Hassan
ಪುತ್ರನ ಪರವಾಗಿ ಅಖಾಡಕ್ಕಿಳಿದ ದೊಡ್ಡಗೌಡರ ಸೊಸೆ
ಹಾಸನ :
ತಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿದ ಭವಾನಿರೇವಣ್ಣ ಹಾಗೂ ಪುತ್ರ ಸಂಸದ ಪ್ರಜ್ವಲ್‌ರೇವಣ್ಣ
ಹಾಸನ ಜಿಲ್ಲೆ, ಅರಕಲಗೂಡಿನ ನಿವಾಸದಲ್ಲಿ ಶಾಸಕ ಎ.ಮಂಜು ಅವರನ್ನು ಭೇಟಿ ಮಾಡಿದ ತಾಯಿ-ಮಗ
ಎ.ಮಂಜು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ
ಎರಡು ಮಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಭವಾನಿರೇವಣ್ಣ
ಕಳೆದ ಎರಡು ತಿಂಗಳಿನಿಂದ ವಿಶ್ರಾಂತಿಯಲ್ಲಿದ್ದ ಭವಾನಿರೇವಣ್ಣ
ಇದೀಗ ಮಗನ ಪರವಾಗಿ ಚುನಾವಣಾ ಅಖಾಡಕ್ಕೆ ಇಳಿದ ಭವಾನಿರೇವಣ್ಣ
ಭವಾನಿರೇವಣ್ಣ ಹಾಗೂ ಪ್ರಜ್ವಲ್‌ರೇವಣ್ಣ ಅವರಿಗೆ ಶಾಸಕ ಸ್ವರೂಪ್‌ಪ್ರಕಾಶ್ ಸಾಥ್
ಎಚ್.ಡಿ.ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಕೆಲ ತಿಂಗಳ ಹಿಂದೆ ಹೇಳಿಕೆ ನೀಡಿದ್ದ ಎ.ಮಂಜು
ಕಳೆದ ಬುಧವಾರ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಹಾಗೂ ಲೋಕಸಭಾ ಸದಸ್ಯರ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಗೈರಾಗಿದ್ದ ಶಾಸಕ ಎ.ಮಂಜು
ಎ.ಮಂಜು ಭೇಟಿ ಮಾಡಿ ಮಾತುಕತೆ ನಡೆಸಿದ ಭವಾನಿರೇವಣ್ಣ ಹಾಗೂ ಪ್ರಜ್ವಲ್‌ರೇವಣ್ಣ
ಎಲ್ಲರನ್ನೂ ಸನ್ಮಾನಿಸಿ ಗೌರವಿಸಿದ ಶಾಸಕ ಎ.ಮಂಜು
ಹಾಸನ ಜಿಲ್ಲೆಯ, ಸಕಲೇಶಪುರ, ಆಲೂರು, ಅರಸೀಕೆರೆ, ಬೇಲೂರು, ಹಾಸನ, ಶ್ರವಣಬೆಳಗೊಳ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿರುವ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು
ಅರಕಲಗೂಡು, ಕಡೂರಿನಲ್ಲಿ ಇನ್ನೂ ನಡೆಯದ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆ
ಸಭೆಗೂ ಮುನ್ನವೇ ಶಾಸಕ ಎ.ಮಂಜು ಅವರನ್ನು ಭೇಟಿ ಮಾಡಿದ ಸಂಸದ ಪ್ರಜ್ವಲ್‌ರೇವಣ್ಣ ಹಾಗೂ ಭವಾನಿರೇವಣ್ಣ
2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ರೇವಣ್ಣ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿ ಸೋತಿದ್ದ ಎ.ಮಂಜು
ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್ ಸೇರಿ ಶಾಸಕರಾಗಿ ಆಯ್ಕೆಯಾಗಿರುವ ಎ.ಮಂಜು
ಎಚ್.ಡಿ.ದೇವೇಗೌಡರ ಕಡೆಯ ಚುನಾವಣೆ, ಅವರೇ ಸ್ಪರ್ಧಿಸಬೇಕೆಂದು ಹೇಳಿಕೆ ನೀಡಿದ್ದ ಎ.ಮಂಜು
ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಹಿನ್ನೆಲೆಯಲ್ಲಿ ಎ.ಮಂಜು ಭೇಟಿ ಮಾಡಿದ ತಾಯಿ-ಮಗ
