Mysore
ಕೆ.ಸೌಮ್ಯಗೆ ಪಿ.ಎಚ್‌ಡಿ. ಪದವಿ
ಮೈಸೂರು: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಂಗ್ಲಿಷ್ ಅಧ್ಯಯನ ವಿಭಾಗದ
ಸಹಾಯಕ ಪ್ರಾಧ್ಯಾಪಕ ಡಾ.ಸಂತೋಷ.ಜಿ.ಕೆ. ಅವರ ಮಾರ್ಗದರ್ಶನದಲ್ಲಿ ಸೌಮ್ಯ ಕೆ. ಅವರು ಸಲ್ಲಿಸಿದ ನರೇಟಿಂಗ್ ಸೆಲ್ಸ್ : ಆಂಡಸ್ವಾಡಿಂಗ್ ದ ಪೆಮಿನಿಸಂ ಇನ್ ದ ಸೆಲೆಕ್ಸ್ ದಲಿತ್ ವಿಮೆನ್ಸ್ ರೈಟಿಂಗ್ಸ್, ಎಂಬ ಮಹಾ ಪ್ರಬಂಧಕ್ಕೆ ಸದರಿ ವಿಶ್ವವಿದ್ಯಾನಿಲಯ
ಡಾಕ್ಟರೆಟ್ ಪದವಿ ನೀಡಿದೆ.

ಮುಂದಿನ ಶೈಕ್ಷಣಿಕ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ನೀಡಲಾಗುವುದು. ಸೌಮ್ಯ ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 14 ವರ್ಷಗಳು ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದು, ಪ್ರಸ್ತುತ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಇಂಗ್ಲಿಷ್ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿದ್ದಾರೆ.ಅವರ ಪತಿ, ಸಹ ಪ್ರಾಧ್ಯಾಪಕ ಗೋವಿಂದರಾಜು , ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Mysore
ಮಡಿವಾಳ ಮಾಚಿದೇವರಂತಹ ತತ್ವ , ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಟಿ.ಜಿ. ಸುರೇಶ್ ಆಚಾರ್
ತಿ.ನರಸೀಪುರ: ಸಂತ, ಸಮಾಜ ಸುಧಾರಕ ಶ್ರೀ ವೀರ ಮಡಿವಾಳ ಮಾಚಿದೇವರ ಜಯಂತಿಯನ್ನು ತಾಲೂಕು ಆಡಳಿತ ಮತ್ತು ತಾಲೂಕು ವೀರ ಮಡಿವಾಳ ಮಾಚಿದೇವರ ಸಂಘದ ಸಹಯೋಗದಲ್ಲಿ ಆಚರಿಸಲಾಯಿತು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರದಲ್ಲಿ ಶ್ರೀ ಮಾಚಿ ದೇವರ ಭಾವಚಿತ್ರಕ್ಕೆ ತಹಸೀಲ್ದಾರ್ ಟಿ.ಜಿ. ಸುರೇಶ್ ಆಚಾರ್ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದ ಅವರು, ಶರಣ ಜಯಂತಿ ಆಚರಣೆ ಕೇವಲ ನಾಮಕಾವಸ್ಥೆ ಆಗಬಾರದು. ಮಹನೀಯ ತತ್ವ ಮತ್ತು ಆದರ್ಶಗಳನ್ನು ನಾವು ಅಳವಡಿಸಿಕೊಳ್ಳುವ ಮುಖೇನ ಅವರ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸುವಂತಾಗಬೇಕು ಎಂದರು.
ತಳ ಸಮುದಾಯಗಳ ಹಿಂದುಳಿಯುವಿಕೆ ಶಿಕ್ಷಣದ ಕೊರತೆ ಒಂದು ಪ್ರಮುಖ ಅಂಶವಾಗಿದೆ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯದ ಜನರು ತಮ್ಮ ಮಕ್ಕಳಿಗೆ ಕೇವಲ ಕುಲಕಸುಬನ್ನು ಮಾತ್ರ ಕಲಿಸದೆ ಮೌಲ್ಯಯುತ ಶಿಕ್ಷಣ ಕೊಡಿಸುವ ಕಡೆ ಹೆಚ್ಚು ಗಮನ ಕೇಂದ್ರೀಕರಿಸಬೇಕು. ಆಗಮಾತ್ರ ಸಮುದಾಯದ ಏಳಿಗೆ ಸಾಧ್ಯವಾಗುತ್ತದೆ ಎಂದರು.

