National
ಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್ – ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್

ಹೆಚ್.ಡಿ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಹೆಚ್.ಡಿ.ರೇವಣ್ಣ ಪರ ವಕೀಲರ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.
National
ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಕೇಂದ್ರಕ್ಕೆ ಎಚ್‌ಡಿಡಿ ಮನವಿ
ನವದೆಹಲಿ: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ರಾಜ್ಯಸಭೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಭಾಗವಹಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು.

ಈ ವೇಳೆ ರಾಜ್ಯದ ಹಲವು ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರಕ್ಕೆ ಕೈಮುಗಿದು ವಿನಂತಿ ಮಾಡಿಕೊಂಡಿದ್ದಾರೆ.
ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜೊತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದ್ದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಗಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜೊತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜೊತೆಗೇ ಇರುತ್ತೇವೆ. ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ಹೇಳಿದ್ದಾರೆ.
ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜೊತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಉಲ್ಲೇಖ ಮಾಡಿದ್ದಾರೆ.
ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಹೇಳಿದ್ದಾರೆ.
National
ರಾಜ್ಯಕ್ಕೆ ಮತ್ತೊಂದು ಹೈ-ಸ್ಪೀಡ್ ರೈಲ್ವೆ ಕಾರಿಡಾರ್: ಅಶ್ವಿನ್ ವೈಷ್ಣವ್‌ರವರನ್ನು ಭೇಟಿಯಾದ ಎಚ್‌ಡಿಕೆ
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ ಮತ್ತು ರಾಜ್ಯದಲ್ಲಿ ಇನ್ನೂ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಇಂದು ಚರ್ಚೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈಗಾಗಲೇ ರಾಜ್ಯಕ್ಕೆ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಅದಕ್ಕೆ ಹೆಚ್ಚುವರಿಯಾಗಿ ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ನೀಡಲಾಗಿದೆ. ಈ ಮಾರ್ಗವು ಹುಬ್ಬಳ್ಳಿ, ಬೆಳಗಾವಿ ಮೂಲಕ ಹಾದು ಹೋಗಲಿದೆ ಎಂಬುದಾಗಿ ರೈಲ್ವೆ ಸಚಿವರು ತಮಗೆ ತಿಳಿಸಿದರು ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಬೆಂಗಳೂರು-ಮುಂಬೈಗೆ ಹೊಸ ರೈಲು ಪ್ರಾರಂಭಿಸಲಾಗುವುದು ಎಂಬ ಮಾಹಿತಿಯನ್ನು ರೈಲ್ವೆ ಸಚಿವರು ತಮಗೆ ಮಾಹಿತಿ ನೀಡಿದರು. ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ಹಾಗೂ ಬೆಂಗಳೂರು-ಮುಂಬೈ ನಡುವಿನ ಹೊಸ ರೈಲಿನಿಂದ ಕರ್ನಾಟಕಕ್ಕೆ ಮತ್ತಷ್ಟು ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.
National
ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್‌ಗೆ ಎಚ್‌ಡಿಕೆ ಮನವಿ

-
Politics18 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Kodagu24 hours agoಕಾರೆಕೆರೆ ಕಾವಲು: 47 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಿಗೆ ಆಗ್ರಹ
-
Kodagu24 hours agoಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ
-
Special2 hours agoBSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
-
Hassan21 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
Hassan16 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
National20 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್‌ಗೆ ಎಚ್‌ಡಿಕೆ ಮನವಿ
-
Mysore2 hours agoಫುಟ್ಪಾತ್ ವ್ಯಾಪಾರಿಗಳಿಗೆ ನಂಜನಗೂಡು ನಗರಸಭೆ ಆಯುಕ್ತ ಎಂ. ಬಸವರಾಜು ಎಚ್ಚರಿಕೆ