Hassan
ಅರ್ಜಿಗಳ ವಿಲೇವಾರಿಗೆ ಸೂಕ್ತ ಕ್ರಮವಹಿಸಲು ಸೂಚನೆ ನೀಡಿದ ಡಿಸಿ ಲತಾಕುಮಾರಿ
ಹಾಸನ: ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾಗಿರುವ 1069 ಅರ್ಜಿಗಳನ್ನು ವಿಲೇವಾರಿ ಮಾಡಿರುವ ಕುರಿತು ವರದಿ ನೀಡುವುದರ ಜೊತೆಗೆ ಇಂದು ಸ್ವೀಕಾರ ಮಾಡಿರುವ 135 ಅರ್ಜಿಗಳ ವಿಲೇವಾರಿಗೆ ಸೂಕ್ತ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜನ ಸ್ಪಂದನ ಸಭೆಯಲ್ಲಿ ಅಹವಾಲು ಸ್ವೀಕಾರ ಮಾಡಿ ಮಾತನಾಡಿದ ಅವರು ಸಾರ್ವಜನಿಕರ ಸ್ವಂತ ಜಮೀನು ಒತ್ತುವರಿ ಆಗಿದ್ದಲ್ಲಿ ನ್ಯಾಯಾಲಯದ ನಿರ್ದೇಶನವಿದ್ದರೆ ಮಾತ್ರ ಬಿಡಿಸಲು ಅವಕಾಶ ಇರುತ್ತದೆ ಎಂದು ತಿಳಿಸಿದರು.

ಕಳೆದ 20 ವರ್ಷದಿಂದ ಪಡಿತರ ಕಾರ್ಡ್ ಹೊಂದಿದ್ದು, ಆದಾಯ ಹೆಚ್ಚಳವಾಗಿದೆ ಎಂದು ಕಂಪ್ಯೂಟರ್‌ನಲ್ಲಿ ತೋರಿಸುತ್ತಿರುವುದರಿಂದ ೫ ವರ್ಷದಿಂದ ಪಡಿತರ ಕಾರ್ಡ್ ರದ್ದಾಗಿರುವುದನ್ನು ಸರಿಪಡಿಸಲು ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಅರಕಲಗೂಡು ತಾಲೂಕಿನ ಮಾದಿಹಳ್ಳಿಯಲ್ಲಿ ಏತನೀರಾವರಿಗೆ ಭೂಸ್ವಾಧೀನವಾಗಿದ್ದು, ಪರಿಹಾರ ಕೋರಿ ಬಂದ ಮನವಿಗೆ ಖುದ್ದು ತಹಸೀಲ್ದಾರ್ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.
ಪೌತಿಖಾತೆ, ಹದ್ದುಬಸ್ತು, ವಿದ್ಯುತ್ ಸಂಪರ್ಕ ಕಲ್ಪಿಸುವುದು, ಸಾಗುವಳಿ ಚೀಟಿ, ಕಂದಾಯ ಗ್ರಾಮ, ಖಾತೆ ಮಾಡುವ ಬಗ್ಗೆ, ಪೋಡಿ ದುರಸ್ತಿ, ಪಹಣಿ ತಿದ್ದುಪಡಿ, ಹೊಲಕ್ಕೆ ದಾರಿ ಬಿಡಿಸಿಕೊಡುವ ಬಗ್ಗೆ, ಶ್ರವಣಬೆಳಗೊಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ, ಇನಾಮು ರದ್ದು ಪಡಿಸುವ ಕುರಿತು, ಕೊಣನೂರು ಗ್ರಾಮ ಪಂಚಾಯಿತಿಯಲ್ಲಿ ಪೌರಕಾರ್ಮಿಕರಿಗೆ ಹಕ್ಕು ಪತ್ರ ನೀಡಲು ಮನವಿ, ಆಕಾರ ಬಂದು ತಿದ್ದುಪಡಿ ಮಾಡಿರುವವರ ಮೇಲೆ ಎಫ್.ಐ.ಆರ್ ದಾಖಲಿಸುವಂತೆ ಸೂಚಿಸಿದರಲ್ಲದೆ, ವಿದ್ಯುತ್ ಲೈನ್ ಹಾದು ಹೋಗಿರುವ ಸ್ಥಳಕ್ಕೆ ಪರಿಹಾರ ನೀಡಲು ಒಂದು ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಟ್ಟಾಯ ಗ್ರಾಮದಲ್ಲಿ ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸಲು, ವಸತಿ ಯೋಜನೆಯಡಿ ಮಂಜೂರಾದ ಮನೆಗೆ ಅಂತಿಮ ಬಿಲ್ ಹಣ ಪಾವತಿ ಮಾಡುವಂತೆ ಸೂಚಿಸಿದರಲ್ಲದೆ, ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಶೇಡ್ ಹಾಕಿರುವುದನ್ನು ನಿರ್ದಾಕ್ಷಿಣ್ಯವಾಗಿ ತೆರೆವುಗೊಳಿಸಲು ನಿರ್ದೇಶನ ನೀಡಿದರು.
ಬೊಮ್ಮನಹಳ್ಳಿ ಏತನೀರಾವರಿ ಯೋಜನೆಗೆ ಭೂಸ್ವಾಧೀನವಾಗಿರುವ ಜಾಗಕ್ಕೆ ಹಾಗೂ ಬೆಳೆ ಪರಿಹಾರ, ಖಾತೆ ಬದಲಾವಣೆ, ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದಲ್ಲಿ ಗೋಮಾಳದಲ್ಲಿ ಎರಡು ಗುಂಟೆ ಜಾಗ ಕಲ್ಪಿಸುವಂತೆ ಅಹವಾಲು ಅರ್ಜಿಗಳು ಸ್ವೀಕಾರವಾಯಿತು.

ಸಾರ್ವಜನಿಕರಿಗೆ ಕಾನೂನು ಸೇವೆಗಳ ಸಹಾಯಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಂದು ಕೋಶ ತೆರೆಯಲಾಗಿದೆ ಯಾರ ಸಹಾಯವಿಲ್ಲದವರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
Hassan
ಹಾಸನದ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ವಾರ್ಷಿಕೋತ್ಸವದ ಸಂಭ್ರಮ.
ಹಾಸನ ನಗರದ ಪ್ರತಿಷ್ಠಿತ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ವಾರ್ಷಿಕೋತ್ಸವ ದಿನಾಂಕ 19 .12. 2025 ರಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಶಾಲಾ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕೆ ಎಸ್ ಲತಾ ಕುಮಾರಿ, ಐಎಎಸ್ ಭಾಗವಹಿಸಿದ್ದರು. ವಿಶಿಷ್ಟ ಅತಿಥಿಯಾಗಿ ರಾಜೀವ ಶಿಕ್ಷಕ ಪ್ರಶಿಕ್ಷಣ ಕಾಲೇಜಿನ ಪ್ರಾಂಶುಪಾಲರಾದ ಡಾ।। ಮಿನಿ ವರ್ಗೀಸ್ ರವರು ಭಾಗವಹಿಸಿದ್ದರು. ಜಿಲ್ಲಾಧಿಕಾರಿಯವರು ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಮಕ್ಕಳು ಬಾಲ್ಯದಿಂದಲೇ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು, ಪಂಚತಂತ್ರ, ಚಂದಮಾಮ, ನೈತಿಕ ಮೌಲ್ಯವನ್ನು ಬೆಳಗಿಸುವ ಹಾಗೂ ಜ್ಞಾನ ವಿಜ್ಞಾನದ ಪುಸ್ತಕಗಳ ಅರಿವಿನಿಂದ ಜ್ಞಾನ ಸಂಪಾದಿಸಬೇಕು,ಒಳ್ಳೆಯ ಸುಸಂಸ್ಕೃತ ಹಾಗೂ ದೇಶ ಕಟ್ಟುವ ನಾಗರಿಕರನ್ನಾಗಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪಾಲಕರು ಮಾಡಬೇಕೆಂದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರನ್ನು ಶುಭ ಹಾರೈಸಿದರು. ವರಿಷ್ಠ ವಿದ್ಯಾರ್ಥಿಗಳು ನೀಡಿದ 12 ಸೋಲಾರ್ ವಿದ್ಯುತ್ ಬೀದಿ ದೀಪಗಳನ್ನು ಉದ್ಘಾಟಿಸಿದರು.