ತಾಲೂಕು ಶ್ರೀ ವೀರ ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ಬಿ.ಎಸ್.ರವಿ ಮಾತನಾಡಿ, ನಮ್ಮ ಸಮುದಾಯ ರಾಜಕೀಯ ಸ್ಥಾನಮಾನ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಲು ಎಲ್ಲರು ಸಂಘಟನೆಗೊಳ್ಳಬೇಕು. ಫೆ.20ರಂದು ಬನ್ನೂರು ಹೋಬಳಿ ಘಟಕದ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿ ಆಚರಣೆಯನ್ನು ಬನ್ನೂರಿನ ಫುಟ್ ಬಾಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಹಲವು ಗಣ್ಯರು, ವಿವಿಧ ಮಠಗಳ ಶ್ರೀಗಳು ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರೇಡ್ -2 ತಹಸೀಲ್ದಾರ್ ರಾಜಾಕಾಂತ್, ಸವಿತಾ ಸಮಾಜದ ಮುಖಂಡ ಸಿದ್ದೇಶ್, ತಾಲೂಕು ವೀರ ಮಡಿವಾಳ ಮಾಚಿದೇವರ ಸಂಘದ ಗೌರವಾಧ್ಯಕ್ಷ ನಿಂಗರಾಜ್,ಉಪಾಧ್ಯಕ್ಷ ಪ್ರಭುಲಿಂಗಶೆಟ್ಟಿ,ಪ್ರಧಾನ ಕಾರ್ಯದರ್ಶಿ ಕೆ.ಮಹದೇವಶೆಟ್ಟಿ, ಸಹಕಾರ್ಯದರ್ಶಿ ಚಿದರವಳ್ಳಿ ರಂಗಸ್ವಾಮಿ, ಖಜಾಂಚಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಮ್ಮ,ಮಹಿಳಾ ಪ್ರಧಾನ ಕಾರ್ಯದರ್ಶಿ ಮಹದೇವಮ್ಮ,ಸಂಚಾಲಕರಾದ ಮಾಯಿಗಯ್ಯ,ನಿಂಗಶೆಟ್ಟಿ, ನಿಂಗರಾಜು,ಮೋಹನ್ ಕುಮಾರ್,
ಸಂಚಾಲಕಿ ಶಿಲ್ಪಾ, ಬನ್ನೂರು ಹೋಬಳಿ ಅಧ್ಯಕ್ಷೆ ಗೀತಾ, ಪ್ರಧಾನ ಕಾರ್ಯದರ್ಶಿ ಮಂಗಳಾ, ಮುಖಂಡರಾದ ಮಹದೇವ್, ಮೋಹನ್,ಮಹೇಶ್, ಸಿದ್ದರಾಜು, ಕುಮಾರ್, ಕಾಂತರಾಜ್,ಮಹೇಶ್ ಕುಮಾರ್, ಬಸವರಾಜು,ಕುಮಾರ್, ಹನುಮಂತ್,ಚೆಲುವಯ್ಯ ಇತರರು ಹಾಜರಿದ್ದರು.
Mysore
ರಾಜ್ಯ ಸರ್ಕಾರ ಮನರೇಗಾ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಸದಾನಂದ
ತಿ.ನರಸೀಪುರ: ಅಭಿವೃದ್ಧಿ ಭಾರತ ಕನಸು ಹೊತ್ತು ಪುನರ್ ನಾಮಕರಣಗೊಂಡಿರುವ ಜಿ ರಾಮ್ ಜಿ ಯೋಜನೆಗೆ ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನ ಹೊಂದಿಸಲಾಗದೆ ಯೋಜನೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮಾಜಿ ಜಿ.ಪಂ. ಸದಸ್ಯ ಮತ್ತು ಎಂಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸದಾನಂದ ಆರೋಪಿಸಿದರು.
ಪಟ್ಟಣದ ಕಬಿನಿ ಅತಿಥಿಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಸದುದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಿ ರಾಮ್ ಜಿ (ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಎಂದು ಮರುನಾಮಕರಣ ಮಾಡಿದೆ.

ಯೋಜನೆಯ ಒಟ್ಟು ಅನುದಾನದ ಪೈಕಿ ಕೇಂದ್ರ ಸರ್ಕಾರ ಶೇ.60 ಮತ್ತು ರಾಜ್ಯ ಸರ್ಕಾರ ಶೇ.40 ಅನುದಾನವನ್ನು ನೀಡುವಂತೆ ಹಂಚಿಕೆ ಮಾಡಿದ್ದು, ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಜನರ ಕೂಲಿಗಾಗಿ ವ್ಯಯಿಸಲಾಗದೆ ಯೋಜನೆಯ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡಿ ಅಪ್ರಚಾರ ನಡೆಸುತ್ತಿದೆ ಎಂದು ಕಿಡಿಕಾರಿದರು.
ಈ ಹಿಂದೆ ಇದೇ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮೀಣ ಜನರಿಗೆ ವರ್ಷಕ್ಕೆ 100 ದಿನಗಳು ಕೂಲಿ ನೀಡಲಾಗುತ್ತಿತ್ತು. ಆದರೆ, ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಜನರಿಗೆ ಪ್ರತಿ ವರ್ಷಕ್ಕೆ 125 ದಿನಗಳ ಕೂಲಿ ನೀಡುವುದರ ಜತೆಗೆ ಕೂಲಿ ಮೊತ್ತವನ್ನು ಕೂಡ ಹೆಚ್ಚಳ ಮಾಡಿದೆ. ಇದನ್ನು ಸಹಿಸಲಾಗದ ರಾಜ್ಯ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ ಎಂದರು.
