Connect with us

Kodagu

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ

Published

on

ಮಡಿಕೇರಿ : ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಕೆ.ಎಸ್.ಭರತ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇವರೊಂದಿಗೆ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಉ?ರಾಣಿ ಹಾಗೂ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ವಿ.ಭವಾನಿ ಅವರು ಕೂಡ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಭಿನಂದಿಸಿದರು.ಈ ಮೂವರನ್ನು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಹುದ್ದೆಗಳಿಗೆ ಪರಿಗಣಿಸುವಂತೆ ಸೆ.10ರಂದು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.

ಕೊಡಗಿನ ಭರತ್ ಕುಮಾರ್ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ವಿರಾಜಪೇಟೆಯವರಾಗಿದ್ದು, ಬೋರೇಗೌಡ ಕಾಂಪ್ಲೆಕ್ಸ್ ಮಾಲೀಕರು, ಜಿಲ್ಲಾ ಪರಿ?ತ್ ಮಾಜಿ ಸದಸ್ಯರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಬಿ.ಶಾಂತಪ್ಪ ಹಾಗೂ ರತ್ನಮ್ಮ ಅವರ ಜೇ? ಪುತ್ರರಾಗಿದ್ದಾರೆ.

ಇವರು 2೦೦2 ರಿಂದ 2೦೦4 ರವರೆಗೆ ಜಮ್ಶೆಡ್ ಪುರದ ಟಾಟಾ ಸ್ಟೀಲ್ ಸಂಸ್ಥೆಯಲ್ಲಿ ಮುಖ್ಯ ಕಾನೂನು ಸಲಹೆಗಾರರಾಗಿ, ೨೦೦೪ ರಿಂದ 2೦15ರವರೆಗೆ ಕರ್ನಾಟಕ ಹೈಕೋರ್ಟ್‌ನ ವಕೀಲರಾಗಿ ಕಾರ್ಯನಿರ್ವಹಿಸಿದರು. 2೦15ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾಗಿ 2೦16ರವರೆಗೆ ತುಮಕೂರು ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ.

2೦16 ರಿಂದ 2೦2೦ರ ವರೆಗೆ ಮೈಸೂರು ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಣೆ, 2೦2೦ ರಿಂದ ಕರ್ನಾಟಕ ಹೈಕೋರ್ಟ್ ನಲ್ಲಿ ರಿಜಿಸ್ಟ್ರಾರ್ ಜುಡಿಶಿಯಲ್, ರಿಜಿಸ್ಟ್ರಾರ್ ವೆಜಿಲೆನ್ಸ್ ಹಾಗೂ ರಿಜಿಸ್ಟ್ರಾರ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದಾರೆ. 2೦26 ಜೂನ್ 1 ರಿಂದ ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ.ಎಸ್.ಭರತ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಒಂದರಿಂದ ಏಳನೇ ತರಗತಿಯವರೆಗೆ ಅಮ್ಮತ್ತಿಯ ಗುಡ್ ಶಫರ್ಡ್ ಶಾಲೆ, ಎಂಟನೇ ತರಗತಿಯಿಂದ ಪಿಯುಸಿಯವರೆಗೆ ಅಳಿಕೆಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡಿದರು. ಬೆಂಗಳೂರು ನ್ಯಾ?ನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ವಕೀಲ ಪದವಿ ಪಡೆದರು. ಕಾಲೇಜ್ ನ ಕುಲಪತಿಗಳಾದ ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಆನಂದ್ ಅವರಿಂದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯೊಂದಿಗೆ ಚಿನ್ನದ ಪದಕ ಪಡೆದಿರುವ ಹೆಗ್ಗಳಿಕೆಗೆ ಕೆ.ಎಸ್.ಭರತ್ ಕುಮಾರ್ ಪಾತ್ರಾಗಿದ್ದಾರೆ.ತಮ್ಮ ಪುತ್ರನ ಸಾಧನೆಯ ಬಗ್ಗೆ ಕೆ.ಬಿ.ಶಾಂತಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