ಈ ಸಂಭ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದ ಡಾ. ಮಿನಿ ವರ್ಗೀಸ್ ರವರು ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಇಂದಿನ ಜಗತ್ತು ಮೊಬೈಲ್ ಯುಗವಾಗಿದೆ. ಸಾಧ್ಯವಾದಷ್ಟು ಮೊಬೈಲನ್ನು ಅತಿಯಾಗಿ ಬಳಸದೆ ಒಳ್ಳೆಯದಕ್ಕೆ ಮಾತ್ರ ಉಪಯೋಗಿಸಿ ನಿಮ್ಮ ಬದುಕು ಸಾರ್ಥಕಗೊಳಿಸಬೇಕು. ಶಿಕ್ಷಕರು ಮತ್ತು ಪೋಷಕರನ್ನು ಗೌರವಿಸುತ್ತಾ ಅವರ ಮಾರ್ಗದರ್ಶನದಲ್ಲಿ ನಡೆದರೆ ನಿಮ್ಮ ಭವಿಷ್ಯ ಉಜ್ವಲವಾಗುವುದರಲ್ಲಿ ಯಾವುದೇ ಸಂದೇಹವಿಲ್ಲವೆಂದು ಹಿತ ನುಡಿದರು. ಇದೇ ಸಂದರ್ಭದಲ್ಲಿ ಮುಂದಿನ ವರ್ಷ ನಿವೃ ತ್ತಿಯಾಗಲಿರುವ ಶಾಲೆಯ ಪ್ರಾಂಶುಪಾಲರಾದ ಶ್ರೀ ಎಂ ಜಯಶೀಲನ್ ಮತ್ತು ಸಮಾಜ ವಿಜ್ಞಾನದ ಶಿಕ್ಷಕರಾದ
ಬಿ ಸತ್ಯನಾರಾಯಣ್ ರವರನ್ನು ಸನ್ಮಾನಿಸಲಾಯಿತು.
ಶಾಲೆಯ ಪ್ರಾಂಶುಪಾಲರಾದ
ಶ್ರೀ ಜಯಶೀಲನ್ ರವರು ವಿದ್ಯಾಲಯದ ವಾರ್ಷಿಕ ಪ್ರಗತಿಯ ಬಗ್ಗೆ ವರದಿ ಓದಿದರು. ವರಿಷ್ಠ ಶಿಕ್ಷಕರಾದ ಶ್ರೀ ಸತ್ಯನಾರಾಯಣರವರು ಸ್ವಾಗತಿಸಿದರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಶ್ರೀಮತಿ ರಶ್ಮಿಯವರು ಧನ್ಯವಾದ ಅರ್ಪಿಸಿದರು. ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಇದಕ್ಕೆ ಸಾಕ್ಷಿಯಾದರು.
Hassan
ನಗರದಲ್ಲಿ ಗಮನಸೆಳೆದ ಕ್ರಿಸ್ಮಸ್-2025 ಭರವಸೆಯ ಜಾಥಾ
ಹಾಸನ: ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಹಾಸನ ಘಟಕದ ವೇದಿಕೆಯಡಿ, ಹಾಸನ ಜಿಲ್ಲೆಯ ಸಮಸ್ತ ಕ್ರೈಸ್ತ ಸಮುದಾಯದ ವತಿಯಿಂದ ಶನಿವಾರ ಸಂಜೆ ಆಯೋಜಿಸಲಾದ ಕ್ರಿಸ್ಮಸ್-೨೦೨೫ ಭರವಸೆಯ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಗಮನ ಸೆಳೆಯಿತು.