ರಾಜ್ಯ ಕಾಂಗ್ರೇಸ್ ಸರ್ಕಾರ ತನ್ನ ರಾಜಕೀಯ ಗುಲಾಮಗಿರಿತನವನ್ನು ಮುಂದುವರೆಸುತ್ತಿದ್ದು, ಕಾಂಗ್ರೇಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಜಾರಿಗೆ ಬಂದ ಎಲ್ಲ ಯೋಜನೆಗಳಿಗೆ ನೆಹರು ಮನೆತನದ ಹೆಸರುಗಳನ್ನು ಬಿಟ್ಟರೆ ಬೇರಾವ ಹೆಸರುಗಳನ್ನು ನಾಮಕರಣ ಮಾಡಿಲ್ಲ, ರಾಜೀವ್ ಗಾಂಧಿ ವಿಶ್ವ ವಿದ್ಯಾಲಯ, ಇಂದಿರಾ ಗಾಂಧಿ ವಿಶ್ವವಿದ್ಯಾಲಯ, ರಾಜೀವ್ ಗಾಂಧಿ ವಸತಿ ಯೋಜನೆ, ಇಂದಿರಾ ಕ್ಯಾಂಟೀನ್ ಯೋಜನೆಗಳು ಇದಕ್ಕೆ ತಾಜಾ ಉದಾಹರಣೆ. ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ ಜಾರಿಗೆ ಬಂದ ಯೋಜನೆಗೆ ಇಂದಿರಾ ಕ್ಯಾಂಟೀನ್ ಹೆಸರಿಡುವ ಬದಲು ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಮಾಣಿಕವಾಗಿ ದುಡಿದ ಪಿ.ವಿ.ನರಸಿಂಹ ರಾವ್, ಲಾಲ್ ಬಹದ್ದೂರ್ ಶಾಸ್ತ್ರಿ, ಡಿ.ದೇವರಾಜ ಅರಸು ಇಲ್ಲವೇ ಅಂಬೇಡ್ಕರ್ ಅವರ ಹೆಸರನ್ನು ಇಡಬಹುದಿತ್ತು. ಆದರೆ, ಈ ಯೋಜನೆಗೆ ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಗುಲಾಮಗಿರಿ ಮನಸ್ಥಿತಿಯನ್ನು ಜಗತ್ತಿಗೆ ತೋರ್ಪಡಿಸಿದ್ದಾರೆ ಎಂದು ಕಿಡಿಕಾರಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಮಾಜಿ ಸದಸ್ಯವೆಂಕಟರಮಣಸ್ವಾಮಿ, ಮಂಡಲ ಅಧ್ಯಕ್ಷ ಶಿವಕುಮಾರ್ (ಸತ್ಯಪ್ಪ ) ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಯಾನಂದ ಪಟೇಲ್, ಪುರಸಭೆ ಮಾಜಿ ಸದಸ್ಯ ಎಸ್.ಕೆ.ಕಿರಣ್, ಟೌನ್ ಅಧ್ಯಕ್ಷ ನಂಜುಂಡಸ್ವಾಮಿ, ಡಾ.ಮಲ್ಲಿಕಾರ್ಜುನ ಸ್ವಾಮಿ, ಕಿರಗಸೂರು ಮಹದೇವಸ್ವಾಮಿ, ರಾಜಶೇಖರ್, ಪುಟ್ಟಸ್ವಾಮಿ ಇತರರು ಹಾಜರಿದ್ದರು.
Mysore
ಮೈಸೂರು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಿ: ಡಾ: ಪಿ. ಶಿವರಾಜ್
ಮೈಸೂರು: ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು ಎಂದರು.

ಫೆ.11 ರಂದು ಕಾರ್ಯಾಗಾರ:
2025 26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಚಲಿತ ಮಕ್ಕಳ ಸಮಸ್ಯೆಗಳನ್ನು ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಫೆಬ್ರವರಿ 11 ರಂದು ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಆಯೋಜಿಸಲಾಗುವುದು ಎಂದರು.
ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಎಲ್ಲಾ ಇಲಾಖೆಗಳಿಂದ ಸರ್ಕಾರದಿಂದ ನೇಮಿಸಲ್ಪಟ್ಟಿರುವ ಎಲ್ಲಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಗಾರಕ್ಕೆ ಹಾಜರಾಗಿ ತರಬೇತಿಯನ್ನು ಪಡೆದು ಮೈಸೂರು ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕಾರ್ಯಗಾರವನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್. ಮಂಜು ಮಾತನಾಡಿ, 18 ವರ್ಷದ ಒಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಪ್ರತಿಯೊಬ್ಬ ಅಧಿಕಾರಿಯು ಮಕ್ಕಳ ಹಕ್ಕುಗಳನ್ನ ರಕ್ಷಣೆ ಮಾಡುವುದರ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್. ಟಿ.ಯೋಗೇಶ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರವಿಚಂದ್ರ ಸದಸ್ಯ ಮಹದೇವ್ ಕೋಟೆ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದರು.
-
Manglore18 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan17 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
-
Hassan18 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Hassan19 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Mandya23 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
National20 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State21 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Hassan21 hours agoಬಾರ್ನಲ್ಲಿ ಕುಡಿಯುವಾಗ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಗಲಾಟೆ
