾದ ಹೆಚ್.ಪಿ. ಕಿರಣ್ ಅವರು ಶುಕ್ರವಾರದಂದು ನಾಮಪತ್ರ ಪಡೆಯುವ ಮೂಲಕ ಅಚ್ಚರಿ ಮೂಡಿಸಿದಲ್ಲದೇ ಶನಿವಾರದಂದು ವಿವಿಧ ದೇವಸ್ಥಾನಗಳಲ್ಲಿ ನಾಮಪತ್ರವನ್ನಿಟ್ಟು ಪೂಜೆ ಸಲ್ಲಿಸಿ ಪ್ರಚಾರಕ್ಕೆ ದುಮುಕಿದ್ದಾರೆ.

ಲೋಕಾಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೈತ್ರಿಯಲ್ಲಿ ದಿನಕ್ಕೊಂದು ಬದಲಾವಣೆ ಕಾಣಲಾಗುತ್ತಿದೆ. ಒಂದು ಕಡೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ಅವರು ಬಿಜೆಪಿ ಮುಖಂಡರ ಹಲವಾರು ಮನೆಗೆ ಹೋಗಿ ಬಾಂಧವ್ಯ ಬೆಳೆಸುತ್ತಿದ್ದರೇ ಇನ್ನೊಂದು ಕಡೆ ಬಿಜೆಪಿಯವರು ಹೈಕಮಾಂಡ್ ಆದೇಶದ ಬಾರದ ಕಾರಣ ಜೆಡಿಎಸ್ ಗೆ ಟಾಂಗ್ ನೀಡಲು ಮುಂದಾಗಿ ಕಿರಣ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಸಿದ್ಧತೆಯಲ್ಲಿ ತೊಡಗಿದ್ದಾರೆ. ಚುಣಾವಣೆ ಇನ್ನೆನೂ ಸಮೀಪರ ಇರುವಾಗಲೇ ಇಂತಹ ಘಟನೆಗಳು ಮೂರನೇ ಅಭ್ಯರ್ಥಿಗೆ ಲಾಭವಾಗುವುದೇ ಎನ್ನುವ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬಂದಿದೆ.ನ್..ಡಿ.ಎ. ಅಭ್ಯರ್ಥಿ ಯಾರೆಂದು ಘೋಷಣೆ ಆಗದ ಕಾರಣ ನಾನು ಆಕಾಂಕ್ಷಿ ಎಂದು ಟಿಕೆಟ್ ಸಿಗುವ ವಿಶ್ವಾಸದಲ್ಲಿ ನಾಮಪತ್ರ ತೆಗೆದುಕೊಂಡಿರುವುದಾಗಿ ಹೇಳಿರುವ ಕಿರಣ್ ಅವರು ಇನ್ನಷ್ಟು ದಿನ ಕಾದು ನೋಡಬೇಕಾಗಿದೆ.

