Chikmagalur
ಜಿಲ್ಲೆಯಲ್ಲಿ ದೊಡ್ಡ ಅಮ್ಯುಸ್ಮೆಂಟ್ ಪಾರ್ಕ್‌ನಿರ್ಮಾಣ ಅಗತ್ಯ
ಚಿಕ್ಕಮಗಳೂರು: ಪ್ರವಾಸಿಗರು ಇಡೀ ದಿನವನ್ನು ಕಳೆಯಲು ಮಲೇಷಿಯಾ, ಡಿಸ್ನಿಲ್ಯಾಂಡ್ ಮಾದರಿಯಂತೆ ಜಿಲ್ಲೆಯಲ್ಲಿ ದೊಡ್ಡ ಅಮ್ಯುಸ್ಮೆಂಟ್ ಪಾರ್ಕ್‌ನಿರ್ಮಾಣ ಅಗತ್ಯವಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ರಮೇಶ್‌ಚಂದ್ರ ಲಹೋಟಿ ತಿಳಿಸಿದರು.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ಹಾಸನದಿಂದ ಚಿಕ್ಕಮಗಳೂರಿಗೆ ನಾಲ್ಕುಲೈನ್ ರಸ್ತೆನಿರ್ಮಾಣವಾಗಬೇಕಿದೆ. ಈ ಕುರಿತು ಸರ್ಕಾರಕ್ಕೆ ಪತ್ರಬರೆಯಲಾಗುವುದು. ಕೈಗಾರಿಕೆಗಳ ಬೆಳವಣಿಗೆ ಅಗತ್ಯವಾಗಿರುವುದರಿಂದ ನೀರಿನ ವ್ಯವಸ್ಥೆ ಅಗತ್ಯವಾಗಿರುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಬೆಳವಣಿಗೆಗೆ ಸಣ್ಣಕೈಗಾರಿಕೆಗಳ ಪ್ರದೇಶ ನಿರ್ಮಾಣವಾಗ ಬೇಕಿದೆ.ಒಣ ಪ್ರದೇಶದಲ್ಲಿನ ಕೈಗಾರಿಕೆ ಬೆಳವಣಿಗೆಗೆ ನೀರನ್ನು ಒದಗಿಸಬೇಕಾಗಿದ್ದು, ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ದಕ್ಷಿಣ ಭಾರತ ಉತ್ಸವ: ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಜೂನ್ ೧೫ ಮತ್ತು ೧೬ ರಂದು ಬಹುನಿರೀಕ್ಷಿತ ದಕ್ಷಿಣ ಭಾರತದ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

Chikmagalur
ಮುಳ್ಳಯ್ಯನಗಿರಿ ದೇವಸ್ಥಾನದ ಕಾಮಗಾರಿ: ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗದಲ್ಲಿ ತಾತ್ಕಾಲಿಕ ನಿರ್ಬಂಧ
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ದೇವಸ್ಥಾನದ ಕಾಮಗಾರಿ ನಡೆಯುತ್ತಿರುವುದರಿಂದ, ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗದಲ್ಲಿ ಪ್ರವಾಸಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ದೇವಸ್ಥಾನದ ನಿರ್ಮಾಣಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ಭಾರಿ ವಾಹನಗಳ ಮೂಲಕ ಸಾಗಿಸುತ್ತಿರುವುದರಿಂದ ಮತ್ತು ಈ ರಸ್ತೆ ಕಿರಿದಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಫೆ.7 ರಿಂದ ಮಾರ್ಚ್ 5, 2026ರ ವರೆಗೆ ಪ್ರವಾಸಿ ಜೀಪ್‌ಗಳು ಹಾಗೂ ಸಾರ್ವಜನಿಕ ವಾಹನಗಳ ಓಡಾಟವನ್ನು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ನಿಷೇಧಿಸಿದೆ. ಆದ್ದರಿಂದ, ಪ್ರವಾಸಿಗರು ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ನಡೆದುಕೊಂಡು ಹೋಗುವ ಮೂಲಕ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Chikmagalur
ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿ.ಟಿ.ರವಿ
ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಎಂಎಲ್‌ಸಿ ಡಾ.ಸಿ.ಟಿ. ರವಿ ಅವರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯ ದುಸ್ಥಿತಿ ಕಂಡು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿ.ಟಿ. ರವಿ ಅವರಿಗೆ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ಸಂಕಷ್ಟಗಳನ್ನು ಬಿಚ್ಚಿಟ್ಟರು. “ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಸಿಗುತ್ತದೆ ಎಂದು ಬಂದರೆ, ಇಲ್ಲಿನ ವೈದ್ಯರು ಔಷಧಿಗಳನ್ನು ಹೊರಗಿನಿಂದ ತರಲು ಚೀಟಿ ಬರೆದುಕೊಡುತ್ತಿದ್ದಾರೆ. ಬಡವರು ಹಣಕ್ಕೆ ಎಲ್ಲಿ ಹೋಗಬೇಕು?” ಎಂದು ರೋಗಿಗಳ ಸಂಬಂಧಿಕರು ಕಣ್ಣೀರಿಟ್ಟರು. ಆಸ್ಪತ್ರೆಯ ಅವ್ಯವಸ್ಥೆ ಕಂಡು ಸಿ.ಟಿ. ರವಿ ಅವರು ಜಿಲ್ಲಾ ಸರ್ಜನ್ ಹಾಗೂ ವೈದ್ಯರ ವಿರುದ್ಧ ಸ್ಥಳದಲ್ಲೇ ಗರಂ ಆದರು.

ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ಜನ್ ಅವರನ್ನು ತರಾಟೆಗೆ ತೆಗೆದುಕೊಂಡ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಡವರ ಬದುಕು ದುಸ್ತರ
“ಸರ್ಕಾರಿ ಆಸ್ಪತ್ರೆಗೆ ಬರುವವರು ಅಸಹಾಯಕರು ಮತ್ತು ಬಡವರು. ಇಲ್ಲಿಯೇ ಔಷಧಿ ಇಲ್ಲದಿದ್ದರೆ ಅವರು ಎಲ್ಲಿಂದ ಹಣ ತರಬೇಕು? ರಾಜ್ಯದಾದ್ಯಂತ ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದ್ಯತೆ ಯಾವುದು?: “ನಿಮಗೆ ಸಚಿವ ಸಂಪುಟದ ಸ್ಥಾನಮಾನ ನೀಡುವುದು ಮೊದಲ ಆದ್ಯತೆಯೋ ಅಥವಾ ಜೀವ ಉಳಿಸಿಕೊಳ್ಳಲು ಬರುವ ಬಡವರಿಗೆ ಚಿಕಿತ್ಸೆ ನೀಡುವುದು ಆದ್ಯತೆಯೋ?” ಎಂದು ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದರು.
ಡಯಾಲಿಸಿಸ್ ಸಮಸ್ಯೆ: ಡಯಾಲಿಸಿಸ್ ಘಟಕದ ಟೆಂಡರ್ ಪಡೆದ ಖಾಸಗಿ ಕಂಪನಿಗೆ ಕಳೆದ 10 ತಿಂಗಳಿನಿಂದ ಸರ್ಕಾರ ಒಂದು ರೂಪಾಯಿ ಹಣವನ್ನೂ ನೀಡಿಲ್ಲ. ಇದರಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತುರ್ತು ಕ್ರಮಕ್ಕೆ ಆಗ್ರಹ: ಔಷಧಿಗಳ ಸರಬರಾಜು ಸಂಬಂಧ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡ ರೋಗಿಗಳಿಗೆ ಅಗತ್ಯವಿರುವ ಔಷಧಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಸಿದರು.
Chikmagalur
ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ.
ದಾಳಿಗೆ ಒಳಗಾದ ಇಬ್ಬರೂ ಮಹಿಳೆಯರು ಅಸ್ಸಾಂ ಮೂಲದ ಕಾರ್ಮಿಕರಾಗಿದ್ದು, ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ.

ದಾಳಿಯಿಂದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಈ ಘಟನೆ ಮೂಡಿಗೆರೆ ತಾಲೂಕಿನಲ್ಲಿ ಮತ್ತೆ ಚಿರತೆ ಭೀತಿಯನ್ನು ಹೆಚ್ಚಿಸಿದ್ದು, ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ.
-
Mandya2 hours agoನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ : ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿ ಬಿಡುವುದು ಸಂಪೂರ್ಣ ನಿಷೇಧ – ಡಿಸಿ
-
Mysore18 hours ago5 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಚಾಲನೆ: ರಸ್ತೆ ಡಾಂಬರೀಕರಣ_ಬಾಗೂರು ಅಣೆಕಟ್ಟು ಅಭಿವೃದ್ಧಿಗೆ ಗುದ್ದಲಿ ಪೂಜೆ
-
Hassan18 hours agoಜನತೆಯ ಪ್ರೀತಿಗೆ ಮನಸೋತ ಡಿಸಿ ಕೆ.ಎಸ್. ಲತಾ ಕುಮಾರಿ
-
Mandya23 hours agoಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು :ಡಾ. ಬಿ.ವಿ. ನಂದೀಶ್
-
National22 hours agoಪಿಎಂ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹೊತ್ತೊಯ್ದಿರುವುದು ಪ್ರಚೋದನಕಾರಿ ನೀತಿ: ಪ್ರಹ್ಲಾದ್ ಜೋಶಿ
-
Kodagu20 hours agoಸಂಜೀವಿನಿ ಕಟ್ಟಡ ನಿರ್ಮಾಣ ಶ್ಲಾಘನೀಯ : ಶಾಸಕ ಡಾ.ಮಂಥರ್ ಗೌಡ
-
Hassan20 hours agoಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧ್ಯಾರವರನ್ನು ಭೇಟಿಯಾಗಿ ಹಾಸನ ಜಿಲ್ಲೆಯ ಅಂಚೆ ಇಲಾಖೆ ಬಗ್ಗೆ ಚರ್ಚಿಸಿದ ಶ್ರೇಯಸ್
-
Hassan21 hours agoಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ
