Mandya
ಮಡಿವಾಳ ಮಾಚಿದೇವ ಶರಣರು ಶೋಷಿತ ಸಮುದಾಯಗಳ ವಿರುದ್ಧ ಹೋರಾಡಿದ ಮಹಾನ್ ಪುರುಷ: ಕೆ.ಟಿ.ಶಿವಕುಮಾರ್
ಮದ್ದೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಸಾಹಿತ್ಯ ಪರಿಷತ್ ವತಿಯಿಂದ ಮಡಿವಾಳ ಮಾಚಿದೇವ ಜಯಂತಿಯನ್ನು ಪುಷ್ಪಾರ್ಚನೆ ಮಾಡಿ ಮಾತನಾಡಿದ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಟಿ. ಶಿವಕುಮಾರ್ ಅವರು, ಮಡಿವಾಳ ಮಾಚಿದೇವ ಶರಣರು 12ನೇ ಶತಮಾನದಲ್ಲಿ ಶೋಷಿತ ಸಮುದಾಯಗಳ ಶೋಷಣೆ ವಿರುದ್ಧ ಹೋರಾಡಿದ ಮಹಾ ಪುರುಷ, ಅಸಮಾನತೆ ವಿರುದ್ಧ ಹೋರಾಡಿ ಶಿಕ್ಷಣ, ಸಮಾನತೆ ನೀಡಲು ಪ್ರಯತ್ನಿಸಿದರು ಎಂದು ತಿಳಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಶಿವಣ್ಣ ಮಾತನಾಡಿದರು ಕಾರ್ಯಕ್ರಮದಲ್ಲಿ ದಲಿತ ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಕಾರ್ಕಳ್ಳಿ ಬಸವರಾಜು ಸಹಕಾರ್ಯದರ್ಶಿ ರಾಚಯ್ಯ, ತೂಬಿನಕೆರೆ ರಮೇಶ್, ಕೆ. ಜೆ. ಗೋವಿಂದ ರಾಜ್, ಬೂದಗೂಪ್ಪೆ ಪುಟ್ಟ ಲಿಂಗಯ್ಯ ಅಹಿಂದ ಸಂರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ ಸಂಘಟನಾ ಕಾರ್ಯದರ್ಶಿ ಶಶಿ ಕುಮಾರ್ ಪಿ., ಸಾಂಸ್ಕೃತಿಕ ಕಾರ್ಯದರ್ಶಿ ದಾಕ್ಷಾಯಿಣಿ ವೆಂಕಟೇಶ್, ನಗರ ಕೆರೆ ಜಯರಾಮು, ಶಿಕ್ಷಕ ರಮೇಶ್ ಮೋಹನ್,ವಳಗೆರೆಹಳ್ಳಿ ಶ್ರೀನಿವಾಸ, ತಗ್ಗಹಳ್ಳಿ ರಾಮಕೃಷ್ಣ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಂಜುಂಡೇಗೌಡ, ಗಂಗರಾಜ್ ಮಹಮದ್ ಗೌಸ್ ,ಅಲಂಶೆಟ್ಟಹಳ್ಳಿ ನಟರಾಜ್, ಪುರುಷೋತ್ತಮ ಹಾಗೂ ಇತರರು ಇದ್ದರು.
Mandya
ಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
ಪಾಂಡವಪುರ : ಪುಸ್ತಕ ಮನೆ ಸ್ಥಾಪನೆ ಮಾಡಿ ಇಪ್ಪತ್ತು ಭಾಷೆಯ ಇಪ್ಪತ್ತು ಲಕ್ಷಕ್ಕೂ ಅಧಿಕ ಪುಸ್ತಕಗಳನ್ನು ಸಂಗ್ರಹಿಸಿ ವಿಶಿಷ್ಟ ಸಾಧನೆ ಮಾಡಿರುವ ಅಂಕೇಗೌಡ ಅವರ ಪುಸ್ತಕ ಪ್ರೀತಿ ಇಂದಿನ ಯುವಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು.
ತಾಲೂಕಿನ ಹರಳಹಳ್ಳಿಯಲ್ಲಿರುವ ಪುಸ್ತಕ ಮನೆಯಲ್ಲಿ 2026 ನೇ ಸಾಲಿನ ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಎಂ..ಅಂಕೇಗೌಡ ಅವರನ್ನು ಪುಸ್ತಕ ಪ್ರಾಧಿಕಾರದ ವತಿಯಿಂದ ಗೌರವ ಸಮರ್ಪಣೆ ಮಾಡಿ ಅವರು ಮಾತನಾಡುತಿದ್ದರು.