ಚರ್ಚಿನ ಫಾದರ್ ಮಾಧ್ಯಮದೊಂದಿಗೆ ಮಾತನಾಡಿ, ಕ್ರಿಸ್ಮಸ್ ಹಬ್ಬದ ಅಂಗವಾಗಿ ಈ ಭರವಸೆಯ ಜಾಥಾವನ್ನು ಹಾಸನದ ಸಂತ ಅಂತೋಣಿಯವರ ದೇವಾಲಯದಿಂದ ಆರಂಭಿಸಿ, ಎನ್.ಆರ್. ಸರ್ಕಲ್‌ನ ಹೇಮಾವತಿ ಪ್ರತಿಮೆ, ಮಹಾವೀರ ವೃತ್ತ, ಸಹ್ಯಾದ್ರಿ ಸರ್ಕಲ್, ಮಹಾರಾಜ ಪಾರ್ಕ್ ರಸ್ತೆ, ಸೈಟರ್ಸ್ ಮೆಮೋರಿಯಲ್ ಹಾಲ್ ವೃತ್ತ ಹಾಗೂ ಆರ್.ಸಿ. ರಸ್ತೆ ಮೂಲಕ ಸಂಚರಿಸಿ, ಪುನಃ ಜಿಲ್ಲಾ ಪಂಚಾಯತ್ ಸರ್ಕಲ್ ಮೂಲಕ ಸಂತ ಅಂತೋಣಿಯವರ ದೇವಾಲಯಕ್ಕೆ ವಾಪಸ್ಸು ತಲುಪಿಸಲಾಯಿತು. ನಂತರ ಚರ್ಚ್ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು..

ಜಾಥಾದ ವೇಳೆ ಸ್ತಬ್ಧಚಿತ್ರಗಳು, ಕ್ರಿಸ್ಮಸ್ ನೃತ್ಯ ರೂಪಕಗಳು, ಕೋಲಾಟ, ಕ್ರಿಸ್ಮಸ್ ಹಾಡುಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು. ಸಾವಿರಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಸಮಾಜದಲ್ಲಿ ಶಾಂತಿ, ಭರವಸೆ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಫಾದರ್ ಪ್ಯಾಟ್ರಿಕ್, ಫಾದರ್‌ಗಳಾದ ಸುದರ್ಶನ್ ಕುಮಾರ್, ಸಿ.ಎಸ್. ಯೂಸೇಫ್, ಸಿಲ್ವರ್ ಸ್ಟಾರ್, ಪಾಸ್ಟರ್ ಜೋಸೇಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
-
Special9 hours agoಕರ್ನಾಟಕ ಸರ್ಕಾರದಿಂದ SSP ವಿದ್ಯಾರ್ಥಿವೇತನ 2025–26: ಶಾಲೆ, ಪಿಯುಸಿ, ಡಿಗ್ರಿ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ
-
National - International6 minutes agoವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನದ ಅಂಗವಾಗಿ ವಿಶ್ವಕ್ಕೆ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ
-
Mysore23 hours agoಬಸವ ಮಾರ್ಗದಲ್ಲಿ ವಚನ ಪಠಣ: ವ್ಯಸನಮುಕ್ತ ಜೀವನ ಕುರಿತು ವಿಶೇಷ ಉಪನ್ಯಾಸ
-
Chamarajanagar2 hours agoಜಾನಪದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದ ಎಚ್.ಜನಾರ್ಧನ್
-
Mandya2 hours agoಕಣ್ಮನ ಸೆಳೆದ 1066ನೇ ಸುತ್ತೂರು ಜಯಂತಿ ಪ್ರಯುಕ್ತ ನಡೆದ ಭಾವೈಕ್ಯತಾ ರಥಯಾತ್ರೆ
-
Chikmagalur3 hours agoಶ್ರೀ ಜಗದ್ಗುರು ರಂಭಾಪುರಿ ಪೀಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ
-
Chikmagalur6 hours agoಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವ್ಯಕ್ತಿಗೆ ಕೋರ್ಟ್ 25 ಸಾವಿರ ರೂ. ದಂಡ
-
Chamarajanagar23 hours agoಡಿ.21ಕ್ಕೆ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