ಬಿಜೆಪಿ ಮುಖಂಡರಾದ ಹೆಚ್.ಪಿ. ಕಿರಣ್ ಮಾಧ್ಯಮದೊಂದಿಗೆ ಮಾತನಾಡಿ, ಲೋಕಾಸಭೆ ಚುನಾವಣೆಯಲ್ಲಿ ಪಾರ್ಟಿಯಿಂದ ಆಕಾಂಕ್ಷಿಯಾಗಿದ್ದು, ಒಳ್ಳೆಯ ದಿನವೆಂದು ನಾಮಪತ್ರ ತರಲಾಗಿದ್ದು, ದೇವರ ಸನ್ನಿದಿಗೆ ಹೋಗಿ ಆಶೀರ್ವಾದ ಪಡೆಯಲಾಗುವುದು. ಬಿಜೆಪಿ ಪರ ಪ್ರಚಾರ ಈಗಾಗಲೇ ಆರಂಭಿಸಿದ್ದೇವೆ. ಈಗಾಗಲೇ ಹೈಕಮಾಂಡ್ ಬಿಜೆಪಿ ಮತ್ತು ಮೋದಿ ಪರ ಪ್ರಚಾರ ಮಾಡಿ ಎಂದು ಸೂಚನೆ ಕೊಟ್ಟಿರುವಂತೆ ಪ್ರಚಾರ ಮಾಡುತ್ತೇವೆ ಹೊರತು ಬಂಡಾಯವಿಲ್ಲ. ಕೇಂದ್ರದಲ್ಲಿ ಮೈತ್ರಿ ಆಗಿದ್ದರೂ ಹಾಸನದಲ್ಲಿ ಇನ್ನು ಫೈನಲ್ ಆಗಿರುವುದಿಲ್ಲ. ನಾನೋಬ್ಬ ಆಕಾಂಕ್ಷಿ ಆಗಿದ್ದರಿಂದ ಶುಕ್ರವಾರ ಒಳ್ಳೆ ದಿನ ಎಂದು ಹೇಳಿದ್ದರಿಂದ ನಾಮಪತ್ರ ತರಲಾಗಿದೆ. ನಾಮಪತ್ರ ಪಡೆಯಲು ಏಪ್ರಿಲ್ ೪ ಕೊನೆಯ ದಿನಾಂಕ ಆಗಿದ್ದು, ಕಡಿಮೆ ಸಮಯ ಇರುವುದರಿಂದ ಕೊನೆ ಸಮಯದಲ್ಲಿ ಅವಕಾಶ ಸಿಕ್ಕರೆ ತಯಾರು ಮಾಡುವುದಕ್ಕೆ ಆಗುವುದಿಲ್ಲ. ಮೊದಲೆ ತಯಾರು ಮಾಡಿಕೊಂಡಿದ್ದು, ಪಾರ್ಟಿ ಯಾರಿಗೆ ಸೂಚನೆ ಕೊಡುತ್ತದೆ ಅವರಿಗೆ ಪ್ರಚಾರ ಮಾಡುತ್ತೇವೆ ಎಂದರು. ನಮ್ಮ ಪರವಾಗಿ ಪಾರ್ಟಿ ಸೂಚನೆ ಕೊಟ್ಟರೇ ಅವರು ಪ್ರಚಾರ ಮಾಡಲಿ. ಅವರ ಪರವಾಗಿ ಪಾರ್ಟಿ ಆದೇಶಿಸಿದರೇ ನಾವು ಪ್ರಚಾರ ಮಾಡಲಾಗುವುದು. ಮಾಜಿ ಶಾಸಕರಾದ ಪ್ರೀತಂಗೌಡರು ನನ್ನ ರಾಜಕೀಯದ ಗುರುಗಳು. ಆದರೇ ಅವರು ಪ್ರಧಾನ ಕಾರ್ಯದರ್ಶಿ ಆಗಿರುವುದರಿಂದ ಈ ವಿಚಾರದಲ್ಲಿ ಏನು ಮಾತನಾಡಿಲ್ಲ. ಕಾರ್ಯಕರ್ತರ ಸೂಚನೆ ಮೇರೆಗೆ ತಯಾರು ಮಾಡಿಕೊಂಡು ಮೋದಿ ಅವರಿಗೆ ಓಟ್ ಕೇಳೋಣಾ ಎಂದಿದ್ದಾರೆ. ನನಗೆ ಬಿಜೆಪಿಯಿಂದ ಟಿಕೆಟ್ ಕೊಡಬಹುದು ಎನ್ನುವ ವಿಶ್ವಾಸವಿದೆ. ಜೆಡಿಎಸ್ ಮೈತ್ರಿಯಲ್ಲಿ ಏನ್.ಡಿ.ಎ. ಯಿಂದ ಸೂಚನೆಯಾಗಿ ಪ್ರಚಾರ ಮಾಡುತ್ತಿದ್ದಾರೆ. ನಾವು ಅದೇ ರೀತಿ ಪ್ರಚಾರ ಮಾಡುತ್ತಿದ್ದೇವೆ. ಪಕ್ಷ ಯಾರಿಗೆ ಒಲವು ತೋರುತ್ತದೆ ನೋಡಬೇಕು. ಇದುವರೆಗೂ ಜೆಡಿಎಸ್ ಪಕ್ಷದಿಂದ ಯಾರು ನಮ್ಮನ್ನು ಸಂಪರ್ಕ ಮಾಡಿರುವುದಿಲ್ಲ ಎಂದು ಹೇಳಿದರು.