ನಾವು ಪುಸ್ತಕ ಪ್ರೀತಿಯನ್ನು ಉತ್ತೇಜಿಸುವ ಸಲುವಾಗಿ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆ ಆರಂಭಿಸಿದ್ದೇವೆ. ಆದರೆ ಅಂಕೇಗೌಡರ ಮನೆಯ ಈ ಗ್ರಂಥಾಲಯ ನಿಬ್ಬೆರಗಾಗಿಸುವಂತಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಪುಸ್ತಕಗಳನ್ನು ಒಬ್ಬ ವ್ಯಕ್ತಿ ತನ್ನ ಸ್ವಂತ ಪರಿಶ್ರಮ ಮತ್ತು ಆಸಕ್ತಿಯಿಂದ ಸಂಗ್ರಹ ಮಾಡಿರುವುದು ಅತ್ಯಂತ ಅಚ್ಚರಿಯ ಸಂಗತಿ. ಅವರ ಈ ಸಾಧನೆ ಶಾಶ್ವತವಾಗಿ ಉಳಿಯುತ್ತದೆ. ಇದರ ಮೂಲಕ ಜ್ಞಾನದ ತಳಹದಿಯ ಮೇಲೆ ದೇವಾಲಯ ಕಟ್ಟುವುದು ಹೇಗೆ ಎಂಬುದನ್ನು ಅಂಕೇಗೌಡರು ತೋರಿಸಿಕೊಟ್ಟಿದ್ದಾರೆ. ಜನ ದೇವಾಲಯಗಳಿಗೆ ಮತ್ತು ತಮ್ಮ ಭಕ್ತಿಯ ಕಾಣಿಕೆಗಾಗಿ ಖರ್ಚು ಮಾಡುವ ಶೇಕಡಾ 10%ರಷ್ಟನ್ನಾದರು ಪುಸ್ತಕ ಕೊಂಡುಕೊಳ್ಳಲು ಉಪಯೋಗಿಸಿದ್ದಲ್ಲಿ ಪುಸ್ತಕ ಲೋಕದ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಅಂಕೇಗೌಡರ ಅಂತಿಮ ಕಾಲದಲ್ಲಿ ಯಾರು ಬರಲಿ, ಬಿಡಲಿ, ಸರ್ಕಾರ ಅವರ ಮನೆ ಮುಂದೆ ಇರುತ್ತದೆ. ಅವರ ಸಾಧನೆಗೆ ಸಂದಗೌರವ ಇದಾಗಿದೆ ಎಂದು ಅವರು ತಿಳಿಸಿದರು. ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಅಂಕೇಗೌಡರು, ತಮ್ಮ ಹಿಂದಿನ ದಿನಗಳನ್ನು ನೆನೆದು ಭಾವುಕರಾದರು. ತಾವು ಬಸ್ ಕಂಡೆಕ್ಟರ್ ಆಗಿ ಕೆಲಸ ಮಾಡುತಿದ್ದ ದಿನಗಳಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಂಡ ಅವರು ನಂತರ ಆ ಕೆಲಸ ತೊರೆದು ಪಾಂಡವಪುರದ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕೆ ಸೇರಿ ಪುಸ್ತಕ ಮನೆ ಸ್ಥಾಪಿಸಿದ ಸಂದರ್ಭವನ್ನು ಕುರಿತು ವಿವರಿಸಿದರು.
ಈ ಪುಸ್ತಕಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಿಡುವುದೇ ನನ್ನ ದೊಡ್ಡ ಕನಸು ಎಂದ ಅವರು, ಇಲ್ಲಿಗೆ ಬರುವ ಸಂಶೋಧನಾ ವಿದ್ಯಾರ್ಥಿಗಳು ಅಧ್ಯಯನ ಮಾಡಲು ಹಾಗೂ ತಂಗಲು ಕಟ್ಟಡವೊಂದರ ಅವಶ್ಯಕತೆ ಇದೆ ಎಂದು ಹೇಳಿದರು.
ಈ ವೇಳೆ ಸಾರ್ವಜನಿಕ ಗ್ರಂಥಾಲಯ ಆಯುಕ್ತ ಹೆಚ್. ಬಸವರಾಜೇಂದ್ರ, ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಹಾಗೂ ಖ್ಯಾತ ಪತ್ರಕರ್ತ, ಬರಹಗಾರ ರಾಜಶೇಖರ ಕದಂಬ, ರಾಮಣ್ಣ, ತಿಪ್ಪಣ್ಣ ಹಾಗೂ ಶ್ರೀನಿವಾಸ ಕರಿಯಪ್ಪ ಅವರು ಉಪಸ್ಥಿತರಿದ್ದರು.
