Connect with us

Mysore

ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯಗತ್ಯ: ಕೆ.ಹರೀಶ್ ಗೌಡ

Published

on

ಮೈಸೂರು: ಆರ್ಥಿಕವಾಗಿ ಸದೃಢರಾಗಿ ಸಮಾಜದಲ್ಲಿ ಗೌರವದಿಂದ ಜೀವನ ನಡೆಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಹೆಣ್ಣು ಮಕ್ಕಳು ಶಿಕ್ಷಣ ಪಡೆದುಕೊಳ್ಳುವಂತೆ ಪೋಷಕರು ನೋಡಿ ಕೊಳ್ಳಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ತಿಳಿಸಿದರು.

ಜಿಲ್ಲಾಡಳಿತ , ಕನ್ನಡ ಮತ್ತು ಸಂಸ್ಕೃತ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.


ವಚನಗಳು ಜೀವನದಲ್ಲಿ ನೈತಿಕ ಮೌಲ್ಯದ ಶಿಕ್ಷಣ, ಹೆಣ್ಣು ಮಕ್ಕಳು, ಹಿರಿಯರನ್ನು ಗೌರವಿಸಬೇಕು ಎಂಬ ಪಾಠವನ್ನು ಕಲಿಸುವುದರ ಜೊತೆಗೆ ಜೀವನ ಕಟ್ಟಿಕೊಡುತ್ತದೆ ಎಂದರು.

ಪ್ರತಿದಿನ  ಮಾಚಿದೇವರು ಸೇರಿದಂತೆ ಎಲ್ಲಾ ಶ್ರೇಷ್ಠ  ವಚನಕಾರರನ್ನು ಸ್ಮರಿಸಬೇಕು. ಅವರ ವಚನಗಳನ್ನು ಅರ್ಥಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಚನಗಳ ಮೂಲಕ ಸಮಾಜದ ಸುಧಾರಣೆ‌ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಡಿವಾಳ ಸಮುದಾಯದವರು ಸಲ್ಲಿಸಿರುವ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ‌. ಜೊತೆಗೆ ಶೇಷಾದ್ರಿ ಪುರಂ ಸರ್ಕಲ್ ಗೆ ಮಡಿವಾಳ ಮಾಚಯ್ಯ ಹೆಸರು ಇಡಲು ಚರ್ಚೆ ನಡೆಸುತ್ತೇನೆ ಎಂದರು.


ವಿಧಾನ ಪರಿಷತ್ ಶಾಸಕ ಡಾ. ಡಿ ತಿಮ್ಮಯ್ಯ ಮಾತನಾಡಿ, 12 ನೇ ಶತಮಾನದಲ್ಲಿ ಬಸವಣ್ಣ ಅವರ ಅನುಭವ ಮಂಟಪದಲ್ಲಿ ಯಾವುದೇ ಜಾತಿ, ಮೇಲು ಕೀಳು ಎಂಬ ಬೇಧ ಭಾವವಿಲ್ಲದೆ ಎಲ್ಲಾ ವರ್ಗದ ವಚನಕಾರರು ಒಗ್ಗೂಡಿ‌ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಲು ಪ್ರಯತ್ನಿಸುತ್ತಿದ್ದರು ಹಾಗೂ ಚರ್ಚೆಗಳನ್ನು ನಡೆಸುತ್ತಿದ್ದರು ಎಂದರು.

ಅನುಭವ ಮಂಟಪದಲ್ಲಿ ಮಡಿವಾಳ ಮಾಚಯ್ಯ,ಅಂಬಿಗರ ಚೌಡಯ್ಯ, ಹರಳಯ್ಯ,ದೋಹಾರ ಕಕ್ಕಯ್ಯ ಸೇರಿದಂತೆ ಎಲ್ಲಾ ವಚನಕಾರರು ದುಡಿಮೆಯ ದೇವರು, ಕಾಯಕದ ಮೂಲಕ ಕೈಲಾಸ ನೋಡಿ ಹಾಗೂ ಪ್ರತಿಯೊಂದು ಕಾಯಕವನ್ನು ಗೌರವಿಸಿ ಸಮ ಸಮಾಜ ನಿರ್ಮಾಣ ಮಾಡಿ ಎಂಬ ಸಂದೇಶವನ್ನು ವಚನಗಳ ಮೂಲಕ ತಿಳಿಸಿದರು ಎಂದರು.

ಕೊಳೆ ಬಟ್ಟೆ ತೊಳೆದು ಶುದ್ಧ ಮೂಡುವಂತೆ ಮನಸ್ಸಿನಲ್ಲಿ ಮೇಲು ಕೀಳು ಎಂಬ ಕಲ್ಮಶವಿದ್ದರೆ ಜನಸಮಾನ್ಯರು ಮೊದಲು ಅದನ್ನು ತೊಳದು ಶುದ್ಧ ಮಾಡಿಕೊಳ್ಳವೇಕು.‌ ಜನರು ತನು ಮನ ವನ್ನು ಶುದ್ಧ ಮಾಡಿಕೊಳ್ಳಬೇಕು ಎಲ್ಲರು ವಿದ್ಯಾವಂತರಾಗ ಬೇಕು ಎಂದು ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಮಾತನಾಡಿ, ಜಯಂತಿಯನ್ನು ಮಾಡುವ ಶ್ರೇಷ್ಠರ ತತ್ವ ಹಾಗೂ ಆದರ್ಶವನ್ನು ಅನುಸರಿಸಲು. ಜಯಂತಿ ಆಚರಣೆ ಸಂದರ್ಭದಲ್ಲಿ ಮಹಾನ್ ವ್ಯಕ್ತಿಯ ಹುಟ್ಟಿನ ನೆಲೆ ಮತ್ತು ಬದುಕಿನ ಬೆಲೆ ತಿಳಿಸುತ್ತದೆ. ಮಾಚಯ್ಯ ಅವರ ಕಾಯಕ ಮತ್ತು ನಡತೆ ಯಿಂದ ಮಾಚಿದೇವ ಎಂಬ ಹೆಸರು ಪಡೆದುಕೊಂಡರು, ಮಾನವ ಕೂಡ ದೇವರಾಗ ಬಹುದು ಎಂದು ತೋರಿಸಿಕೊಟ್ಟವರು ಮಡಿವಾಳ ಮಾಚಿದೇವರು ಎಂದರು.

ಕಾಯಕ ತತ್ವ, ಭಕ್ತಿಯ ತತ್ವ, ಜ್ಞಾನ ದ ಪ್ರಭುತ್ವ, ಈ ಮೂರು ತತ್ವದ ಮೂಲಕ ವಚನಕಾರರು ಸಮಾಜ ಸುಧಾರಣೆ ಮಾಡಲು ಮುಂದಾದರು ಎಂದು ಹೇಳಿದರು.

ಶರಣ ಪ್ರವಾಚನಕಾರದಾರ ಯಡಿಯೂರು ಮೂಡಲಗಿರಿ ಮಾತನಾಡಿ, ಮಡಿವಾಳ ಮಾಚಯ್ಯ ಅವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ದೇವರ ಇಪ್ಪರಿಗೆಯಲ್ಲಿ ಜನಿಸಿದರು.ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಅವರು ಬಸವಣ್ಣ ಅವರನ್ನು ಅನುಸರಿಸಿದರು ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷರಾದ ಅರುಣ್, ಗಣ್ಯರಾದ ಮಹಮದ್ ರಫಿ, ಮಂಜುನಾಥ್ ,ಚನ್ನಕೇಶವ ,ಬಿ ಜಿ ಕೇಶವ, ರವಿನಂದನ್,ಮಂಜು ಶೆಟ್ಟಿ, ಸಿದ್ದಪಾಜಿ ಇನ್ನಿತರೆ ಮುಖಂಡರು ಉಪಸ್ಥಿತರಿದ್ದರು.

Continue Reading

Mysore

ಮೈಸೂರು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಿ: ಡಾ: ಪಿ. ಶಿವರಾಜ್

Published

on

ಮೈಸೂರು:  ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು ಎಂದರು.

ಫೆ.11 ರಂದು ಕಾರ್ಯಾಗಾರ:
2025 26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಚಲಿತ ಮಕ್ಕಳ ಸಮಸ್ಯೆಗಳನ್ನು ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಫೆಬ್ರವರಿ 11 ರಂದು ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಆಯೋಜಿಸಲಾಗುವುದು ಎಂದರು.
ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಎಲ್ಲಾ ಇಲಾಖೆಗಳಿಂದ ಸರ್ಕಾರದಿಂದ ನೇಮಿಸಲ್ಪಟ್ಟಿರುವ ಎಲ್ಲಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಗಾರಕ್ಕೆ ಹಾಜರಾಗಿ ತರಬೇತಿಯನ್ನು ಪಡೆದು ಮೈಸೂರು ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕಾರ್ಯಗಾರವನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್. ಮಂಜು ಮಾತನಾಡಿ, 18 ವರ್ಷದ ಒಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಪ್ರತಿಯೊಬ್ಬ ಅಧಿಕಾರಿಯು ಮಕ್ಕಳ ಹಕ್ಕುಗಳನ್ನ ರಕ್ಷಣೆ ಮಾಡುವುದರ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.


ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ‌ ಎನ್. ಟಿ.ಯೋಗೇಶ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರವಿಚಂದ್ರ ಸದಸ್ಯ ಮಹದೇವ್ ಕೋಟೆ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದರು.

Continue Reading

Mysore

ಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ

Published

on

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಪ್ರಯೋಗಾಲಯ ಇದ್ದ ಬಗ್ಗೆ ರಾಷ್ಟಿçÃಯ ಮಾದಕ ವಸ್ತು ನಿಯಂತ್ರಣಾ ದಳ(ಎನ್‌ಸಿಬಿ) ಖಚಿತ ಪಡಿಸಿದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದು, 14 ತಂಡಗಳನ್ನು ರಚಿಸಿಕೊಂಡು ಕೈಗಾರಿಕಾ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಸುಂದರ್ ರಾಜ್ ಅವರ ನೇತೃತ್ವದಲ್ಲಿ ಎಸಿಪಿ ರವಿಪ್ರಸಾದ್ ಉಸ್ತುವಾರಿಯಲ್ಲಿ ಇನ್ಸ್‌ಪೆಕ್ಟರ್‌ ಹಾಗೂ ಸಬ್‌ಇನ್ಸ್‌ಪೆಕ್ಟರ್‌ ಗಳನ್ನು ಒಳಗೊಂಡ 14 ತಂಡಗಳನ್ನು ರಚಿಸಲಾಗಿದೆ. ಸದರಿ ತಂಡಗಳು ಈಗಾಗಲೇ ಮೂರು ದಿನಗಳಿಂದಲೂ ಕೈಗಾರಿಕಾ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ರಸಾಯನಿಕ ಪದಾರ್ಥಗಳ ಆಧಾರಿತ ಕೈಗಾರಿಕೆಗಳು, ಉತ್ಪಾದನಾ ಘಟಕಗಳು, ಕೈಗಾರಿಕಾ ಶೆಡ್‌ಗಳನ್ನು ಗುರಿಯಾಗಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ಹೆಬ್ಬಾಳು, ಹೂಟಗಳ್ಳಿ, ಕೂರ್ಗಳ್ಳಿ, ಮೇಟಗಳ್ಳಿ, ಬನ್ನಿಮಂಟಪ, ಹಿನಕಲ್ ಕೈಗಾರಿಕಾ ಪ್ರದೇಶಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ. ಮೈಸೂರು ನಗರ, ಮೈಸೂರು ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ವ್ಯಾಪ್ತಿಯ 250ಕ್ಕೂ ಹೆಚ್ಚು ಕೈಗಾರಿಕೆಗಳಲ್ಲಿ ತಪಾಸಣೆ ನಡೆಸಲಾಗಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ನಗರದ ರಿಂಗ್ ರಸ್ತೆಯ ಸಿದ್ದಿಕಿ ನಗರ ಸಮೀಪ ಮುಂಬೈ ಪೊಲೀಸರ ವಿಶೇಷ ತಂಡ ದಾಳಿ ನಡೆಸಿ ಎಂಡಿಎಂಎ ಮಾದಕ ವಸ್ತು ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದರು. ಇತ್ತೀಚೆಗೆ ನವದೆಹಲಿಯ ಎನ್‌ಸಿಬಿ ತಂಡದವರು ಹೆಬ್ಬಾಳು ಕೈಗಾರಿಕಾ ಪ್ರದೇಶದ ಪಿನಾಯಿಲ್ ತಯಾರಿಕಾ ಘಟಕದಲ್ಲಿ ಡ್ರಗ್ಸ್ ಪ್ರಯೋಗಾಲಯ ಇರುವುದನ್ನು ಕಂಡು ಹಿಡಿದಿದ್ದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Continue Reading

Mysore

ಕಾಂಗ್ರೆಸ್ ಅಹಾರೋತ್ರಿ ಧರಣಿ ಅಂತ್ಯ

Published

on

ಮೈಸೂರು: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸೋಮವಾರ ಬೆಳಗ್ಗೆ ಅಂತ್ಯಗೊಂಡಿತು.

ಎಐಸಿಸಿ ಸೂಚನೆ ಹಿನ್ನೆಲೆಯಲ್ಲಿ ವಿವಿಧ ಹಂತದ ಹೋರಾಟ ರೂಪಿಸಿದ್ದು, ಮೈಸೂರಿನ ಪುರಭವನ ಆವರಣದಲ್ಲಿ ಸೋಮವಾರ ಅಹೋರಾತ್ರಿ ಸತ್ಯಗ್ರಹ ಸಂಘಟಿಸಲಾಗಿತ್ತು. ಕೆಪಿಸಿಸಿ ಉಪಾಧ್ಯಕ್ಷ, ಮೈಸೂರು ಉಸ್ತುವಾರಿ ವಿ.ಎಸ್.ಉಗ್ರಪ್ಪ ಅವರ ನೇತೃತ್ವದಲ್ಲಿ ರಾತ್ರಿಪೂರ್ತಿ ಪ್ರತಿಭಟನೆ ನಡೆಸಲಾಯಿತು.


ಸೋಮವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಶಾಸಕರು ಪಾಲ್ಗೊಂಡರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟವನ್ನು ಅಂತ್ಯಗೊಳಿಸಲಾಯಿತು.

ಜಾನಪದ ಕಥೆ, ಕಾರ್ಯಕರ್ತರ ಗಾಯನ: ಪ್ರತಿಭಟನೆಯಲ್ಲಿ ತೊಡಗಿದ್ದವರು ನಿದ್ದೆಗೆ ಜಾರದಂತೆ ರಾತ್ರಿ ಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಹಿರಿಯ ರಂಗಕರ್ಮಿ ಎಚ್.ಜನಾರ್ದನ್ (ಜನ್ನಿ) ತಂಡದವರು ಕ್ರಾಂತಿಗೀತೆಗಳನ್ನು ಹಾಡಿದರು.

ಜಾನಪದ ಗಾಯಕ ಮೈಸೂರು ಗುರುರಾಜ್ ಅವರು ಇಡೀ ರಾತ್ರಿ ಮಾದಪ್ಪ, ಮಂಟೇಸ್ವಾಮಿ ಕಥಪ್ರಸಂಗ ಹಾಗೂ ಜನಪದ ಗೀತೆಗಳನ್ನು ಹಾಡಿ ರಂಜಿಸಿದರು. ಗಾಯನದಲ್ಲಿ ಆಸಕ್ತಿ ಇದ್ದ ಕಾಂಗ್ರೆಸ್ ಮುಖಂಡರೂ ವಿವಿಧ ಗೀತೆಗಳನ್ನು ಹಾಡಿ ಗಮನ ಸೆಳೆದರು.

ಬೆಳಗ್ಗೆ 5 ಗಂಟೆಗೆ ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ ಬಿ.ಆರ್. ಅಂಬೇಡ್ಕರ್ ಸಾಕ್ಷö್ಯಚಿತ್ರಗಳನ್ನು ವೀಕ್ಷಿಸಿದರು. ರಾಷ್ಟçಗೀತೆ ಹಾಡಲಾಯಿತು. ಕೊನೆಯದಾಗಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟ ಯಶಸ್ವಿಗೊಂಡಿತು.

ಅಹೋರಾತ್ರಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಮುಖಂಡರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ನಿದ್ದೆಗೆ ಜಾರದಂತೆ ಟೀ, ಕಾಫಿ ವಿತರಿಸಲಾಗುತ್ತಿತ್ತು. ಪಕ್ಷದ ಸೂಚನೆ ಹಿನ್ನೆಲೆಯಲ್ಲಿ ಎಲ್ಲ ಹಂತದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಮಹಿಳೆಯರು ಮುಖಂಡರು ಹಾಜರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಾವಣೆ ಮಾಡಿದೆ. ದೇಶದ ಜನರ ದುಡಿಯುವ ಹಕ್ಕನ್ನ ಕಿತ್ತುಕೊಂಡಿದೆ. ಪ್ರಜಾಪ್ರಭುತ್ವದ ಕತ್ತು ಹಿಚುಕುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ. ನರೇಗಾದಿಂದ 15 ಕೋಟಿ ಜನ ಉದ್ಯೋಗ ಪಡೆಯುತ್ತಿದ್ದರು. ಕೋವಿಡ್ ವೇಳೆ ನರೇಗಾದಿಂದ ಜನರು ಜೀವನ ಸಾಗಿಸಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಲಕ್ಷಾಂತರ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ನೀಡಿ, ಜೀವನಕ್ಕೆ ಆಧಾರವಾಗಿದ್ದ ಮನರೇಗಾ ಯೋಜನೆಯನ್ನು ಬದಲಾವಣೆ ಮಾಡಲಾಗಿದೆ. ಕಾಯ್ದೆ ಮರುಸ್ಥಾಪನೆಗೆ ಆಗ್ರಹಿಸಿ ನಮ್ಮ ಹೋರಾಟ ಮುಂದುವರಿಯಲಿದೆ. ಬಡ ಜನರ ಉದ್ಯೋಗದ ಹಕ್ಕು ಕಸಿಯುವ ಹೊಸ ಕಾಯಿದೆಯನ್ನು ಹಿಂಪಡೆಯಬೇಕು ಎಂದರು.

ಈ ಹಿಂದೆ ಕೇಂದ್ರ ಸರ್ಕಾರವೇ ಮನರೇಗಾಕ್ಕೆ ಹಣ ಕೊಡುತ್ತಿತ್ತು. ಹೊಸ ಕಾಯ್ದೆಯಂತೆ ಈಗ ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ ಶೇ.40 ಕೊಡಬೇಕಿದೆ. ಕೇವಲ ಹೆಸರನ್ನು ಮಾತ್ರ ಬದಲಾವಣೆ ಮಾಡಿದ್ದಾರೆ. ಇದರ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಯಥಾವತ್ತಾಗಿ ಮನ್‌ರೇಗಾ ಯೋಜನೆ ಜಾರಿ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.

ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸಿದೆ. ಗ್ರಾಮೀಣ ಬಡವರ ಬದುಕಿಗೆ ಆಸರೆಯಾಗಿರುವ ಈ ಯೋಜನೆಯನ್ನು ಮರುಜೀವಂತಗೊಳಿಸಬೇಕು. ಮನರೇಗಾ ಮರಳಿ ತರೋಣ ಜನರ ಉದ್ಯೋಗದ ಹಕ್ಕನ್ನು ಉಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಣ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಪುಷ್ಪಾಲತಾ ಚಿಕ್ಕಣ್ಣ, ಮೋದಾಮಣಿ, ಮಾಜಿ ಶಾಸಕರಾದ ಎಚ್.ಪಿ. ಮಂಜುನಾಥ್, ಜಿ.ಎನ್.ನಂಜುಂಡಸ್ವಾಮಿ, ಎಂ.ಕೆ. ಸೋಮಶೇಖರ್, ಜಿಲ್ಲಾಧ್ಯಕ್ಷ ಡಾ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಬಿ.ಎಲ್.ಭೈರಪ್ಪ, ಕೆ.ವಿ. ಮಲ್ಲೇಶ್, ಭಾಸ್ಕರ್ ಎಲ್.ಗೌಡ, ಕೆಪಿಸಿಸಿ ಸಂಯೋಜಕ ಎನ್.ಭಾಸ್ಕರ್, ಎಂ.ಶಿವಣ್ಣ, ರವಿ ಮಂಚೇಗೌಡನಕೊಪ್ಪಲು, ಈಶ್ವರ್ ಚಕ್ಕಡಿ, ಕೆ.ಮಹೇಶ್, ಹುಣಸೂರು ಬಸವಣ್ಣ ಮುಂತಾದವರು ಭಾಗವಹಿಸಿದ್ದರು.

 

Continue Reading

Trending

error: Content is protected !!