Kodagu

ಮೂರ್ನಾಡು ಗಣೇಶೋತ್ಸವದ ಅಂಗವಾಗಿ ಗಜೇಂದ್ರ ಯುವಶಕ್ತಿ ಸಂಘದಿಂದ ಸಮಾಜಮುಖಿ ಕಾರ್ಯಕ್ರಮ

Published

on

ನಾಪೋಕ್ಲು: ಮೂರ್ನಾಡುವಿನ ಗಜೇಂದ್ರ ಯುವಶಕ್ತಿ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶೋತ್ಸವ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಉತ್ಸವದ ಅಂಗವಾಗಿ ಆಯೋಜಿಸರಾದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ, ಸಮಾಜಸೇವೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದವರನ್ನು ಗೌರವಿಸುವುದು ಸೇರಿದಂತೆ ವಿಕಲಚೇತನ ಕುಟುಂಬಕ್ಕೆ ಗೃಹಬಳಕೆ ವಸ್ತುಗಳ ಕಿಟ್ ವಿತರಿಸುವ ಕಾರ್ಯಕ್ರಮ ನಡೆಯಿತು.ನಾಪೋಕ್ಲು ರಸ್ತೆಯಲ್ಲಿರುವ ಹನುಮಾನ್ ಟ್ರೇಡರ್ಸ್ ಸಭಾಂಗಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗೆ ಏಳು ದಿನಗಳ ಕಾಲ ಪೂಜೆ ಸಲ್ಲಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಮೂರ್ನಾಡುವಿನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಉಮೇಶ್ ಬಂಗೇರ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿಗಜೇಂದ್ರ ಯುವಶಕ್ತಿ ಸಂಘವು ಗಣೇಶೋತ್ಸವಕ್ಕೆ ಮಾತ್ರ ಸೀಮಿತವಾಗದೆ ಕಳೆದ ನಾಲ್ಕು ವರ್ಷಗಳಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ಯುವಪೀಳಿಗೆಯಿಂದ ಮುಂದುವರಿಯಬೇಕೆಂದು ಕಾರ್ಯಕ್ರಮಕ್ಕೆ ಶುಭಕೋರಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಹಾಗೂ ದಾನಿಗಳಾದ ಬಾಚ್ಚೇಟಿರ ಕಮಲು ಮುದ್ದಯ್ಯ, ಗಣೇಶ ಮೂರ್ತಿ ದಾನಿಗಳಾದ ಕಿಗ್ಗಾಲು ಗ್ರಾಮದ ಡಿ.ಟಿ. ಲೀಲಾ ಹಾಗೂ ಉದ್ಯಮಿ ಕಿರಣ್ ರಾಮಚಂದ್ರ ಉಪಸ್ಥಿತರಿದ್ದರು.ಕಳೆದ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೂರ್ನಾಡು ಸರ್ಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ನಫೀಸತುಲ್ ಮಿಶ್ರಿಯ, ಟಿ.ಎ. ಲಲಿತ, ಎ.ಅತೀರಾ ಹಾಗೂ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಹೆಚ್.ಜಿ. ಜನೀಷಾ ಬೋಜಮ್ಮ, ಬಿ.ಹೆಚ್. ಬೃಂದಾ ಮತ್ತು ಆರ್. ಪುಣ್ಯ ರೆಡ್ಡಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಪ್ರೋತ್ಸಾಹಧನ ವಿತರಿಸಲಾಯಿತು.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಷ್ಟ್ರೀಯ ಹಾಕಿ ಕ್ರೀಡಾಪಟು ಮೂರ್ನಾಡಿನ ಎಂ. ಹರ್ಷತ್ ಕುಮಾರ್ ಹಾಗೂ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಬಲಮುರಿ ಗ್ರಾಮದ ಮುಳುಗು ತಜ್ಞ ಎಂ.ಆರ್. ಬಿಪಿನ್ ಅವರನ್ನು ಶಾಲು ಹೊದಿಸಿ, ಫಲತಾಂಬೂಲ ನೀಡಿ ಗೌರವಿಸಲಾಯಿತು.ಇದೇ ಸಂದರ್ಭದಲ್ಲಿ ದಿವಂಗತ ಜೆ.ಎ. ಮಹೇಶ್ ಹಾಗೂ ದಿವಂಗತ ಬೇಬಿ ಅವರ ಪುತ್ರ ಜಿ.ಎಂ. ಜ್ಞಾನೇಶ್ ಅವರ ಕುಟುಂಬಕ್ಕೆ ಸಂಘದ ವತಿಯಿಂದ ವಿಕಲಚೇತನ ಗೃಹಬಳಕೆ ವಸ್ತುಗಳ ಕಿಟ್ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಜೇಂದ್ರ ಯುವಕ ಸಂಘದ ಅಧ್ಯಕ್ಷ ಸಿ.ಪಿ. ಸುಬ್ರಮಣಿ ವಹಿಸಿದ್ದರು.ನವ ಮಾನ್ಯ ಪ್ರಾರ್ಥಿಸಿ, ಶಿಕ್ಷಕ ರೋಶನ್ ಸ್ವಾಗತಿಸಿ ವಂದಿಸಿದರು.