ಇದೆ ವೇಳೆ ಬಿಜೆಪಿ ಮುಖಂಡರಾದ ನಾರಾಯಣಗೌಡ, ದೀಕ್ಷಿತ್, ಪ್ರೀತಿ ವರ್ಧನ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಯಾರು ಆತಂಕಪಡಬೇಕಾಗಿಲ್ಲ ಕಾಲವೇ ಉತ್ತರ ಕೊಡಲಿದೆ ಜೆಡಿಎಸ್ ಕಾರ್ಯಕರ್ತರಿಗೆ ದೈರ್ಯ ತುಂಬಿದ ಹೆಚ್.ಡಿ. ರೇವಣ್ಣ

Published

on

ಹಾಸನ : ಯಾರು ಆತಂಕಪಡಬೇಕಾಗಿಲ್ಲ. ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕಾಗುತ್ತದೆ ಅಷ್ಟೇ. ನಮ್ಮ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಲ್ಲಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ದೈರ್ಯ ತುಂಬಿದರು.

ನಗರದ ಕುವೆಂಪು ಬಡಾವಣೆಯಲ್ಲಿರುವ ಡಿ.ಟಿ. ಪರಮೇಶ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡುವುದಿಲ್ಲ. ಅಧಿಕಾರ ಇದ್ದರೂ ಇಲ್ಲದಿದ್ದರೂ ಕೆಲಸ ಮಾಡ್ತಿವಿ, ೪೮ ಗಂಟೆಗಳಲ್ಲಿ ಪ್ರಜ್ವಲ್ ರೇವಣ್ಣ ಬಾ ಎಂಬ ಕುಮಾರಸ್ವಾಮಿ ಮನವಿ ಮಾಡಿದ ವಿಚಾರವಾಗಿ ಮಾತನಾಡಿ, ಕೋರ್ಟ್‌ನಲ್ಲಿ ಕೇಸ್ ಇದ್ದಾಗ ನಾನು ಮಾತನಾಡುವುದಿಲ್ಲ. ಹೇಸಿಗೆಯಂತಹ ವಿಚಾರವವು ರಾಜ್ಯಕ್ಕೆ, ನಮಗೆ ಗೌರವ ತಂದುಕೊಡುವುದಿಲ್ಲ. ಈ ವಿಚಾರವನ್ನು ರಾಜಕೀಯವಾಗಿ ತೆಗದುಕೊಂಡು ಹೋಗಲಾಗುತ್ತಿದೆ. ಈದಕ್ಕೆಲ್ಲಾ ಮೂಲ ಯಾರಿದ್ದಾರೆ ಅವರನ್ನು ಬಂಧಿಸಿ ಶಿಕ್ಷೆ ವಿಧಿಸಲಿ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿದರು. ತಮ್ಮ ಮೇಲೆ ಎರಡು ಪ್ರಕರಣ ದಾಖಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ರೇವಣ್ಣ ಅವರು, ಯಾರು ಆತಂಕಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕು ಅಷ್ಟೇ. ನಮ್ಮ ಜಿಲ್ಲೆಯ ಜನರನ್ನು ಅರವತ್ತು ವರ್ಷ ದೇವೇಗೌಡರು ಕಾಪಾಡಿದ್ದಾರೆ. ನಾನೀದ್ದೀನಿ, ಎ.ಮಂಜು, ಸ್ವರೂಪ್ ಪ್ರಕಾಶ್ ಇದ್ದಾರೆ. ಕಾರ್ಯಕರ್ತರು ಯಾರು ಭಯಪಡುವ, ಆತಂಕಪಡುವ ಅಗತ್ಯವಿಲ್ಲ. ನನಗೂ ಜಿಲ್ಲೆಯ ಜನ ಇಪ್ಪತ್ತೈದು ವರ್ಷ ಆಶೀರ್ವಾದ ಮಾಡಿದ್ದಾರೆ ಎಂದು ಕಾರ್ಯಕರ್ತರಿಗೆ ದೈರ್ಯ ತುಂಬಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷ ಆಗಿದ್ದು, ಈ ಸರ್ಕಾರದ ವೇಳೆ ಯಾವುದಾದರೂ ರಸ್ತೆ ಗುಂಡಿ ಮುಚ್ಚಿಲ್ಲ. ಶಿಕ್ಷಕರ ಹುದ್ದೆ ಭರ್ತಿ ಮಾಡಿಲ್ಲ. ಒಂದು ವರ್ಷದಲ್ಲಿ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಮಾಡಿದರು. ರಾಜ್ಯ ಸರ್ಕಾರದ ಮಂತ್ರಿಗಳೇ ಸರ್ಕಾರಕ್ಕೆ ಧಮ್ಕಿ ಹಾಕುತ್ತಿದ್ದಾರೆ. ನಮ್ಮಲ್ಲಿ ಇದ್ದು ಆ ಕಡೆ ಹೋಗಿದ್ದಾರಲ್ಲಾ ಕೆಲವರು ಸರ್ಕಾರ ಬಂದು ಒಂದು ವರ್ಷ ಆಗಿದೆ ಹಾಸನ ಜಿಲ್ಲೆಗೆ ಏನು ಕೊಡುಗೆ ಕೊಡಿಸಿದ್ದಾರೆ ಎಂದು ಪ್ರಶ್ನೆ ಮಾಡಿದರು. ನಮ್ಮ ಆಡಳಿತದಲ್ಲಿ ನಾವು ಶಾಲಾ, ಕಾಲೇಜಿಗೆ ಮೂಲಭೂತ ಸೌಕರ್ಯ ಕೊಟ್ಟು ತೋರಿಸಿದ್ದೇವೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಈ ಬಾರಿ ಹದಿನೈದನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರ ಇದ್ದಾಗ ಹಾಸನ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈ ರೀತಿಯಾಗಲೂ ಕಾರಣ ಯಾರು ಕಾರಣ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರೆ ಅದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾತ್ರ. ಕುಮಾರಸ್ವಾಮಿ ಆಡಳಿತದಲ್ಲಿ ರಾಜ್ಯದಲ್ಲಿ ೧೫೦೦ ಹೈಸ್ಕೂಲ್, ೨೪೦ ಪ್ರಥಮ ದರ್ಜೆ ಕಾಲೇಜು ತೆರೆದರು. ಖಾಲಿ ಇದ್ದ ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದು ಎಚ್.ಡಿ.ಕುಮಾರಸ್ವಾಮಿ ಎಂದರು. ಐವತ್ತು ವರ್ಷ ಆಡಳಿತದ ಕಾಂಗ್ರೆಸ್ ಕೈಯಲ್ಲೂ ಆಗಿರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ಇಡೀ ಇಂಡಿಯಾ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದು ದೇವೇಗೌಡರು. ದೇವೇಗೌಡರ ಕುಟುಂಬ ಯಾವುದೇ ಖಾಸಗಿ ಶಾಲೆ ಮಾಡಿಲ್ಲ. ಆದರೇ ಶಿಕ್ಷಕರ ಮಕ್ಕಳಿಗೆ ಉದ್ಯೋಗದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಕೊಡಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಾಸನ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್, ಅರಕಲಗೂಡು ಶಾಸಕ ಎ. ಮಂಜು.ಸ್ವರೂಪ ಪ್ರಕಾಶ್. ಮಾಜಿ ಸಚಿವರಾದ ಎಚ್.ಕೆ. ಕುಮಾರಸ್ವಾಮಿ. ಮಾಜಿ ಶಾಸಕರಾದ ಕೆ.ಎಸ್. ಲಿಂಗೇಶ್ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಿವೇಕಾನಂದ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!