Connect with us

Hassan

ಜ.೨೪, ೨೫ ರಂದು ಜೆಡಿಎಸ್ ಮುಖಂಡರ ಸಭೆ

Published

on

ಹೆಚ್.ಡಿ. ದೇವೇಗೌಡ್ರ ಎರಡು ದಿನ ಜಿಲ್ಲೆಯಲ್ಲಿ ಪ್ರವಾಸ: ಎಸ್. ದ್ಯಾವೇಗೌಡ

ಹಾಸನ: ಮುಂದೆ ಬರಲಿರುವ ಲೋಕಾಸಭೆಯ ಚುನಾವಣೆ ದೃಷ್ಠಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ್ತು ಪಕ್ಷದ ಸಂಘಟನೆ ಬಗ್ಗೆ ಸುಧೀರ್ಘ ಚರ್ಚೆಯನ್ನು ಕಳೆದ ಎರಡು ದಿನಗಳ ಕಾಲ ಹಾಸನ ಮತ್ತು ಬೇಲೂರು ಹಾಗೂ ಅರಸೀಕೆರೆಯಲ್ಲಿ ನಮ್ಮ ನಾಯಕರಾದ ಹೆಚ್.ಡಿ. ದೇವೇಗೌಡರು ಸಭೆ ನಡೆಸಿ ಸಂಘಟಿಸಿದ್ದಾರೆ.

ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡರ ಸಭೆಯು ಜನವರಿ ೨೪ ಮತ್ತು ೨೫ ರಂದು ಎರಡು ದಿನಗಳ ಕಾಲ ನಡೆಯಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪ್ರವಾಸ ಮಾಡಲಿದ್ದಾರೆ ಎಂದು ಆಲೂರು ತಾಲೂಕು ಜೆಡಿಎಸ್ ಅಧ್ಯಕ್ಷಕೆ.ಎನ್.ಮಂಜೇಗೌಡ ಮತ್ತು ಹಾಸನ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಜನವರಿ ೨೪ ರಂದು ಬುಧವಾರ ಚನ್ನರಾಯಪಟ್ಟಣದಲ್ಲಿ ಮದ್ಯಾಹ್ನ ೩ ಗಂಟೆಗೆ ಸಾವಿತ್ರಮ್ಮ ಕರಿಯಪ್ಪಗೌಡ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಲಿದ್ದು, ದೇವೇಗೌಡರು ಭಾಗವಹಿಸಲಿದ್ದಾರೆ. ಸ್ಥಳೀಯ ಶಾಸಕರು ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಡೆಸಲಿದ್ದಾರೆ ಎಂದರು. ಜನವರಿ ೨೫ ರಂದು ಬೆಳಗ್ಗೆ ೧೦:೩೦ ಗಂಟೆಗೆ ಆಲೂರಿನ ಒಕ್ಕಲಿಗರ ಕಲ್ಯಾಣ ಮಂಟಪ ದಲ್ಲಿ ಸಭೆ ನಡೆಯಲಿದ್ದು, ಮಧ್ಯಾಹ್ನ ೧ ಗಂಟೆಗೆ ಸಕಲೇಶಪುರದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ ಹಾಗೂ ಸಭೆಯಲ್ಲಿ ಪಕ್ಷದ ಜನಪ್ರತಿನಿಧಿಗಳು ಭಾಗವಹಿಸುವಂತೆ ಮನವಿ ಮಾಡಿದರು.

ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಜೆಡಿಎಸ್‌ಗೆ ಉಳಿಯುವುದು ಬಹುತೇಕ ಅಂತಿಮ ಆಗಿರುವುದರಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ತವರು ಜಿಲ್ಲೆಯಲ್ಲಿ ಪೂರ್ವ ಸಿದ್ಧತಾ ಕಾರ್ಯ ಬಿರುಸುಗೊಳಿಸಿದ್ದಾರೆ. ಕೆಲ ದಿನಗಳ ಹಿಂದೆ ಜಿಲ್ಲೆ ಬೇಲೂರು ಪಟ್ಟಣದ ಶ್ರೀ ಚನ್ನಕೇಶವ ಸ್ವಾಮೀಜಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಸದರು, ಶಾಸಕರು, ಮಾಜಿ ಶಾಸಕರು ಹಾಗೂ ಪ್ರಮುಖ ಮುಖಂಡರ ಸಭೆ ನಡೆಸಿದ್ದ ಗೌಡರು, ಮರುದಿನ ಅರಸೀಕೆರೆಯಲ್ಲಿ ಇದೇ ಸಭೆ ಮುಂದುವರಿಸಿದ್ದರು. ಇದೀಗ ಮತ್ತೆರಡು ದಿನಗಳ ಪ್ರವಾಸ ಹಮ್ಮಿಕೊಂಡಿದ್ದು, ನಾಳೆಯಿಂದ ಚನ್ನರಾಯಪಟ್ಟಣ, ಆಲೂರು, ಸಕಲೇಶಪುರ ತಾಲೂಕುಗಳಲ್ಲಿ ಸಭೆ ನಡೆಸಲಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್ ದ್ಯಾವೇಗೌಡ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ದೇವೇಗೌಡರು ಜ.೨೪ರಿಂದ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ನಡೆಸುವುದಾಗಿ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಾಧ್ಯಮ ವಕ್ತಾರ ರಘು ಹೊಂಗೆರೆ, ವಕೀಲ ಶೇಷಾದ್ರಿ, ಮುಖಂಡ ಗಿರೀಶ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಎಸ್‌ಡಿಎಂ ಜನಮಂಗಳ ಯೋಜನೆಯಡಿ ಉಚಿತ ಕಮೋಡಾ ವೀಲ್ ಚೇರ್ ವಿತರಣೆ

