Connect with us

Mandya

ಜಿಲ್ಲೆಯಲ್ಲಿ ಹ‌ರ್ ಘರ್ ತಿರಂಗಾ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಿ: ಶೇಖ್ ತನ್ವೀರ್ ಆಸಿಫ್

Published

on

ಮಂಡ್ಯ: 2024ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಹ‌ರ್ ಘರ್ ತಿರಂಗಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು, ಬಹಳ ಅದ್ದೂರಿಯಾಗಿ ಕಾರ್ಯಕ್ರಮವನ್ನು ಆಚರಿಸಿ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವಿರ್ ಆಸಿಫ್ ಅವರು ತಿಳಿಸಿದರು.

ಅವರು ಸುವರ್ಣ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಆಯೋಜಿಸುವ ಸಂಬಂಧ ಪೂರ್ವ ಸಿದ್ಧತಾ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂಬಂಧ ತಿರಂಗಾ ಯಾತ್ರೆ ಮತ್ತು ಮ್ಯಾರಾಥಾನ್ ಕಾರ್ಯಕ್ರಮಗಳನ್ನು ಮಂಡ್ಯ ಜಿಲ್ಲೆ ಮತ್ತು ನಗರ ವ್ಯಾಪ್ತಿಯಲ್ಲಿ ಆಯೋಜಿಸಲು ನಗರಸಭೆ ಹಾಗೂ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿಗಳು, ಆಯುಕ್ತರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಎಲ್ಲಾ ಮುಖ್ಯಾಧಿಕಾರಿಗಳು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಹರ್ ಘರ್ ತಿರಂಗಾ ಅಭಿಯಾನದಂತೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಮಾಡಿ ಮನೆಗಳು, ಸರ್ಕಾರಿ ಕಛೇರಿಗಳು ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ರಾಷ್ಟ್ರಧ್ವಜವನ್ನು ನಿಯಮಾನುಸಾರ ಹಾರಿಸಬೇಕು.

ಸೂಚಿತ ವೆಬ್ ಸೈಟ್ hargartiranga.com ರಲ್ಲಿ ಸೆಲ್ಸಿಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ ಎಂದರು.

ಜಾಥಾ ಕಾರ್ಯಕ್ರಮ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂಬಂಧ ಪ್ರತಿ ಶಾಲಾ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸೈಕಲ್ ಜಾಥಾ/ಬೈಕ್, ಪಾರಂಪರಿಕ ನಡಿಗೆ ಹಾಗೂ ಗಾಳಿಪಟ ಹಾರಿಸುವ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಕ್ರಮವಹಿಸಿ. ಜೊತೆಗೆ ತಿರಂಗಾ ಸಂಗೀತಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಮುಖಾಂತರ ನಡೆಸಬೇಕು ಎಂದು ತಿಳಿಸಿದರು.

ಎಲ್ಲಾ ತಹಶೀಲ್ದಾರರು ಸ್ವಾತಂತ್ರ್ಯ ಯೋಧರಿಗೆ ಸನ್ಮಾನ ಕುರಿತು ಜಿಲ್ಲೆಯಲ್ಲಿ ಹಾಲಿ ಜೀವಿತ ಸ್ವಾತಂತ್ರ್ಯ ಯೋಧರಿಗೆ ಮನೆಗೆ ತೆರಳಿ ಸನ್ಮಾನ ಮಾಡಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಹರ್ ಘರ್ ತಿರಂಗಾ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಪ್ರತಿಜ್ಞಾವಿಧಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ / ನಿಗಮ ಮಂಡಳಿ, ಪ್ರಾಧಿಕಾರ ಹಾಗೂ ಇತರ ಕಾರ್ಯಾಲಯಗಳು, ಶಾಲಾ ಕಾಜೇಜುಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡಬೇಕು ಎಂದರು.

ಸೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳ ತಂಡದಿಂದ ತಿರಂಗಯಾತ್ರೆ ನಡೆಸಬೇಕು ಎಂದರು.

ವಿವಿಧ ಸ್ಪರ್ಧೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಆಶುಭಾಷಣಾ ಸ್ಪರ್ಧೆ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆ ಹಾಗೂ ಸಂಬಂಧಿತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವೆಬ್ ಸೈಟ್:hargartiranga.com ರಲ್ಲಿ ಅಪ್ ಲೋಡ್ ಮಾಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಫೆ.06 ರಂದು ಬೀರೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ : ಜಿಲ್ಲಾಧಿಕಾರಿಯಿಂದ ಪರಿಶೀಲನೆ