ವರದಿ :ಝಕರಿಯ ನಾಪೋಕ್ಲು

Continue Reading

Kodagu

ಕಕ್ಕಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 24.76 ಲಕ್ಷ ರೂ.ಲಾಭ

Published

on

ನಾಪೋಕ್ಲು : ಕಕ್ಕಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 50ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಕಟ್ಟಡದಲ್ಲಿ ಅಧ್ಯಕ್ಷರಾದ ಕಲ್ಯಾಟಂಡ ಎ.ರಘು ತಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ರಘು ತಮ್ಮಯ್ಯ, ಸಂಘವು 20 ಕೋಟಿ 56 ಲಕ್ಷ ರೂ. ದುಡಿಯುವ ಬಂಡವಾಳ ಹೊಂದಿದ್ದು, ಒಟ್ಟು 1,204 ಮಂದಿ ಸದಸ್ಯರನ್ನು ಹೊಂದಿದೆ. 1 ಕೋಟಿ 35 ಲಕ್ಷ ರೂ. ಪಾಲು ಬಂಡವಾಳ ಹೊಂದಿರುವ ಸಂಘವು ಕೆಸಿಸಿ ಸಾಲವಾಗಿ 9 ಕೋಟಿ 20 ಲಕ್ಷ ರೂ., ಜಾಮೀನು ಸಾಲವಾಗಿ 1 ಕೋಟಿ 40 ಲಕ್ಷ ರೂ. ಸೇರಿದಂತೆ ವಿವಿಧ ಸಾಲಗಳನ್ನು ವಿತರಿಸಿದೆ.

ವ್ಯಾಪಾರ ವಹಿವಾಟಿನ ಮೂಲಕ ಸಂಘವು 24 ಲಕ್ಷ 76 ಸಾವಿರ ರೂ. ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9ರಷ್ಟು ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.ಸಂಘದ 796 ಮಂದಿ ಸದಸ್ಯರು ಮರಣ ನಿಧಿ ಹಾಗೂ ಇತರ ಪಾವತಿಗಳನ್ನು ಬಾಕಿ ಉಳಿಸಿಕೊಂಡಿದ್ದು, ಕೂಡಲೇ ಬಾಕಿ ಪಾವತಿಸುವಂತೆ ರಘುತಮ್ಮಯ್ಯ ಮನವಿ ಮಾಡಿದರು.ಸಂಘವು ಸತತವಾಗಿ ‘ಎ’ ಗ್ರೇಡ್ ಶ್ರೇಣಿಯಲ್ಲಿ ಮುಂದುವರಿಯುತ್ತಿದ್ದು, ನಾಲ್ಕು ಗ್ರಾಮಗಳ ಸದಸ್ಯರ ಬೇಡಿಕೆಯಂತೆ ಸಂಘದ ಕಟ್ಟಡದಲ್ಲಿ ಕೆಡಿಸಿಸಿ ಬ್ಯಾಂಕ್ ಶಾಖೆ ಆರಂಭವಾಗಿದ್ದರಿಂದ ಸದಸ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದರು.

ಸಂಘದ ಸಾಲ ನೀಡುವ ವ್ಯವಸ್ಥೆಯನ್ನು ಗಣಕೀಕರಣಗೊಳಿಸಲಾಗಿದ್ದು, ಸರ್ಕಾರದ ಸಾಲ ನಿಯಮಗಳಂತೆ ಎಲ್ಲಾ ಸದಸ್ಯರು ಕೃಷಿ ಇಲಾಖೆಯಿಂದ ಎಫ್‌ಐಡಿ ಮಾಡಿಸಿಕೊಂಡು ಸಾಲ ಪಡೆಯಬೇಕು ಎಂದು ತಿಳಿಸಿದರು. ಈಗಾಗಲೇ ಸಂಘದಿಂದ ಸಾಲ ಪಡೆದಿರುವ ಸದಸ್ಯರನ್ನು ಕಾವೇರಿ-2 ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 296 ಮಂದಿ ಸದಸ್ಯರು ನೋಂದಣಿಯಾಗಿದ್ದಾರೆ.
ಸಂಘವು ಇನ್ನಷ್ಟು ಲಾಭ ಗಳಿಸಲು ಎಲ್ಲಾ ಸದಸ್ಯರು ಸಂಘದೊಂದಿಗೆ ಹೆಚ್ಚಿನ ವ್ಯಾಪಾರ ವಹಿವಾಟು ನಡೆಸಿ ಸಹಕರಿಸಬೇಕೆಂದು ರಘು ತಮ್ಮಯ್ಯ ಮನವಿ ಮಾಡಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಮಂಜುಳಾ ಅವರು ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದ್ದು, ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.ಸಂಘದ ಸದಸ್ಯರ ಅನುಕೂಲಕ್ಕಾಗಿ ಸಂಘದಲ್ಲಿ ಇ ಸ್ಟ್ಯಾಂಪ್ ವ್ಯವಸ್ಥೆ ಮಾಡಲಾಗುತ್ತಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಅಲ್ಲಾರಂಡ ಅಯ್ಯಪ್ಪ, ನಿರ್ದೇಶಕರಾದ ಬಡಕಡ ಎಂ.ಬೆಳ್ಯಪ್ಪ, ನಿಡುಮಂಡ ಹರೀಶ್ ಪೂವಯ್ಯ, ಕಲ್ಯಾಟಂಡ ಎಂ.ಬೋಪಣ್ಣ, ಕೋಡಿಮಣಿಯಂಡ ಎಂ. ನಾಣಯ್ಯ, ಪರದಂಡ ಯು. ಕರುಂಬಯ್ಯ, ನಂಬಡಮಂಡ ಬಿ.ಸುನಿತಾ, ಪರದಂಡ ಪ್ರಮೀಳಾ ಪೆಮ್ಮಯ್ಯ, ಎ.ಎನ್. ಲಕ್ಷ್ಮಣ, ಪಿ.ಟಿ. ಕಾರ್ಯಪ್ಪ, ಕುಡಿಯರ ಅಚ್ಚಯ್ಯ, ಕೆಡಿಸಿಸಿ ಬ್ಯಾಂಕಿನ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರಮೀಳಾ ಪೆಮ್ಮಯ್ಯ ಪ್ರಾರ್ಥಿಸಿದರು.ತಮ್ಮಯ್ಯ ಸ್ವಾಗತಿಸಿ,ಬೆಳ್ಯಪ್ಪ ವಂದಿಸಿದರು.

Continue Reading

Kodagu

ನಾಪೋಕ್ಲು ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Published

on

ನಾಪೋಕ್ಲು :ಮಡಿಕೇರಿ ತಾಲೂಕಿನ ನಾಪೋಕ್ಲು ವೃತ್ತದ ಬೇತು ಹಾಗೂ ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಾಪೋಕ್ಲು ವೃತ್ತದ ಮೇಲ್ವಿಚಾರಕಿ ಶೀಲಾ ಅಶೋಕ್,ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹಾಗೂ ಆಶಾ ಕಾರ್ಯಕರ್ತೆ ಆಶಾ ಅಪ್ಪಣ್ಣ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಮಾತನಾಡಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮೇಲ್ವಿಚಾರಕಿ ಶೀಲಾ ಅಶೋಕ್ ಮಾತನಾಡಿ ಸ್ಥಳೀಯವಾಗಿ ದೊರೆಯುವ ಹಣ್ಣು ಮತ್ತು ತರಕಾರಿಗಳನ್ನು ಪ್ರತಿನಿತ್ಯ ಆಹಾರದಲ್ಲಿ ಬಳಸುವಂತೆ ಸಲಹೆ ನೀಡಿದರು. ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಅವರು ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಯಾರಿಸಿದ ವಿವಿಧ ಬಗೆಯ ಪೌಷ್ಟಿಕ ಆಹಾರಗಳ ಪದಾರ್ಥಗಳ ಪ್ರದರ್ಶನ ನಡೆಸಾಲಯಿತು.ಈಸಂದರ್ಭ ಕಾರ್ಯಕ್ರಮದಲ್ಲಿ ನಾಪೋಕ್ಲು ವೃತ್ತದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿಯರು,ಆಶಾ ಕಾರ್ಯಕರ್ತೆಯರು, ಪೋಷಕರು, ಮಕ್ಕಳು ಹಾಗೂ ಅಂಗನವಾಡಿ ಸಹಾಯಕಿಯರು ಹಾಜರಿದ್ದರು.

ವರದಿ :ಝಕರಿಯ ನಾಪೋಕ್ಲು

Continue Reading

Trending

error: Content is protected !!