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗೆ ಉಚಿತವಾಗಿ ಕಮೋಡಾ ವೀಲ್ ಚೇರ್ ವಿತರಣೆ ಮಾಡಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕಿನ ಯೋಜನಾಧಿಕಾರಿ ರತ್ನಾಕರ್ ಕೊಠಾರಿ ಮಾತನಾಡಿ, ತಾಲೂಕಿನಲ್ಲಿ ಇದುವರೆಗೂ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಅಂಗವಿಕಲರಿಗೆ ಅವಶ್ಯಕತೆ ಸಲಕರಣೆಗಳಾದ ವೀಲ್ ಚೇರ್, ಸೇಫ್ ವಾಕ‌ರ್, ವಾಟರ್ ಬೆಡ್, ವಾಕಿಂಗ್ ಸ್ಟಿಕ್ ಸೇರಿದಂತೆ ಒಟ್ಟು ಉಪಕರಣಗಳನ್ನು ನೀಡಲಾಗಿದೆ. ಅಲ್ಲದೆ 105 ಮಂದಿ ಸದಸ್ಯರಿಗೆ ಪ್ರತಿ ತಿಂಗಳು ತಲಾ ಒಂದೊಂದು ಸಾವಿರ ಮಾಸಾಸನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪಾಳ್ಯ ಹೋಬಳಿಯ ಮೇಲ್ವಿಚಾರಕಿ ಯಶೋಧ ಮಾತನಾಡಿ, ತಾಲೂಕಿನ ಪಾಳ್ಯ ಹೋಬಳಿ ನಲ್ಲೂರು ಗ್ರಾಮದ ನಿವಾಸಿಯಾದ ಬೈರಯ್ಯರ ಎಂಬುವವರು ಅನಾರೋಗ್ಯಕ್ಕೆ ತುತ್ತಾಗಿ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ಉಚಿತವಾಗಿ ನೀಡಲಾಯಿತು‌ ಎಂದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಸದಸ್ಯ ಮಲ್ಲಿಕಾರ್ಜುನ್, ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಗೀತಾ ಸೇರಿದಂತೆ ಫಲಾನುಭವಿಯ ಮನೆಯ ಸದಸ್ಯರು ಉಪಸ್ಥಿತರಿದ್ದರು.

Continue Reading

Hassan

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು

Published

on

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾವು

ಶಿವಪ್ರಸಾದ್ (32) ಸಾವನ್ನಪ್ಪಿದ ವ್ಯಕ್ತಿ

ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ರಾಮೇಶ್ವರ ಬಡಾವಣೆ‌ ಬಳಿ ಘಟನೆ

ದಿಡಗ ಗ್ರಾಮ ಪಂಚಾಯ್ತಿಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್

ಅತಿಯಾಗಿ ಮದ್ಯ ಸೇವಿಸುತ್ತಿದ್ದ ಶಿವಪ್ರಸಾದ್

ನಿನ್ನೆ ತಡರಾತ್ರಿ ಮದ್ಯಸೇವಿಸಿ ತಮ್ಮ KA-13-M-7321 ರೆನಾಲ್ಟೊ ಕಾರಿನೊಳಗೆ ಮಲಗಿದ್ದ ಶಿವಪ್ರಸಾದ್

ಕಾರಿನಲ್ಲೇ ಸಾವನ್ನಪ್ಪಿರುವ ಶಿವಪ್ರಸಾದ್

ಕಾರಿನೊಳಗೆ ಇದ್ದ ಕಾರಿನ ಕೀ

ಕಾರು ನಿಂತಿರುವುದನ್ನು ನಿಂತಲ್ಲೆ ನಿಂತಿರುವುದನ್ನು ನೋಡಿದ ಸ್ಥಳೀಯರು

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು

ಮ್ಯಾಕಾನಿಕ್ ಕರೆಸಿ ಕಾರಿನ ಡೋರ್‌ಲಾಕ್ ತೆಗೆದು ಪರಿಶೀಲಿಸಿದ ಪೊಲೀಸರು

 

ಕಾರಿನೊಳಗೆ ಸಾವನ್ನಪ್ಪಿದ್ದ ಶಿವಪ್ರಸಾದ್

ಶಿವಪ್ರಸಾದ್ ಆಲೂರು ತಾಲ್ಲೂಕಿನ, ಸಿದ್ದಾಪುರ ಗ್ರಾಮದವನು

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Hassan

ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್‌ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾ‌ರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪ ತಹಶೀಲ್ದಾ‌ರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.

ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.

Continue Reading

Trending

error: Content is protected !!