Connect with us

Politics

Joint Session| ರಾಜ್ಯಪಾಲರ ಭಾಷಣ: ಸದನದಲ್ಲಿ ಆಡಳಿತ, ವಿಪಕ್ಷಗಳ ಮಧ್ಯೆ ವಾಕ್ಸಮರ

Published

on

ಬೆಂಗಳೂರು: ರಾಜ್ಯಪಾಲರು ಜಂಟಿ‌ ಅಧಿವೇಶದಲ್ಲಿ ಮಾಡಿದ ಒಂದು ನಿಮಿಷದ ಭಾಷಣ ವಿಧಾನಸಭೆಯಲ್ಲಿ ಭಾರೀ ಮಟ್ಟದಲ್ಲಿ ಸದ್ದು ಮಾಡಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಆಡಳಿತ ಹಾಗೂ ವಿರೋಧ ಪಕ್ಷಗಳ‌ ಮಧ್ಯೆ ವಾಕ್ಸಮರ, ಟೀಕೆ ನಿಂದನೆಗೂ ವೇದಿಕೆಯಾಗಿತ್ತು.

ಸದನದಲ್ಲಿ ಕಲಾಪ  ಪ್ರಾರಂಭವಾದಾಗ ವಿರೋಧ ಪಕ್ಷದ ನಾಯಕ ಆರ್. ಅಶೋಕ್  ಮಾತನಾಡಿ, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಸದಸ್ಯರು ಅಗೌರವ ತೋರಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಆಗಬೇಕು. ನಮ್ಮ 18 ಶಾಸಕರು ಸ್ಪೀಕರ್ ಪೀಠಕ್ಕೆ ಅಗೌರವ ಮಾಡಿದ್ದಾರೆ ಎಂದು ಅಮಾನತು ಮಾಡಲಾಗಿತ್ತು. ಆದರೆ ಈಗ ರಾಜ್ಯಪಾಲರಿಗೆ ಅಗೌರವ ತೋರಿದವರ ವಿರುದ್ಧ ಏನು ಕ್ರಮ? ಈ ಸಂಬಂಧ ಸ್ಪೀಕರ್ ರೂಲಿಂಗ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯಪಾಲರು ವಿವೇಚನೆಯಿಂದಲೇ ಭಾಷಣ ಮಾಡಿದ್ದಾರೆ. ಆದರೆ ಎಚ್‌.ಕೆ.ಪಾಟೀಲ್‌ ಅವರು ರಾಜ್ಯಪಾಲರಿಗೆ ಓಡಿ ಹೋದರು ಅಂದಿದ್ದು ಸರಿಯಲ್ಲ. ರಾಜ್ಯಪಾಲರು ಇದ್ದಾಗ ರಾಷ್ಟ್ರಗೀತೆ ಹಾಡು ಶುರುವಾಗಿದ್ದರೆ ಇರುತ್ತಿದ್ದರು ಎಂದು ರಾಜ್ಯಪಾಲರನ್ನು ಸಮರ್ಥಿಸಿಕೊಂಡಿದ್ದಾರೆ.

ಶಾಸಕ ಅಶ್ವಥ್ ನಾರಾಯಣ, ಸುನೀಲ್ ಕುಮಾರ್ ಸಹ ರಾಜ್ಯಪಾಲರಿಗೆ ಅಗೌರವ ತೋರಿದ ಕಾಂಗ್ರೆಸ್ ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಮಾತಿನ ಭರದಲ್ಲಿ ಸುನೀಲ್ ಕುಮಾರ್ ಇದು ಗೂಂಡಾ ಸರ್ಕಾರ ಅಂದಿದ್ದು ಕಾಂಗ್ರೆಸ್‌ನವರನ್ನು ಕೆರಳಿಸಿತ್ತು. ಈ ಸಂದರ್ಭದಲ್ಲಿ ಸದನದಲ್ಲಿ ಜಟಾಪಟಿ ಇನ್ನಷ್ಟು ಹೆಚ್ಚಾಯಿತು.

 

Continue Reading

Politics

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ

Published

on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆದ ಬೆಳವಣಿಗೆಯೊಂದರಲ್ಲಿ, ಖಾತೆ ಹಂಚಿಕೆ ಕುರಿತ ಅಸಮಾಧಾನದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗರೆಡ್ಡಿ ಅವರು ತಮ್ಮ ನಿರ್ಧಾರವನ್ನು ವಾಪಸ್ ಪಡೆದಿದ್ದಾರೆ.

ಬೆಂಗಳೂರು ಅಭಿವೃದ್ಧಿ ಖಾತೆ ಬದಲು ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಅವರು ರಾಜೀನಾಮೆ ಸಲ್ಲಿಸಿದ್ದರು. ಆದರೆ ನಂತರ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಮನಗೊಳಿಸಿದೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜೀನಾಮೆಯನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಿದ್ದರಿಂದ ಅದನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಜೊತೆಗೆ, ಖಾತೆ ಹಂಚಿಕೆ ವಿಚಾರವನ್ನು ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ನಿರ್ವಹಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಬೆಳವಣಿಗೆಯೊಂದಿಗೆ ರಾಜ್ಯ ಸಚಿವ ಸಂಪುಟದ ಒಳಗಿನ ಗೊಂದಲ ತಾತ್ಕಾಲಿಕವಾಗಿ ಶಮನಗೊಂಡಂತಾಗಿದೆ.

Continue Reading

Politics

ಕಂದಾಯ ಇಲಾಖೆಯ ಸುಧಾರಣೆ ಮುಂದುವರಿಸುತ್ತೇನೆ: ಡಿಸಿಎಂ ಪರಮೇಶ್ವರ್

Published

on

ಬೆಂಗಳೂರು: ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಾತನಾಡಿ ಕಂದಾಯ ಇಲಾಖೆಯ ಕಾರ್ಯಪದ್ಧತಿ, ರಾಜಕೀಯ ಬೆಳವಣಿಗೆಗಳು ಹಾಗೂ ಸಚಿವರ ಅಸಮಾಧಾನ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ  ಅವರು, ಕಂದಾಯ ಇಲಾಖೆಯಲ್ಲಿ ಕೃಷ್ಣಬೈರೇಗೌಡರು ಉತ್ತಮ ಕೆಲಸ ಮಾಡಿ ಮಹತ್ವದ ಬದಲಾವಣೆಗಳನ್ನು ತಂದಿದ್ದಾರೆ. ಆ ಸುಧಾರಣೆಗಳನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ. ತಮ್ಮ ಬಳಿ ಇಲಾಖೆಯಲ್ಲಿ ಕೆಲಸ ಮಾಡಲು ಸಮಯ ಕಡಿಮೆ (ಸುಮಾರು ಎರಡು ವರ್ಷ ಮಾತ್ರ) ಇರುವುದರಿಂದ, ಲಭ್ಯವಿರುವ ಅವಧಿಯಲ್ಲಿ ಎಲ್ಲಾ ಕಾರ್ಯಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ.

ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ವಿಚಾರ ದೊಡ್ಡ ಸಮಸ್ಯೆಯಲ್ಲ ಎಂದು ಅವರು ಹೇಳಿದ್ದಾರೆ. ಪಕ್ಷದ ಹಿರಿಯ ನಾಯಕರು ಶೀಘ್ರದಲ್ಲೇ ಇದನ್ನು ಬಗೆಹರಿಸುತ್ತಾರೆ ಎಂದು ತಿಳಿಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ರಾಮಲಿಂಗಾರೆಡ್ಡಿಯವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದಿದ್ದಾರೆ.

ಇದೇ ವೇಳೆ, ಸಚಿವ ಎಂ. ಮುನಿಯಪ್ಪ ಅವರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದ್ದು, ರಾಹುಲ್ ಗಾಂಧಿ ಅವರ ಭೇಟಿಯ ಸಂದರ್ಭದಲ್ಲೂ ಅವರು ಎಲ್ಲರೊಂದಿಗೆ ಸೇರಿ ಚರ್ಚಿಸಿದ್ದಾರೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ, ಇಲಾಖೆಯ ಸುಧಾರಣೆ ಮುಂದುವರಿಸುವ ಜೊತೆಗೆ ಸರ್ಕಾರದೊಳಗಿನ ಯಾವುದೇ ಗೊಂದಲಗಳಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

Continue Reading

Politics

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸಚಿವ ಸಂಪುಟದಲ್ಲಿ ಮುಂದುವರಿಕೆ – ಸುರ್ಜೇವಾಲ ಸ್ಪಷ್ಟನೆ

Published

on

ಬೆಂಗಳೂರು: ಸಚಿವ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಶಾಸಕ ರಾಮಲಿಂಗಾರೆಡ್ಡಿ  ಅವರು ವಾಪಸ್ ಪಡೆದಿದ್ದಾರೆ.

 ಖಾಸಗಿ ಹೋಟೆಲ್‌ನಲ್ಲಿ ಇಂದು  ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು, ರಾಮಲಿಂಗಾರೆಡ್ಡಿ ಅವರೊಂದಿಗೆ ನಡೆದ ಸಭೆಯ ನಂತರ ಈ ಮಾಹಿತಿ ನೀಡಿದ್ದಾರೆ. ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಅವರು ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಉಂಟಾಗಿದ್ದ ಊಹಾಪೋಹಗಳಿಗೆ ತಾತ್ಕಾಲಿಕ ವಿರಾಮ ಬಿದ್ದಿದೆ.

Continue Reading

Trending

error: Content is protected !!