Published

on

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 6ರಂದು ಮಂಡ್ಯ ತಾಲ್ಲೂಕಿನ ಬೇವುಕಲ್ಲು ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಿಕೆ, ಸುಗಮ ಸಂಚಾರ ವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆ ಕುರಿತು ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೇವಸ್ಥಾನ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅಗ್ನಿಶಾಮಕ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

ಮುಖ್ಯಮಂತ್ರಿಗಳ ಕಾರ್ಯಕ್ರಮವು ಸುಗಮವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಹಾಗೂ ನಿಗದಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮಂಡ್ಯ ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಬೃಹತ್ ಕಾಲ್ನಡಿಗೆ ಜಾಥಾಗೆ ಜಿಲ್ಲಾಧಿಕಾರಿ ಚಾಲನೆ

Published

on

ಮಂಡ್ಯ : 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ–2026ರ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಮಹತ್ವವನ್ನು ವಿವರಿಸಿ ಮಾತನಾಡಿದ ಅವರು, ಅತಿವೇಗ, ಮದ್ಯಪಾನ ಮಾಡಿ ವಾಹನ ಚಾಲನೆ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸಿದರು.

ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ರಸ್ತೆ ಅಪಘಾತಗಳಿಂದ ಉಂಟಾಗುವ ಜೀವಹಾನಿ ಹಾಗೂ ಆಸ್ತಿ ನಷ್ಟವನ್ನು ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಸಂಚಾರ ನಿಯಮಗಳನ್ನು ಪಾಲಿಸುವುದು, ರಸ್ತೆ ಸುರಕ್ಷತೆಯನ್ನು ಕಾಪಾಡುವುದು ಹಾಗೂ ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಸಹಕರಿಸುವುದು ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು.

Continue Reading

Mandya

ಸರ್ಕಾರಿ ಶಾಲೆಗಳು ಉಳಿಸಲು ಎಲ್ಲರೂ ಮುಂದಾಗಬೇಕು: ಪ್ರಸನ್ನ

Published

on

ಮದ್ದೂರು:  ಸರ್ಕಾರಿ ಶಾಲೆಗಳು ಉಳಿಸಲು ನಿಟ್ಟಿನಲ್ಲಿ ಸರ್ಕಾರದ ಜತೆಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಮುಂದಾಬೇಕೆಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಸನ್ನ ಮನವಿ ಮಾಡಿದರು.

ತಾಲೂಕಿನ ಆತಗೂರು ಹೋಬಳಿ ಹೊಸಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಟ್ರಾಕ್ ಸೂಟ್ ವಿತರಿಸಿದ ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಯಲ್ಲಿ ಓದುವುದರಿಂದ ಪಾಲಕರಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದರು.

ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಉಳಿಯಬೇಕು ಎಂಬ ಉದ್ದೇಶದಿಂದ ನಮ್ಮ ಊರಿನ ಶಾಲಾ ಮಕ್ಕಳು ಖಾಸಗಿ ಶಾಲಾ ಮಕ್ಕಳಿಗೆ ಕಡಿಮೆ ಇಲ್ಲಾದಂತೆ ಇರಬೇಕು ಎಂಬ ಉದ್ದೇಸದಿಂದ ಮಕ್ಕಳಿಗೆ ಟ್ರಾಕ್ ಸೀಟ್ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಮುಖ್ಯ ಶಿಕ್ಷಕ ರಮೇಶ್ ಮಾತನಾಡಿ, ನಾವು ಮುಂದಿನ ದಿನಗಳಲ್ಲಿ ಶಾಲೆಗೆ ದಾಖಲಾತಿ ಪ್ರಮಾಣ ಹೆಚ್ಚಾಗಬೇಕು ಎಂದರೆ ನಾವು ಸಹ ಮಕ್ಕಳಿಗೆ ಸರ್ಕಾರ ನೀಡುವ ಸಮವಸ್ತ್ರ ಜತೆಗೆ ಟ್ರಾಕ್ ಸೂಟ್ ನೀಡಿದರೆ ಚೆನ್ನಾಗಿರುತ್ತಾದೆ ಎಂಬ ಉದ್ದೇಶದಿಂದ ಎಸ್‌ಡಿಎಂಸಿಯವರಿಗೆ ತಿಳಿಸಿದಾಗ ಅಧ್ಯಕ್ಷರು ಸಮವಸ್ತ್ರ ನೀಡಿದ್ದಾರೆ. ಮಕ್ಕಳು ಇದರ ಸದುಪಯೋಗ ಪಡೆದುಕೊಂಡು ಓದಿನ ಕಡೆ ಗಮನ ಹರಿಸಬೇಕು ಎಂದು ಹೇಳಿದರು.

ಶಿಕ್ಷಕ ರಾಮದಾಸ್, ಅಡುಗೆ ಸಿಬಂದಿ ಸೌಮ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Trending

error: Content is protected !!