Connect with us

Mandya

ಜೂನ್ 15 ರೊಳಗಾಗಿ 85 ಕೆರೆಗಳ ಒತ್ತುವರಿ ತೆರವುಗೊಳಿಸಲು ಡಿಸಿ ಸೂಚನೆ

Published

on

ಜಿಲ್ಲೆಯಲ್ಲಿ ಜೂನ್ 15 ರೊಳಗಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ-35, ಸಣ್ಣ ನೀರಾವರಿ- 2 ಕೆರೆ, ಹೇಮಾವತಿ ಎಡದಂಡೆ ನಾಲಾ ವಿಭಾಗ-33, ಕಾವೇರಿ ನೀರಾವರಿ ನಿಗಮ ನಿಯಮಿತ-15 ಸೇರಿದಂತೆ ಒಟ್ಟು 85 ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ 962 ಕೆರೆಗಳಿದ್ದು, ಭೂ ದಾಖಲೆಗಳ ಇಲಾಖೆಯ ಸಹಯೋಗದೊಂದಿಗೆ ಕೆರೆಗಳನ್ನು ಅಳತೆ ಮಾಡಲಾಗಿದೆ.

448 ಕೆರೆಗಳಲ್ಲಿ ಒತ್ತುವರಿ ಕಂಡುಬಂದಿದ್ದು, ಅದರಲ್ಲಿ 200 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ. 248 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಬೇಕಿದ್ದು, ಜೂನ್ 15 ರೊಳಗಾಗಿ ನಿಗದಿಪಡಿಸಿರುವ 85 ಕೆರೆಗಳ ಒತ್ತುವರಿಯನ್ನು ತಹಶೀಲ್ದಾರ್, ಪೊಲೀಸ್ ಇಲಾಖೆಯ ಸಹಾಯ ಪಡೆದು ತೆರವುಗೊಳಿಸಿ ವರದಿ ನೀಡಬೇಕು ಇಲ್ಲವಾದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಹೆಚ್.ಎಲ್.ಬಿ.ಸಿ, ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಯನ್ನು ಸಂರಕ್ಷಿಸಬೇಕು, ನಿಯಮಿತವಾಗಿ ಕೆರೆಗಳ ಪರಿಶೀಲನೆ ನಡೆಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು.

ಮೊದಲ ಹಂತದಲ್ಲಿ 85 ಕೆರೆಗಳ ಒತ್ತುವರಿಯನ್ನು ಜೂನ್ 15 ರೊಳಗಾಗಿ ತೆರವುಗೊಳಿಸಿ ವರದಿ ನೀಡುವಂತೆ ತಿಳಿಸಲಾಗಿದೆ. ಒತ್ತುವರಿ ತೆರವುಗೊಳಿಸದಿದ್ದಲ್ಲಿ ಕರ್ನಾಟಕ ಭೂ ದಾಖಲೆಗಳ ಕಾಯ್ದೆಯ ಸೆಕ್ಸನ್ 192 ರ ಪ್ರಕಾರ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಮಾತನಾಡಿ, ಜಿಲ್ಲೆಯಲ್ಲಿರುವ ಕೆರೆಗಳನ್ನು ಅಳತೆ ಮಾಡಿಸಿ ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿತ್ತು. ಮೇ 13 ರ ಸಂಜೆ 5 ಗಂಟೆಯೊಳಗಾಗಿ ಕಡತ ಸಲ್ಲಿಕೆಯಾಗದಿದ್ದರೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೆರೆಗಳನ್ನು ಸರಿಯಾಗಿ ಸಂರಕ್ಷಣೆ ಮಾಡದಿದ್ದರೆ ಮಳೆ ನೀರನ್ನು ಸಂಗ್ರಹಿಸಲು ಸಾಧ್ಯವಿಲ್ಲದೆ ಹಲವಾರು ಸಮಸ್ಯೆಗಳು ಉಂಟಾಗುತ್ತದೆ‌. ಕೆರೆಯ ಸುತ್ತದ 30 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ನಿಯಮಗಳನ್ನು ಪಾಲನೆ ಮಾಡದಿದ್ದಲ್ಲಿ ಒತ್ತುವರಿಯಂತಹ ಸಮಸ್ಯೆಗಳು ಬರುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಡಿ‌.ಡಿ.ಎಲ್ಆರ್ ಉಮೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಮೌಢ್ಯ ಹಾಗೂ ಕಂದಾಚಾರವನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು : ಸಿಎಂ ಸಿದ್ದರಾಮಯ್ಯ

Published

on

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ, ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು ವಿಷಾದನೀಯ ಸಂಗತಿ. ವೈಚಾರಿಕತೆ ಹಾಗೂ ವೈಜ್ಞಾನಿಕ ವಿದ್ಯೆ ಪ್ರತಿಯೊಬ್ಬರಿಗೂ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇಯ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಮಳವಳ್ಳಿಯಲ್ಲಿ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ಭಾರತದ ರಾಷ್ಟ್ರಪತಿಗಳು ಉದ್ಘಾಟನೆ ನೆರವೇರಿಸಿದ್ದಾರೆ. ಈ ಜಯಂತಿ ಮಹೋತ್ಸವ ಎಲ್ಲಾ ತಾಲ್ಲೂಕುಗಳಲ್ಲಿ ನಡೆಯುತ್ತಿದ್ದು, ಬಹಳ ದಿರ್ಘಕಾಲದಿಂದಲೂ ನಡೆಯುತ್ತಾ ಬಂದಿದೆ. ಮುಂದಿನ ವರ್ಷ ಗುಂಡ್ಲುಪೇಟೆಯಲ್ಲಿ ನಡೆಯುವ ಬಗ್ಗೆ ತಿರ್ಮಾನ ಮಾಡಲಾಗಿದ್ದು ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ಈ ಕಾರ್ಯಕ್ರಮ ಆಚರಣೆ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು. ‌

ನಮ್ಮ ಸಮಾಜದಲ್ಲಿ ಅನೇಕ ಜಾತಿಗಳು ಇರುವುದರಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ವ್ಯವಸ್ಥೆಯಿಂದ ಶಾಂತಿ ಮೂಡಿಬರುವುದಿಲ್ಲ. ಈ ವಿಷಯವನ್ನು ಈ ಹಿಂದೆ ದಾರ್ಶನಿಕರು, ಬಸವವಾದಿ ಶರಣರು ಹೇಳುತ್ತಾ ಬಂದಿದ್ದಾರೆ. ಕುವೆಂಪು ಅವರು ಮನುಷ್ಯ ಸಮಾಜ ನಿರ್ಮಾಣ ಆಗಬೇಕು ಎಂದು ಹೇಳಿದ್ದರು. ಸಮಾಜದಲ್ಲಿ ಜನರ ನಡುವೆ ಪ್ರೀತಿ ಇರಬೇಕು. ಇದೇ ನಮ್ಮ ಸಂಸ್ಕೃತಿ ಆಗಿದೆ. ಅನೇಕ ಸಾಧು ಮುನಿಗಳು, ಖುಷಿಗಳು ಮನುಷ್ಯ ಮನುಷ್ಯ ನಡುವೆ ಪ್ರೀತಿಯಿಂದ ಇರಬೇಕು ಎಂದು ಹೇಳಿದ್ದಾರೆ‌. ದ್ವೇಷ ಮಾಡಬಾರದು. ಜಾತಿ ಹೋಗಬೇಕಾದರೆ ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ಬರಬೇಕು ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಸಿಗುವುದು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ಬಂದರೆ ಮಾತ್ರ ಸಿಗುತ್ತದೆ ಎಂದು ಅವರು ಮುಖ್ಯಮಂತ್ರಿಗಳು ತಿಳಿಸಿದರು.

ಜಯಂತಿಗಳನ್ನು ಆಚರಣೆ ಮಾಡುತ್ತಿರುವುದು ಎಲ್ಲಾ ಒಗ್ಗೂಡಿ ಪ್ರೀತಿಯಿಂದ ಇರಬೇಕು ಎಂಬ ಉದ್ದೇಶದಿಂದ ಮಾತ್ರ ಎಂದು ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಮಾತನಾಡಿ, ಸುತ್ತೂರು ಶ್ರೀ ಮಠ ಪ್ರತಿವರ್ಷ ಜಯಂತೋತ್ಸವ ಆಚರಣೆ ಮಾಡುತ್ತಿದೆ. ಶಿವಯೋಗಿಗಳು ನಾಡಿನ ಜನರನ್ನ ಒಗ್ಗೂಡಿಸಿ ಸೋದರತ್ವ ಬೆಳೆಸಿದವರು. ಮನುಷ್ಯ ಹುಟ್ಟಿದ ಮೇಲೆ ಧರ್ಮ, ಧರ್ಮವನ್ನು ಸರಿಯಾಗಿ ಅರ್ಥೈಹಿಸಿ ನಾವೆಲ್ಲರೂ ಒಂದೇ ರೀತಿ ಅನ್ನೋ ಮನೋಭಾವ ಮೂಡಿಸಿರುವುದೇ ಗುರಿ.ಶ್ರೀ ಮಠಕ್ಕೆ ಎಲ್ಲಾ ಪಕ್ಷ, ಎಲ್ಲಾ ಧರ್ಮೀಯರು ಬರುತ್ತಾರೆ. ಪ್ರಜಾಪ್ರಭುತ್ವ ನಡವಳಿಕೆ ಬಗ್ಗೆ ನಂಬಿಕೆ ಇದೆ. ಬಸವಣ್ಣ ಯಾರ ವಿರುದ್ಧ ಸೇಡುತೀರಿಸಿಕೊಳ್ಳಲ್ಲಿಲ್ಲ. ಡಾ ಬಿ.ಆರ್.ಅಂಬೇಡ್ಕರ್ ಬಾಲ್ಯದಲ್ಲೇ ನೋವು ಅನುಭವಿಸಿದರು. ಆದರೂ ಯಾರ ಬಗ್ಗೆಯೂ ದ್ವೇಷ ಮಾಡಿಲ್ಲ. ಶ್ರೀಗಳು ಮನುಷ್ಯರ ನಡುವೆ ಸೋದರತ್ವ ಬಿತ್ತುವ ಕೆಲಸ ಮಾಡಿದ್ದಾರೆ. ಜಯಂತೋತ್ಸವದಲ್ಲಿ ಎಲ್ಲಾ ಧರ್ಮೀಯರು ಸೇರಿದ್ದಾರೆ ಇದೇ ಒಗ್ಗೂಡೂವಿಕೆಯಾಗಿದ್ದು ಸುತ್ತೂರು ಶ್ರೀ ಮಠ ಮಹತ್ತರ ಕಾರ್ಯ ಮಾಡುತ್ತಿದೆ ಎಂದು ಅವರು ತಿಳಿಸಿದರು‌.

ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವವಾದಿಯಾಗಿದ್ದು
ಬಡವರು, ದಲಿತರು, ಮಹಿಳೆಯರ ಎಲ್ಲಾ ಧರ್ಮೀಯರನ್ನ ಒಂದಾಗಿ ಕಾಣುತ್ತಾರೆ. ಅನ್ನಭಾಗ್ಯ, ಗ್ಯಾರಂಟಿ ಯೋಜನೆ ಕೊಟ್ಟು ದೊಡ್ಡ ಕ್ರಾಂತಿಕಾರಿಕ ಕಾರ್ಯ ಮಾಡಿದ್ದಾರೆ. ಎಲ್ಲಾ ಸಮುದಾಯವನ್ನು ಒಂದು ಕಡೆ ಸೇರಿ ಸಂದೇಶ ಸಾರುವ ಕೆಲಸ. ನಾವೆಲ್ಲರೂ ಒಂದೇ ಜಾತಿ ವಿನಾಶದ ಮೂಲಕ ಸಂದೇಶ ಸಾರಿದ್ದಾರೆ. ಈ ಮಹತ್ತರ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಅವರು ತಿಳಿಸಿದರು.

ಶ್ರಿ ವೀರ ಸಿಂಹಾಸನ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.. ಶ್ರೀ ಆದಿ ಚುಂಚನಗಿರಿ ಶಾಖಾಮಠದ ಸೌಮ್ಯ ನಾಥ್, ರಾಜನಹಳ್ಳಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾಂದಪುರಿ ಮಹಾಸ್ವಾಮಿಗಳು, ಕನಕಪುರದ ಡಾ ಶ್ರೀ ಚನ್ನಬಸವ ಸ್ವಾಮಿಗಳು, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಗಳು ಕಾರ್ಯಕ್ರಮದಲ್ಲಿ ಇದ್ದರು.

ಮಳವಳ್ಳಿ ತಾಲ್ಲೂಕಿನ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಕಾರ್ಯಕ್ರಮದಲ್ಲಿ ಸ್ವಾಗತಿಸಿದರು.

Continue Reading

Mandya

ಮನ್ ಮುಲ್ ಮಾಜಿ ನಿರ್ದೇಶಕ ಕೆ.ಎಲ್. ಯೋಗಿಶ್ ನಿಧನ

Published

on

ಮಂಡ್ಯ : ಕೆರಗೋಡು ಗ್ರಾಮದ ಮಹಾನಾಡುಗೌಡ ಮನ್ ಮುಲ್ ಮಾಜಿ ನಿರ್ದೇಶಕರಾದ ಕೆ.ಎಲ್. ಯೋಗಿಶ್ (77) ರವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಶೈಲಜ ಮಕ್ಕಳಾದ ಯಶ್ವಂತ್ ಮತ್ತು ಪ್ರಶಾಂತ್ ಸೇರಿದಂತೆ ಅಪಾರ ಪ್ರಮಾಣದ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತಿಮ ಸಂಸ್ಕಾರವನ್ನು ಇಂದು ಮಧ್ಯಾಹ್ನ 3-30 ರ ವೇಳೆಗೆ ಅವರ ಸ್ವ-ಗ್ರಾಮ ಕೆರಗೋಡು ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Continue Reading

Mandya

ಶ್ರೀರಂಗಪಟ್ಟಣದಲ್ಲಿ ಶಾಸಕರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

Published

on

ಶ್ರೀರಂಗಪಟ್ಟಣ: ಪೋಲಿಯೋ ಮುಕ್ತ ವಿಶ್ವ ನಿರ್ಮಾಣಕ್ಕಾಗಿ ಕಡ್ಡಾಯವಾಗಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದರು.

ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ನಿಮಿತ್ಯ ಮಗುವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು , ಸಾರ್ವಜನಿಕರು ತಮ್ಮ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ನವಜಾತ ಶಿಶುವಿನಿಂದ ಹಿಡಿದು ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಇಂದೇ ತಪ್ಪದೆ ಪಲ್ಸ್ ಪೋಲಿಯೋ ಹನಿ ಹಾಕಿಸಬೇಕೆಂದರು.

ನಂತರ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ ಆಶಾಲತಾ ಮಾತನಾಡಿ, ತಾಲೂಕಿನಾದ್ಯಂತ 11,676 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ 69 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 276 ಲಸಿಕೆದಾರರನ್ನು ಹಾಗೂ 14 ಜನ ಮೇಲ್ವಿಚಾರಕರನ್ನು ನೇಮಿಸಲಾಗಿದೆ.

ಹಾಗೆಯೇ ಪ್ರಮುಖ ಪ್ರವಾಸಿ ತಾಣಗಳಲ್ಲಿಯೂ ಕೂಡ ಪೋಲಿಯೋ ಬೂತಗಳನ್ನು ತೆರೆಯಲಾಗಿದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಹಾಕಿಸಿ ಲಸಿಕಾ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕೆಂದರು.

ಈ ವೇಳೆ ಪುರಸಭೆ ಮಾಜಿ ಪ್ರಭಾರ ಅಧ್ಯಕ್ಷ ಎಂ.ಎಲ್. ದಿನೇಶ್, ಪುರಸಭೆ ಮಾಜಿ ಸದಸ್ಯ ಕೃಷ್ಣಪ್ಪ,ತಾ ಪಂ ಕಾರ್ಯನಿರ್ವಹಣಾಧಿಕಾರಿ ವೇಣು, ಸಿಡಿಪಿಒ ಸಕಲೇಶ್ವರ, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರವಿಕುಮಾರ್ ಎಸ್,ದೇವರಾಜು, ಅನಿಲ್ ಕುಮಾರ್ ಜಿ ಎಸ್, ಇಮ್ರಾನ್ ಆರ್, ರಾಧಾ ಪಿ.ಆರ್, ಮುಖಂಡರಾದ ಲೋಕೇಶ್, ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ ವಿಜಯಲಕ್ಷ್ಮಿ, ಮಕ್ಕಳ ತಜ್ಞ ಡಾ.ಶ್ರೀಧರ್, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಸವಿತಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಸೇರಿದಂತೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading

Trending

error: Content is protected !!