Mandya
ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅನ್ನ ದಾಸೋಹ
ಮಂಡ್ಯ: ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಮಮತೆಯ ಮಡಿಲು ನಿತ್ಯ ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂದಿಕರಿಗೆ ಮೈಸೂರಿನ ಯಶಸ್ವಿನಿ ಗೃಹ ನಿರ್ಮಾಣ ಸಹಕಾರ ಸಂಘದ ಉಪಾಧ್ಯಕ್ಷ ಹಾಗೂ ಎಂ.ಶ್ರೀನಿ ವಾಸ್ ಪ್ರತಿಷ್ಠಾನದ ನಿರ್ದೇಶಕ ಬಿ.ಗೌಡಗೆರೆ ಮಹೇಂದ್ರ ಅವರ ನೇತೃತ್ವದಲ್ಲಿ ಅನ್ನ ದಾಸೋಹ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಎಂ. ಶ್ರೀನಿವಾಸ್ ಅವರು ಮೂರು ಬಾರಿ ಶಾಸಕರಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಜನಮನ್ನಣೆ ಗಳಿಸಿರುವ ಅವರಿಗೆ ದೇವರು ಆಯಸ್ಸು, ಆರೋಗ್ಯ ಕೊಟ್ಟು ಇನ್ನು ಹೆಚ್ಚಿನ ಶಕ್ತಿ ಕೊಡಲಿ ಎಂದು ಶುಭ ಹಾರೈಸಿದರು.

ಪರಿಸರ ಸಂಸ್ಥೆಯ ಮಂಗಲ ಯೋಗೇಶ್ ಮಾತನಾಡಿ, ಎಂ.ಶ್ರೀನಿವಾಸ್ ಅವರು ಮೂರು ಬಾರಿ ಶಾಸಕರಾಗಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾಗಿ, ಹನಕೆರೆಯಲ್ಲಿ ವಿದ್ಯಾಸಂಸ್ಥೆ ಪ್ರಾರಂಭಿಸುವ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವ ಮೂಲಕ 40 ವರ್ಷಗಳಿಂದ ಸೇವೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಎಂ.ಶ್ರೀನಿವಾಸ್ ಅವರ ಹುಟ್ಟು ಹಬ್ಬದ ಅಂಗವಾಗಿ ಗೌಡಗೆರೆ ಮಹೇಂದ್ರ ಅವರು ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಗಂಜಿ ಹಾಗೂ ಉಪಹಾರ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ತಿಳಿಸಿದರು.
ಈ ವೇಳೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ.ರಘು, ಕೆರಗೋಡು ವಿದ್ಯಾ ಸಂಸ್ಥೆ ಉಪಾಧ್ಯಕ್ಷ ವಿಜಯ ಭಾಸ್ಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Mandya
ಕ್ಷೇತ್ರದ ಸರ್ವಾoಗಿಣ ಅಭಿವೃದ್ಧಿ ಬದ್ದ : ಪಿ.ರವಿಕುಮಾರ್ ಗೌಡ
ಮಂಡ್ಯ: ಕ್ಷೇತ್ರದ ಜನತೆ ಪ್ರೀತಿ, ವಿಶ್ವಾಸದೊಂದಿಗೆ ಆಶೀರ್ವಧಿಸಿದ್ದು, ಕ್ಷೇತ್ರದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಬದ್ದ ಎಂದು ಶಾಸಕ ಪಿ.ರವಿಕುಮಾರ್ ಗೌಡ ತಿಳಿಸಿದರು.
ಮಂಡ್ಯ ಕ್ಷೇತ್ರ ದ ತಂಗಳಗೆರೆ ಗ್ರಾಮದಲ್ಲಿ ನಡೆದ “ರವಿ ಗೂಡು” ಆಶ್ರಯ ಬಡಾವಣೆಯ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹಲ್ಲೆಗೆರೆ ಗ್ರಾಮ ಪಂಚಾಯತ್ ನಿವೇಶನ ರಹಿತರ 25ವರ್ಷಗಳ ಕನಸು ಇಂದು ನನಸು “ರವಿ ಗೂಡು ಬಡಾವಣೆಯ ನಿರ್ಮಾಣ ಕಾರ್ಯಕ್ಕೆ ಅಡಿಗಲ್ಲು” ಹಾಕಲಾಗಿದ್ದು, ನಿವೇಶನ ರಹಿತರ 25ವರ್ಷಗಳ ಕನಸು ನನಸಾಗುತ್ತಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಚಿಕ್ಕಬಳ್ಳಿ ಕೃಷ್ಣಪ್ಪ, ತ್ಯಾಗರಾಜು, ಚಲನಚಿತ್ರ ನಟರಾದ ಮಂಡ್ಯ ಲೋಕೇಶ್, ಹಾಗೂ ಹಲ್ಲೆಗೆರೆ ಪಂಚಾಯತ್ ವ್ಯಾಪ್ತಿಯ ಮುಖಂಡರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
-
Mandya24 hours agoಹುಣ್ಣಿಮೆಯ ಅಂಗವಾಗಿ ದಾಸೋಹ ಹುಣ್ಣಿಮೆ ಕಾರ್ಯಕ್ರಮ
-
Cinema20 hours ago17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ
-
Hassan32 minutes agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Hassan45 minutes agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Mandya5 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
National2 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
Hassan22 hours agoವಿಜೃಂಭಣೆಯಿಂದ ಜರುಗಿದ ಡೆಕ್ಕನ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ 7ನೇ ವರ್ಷದ ವಾರ್ಷಿಕೋತ್ಸವ
-
State3 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
